ಸ್ಥಳೀಯ
CM-ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ: ಸಿಎಂ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.
ಕೊಪ್ಪಳ, ಆಗಸ್ಟ್ 21:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.
ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.
ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.
ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:
ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.
ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ:
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.


















