ಕಾರ್ಯಕ್ರಮಗಳು
Aashirvad Enterprises-ಪುತ್ತೂರು: ಆಶೀರ್ವಾದ ಎಂಟರ್‌ಪೈಸಸ್- ಲಕ್ಕಿಸ್ಕೀಂನ 2ನೇ ಸೀಝನ್ ಶುಭಾರಂಭ; ಲೋಗೋ ಅನಾವರಣ-ಮೊಬೈಲ್ ಆ್ಯಪ್ ಬಿಡುಗಡೆ
ದರ್ಬೆ ಮೊದಿನ್ ಕಾಂಪ್ಲೆಕ್ಸ್‌ನಲ್ಲಿ ವ್ಯವಹರಿಸುತ್ತಿರುವ ಆಶೀರ್ವಾದ ಎಂಟರ್‌ಪ್ರೈಸಸ್ ಲಕ್ಷ್ಮೀ ಸ್ಟೀಂನ 2ನೇ ಸೀಝನ್ ಶುಭಾರಂಭ, ಸಂಸ್ಥೆಯ ಲೋಗೋ ಅನಾವರಣ, ಮೊಬೈಲ್ ಆ್ಯಪ್ ಬಿಡುಗಡೆ ಹಾಗೂ 163 ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಬೈಪಾಸ್ ರಸ್ತೆಯಲ್ಲಿರುವ ಅಶ್ಮಿ ಕಂಪರ್ಟ್‌ನಲ್ಲಿ ಆ. 25ರಂದು ನಡೆಯಿತು.
ಪುತ್ತೂರು: ದರ್ಬೆ ಮೊದಿನ್ ಕಾಂಪ್ಲೆಕ್ಸ್‌ನಲ್ಲಿ ವ್ಯವಹರಿಸುತ್ತಿರುವ ಆಶೀರ್ವಾದ ಎಂಟರ್‌ಪ್ರೈಸಸ್ ಲಕ್ಷ್ಮೀ ಸ್ಟೀಂನ 2ನೇ ಸೀಝನ್ ಶುಭಾರಂಭ, ಸಂಸ್ಥೆಯ ಲೋಗೋ ಅನಾವರಣ, ಮೊಬೈಲ್ ಆ್ಯಪ್ ಬಿಡುಗಡೆ ಹಾಗೂ 163 ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಬೈಪಾಸ್ ರಸ್ತೆಯಲ್ಲಿರುವ ಅಶ್ಮಿ ಕಂಪರ್ಟ್‌ನಲ್ಲಿ ಆ. 25ರಂದು ನಡೆಯಿತು. ಅತಿಥಿಗಳಾದ ದೇವದಾಸ್ ಕಾಪಿಕಾಡ್ ಸಂಸ್ಥೆಯ ಲೋಗೋ ಬಿಡುಗಡೆಗೊಳಿಸಿದರು. ವಾಲ್ಟರ್ ನಂದಳಿಕೆಯವರು ಸಂಸ್ಥೆಯ ಬ್ರೋಚರ್ ಬಿಡುಗಡೆ ಮಾಡಿದರು. ರವಿರಾಮಕುಂಜ ಸಂಸ್ಥೆಯ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದರು.

ನಾನು ತಿನ್ನುವ ಅನ್ನದ ಬಟ್ಟಲು ನೀವು-ದೇವದಾಸ್ ಕಾಪಿಕಾಡ್:
ತುಳು ಚಿತ್ರರಂಗದ ನಿರ್ಮಾಪಕರು ಹಾಗೂ ಹಿರಿಯ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ 2ನೇ ಸೀಝನ್ ಮತ್ತು ಸಂಸ್ಥೆಯ ಲೋಗೋ ಅನಾವರಣ ಮಾಡಿ ಮಾತನಾಡಿ, ನಿಮ್ಮ ಸಂಸ್ಥೆಯ ಪಾಲುದಾರರಲ್ಲಿ ಒಗ್ಗಟ್ಟು ಇದೆ. ತುಂಬಾ ಖುಷಿಯಾಯಿತು. ನಿಮಗೆಲ್ಲರಿಗೂ ಉಪಕಾರ ಮಾಡಲು ಈ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಇವತ್ತು ಪ್ರತೀ ಮನೆಗೂ ಆಧಾರಸ್ತಂಭವಾಗಿ ನಿಲ್ಲುವ ಸಂಸ್ಥೆಯಾಗಿ ಆಶೀರ್ವಾದ ಬೆಳೆದಿದೆ. ನಿಮ್ಮಲ್ಲಿ ನಂಬಿಕೆಯ ನಗು ಇದೆ. ಎಂದರು. ನಿಮ್ಮ ಆಶೀರ್ವಾದದಿಂದ ನಾನು ಮೇಲೆ ಬಂದಿದ್ದೇನೆ. ನಾನು ತಿನ್ನುವ ಅನ್ನದ ಬಟ್ಟಲು ನೀವು ಎಂದ ಅವರು ಪ್ರತೀ ಊರಲ್ಲಿ ಆಶೀರ್ವಾದ ಸಂಸ್ಥೆ ಹುಟ್ಟಲಿ ಅಲ್ಲದೆ ಅಂತರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಲಿ ಎಂದು ಹೇಳಿ ಹಾರೈಸಿದರು.

