Connect with us

ರಾಜಕೀಯ

MUDA scam-ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿ ಪಾರ್ವತಿ ಬರೆದ್ದಿದ್ದ ಪತ್ರದ ವೈಟ್ನರ್ ಹಿಂದಿನ ಕಥೆ ಬಿಚ್ಚಿಟ್ಟ ಸಿಎಂ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget
Ad Widget

Ad Widget alt="Ad Widget"/>

Ad Widget

ವೈಟ್ನರ್ ಹಾಕಿರುವ ಬಗ್ಗೆ ಬಿಜೆಪಿ – ಜೆಡಿಎಸ್‌ ನಾಯಕರು ಮಾತನಾಡಿದ್ದು, ಇದರ ಹಿಂದಿರುವ ಅಕ್ಷರಗಳನ್ನು ಸಿಎಂ ಬಿಡುಗಡೆ ಮಾಡಿದ್ದಾರೆ.

Ad Widget

Ad Widget <> Ad Widget

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ. ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ.

ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ.

Ad Widget

Ad Widget

ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ.

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ.

ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ad Widget
Click to comment

Leave a Reply

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ರಾಜಕೀಯ

Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಇನ್ನೊಂದೆಡೆ, ಈ ಬಾರಿಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮುಂಬರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತಪತ್ರಗಳ ಮೂಲಕ ನಡೆಯುವ ಸಾಧ್ಯತೆಯಿದೆ.

Ad Widget
Continue Reading

ಅಂತರ ರಾಜ್ಯ

Trisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!

Published

on

Ad Widget

Ad Widget

Ad Widget

Ad Widget

ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget

Ad Widget

Ad Widget

ಚೆನ್ನೈ: ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಖ್ಯಾತ ನಟಿ ತ್ರಿಷಾ ಕೃಷ್ಣನ್ ಕೂಡ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಜಯ್ ಮತ್ತು ತ್ರಿಷಾ ಸಾರ್ವಜನಿಕ ವೇದಿಕೆಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಾಗಲೆಲ್ಲಾ ಅವರಿಬ್ಬರ ನಡುವಿನ ಸಂಬಂಧದ ಕುರಿತು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ತ್ರಿಷಾ ಅವರ ರಾಜಕೀಯ ಪ್ರವೇಶದ ಬಗ್ಗೆಯೂ ಅಭಿಮಾನಿಗಳ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ.

Ad Widget

Ad Widget alt="Ad Widget"/>

Ad Widget

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಅವರ ಆಪ್ತ ಸ್ನೇಹಿತೆ ಎಂದೇ ಗುರುತಿಸಿಕೊಂಡಿರುವ ತ್ರಿಷಾ ಕೂಡ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ. ಈ ನಿರೀಕ್ಷೆಯೊಂದಿಗೆ ಅಭಿಮಾನಿಗಳ ಗುಂಪೊಂದು ‘ಇಳಯ ಪುರಟ್ಟಿ ತಲೈವಿ ತ್ರಿಷಾ’ ಹೆಸರಿನಲ್ಲಿ ಹೊಸ ವೇದಿಕೆಯನ್ನು ಆರಂಭಿಸಿದೆ.

Ad Widget

Ad Widget <> Ad Widget

ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ತ್ರಿಷಾ ಅವರನ್ನು ರಾಜಕೀಯ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ನಡೆಸುವುದಾಗಿ ಸಂಘಟನೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ತ್ರಿಷಾ ಕೂಡ ರಾಜಕೀಯ ಪಯಣ ಆರಂಭಿಸಿದರೆ ತಮಿಳುನಾಡಿನ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಜಯಲಲಿತಾ ಹಾದಿಯಲ್ಲಿ ತ್ರಿಷಾ?
ಅಭಿಮಾನಿಗಳು ತ್ರಿಷಾ ಅವರಿಗೆ ‘ಇಳಯ ಪುರಟ್ಟಿ ತಲೈವಿ’ (ಯುವ ಕ್ರಾಂತಿಕಾರಿ ನಾಯಕಿ) ಎಂಬ ಬಿರುದನ್ನೂ ನೀಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ನಾಯಕಿ ದಿವಂಗತ ಜೆ. ಜಯಲಲಿತಾ ಅವರನ್ನು ‘ಪುರಟ್ಟಿ ತಲೈವಿ’ (ಕ್ರಾಂತಿಕಾರಿ ನಾಯಕಿ) ಎಂದು ಕರೆಯಲಾಗುತ್ತಿತ್ತು. ಇದೇ ಹಿನ್ನೆಲೆಯಲ್ಲಿ ತ್ರಿಷಾ ಅವರಿಗೂ ಅಂತಹದ್ದೇ ಬಿರುದು ನೀಡಿ, ಜಯಲಲಿತಾ ಅವರ ಉತ್ತರಾಧಿಕಾರಿ ಎಂಬಂತೆ ಬಿಂಬಿಸಲಾಗುತ್ತಿದೆ.

