ಕಾರ್ಯಕ್ರಮಗಳು
Puttur-ಪುತ್ತೂರು : ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆ.24ರಂದು ವಿದ್ಯಾನಿಧಿ ಹಾಗೂ ಸಹಾಯಧನ ವಿತರಣಾ ಸಮಾರಂಭ
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆ.24ರಂದು ಬೆಳಿಗ್ಗೆ ಗಂಟೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ಕಾರ್ಯಕ್ರಮವು ನಡೆಯಲಿದೆ.
ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಆ.24ರಂದು ಬೆಳಿಗ್ಗೆ ಗಂಟೆ 11.30ಕ್ಕೆ ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲ್‌ನಲ್ಲಿ ವರ್ಷಂಪ್ರತಿಯಂತೆ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ನೀಡುವ ವಿಶೇಷ ಕಾರ್ಯಕ್ರಮವು ನಡೆಯಲಿದೆ ಎಂದು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಂಘದ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಸರಕಾರಿ ಶಾಲೆಗಳಲ್ಲಿ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ಶಾಲಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ 250 ವಿದ್ಯಾರ್ಥಿಗಳಿಗೆ ತಲಾ ರೂ. 2ಸಾವಿರ ನೀಡಲಾಗುವುದು.
ಒಟ್ಟು 1,067 ವಿದ್ಯಾರ್ಥಿಗಳಿಗೆ ಇದುವರೆಗೆ ಒಟ್ಟು ರೂ. 21,73,000 ಮೊತ್ತವನ್ನು ವಿತರಿಸಿರುತ್ತೇವೆ. ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಕೂಡಾ ನೀಡಿರುತ್ತೇವೆ. ಆ.24ರಂದು ನಡೆಯುವ ಸಂಘದ ಮಹಾಸಭೆಯ ಬಳಿಕ ಈ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇಲ್ಲಿನ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಯಸ್ ಯಂ ರಘು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, 22 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ ಸಂಘವು 728 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ.1.65 ಕೋಟಿ ರೂ. ಗಳಷ್ಟು ಲಾಭವನ್ನು ಗಳಿಸಿದ್ದು, ಸದಸ್ಯರಿಗೆ ಶೇ.16 ಡಿವಿಡೆಂಡ್ ನೀಡಲಾಗುವುದು ಎಂದು ಘೋಷಣೆ ಮಾಡಲಾಗುವುದು ಎಂದು ಹೇಳಿದ ಅಧ್ಯಕ್ಷ ಸೀತಾರಾಮ ರೈ ಅವರು ಸಂಘದ 2023-24ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ ಒಟ್ಟು 8524 ಸದಸ್ಯರಿದ್ದು ಒಟ್ಟು 3.22 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘವು 131.93 ಕೋಟಿ ರೂ. ಠೇವಣಿಯನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 13.36 ರಷ್ಟು ಹೆಚ್ಚಳವಾಗಿದೆ. ರೂ. 109.74 ಕೋಟಿ ರೂ.ಗಳಷ್ಟು ಹೊರಬಾಕಿ ಸಾಲ ಇದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.20.67 ರಷ್ಟು ಹೆಚ್ಚಳವಾಗಿದೆ. ಸಂಘವು 2.30 ಕೋಟಿ ರೂ.ಗಳಷ್ಟು ಕ್ಷೇಮ ನಿಧಿ ಮತ್ತು 1.97 ಕೋಟಿ ರೂ. ಗಳಷ್ಟು ಇತರ ನಿಧಿಗಳನ್ನು ಹೊಂದಿ, ರೂ. 138.89 ಕೋಟಿಗಳಷ್ಟು ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ.
ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿರುವ ಮತ್ತು ಆಡಿಟ್ ವರ್ಗದಲ್ಲಿ ಸತತವಾಗಿ ‘ಎ’ ತರಗತಿಯನ್ನು ಕಾಯ್ದುಕೊಂಡು ಬಂದಿರುವ ಏಕೈಕ ಸಂಘವಾಗಿರುತ್ತದೆ. ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡವನ್ನು ಹೊಂದುವ ಉದ್ದೇಶದಿಂದ ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ 0.75 ಸೆಂಟ್ಸ್ ನಿವೇಶನವನ್ನು ಸಂಘದ ಹೆಸರಿನಲ್ಲಿ ಖರೀದಿಸಿದ್ದು, ಸದ್ರಿ ನಿವೇಶನದಲ್ಲಿ ನೂತನ ಕೇಂದ್ರ ಕಚೇರಿಯ ಕಾಮಗಾರಿ ಪ್ರಗತಿಯಲ್ಲಿದೆ. ಸಂಘಕ್ಕೆ 25 ವರ್ಷ ಪೂರೈಸುವುದರೊಳಗೆ ಕಟ್ಟಡ ನಿರ್ಮಾಣದ ಕೆಲಸ ಪೂರ್ತಿಗೊಳಿಸಿ ಲೋಕಾರ್ಪಣೆ ಮಾಡಲಾಗುವುದು.