ಜಗತ್ತಿನ ದುಬಾರಿ ವಸ್ತು ನಂಬಿಕೆ-ವಾಲ್ಟರ್ ನಂದಳಿಕೆ:
ಸಂಸ್ಥೆಯ ಬ್ರೋಚರ್ ಬಿಡುಗಡೆ ಮಾಡಿದ ಡೈಸಿ ವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ ಜಗತ್ತಿನಲ್ಲಿ ದುಬಾರಿ ವಸ್ತು ಎಂದರೆ ನಂಬಿಕೆ, ನಂಬಿಕೆಗೆ ಅರ್ಹವಾದ ಮಕ್ಕಳಿಗೆ ಬ್ಯಾಗ್ ನೀಡಿ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಇದು ಹೆಮ್ಮೆಯ ವಿಷಯ ಎಂದರು. ನಿಮ್ಮ ಮಕ್ಕಳು ಕಲಿಕೆಯಲ್ಲಿ ಹಿಂದೆ ಇದ್ದು ಉಳಿದ ಚಟುವಟಿಕೆಗಳಲ್ಲಿ ಪ್ರತಿಭಾವಂತರಾಗಿದ್ದರೆ ಅವರಿಗೆ ಪ್ರೋತ್ಸಾಹ ನೀಡಿ ಮಕ್ಕಳ ಕನಸನ್ನು ಕೇಳಿ. ಮಕ್ಕಳಿಗೆ ಆಸ್ತಿ ಮಾಡಬೇಡಿ. ಮಕ್ಕಳನ್ನು ಸಮಾಜದ ಆಸ್ತಿ ಮಾಡಿ ಎಂದರು. ಮಕ್ಕಳ ಅಂಕಗಳೇ ಎಲ್ಲವೂ ಅಲ್ಲ, ಅದು ಸರ್ಟಿಫಿಕೇಟ್ ಮಾತ್ರ ಎಂದು ಪೋಷಕರಿಗೆ ತಿಳಿಸಿದರು.

ಎಲ್ಲಾ ಕಡೆ ಸಂಸ್ಥೆ ಬೆಳಗಲಿ ರವಿ ರಾಮಕುಂಜ:
ಸಂಸ್ಥೆಯ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ತುಳು ಚಿತ್ರರಂಗ ಕಲಾವಿದ ಹಾಗೂ ಸಂಸ್ಥೆಯ ಬ್ಯಾಂಡ್ ಅಂಬಾಸಿಡರ್ ರವಿ ರಾಮಕುಂಜ ಮಾತನಾಡಿ ಸಂಸ್ಥೆಯು ಸ್ಥಿರ ಜೊತೆಗೆ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದೆ. ಪುತ್ತೂರು ಅಲ್ಲದೆ, ಸುಳ್ಯ, ಮಂಗಳೂರು ಮುಂದಾದ ಕಡೆಗಳಲ್ಲಿಯೂ ಬೆಳೆಯಲಿ ಎಂದು ಹಾರೈಸಿದರು.
