ಬಿಗ್ ನ್ಯೂಸ್
FIR-ಅರಣ್ಯ ಅಪರಾಧ: ಆರ್‌ಎಫ್‌ಒಗಳಿಗೆ ಮಾತ್ರ FIR ದಾಖಲಿಸಲು ಅಧಿಕಾರ
ಅರಣ್ಯ ಅಪರಾಧಗಳಿಗೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿಗಳಿಗಿಂತ (ಆರ್‌ಎಫ್‌ಒ) ಕೆಳಹಂತದ ಅಧಿಕಾರಿಗಳಿಗೆ ಇದ್ದ ಎಫ್‌ಐಆರ್ ದಾಖಲಿಸುವ ಅಧಿಕಾರವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಅರಣ್ಯಭೂಮಿ ಒತ್ತುವರಿ, ಮರಗಳ ಕಳ್ಳಸಾಗಣೆ, ವನ್ಯಜೀವಿಗಳ ಬೇಟೆಯಂತಹ ಪ್ರಕರಣಗಳು ನಡೆದಾಗ ಉಪವಲಯ ಅರಣ್ಯಾಧಿಕಾರಿಗಳು, ಬೀಟ್ ಫಾರೆಸ್ಟರ್‌ಗಳು ಎಫ್‌ಐಆರ್ ದಾಖಲಿಸುತ್ತಿದ್ದರು. ಇನ್ನು ಮುಂದೆ ಇವರಿಗೆ ಆ ಅಧಿಕಾರ ಇಲ್ಲ.
ಬೆಂಗಳೂರು: ಅರಣ್ಯ ಅಪರಾಧಗಳಿಗೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿಗಳಿಗಿಂತ (ಆರ್‌ಎಫ್‌ಒ) ಕೆಳಹಂತದ ಅಧಿಕಾರಿಗಳಿಗೆ ಇದ್ದ ಎಫ್‌ಐಆರ್ ದಾಖಲಿಸುವ ಅಧಿಕಾರವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ.
ಅರಣ್ಯಭೂಮಿ ಒತ್ತುವರಿ, ಮರಗಳ ಕಳ್ಳಸಾಗಣೆ, ವನ್ಯಜೀವಿಗಳ ಬೇಟೆಯಂತಹ ಪ್ರಕರಣಗಳು ನಡೆದಾಗ ಉಪವಲಯ ಅರಣ್ಯಾಧಿಕಾರಿಗಳು, ಬೀಟ್ ಫಾರೆಸ್ಟರ್‌ಗಳು ಎಫ್‌ಐಆರ್ ದಾಖಲಿಸುತ್ತಿದ್ದರು. ಇನ್ನು ಮುಂದೆ ಇವರಿಗೆ ಆ ಅಧಿಕಾರ ಇಲ್ಲ. ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯಪಡೆ) ಬ್ರಿಜೇಶ್ ಕುಮಾರ್ ದೀಕ್ಷಿತ್ ಸುತ್ತೋಲೆ ಹೊರಡಿಸಿದ್ದಾರೆ.
ಈ ಸುತ್ತೋಲೆಗೆ ಅವರು ನೀಡಿರುವ ಕಾರಣ ಹೀಗಿದೆ- ‘ಕರ್ನಾಟಕ ಅರಣ್ಯ ಕಾಯ್ದೆ 1963ಕ್ಕೆ 2000ರಲ್ಲಿ ತಿದ್ದುಪಡಿ ಮಾಡಿದ್ದು, ಆ ತಿದ್ದುಪಡಿಯ ಸೆಕ್ಷನ್ 62(ಎ) ಅನ್ವಯ ವಲಯ ಅರಣ್ಯಾಧಿಕಾರಿಗಿಂತ ಕೆಳ ಹಂತದ ಅಧಿಕಾರಿಗಳಿಗೆ ಎಫ್‌ಐಆರ್ ಅಧಿಕಾರ ಇಲ್ಲ’.
ಅರಣ್ಯ ಇಲಾಖೆ ನ್ಯಾಯಾಲಯಗಳಲ್ಲಿ ಹೂಡಿರುವ ಅಪರಾಧ ಪ್ರಕರಣಗಳು ವಜಾ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ, ‘ತಾಂತ್ರಿಕ ಕಾರಣಗಳಿಂದ ಪ್ರಕರಣಗಳು ವಜಾಗೊಳ್ಳುತ್ತಿರುವುದು ಗಂಭೀರ ವಿಚಾರ. ಇದನ್ನು ತಪ್ಪಿಸಲು ಸಂಬಂಧಪಟ್ಟ ವ್ಯಾಪ್ತಿಯ ವಲಯ ಅರಣ್ಯ ಅಧಿಕಾರಿಗಳಿಂದಲೇ ಎಫ್‌ಐಆರ್ ದಾಖಲಿಸಲು ಕ್ರಮ ಕೈಗೊಳ್ಳಬೇಕು’ ಎಂದೂ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಹೊಸ ಸುತ್ತೋಲೆ ಹೊರಡಿಸಲಾಗಿದೆ.
