ಸ್ಥಳೀಯ
Hassan-ಹಾಸನ: ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನ ಕೊಲೆ-ನಾಟಕವಾಡಿದ ದಂಪತಿ ಅರೆಸ್ಟ್
ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಲಾಗಿದೆ. ಈ ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದರು. ಗಂಡನನ್ನು ಹೋಲುವ ವ್ಯಕ್ತಿಯನ್ನ ಹುಡುಕಿ, ಆ ವ್ಯಕ್ತಿಯನ್ನು ಕಾರಿನಲ್ಲಿ ಕರೆತಂದು ಹತ್ಯೆ ಮಾಡಿ ಲಾರಿ ಚಾಲಕನ ಜೊತೆ ಸೇರಿ ಲಾರಿ ಡಿಕ್ಕಿ ಹೊಡೆಸಿ ಅಪಘಾತದಿಂದ ಸಾವು ಎಂಬಂತೆ ಬಿಂಬಿಸಿದ್ದಾರೆ. ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಪತ್ನಿ ಕಣ್ಣೀರು ಹಾಕಿ ನಾಟಕವಾಡಿದ್ದರು.
ಹಾಸನ, ಆ24: ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಲಾಗಿದೆ. ಈ ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದರು. ಹತ್ತು ದಿನಗಳ ನಂತರ ಸಿನಿಮೀಯ ಮಾದರಿ ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ.
ಆ 12ರಂದು ಅರಸೀಕೆರೆ ತಾಲೂಕಿನ, ಗೊಲ್ಲರಹೊಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಸ್ಥಳದಲ್ಲಿ ಇದ್ದ ಕಾರಿನ ಆಧಾರದಲ್ಲಿ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿದ್ದರು. ಬೆಂಗಳೂರು ಹೊಸಕೋಟೆ ಮೂಲದ ಶಿಲ್ಪರಾಣಿ ಎಂಬುವವರು ಆ.13ರಂದು ಜಿಲ್ಲಾಸ್ಪತ್ರೆಗೆ ಬಂದು ಶವದ ಗುರುತು ಪತ್ತೆ ಹಚ್ಚಿದ್ದರು. ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಕಣ್ಣೀರು ಹಾಕಿದ್ದರು. ಆ.13 ರಂದು ಹೊಸಕೋಟೆ ತಾಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ಕೂಡ ನಡೆಸಲಾಗಿತ್ತು. ಇಷ್ಟೆಲ್ಲ ಆದ ನಂತರ ಮೃತ ವ್ಯಕ್ತಿಯ ಕುತ್ತಿಗೆಯಲ್ಲಿದ್ದ ಗಾಯದ ಗುರುತು ಕಂಡು ಅನುಮಾನಗೊಂಡ ಪೊಲೀಸರು ತೀವ್ರ ತನಿಖೆಗೆ ಇಳಿದ್ರು.
ಕುತ್ತಿಗೆ ಬಳಿ ಪತ್ತೆಯಾದ ಗುರುತಿನಿಂದ ನಾಟಕ ಬಯಲು
ಮೃತ ವ್ಯಕ್ತಿಯ ಕುತ್ತಿಗೆ ಭಾಗದಲ್ಲಿ ಕಂಡು ಬಂದಿದ್ದ ಗುರುತಿನಿಂದ ಅನುಮಾನಗೊಂಡ ಗಂಡಸಿ ಠಾಣೆಯ ಪಿಎಸ್ಐ ಹಾಗೂ ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷರರು ತನಿಖೆ ನಡೆಸಿದ್ದು ತನಿಖೆ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹೊಸಕೋಟೆಯಲ್ಲಿ ಎಮ್ಆರ್ಎಫ್ ಟೈರ್ ಅಂಗಡಿ ಇಟ್ಟುಕೊಂಡಿದ್ದ ಮುನಿ ಸ್ವಾಮಿ ಗೌಡ, ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲು ಹಣಕ್ಕಾಗಿ ಈ ದಂಪತಿ ಮಾಡಿದ ಪ್ಲಾನ್ ಅಂತಿಂತದ್ದಲ್ಲ.