Ad Widget

Ad Widget

ಜಯಲಲಿತಾ ಅವರ ವ್ಯಕ್ತಿತ್ವ ಮತ್ತು ಆಡಳಿತ ಶೈಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳು, ತಮಿಳುನಾಡಿಗೆ ಅವರಂತಹ ನಾಯಕಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಪ್ರತಿಯೊಂದು ಬೆಳವಣಿಗೆಯ ಬಗ್ಗೆಯೂ ಜಯಲಲಿತಾ ಮಾಹಿತಿ ಹೊಂದಿದ್ದರು. ಸರಕಾರಿ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ನಿರಂತರ ನಿಗಾ ಇರಿಸುತ್ತಿದ್ದರು ಎಂದು ಸಂಘಟನೆಯ ಪ್ರಕಟಣೆಯಲ್ಲಿ ಹೇಳಲಾಗಿದೆ.

ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದ ಜಯಲಲಿತಾ ಅವರ ಆಡಳಿತ ಶೈಲಿಯನ್ನು ಉಲ್ಲೇಖಿಸಿರುವ ಅಭಿಮಾನಿಗಳು, ತ್ರಿಷಾ ಅವರಲ್ಲೂ ಅಂತಹ ನಾಯಕತ್ವದ ಗುಣಗಳಿವೆ ಎಂದು ಪ್ರತಿಪಾದಿಸಿದ್ದಾರೆ.

ವಿಜಯ್-ತ್ರಿಷಾ ಜೋಡಿಯಿಂದ ಹೊಸ ರಾಜಕೀಯ ಅಧ್ಯಾಯ?
ವಿಜಯ್ ನೇತೃತ್ವದ ಟಿವಿಕೆ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಅಭಿಮಾನಿಗಳು, ತ್ರಿಷಾ ಕೂಡ ರಾಜಕೀಯ ಪ್ರವೇಶಿಸಿದರೆ ಜಯಲಲಿತಾ ಅವರ ಆಡಳಿತವನ್ನು ಹೋಲುವ ಉತ್ತಮ ಆಡಳಿತವನ್ನು ತಮಿಳುನಾಡಿನಲ್ಲಿ ಕಾಣಬಹುದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ತ್ರಿಷಾ ಅವರ ವ್ಯಕ್ತಿತ್ವ ಜಯಲಲಿತಾ ಅವರನ್ನು ಹೋಲುತ್ತದೆ. ವಿವಿಧ ಸಂದರ್ಭಗಳಲ್ಲಿ ಅವರ ಗುಣಗಳನ್ನು ಗಮನಿಸಿದ್ದೇವೆ. ಅವರ ಆಪ್ತರಿಗೂ ಈ ವಿಚಾರ ತಿಳಿದಿದೆ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ.

ಈ ಅಭಿಯಾನದ ಮೊದಲ ಹೆಜ್ಜೆಯಾಗಿ ‘ಇಳಯ ಪುರಟ್ಟಿ ತಲೈವಿ ತ್ರಿಷಾ ಪೇರವೈ’ ಎಂಬ ಸಂಘಟನೆಯನ್ನು ಆರಂಭಿಸಲಾಗಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿ, ಆ ಮೂಲಕ ತ್ರಿಷಾ ಅವರ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧಪಡಿಸುವುದು ಅಭಿಮಾನಿಗಳ ಉದ್ದೇಶವಾಗಿದೆ.

ಆದರೆ, ತ್ರಿಷಾ ಅವರು ರಾಜಕೀಯ ಪ್ರವೇಶಿಸುವ ಕುರಿತು ಈವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಮಟ್ಟದಲ್ಲಿ ನಡೆಯುತ್ತಿರುವ ಅಭಿಯಾನ ಮತ್ತು ನಿರೀಕ್ಷೆಯಷ್ಟೇ ಆಗಿದೆ.

ಈ ಹಿಂದೆ ಟಿವಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ ಮುಂದೆ ತಾನು ತಮಿಳುನಾಡಿನ ಮುಖ್ಯಮಂತ್ರಿಯಾಗುವುದಾಗಿ ತ್ರಿಷಾ ಹೇಳಿದ್ದ ವಿಡಿಯೊ ಕೂಡ ವಿಜಯ್ ಮುಖ್ಯಮಂತ್ರಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿತ್ತು.

ಗಮನಾರ್ಹವೆಂದರೆ, ಜಯಲಲಿತಾ ಕೂಡ ಆರಂಭದಲ್ಲಿ ನಟಿಯಾಗಿಯೇ ಜನಪ್ರಿಯತೆ ಗಳಿಸಿದ್ದರು. ಬಳಿಕ 1982ರಲ್ಲಿ ಎಂ.ಜಿ. ರಾಮಚಂದ್ರನ್ ಅವರ ಎಐಎಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶಿಸಿ, 1991ರಲ್ಲಿ ಮೊದಲ ಬಾರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ತ್ರಿಷಾ ಅವರ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಲ್ಲಿ ಮೂಡಿರುವ ಕುತೂಹಲ ತಮಿಳುನಾಡಿನ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!