ಅಲ್ಲದೆ 2024-25 ನೇ ಸಾಲಿನಲ್ಲಿ ಮಂಗಳೂರಿನಲ್ಲಿ ಹೊಸ ಶಾಖೆಯನ್ನು ತೆರೆಯುವ ಯೋಜನೆಯನ್ನು ರೂಪಿಸಲಾಗಿದೆ. ಸಂಘದ ಪ್ರಗತಿಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 5ನೇ ಬಾರಿ ಪ್ರಶಸ್ತಿಗೆ ಭಾಜನವಾಗಿದೆ. ಮತ್ತು 2023-24 ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ 64 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಸಂಘಕ್ಕೆ ‘ಉತ್ತಮ ಸಹಕಾರಿ ಸಂಘ’ ಎಂದು ಪ್ರಶಸ್ತಿ ಗಳಿಸಿರುತ್ತದೆ. 70 ನೇ ಸಪ್ತಾಹದಲ್ಲಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದು ಕೊಂಡು ಸಹಕಾರಿ ಕ್ಷೇತ್ರದಲ್ಲಿ ತನ್ನ ಗರಿಮೆಯನ್ನು ಹೆಚ್ಚಿಸಿಕೊಂಡಿದೆ. ಸಂಘದಲ್ಲಿ ಗ್ರಾಹಕರಿಗೆ ತ್ವರಿತ ಮತ್ತು ಪಾರದರ್ಶಕ ಸೇವೆಯನ್ನು ನೀಡುವ ಸಲುವಾಗಿ ನೆಫ್ಟ್ ಆರ್‌ಟಿಜಿಎಸ್ ಸೌಲಭ್ಯ, ಎಸ್‌ಎಂಎಸ್ ಸೌಲಭ್ಯಗಳನ್ನು ಒದಗಿಸಲಾಗಿದೆ ಹಾಗು ಸದಸ್ಯರಿಗೆ ಸೋಲಾರ್ ವಾಟರ್ ಹೀಟರ್ ಮತ್ತು ಸೋಲಾರ್ ಲೈಟ್ ಅಳವಡಿಸಲು ಶೂನ್ಯ ಬಡ್ಡಿದರದಲ್ಲಿ ರೂ. 2,00,000 ದ ತನಕ ಸಾಲವನ್ನು ವಿತರಿಸುತ್ತೇವೆ ಎಂದು ಮಾಹಿತಿ ನೀಡಿದರು.
ಪ್ರಾಥಮಿಕ ಹಂತದಲ್ಲೇ ಸರಕಾರಿ ಶಾಲಾ ಮಕ್ಕಳು ಶಿಕ್ಷಣದಿಂದ ಹೊರ ಹೋಗುವುದು ನಮಗೆ ಗೊತ್ತಿದೆ. ಈ ನಿಟ್ಟಿನಲ್ಲಿ ಅವರ ಏಳೆಗಾಗಿ ಈ ವಿದ್ಯಾನಿಧಿ ಯೋಜನೆ ಮಾಡಿದ್ದೇವೆ. ಮೊದಲನೆಯದಾಗಿ ನನ್ನ ತಂದೆಯವರು ಎಲಿಮೆಂಟರಿ ಸ್ಕೂಲ್ ಟೀಚರ್, ನಾನು ಎಸ್.ಎಸ್.ಎಲ್.ಸಿಯ ತನಕ ಕಲಿತದ್ದು ಸರಕಾರಿ ಶಾಲೆಯಲ್ಲೇ. ಇವೆರಡನ್ನು ಸಂಯೋಜನೆ ಮಾಡಿ ಈ ವಿದ್ಯಾನಿಧಿ ಯೋಜನೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಸುಂದರ್ ರೈ, ನಿರ್ದೇಶಕರಾದ ಅರಿಯಡ್ಕ ಚಿಕ್ಕಪ್ಪ ನಾಕ್, ಅಶ್ವಿನ್ ಎಲ್.ಶೆಟ್ಟಿ, ಮಹಾಪ್ರಬಂಧಕ ವಸಂತ ಜಾಲಾಡಿ ಮತ್ತು ಎಜಿಎಮ್ ಸುನಾದ್‌ರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು6 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ7 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ7 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ8 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized9 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ7 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