ನನ್ನನ್ನು ಗುರುತಿಸಿದ್ದಕ್ಕೆ ಕೃತಜ್ಞತೆ-ಆತ್ಮೀಯ ಗಾನ ನಾಯಕ್:
ಯೂಟ್ಯೂಬರ್ ಆತ್ಮೀಯ ಗಾನ ನಾಯಕ್ ಮಾತನಾಡಿ ಇಂದು ನನ್ನನ್ನು ಗುರುತಿಸಿದಕ್ಕೆ ಕತಜ್ಞತೆ ಸಲ್ಲಿಸುತ್ತೇನೆ. ಆಶೀರ್ವಾದ ಎಂಟರ್‌ಪ್ರೈಸಸ್ ಸಂಸ್ಥೆಗೆ ಎಲ್ಲರೂ ಆಶೀರ್ವಾದ ಮಾಡಬೇಕು ಈ ಮೂಲಕ ಸಂಸ್ಥೆ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.
ಝೀ ಕನ್ನಡ ಛೋಟಾ ಚಾಂಪಿಯನ್ ವಿನ್ನರ್ ಬೇಬಿ ಆತ್ಮೀ, ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಮತ್ತು ಸಿಝ್ಲರ್ ಅಗ್ರಿ ಝೋನ್ ಮಾಲಕ ಪ್ರಸನ್ನಕುಮಾರ್ ಶೆಟ್ಟಿ, ಉದ್ಯಮಿ ಲಕ್ಷ್ಮಣಬೈಲಾಡಿ ಹಾಗೂ ಹುಬ್ಬಳ್ಳಿ ಟ್ರೇಡರ್ಸ್‌ನ ಉದ್ಯಮಿ ಜಯರಾಂ ಶೆಟ್ಟರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿಗಳೊಂದಿಗೆ ಸೆಲ್ಫಿ ತೆಗೆದು ಸಂಭ್ರಮ:
ಅತಿಥಿ ಗಣ್ಯರಾದ ದೇವದಾಸ್ ಕಾಪಿಕಾಡ್, ವಾಲ್ಟರ್ ನಂದಳಿಕೆ, ರವಿ ರಾಮಕುಂಜ, ಆತ್ಮೀಯ ಗಾನ ನಾಯಕ್ ಹಾಗೂ ಬೇಬಿ ಆತ್ಮೀಯೊಂದಿಗೆ ಕೆಲವರು ಸೆಲ್ಫಿ ತೆಗೆದು ಸಂಭ್ರಮಿಸಿದರು.
ಸಂಸ್ಥೆಯ ಪಾಲುದಾರ ದೇವಿಪ್ರಸಾದ್ ಮೊಬೈಲ್ ಆ್ಯಪ್ ಬಗ್ಗೆ ಮಾಹಿತಿ ನೀಡಿದರು. ಸಹಕರಿಸಿದ ಕೃಷ್ಣ ಹಾಗೂ ಮೋಹನ ನಾಯಕ್ ರವರನ್ನು ಗೌರವಿಸಲಾಯಿತು. ಸಂಸ್ಥೆಯ ಪಾಲುದಾರರಾದ ದೇವಿಪ್ರಸಾದ್, ಸಬ್ಬಾನ್, ಸಿರಾಜ್, ಸುಲ್ತಾನ್, ಜಾಹೀರ್ ರವರು ಅತಿಥಿಗಳನ್ನು ಶಾಲು ಹಾಕಿ ಸ್ವಾಗತಿಸಿದರು. ಶಿಕ್ಷಕ ಬಾಲಕೃಷ್ಣಕ್ಕೆ ಪೊರ್ನಾಳ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.
ಸ್ಕೀಂಗ್ ಸೇರಿಯರ ಆಪುಜ…
ಝೀ ಕನ್ನಡ ಛೋಟಾ ಚಾಂಪಿಯನ್ ವಿನ್ನರ್ ಬೇಬಿ ಆತ್ಮೀ ತುಳುವಿನಲ್ಲಿ ಮಂಡಬೆಚ್ಚಿ ಮಾಲ್ಪೊಡ್ಚಿ, ಸ್ಕೀಂಗ್ ಸೇರಿಯರ ಆಪುಜ ಎಂದು ಮಾತನಾಡಿ ಎಲ್ಲರ ಗಮನ ಸೆಳೆದಳು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
-
Uncategorized12 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized9 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized11 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized14 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized12 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized11 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