ಅಧಿಕಾರ ಹಿಂಪಡೆದದ್ದು ಸರಿಯಲ್ಲ
ಯಾವುದೇ ಅರಣ್ಯದಲ್ಲಿ ಅರಣ್ಯ ಅಪರಾಧಗಳು ನಡೆದಾಗ ತಕ್ಷಣವೇ ಅಲ್ಲಿಗೆ ಧಾವಿಸಿ ಪರಿಶೀಲಿಸಲು ಸಾಧ್ಯವಾಗುವುದು ಆರ್‌ಎಫ್‌ಓಗಿಂತ ಕೆಳ ಹಂತದ ಅಧಿಕಾರಿಗಳಿಗೆ ಮಾತ್ರ. ಹೀಗಾಗಿ ಕೆಳಹಂತದ ಅಧಿಕಾರಿಗಳ ಬಗ್ಗೆ ಅರಣ್ಯ ಅಪರಾಧ ಮಾಡುವವರಲ್ಲಿ ಒಂದು ರೀತಿಯ ಭಯ ಇತ್ತು. ಇನ್ನು ಮುಂದೆ ಆ ಭಯ ಇರುವುದಿಲ್ಲ. ಕರ್ನಾಟಕ ಅರಣ್ಯ ಸಂಹಿತೆಯಡಿ ಇವರಿಗೆ ಎಫ್‌ಐಆರ್ ದಾಖಲಿಸುವ ಅಧಿಕಾರ ನೀಡಲಾಗಿತ್ತು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಅರಣ್ಯ ಅಪರಾಧ ನಡೆದಾಗ ಆರ್‌ಎಫ್‌ಓ ಸ್ಥಳಕ್ಕೆ ಬರುವವರೆಗೆ ಕಾಯಬೇಕಾಗುತ್ತದೆ. ಒಂದು ವೇಳೆ ವಲಯ ಅರಣ್ಯ ಅಧಿಕಾರಿ ತನ್ನ ವಲಯದಿಂದ ಹೊರಗೆ ಹೋದಾಗ, ರಜೆಯಲ್ಲಿ ಇದ್ದಾಗ ಆ ಕಾರ್ಯವನ್ನು ಯಾರು ನಿರ್ವಹಿಸಬೇಕು ಎಂಬ ಸ್ಪಷ್ಟತೆ ಇಲ್ಲ. ಬೇಟೆ, ಅರಣ್ಯ ಒತ್ತುವರಿ ಮತ್ತು ಮರ ಕಳ್ಳತನ ಅರಣ್ಯದ ಯಾವುದೋ ಮೂಲೆಯಲ್ಲಿ ನಡೆಯುತ್ತದೆ. ಆರ್‌ಎಫ್‌ಒ ಅಲ್ಲಿಗೆ ತಲುಪಲು ಬಹಳ ಸಮಯ ಹಿಡಿಯುತ್ತದೆ. ಅಷ್ಟರಲ್ಲಿ ಅಪರಾಧಿ ತಪ್ಪಿಸಿಕೊಂಡು ಹೋಗುವ ಸಾಧ್ಯತೆಯೂ ಇರುತ್ತದೆ ಎಂದು ಮೂಲಗಳು ಹೇಳಿವೆ.
ತಮ್ಮ ಅಧಿಕಾರ ಕಸಿದುಕೊಂಡ ವಿಚಾರವಾಗಿ ಒಂದಷ್ಟು ಕೆಳಹಂತದ ಅಧಿಕಾರಿಗಳು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರ ಮೇಲಿರುತ್ತಿದ್ದ ವಿವಿಧ ರೀತಿ ಒತ್ತಡಗಳು ಕಡಿಮೆ ಆಗಲಿದೆ ಎನ್ನುವುದು. ಆದರೆ, ಇವರಿಗೆ ಇನ್ನು ಮುಂದೆ ಬೀಟ್ ಹೋಗುವ ಕೆಲಸ ಬಿಟ್ಟರೆ ಬೇರೇನೂ ಕೆಲಸ ಇರುವುದಿಲ್ಲ ಎಂದು ಅಧಿಕಾರಿಯೊಬ್ಬರು ವಿವರಿಸಿದರು.
ಅರಣ್ಯ ಇಲಾಖೆಯಲ್ಲಿ ಆಡಳಿತದ ಉದ್ದೇಶಕ್ಕಾಗಿ ಕರ್ನಾಟಕ ಅರಣ್ಯ ಸಂಹಿತೆ ಮತ್ತು ಅರಣ್ಯ ಕೈಪಿಡಿಯಲ್ಲಿನ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತದೆ. ಕೆಳಹಂತದ ಅಧಿಕಾರಿಗಳ ಜವಾಬ್ದಾರಿಗಳನ್ನು ಇದರಲ್ಲಿ ವಿವರಿಸಲಾಗಿದೆ. ಆದರೆ, ಅಧಿಕಾರದ ವಿಚಾರ ಬಂದಾಗ ಸಂಹಿತೆ ಮತ್ತು ಕೈಪಿಡಿಗಳಿಗೆ ಕಾನೂನಿನ ಮಾನ್ಯತೆ ಇಲ್ಲ ಎಂಬ ಸಮಜಾಯಿಷಿ ನೀಡಲಾಗುತ್ತದೆ. ಕಾನೂನಿನಲ್ಲಿ ತಿದ್ದುಪಡಿ ತಂದು ಇವೆರಡಕ್ಕೂ ಕಾನೂನು ಮಾನ್ಯತೆ ನೀಡಬೇಕು ಎಂದು ಹೆಸರು ಹೇಳಲು ಬಯಸದ ಉಪವಲಯ ಅರಣ್ಯಾಧಿಕಾರಿಯೊಬ್ಬರು ಹೇಳಿದರು.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಬಿಗ್ ನ್ಯೂಸ್23 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized24 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ23 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized23 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು12 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ10 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ10 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ11 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