ಸಾಲ ತೀರಿಸಲು ಖತರ್ನಾಕ್ ಪ್ಲಾನ್:
ಮುನಿಸ್ವಾಮಿ ಗೌಡ ಹಾಗೂ ಆಕೆಯ ಹೆಂಡತಿ ಶಿಲ್ಪರಾಣಿ ಇಬ್ಬರೂ ಸೇರಿಕೊಂಡು ಸಾಲ ತೀರಿಸಲು ಇನ್ಶೂರೆನ್ಸ್ ಹಣಬೇಕೆಂದು ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಮುನಿಸ್ವಾಮಿಗೌಡನನ್ನೇ ಹೋಲುವ ವ್ಯಕ್ತಿಯನ್ನ ಹುಡುಕಿ ಹತ್ಯೆಗೆ ಪ್ಲಾನ್ ಮಾಡಿದ್ದಾರೆ. ವ್ಯಕ್ತಿಯನ್ನು ಕಾರಿನಲ್ಲಿ ಕರೆತಂದು ಅರಸೀಕೆರೆ ತಾಲೂಕಿನ ಗೊಲ್ಲರಹೊಸಳ್ಳಿ ಬಳಿ ಹತ್ಯೆ ಮಾಡಿ ಲಾರಿ ಚಾಲಕನ ಜೊತೆ ಸೇರಿ ಲಾರಿ ಡಿಕ್ಕಿ ಹೊಡೆಸಿ ಅಪಘಾತದಿಂದ ಸಾವು ಎಂಬಂತೆ ಬಿಂಭಿಸಿದ್ದಾರೆ.
ಈ ಘಟನೆ ಬಳಿಕ ಮುನಿಸ್ವಾಮಿ ತಲೆಮರಿಸಿಕೊಂಡಿದ್ದ. ತನ್ನದೇ ಸಾವಲ್ಲಿ ಏನಾಗುತ್ತಿದೆ ಎಂದು ತಿಳಿಯದೆ ಗೊಂದಲಕ್ಕೆ ಬಿದ್ದಿದ್ದ. ಇತ್ತ ಪತಿ ಕಳೆದುಕೊಂಡ ನೋವಿನಲ್ಲಿ ಇದ್ದಂತೆ ಪತ್ನಿ ಶಿಲ್ಪರಾಣಿ ಕೂಡ ನಾಟಕವಾಡಿದ್ದಳು. ಮುಂದೇನು ಮಾಡಬೇಕೆಂದು ತಿಳಿಯದೆ ಆರೋಪಿ ಮುನಿಸ್ವಾಮಿ ತನ್ನ ಸಂಬಂಧಿ ಇನ್ಸ್ಪೆಕ್ಟರ್ ಒಬ್ಬರ ಮುಂದೆ ಹಾಜರಾಗಿದ್ದ. ನಡೆದ ಘಟನೆ ವಿವರಿಸಿ ರಕ್ಷಣೆಗೆ ಅಂಗಲಾಚಿದ್ದ. ಆ ಇನ್ಸ್ಪೆಕ್ಟರ್, ಮುನಿಸ್ವಾಮಿ ಮಾಹಿತಿ ಬಳಿಕ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಆರೋಪಿಯನ್ನ ಬಂಧಿಸಲಾಗಿದೆ. ಶಿಡ್ಲಘಟ್ಟ ಇನ್ಸ್ಪೆಕ್ಟರ್ ರ ಕರ್ತವ್ಯ ಪ್ರಜ್ಞೆ ಹಾಗು ನಿಷ್ಠಾವಂತಿಕೆಯಿಂದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿಕ್ಷಣ
Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.
2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.
ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಅಪರಾಧ
Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
-
ಸುಳ್ಯ22 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಸ್ಥಳೀಯ22 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ19 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಮಂಗಳೂರು19 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ನಿಧನ ವಾರ್ತೆ3 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಂತರ ರಾಜ್ಯ3 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ3 hours agoPunacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಪರಾಧ3 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!















