ಶಿಕ್ಷಣ
Vivekananda-ಆ. 22 ರಿಂದ 24ರ ವರೆಗೆ ವಿವೇಕಾನಂದ ಇಂಜೀನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ಅತ್ಯುತ್ತಮ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಉತ್ತಮ ಸಂಶೋಧನಾ ಸಂಸ್ಕೃತಿಯನ್ನು ಪರಿಚಯಿಸಿಕೊಳ್ಳುವುದು, ಸಹಯೋಗದ ಸಂಶೋಧನೆಯ ಅಳವಡಿಕೆ ಮತ್ತು ನಿಧಿಯ ಅವಕಾಶಗಳು, ನಿಖರವಾದ ಮತ್ತು ವಿಮರ್ಶಾತ್ಮಕವಾದ ಸಂಶೋಧನಾ ಪ್ರಬಂಧಗಳ ಬರವಣಿಗೆ, ಸಂಶೋಧನಾ ಪ್ರಸ್ತಾಪದ ಅಭಿವೃದ್ಧಿಯ ಬಗ್ಗೆ ಜಾಗೃತಿ ಮೂಡಿಸುವುದು
ಇದೇ ಮುಂತಾದ ವಿಷಯಗಳ ಬಗ್ಗೆ ಸಂಶೋಧನಾ ನಿರತರಿಗೆ ಮಾಹಿತಿಯನ್ನು ನೀಡುವುದಕ್ಕಾಗಿ ಇದನ್ನು ಆಯೋಜಿಸಲಾಗಿದೆ.
ಆ. 22 ರಿಂದ 24ರ ವರೆಗೆ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು ರಾಜ್ಯಾದ್ಯಂತ ವಿವಿಧ ಕಾಲೇಜುಗಳ ಸಂಶೊಧನಾ ನಿರತ ಪ್ರಾಧ್ಯಾಪಕರು ಇದರಲ್ಲಿ ಪಾಲ್ಗೊಳ್ಳುತ್ತಾರೆ.
ಆ 22 ರಂದು ಬೆಳಿಗ್ಗೆ 9.30ಕ್ಕೆ ಇದರ ಉದ್ಘಾಟನೆಯು ನಡೆಯಲಿದ್ದು ಐಐಟಿ ಧಾರವಾಡದ ಪೂರ್ವ ರಿಜಿಸ್ಟ್ರಾರ್ ಡಾ.ಚೆನ್ನಬಸಪ್ಪ.ಬಿ. ಅಕ್ಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದಅಧ್ಯಕ್ಷ ತೆ ವಹಿಸುತ್ತಾರೆ.
ಐಐಟಿ ಧಾರವಾಡದ ಪೂರ್ವ ರಿಜಿಸ್ಟಾçರ್ ಡಾ.ಚೆನ್ನಬಸಪ್ಪ.ಬಿ.ಅಕ್ಕಿ, ವಿಟಿಯು ಬೆಳಗಾವಿಯ ಸಂಶೋಧನಾ ಸಂಯೋಜಕ ಡಾ.ಆರ್.ಎಚ್.ಗೌಡರ್, ವಿಟಿಯು ಬೆಳಗಾವಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್‌ಗಳಾದ ಡಾ.ಸಂತೋಷ್.ಎಲ್.ದೇಶಪಾಂಡೆ, ಡಾ.ಮಹಂತೇಶ್.ಎನ್.ಬಿರ್ಜೆ, ಕೆನರಾ ಇಂಜಿನಿಯರಿಂಗ್ ಕಾಲೇಜು ಬಂಟ್ವಾಳ ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಡೇಮಿಯನ್ ಆಂಟೊನಿ ಡಿ’ಮೆಲ್ಲೋ ಮತ್ತು ಎನ್‌ಐಟಿಕೆ ಸುರತ್ಕಲ್ಲಿನ ಪ್ರೊಫೆಸರ್ಡಾ .ಪುಷ್ಪರಾಜ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿದ್ದು ತಮ್ಮಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಅವರ ಮುಂದಾಳುತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆಗೆ ಮತ್ತು ಹೆಚ್ಚಿನ ಮಾಹಿತಿಗೆ ಡಾ.ಜೀವಿತ.ಬಿ.ಕೆ 9880185386 ಅಥವಾಪ್ರೊ.ಕೃಷಮೋಹನ್.ಎ.ಜೆ 9844613782 ಅವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಮಂಗಳೂರು20 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್18 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ18 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು19 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಅಪರಾಧ20 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ24 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್24 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















