ರಾಜಕೀಯ
Muralikrishna Hasantadka-RSSನ ಪರಿವಾರ ಸಂಘಟನೆಗಳ ಜವಾಬ್ದಾರಿಯಿಂದ ಮುರಳಿಕೃಷ್ಣ ಹಸಂತಡ್ಕ ಮುಕ್ತ – ರಾಜಕೀಯ ಕ್ಷೇತ್ರದತ್ತ ಚಿತ್ತ – ಇದರ ಹಿಂದಿದೆ ಸಂಘದ ಮಾಸ್ಟರ್ ಪ್ಲ್ಯಾನ್ ?
ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕದ ಸ್ವಯಂ ಸೇವಕ, ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಇತ್ಯಾದಿ ಹಿಂದೂ ಪರ ಸಂಘಟನೆಯಲ್ಲಿ 3 ದಶಕಗಳ ಕಾಲ ಪುತ್ತೂರು ಹಾಗೂ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಪರಿವಾರ ಸಂಘಟನೆಯಿಂದ ಮುಕ್ತಗೊಳಿಸಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ಪ್ರಮುಖ ಜವಬ್ದಾರಿ ನಿರ್ವಹಿಸುವ ಸಾಧ್ಯತೆಯಿದ್ದು, ಇದೇ ಹಿನ್ನಲೆಯಲ್ಲಿ ಅವರನ್ನು ಸಂಘಟನೆಯ ಜವಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಜು.13ರಂದು ಬೆಂಗಳೂರಿನಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಪ್ರಾಂತೀಯ ಬೈಠಕ್ನಲ್ಲಿ ಅವರನ್ನು ರಾಷ್ಟ್ರೀಯ ಸ್ವಯಂ ಸೇವಕ ಪರಿವಾರ ಸಂಘಟನೆಗಳ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ. ಅವರು ಈಗಾಗಲೇ ಬಿಜೆಪಿಯ ಪ್ರಾಥಮಿಕ ಸದಸತ್ವ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಪಕ್ಷದಲ್ಲಿ ಅಯಕಟ್ಟಿನ ಹುದ್ದೆ ಸಿಗುವ ಸಾಧ್ಯತೆಯಿದೆ.
ವಿದ್ಯಾರ್ಥಿ ಜೀವನದಿಂದಲೇ ಅರ್ ಎಸ್ ಎಸ್ ನ ಸ್ವಯಂ ಸೇವಕರಾಗಿದ್ದ ಮುರಳಿಕೃಷ್ಣರವರು, ಆರಂಭದಲ್ಲಿ ಬಜರಂಗದಳದಲ್ಲಿ ವಿವಿಧ ಜವಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಬಜರಂಗದಳದ ಗ್ರಾಮಾಂತರ ಸಂಚಾಲಕ, ಬಜರಂಗದಳ ಜಿಲ್ಲೆ, ರಾಜ್ಯ ಘಟಕದಲ್ಲೂ ಜವಾಬ್ದಾರಿ ನಿಭಾಯಿಸಿದ್ದಾರೆ. ಬಜರಂಗದಳ ದಕ್ಷಿಣ ವಿಭಾಗ ಪ್ರಾಂತ ಸಹಸಂಯೋಜಕರಾಗಿ ಸೇವೆ ಸಲ್ಲಿಸಿದ ಅವರು ವಿಶ್ವಹಿಂದೂ ಪ್ರಾಂತ ಗೋ ರಕ್ಷಾ ಪ್ರಮುಖರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ.
ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಟಾವಂತ ಸ್ವಯಂ ಸೇವಕ. ಸಂಘ ನನ್ನಿಂದ ಏನನ್ನೂ ಆಪೇಕ್ಷಿಸುತ್ತದೋ ಆ ಜವಬ್ದಾರಿಯನ್ನು ನಿಷ್ಟೆಯಿಂದ ನಿರ್ವಹಿಸುತ್ತೇನೆ. ಬಿಜೆಪಿಯಲ್ಲಿ ಜವಬ್ದಾರಿ ನೀಡಿ ಕಾರ್ಯ ನಿರ್ವಹಿಸಬೇಕೇಂದು ಸಂಘವು ಆಪೇಕ್ಷೆ ಪಟ್ಟಲ್ಲಿ ಕೆಲಸ ಮಾಡಲು ಸಿದ್ದನಿರುವುದಾಗಿ ನಿಖರ ನ್ಯೂಸಿಗೆ ಮುರಳಿಕೃಷ್ಣ ಹಸಂತಡ್ಕರವರು ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಸಂಘಪರಿವಾರ ಹಾಗೂ ಬಿಜೆಪಿಗೆ ಮಾತೃ ಸಂಘಟನೆಯಾಗಿದ್ದು, ಕಾಲಾನುಕಾಲದಲ್ಲಿ ತನ್ನ ಸ್ವಯಂ ಸೇವಕರನ್ನು ಸಂಘಟನೆ ಯಾ ಪಕ್ಷದಲ್ಲಿ ಕೆಲಸ ಮಾಡಲು ಬಿಟ್ಟು ಕೊಡುತ್ತದೆ ಅಥಾವ ನಿಯುಕ್ತಿಗೊಳಿಸುತ್ತದೆ. ಅದೇ ರೀತಿ ಪರಿವಾರ ಸಂಘಟನೆಯಲ್ಲಿ ಜವಬ್ದಾರಿ ನಿರ್ವಹಿಸುತ್ತಿರುವವರು ಬಿಜೆಪಿಯಲ್ಲಿ ಕೆಲಸ ಮಾಡಬೇಕಾದರೇ ಅವರನ್ನು ಅಯಾಯ ಸಂಘಟನೆಗಳು ಅವರನ್ನು ಜವಬ್ದಾರಿಯಿಂದ ಮುಕ್ತಗೊಳಿಸಬೇಕಿದೆ.
ಅದರಂತೆ ಇದೀಗ ಬಿಜೆಪಿಯಲ್ಲಿ ಕೆಲಸ ಮಾಡಲು ಕಳೆದ ಹಲವು ದಶಕಗಳಿಂದ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದ ಮುರಳಿಕೃಷ್ಣರವರನ್ನು ಸಂಘಟನೆಯೂ ಜವಬ್ದಾರಿ ಮುಕ್ತಗೊಳಿಸಿದೆ/
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪುತ್ತೂರಿನಲ್ಲಿ ಬಿಜೆಪಿ ಪಕ್ಷದಲ್ಲಿ ಉಂಟಾದ ಗೊಂದಲದ ಹಿನ್ನಲೆಯಲ್ಲಿ ಮುರಳಿಕೃಷ್ಣ ಅವರು ಸಂಘಟನೆಯ ಜವಬ್ದಾರಿಯಿಂದ ಮುಕ್ತಗೊಳಿಸಿರುವುದು ಪ್ರಮುಖ ರಾಜಕೀಯ ಬೆಳವಣಿಗೆಯಾಗಿದೆ. ಕಳೆದ ಚುನಾವಣೆ ಸಂದರ್ಭ ಪುತ್ತೂರಿನಲ್ಲಿ ಬಿಜೆಪಿ V/s ಹಿಂದೂತ್ವ ಪ್ರಮುಖ ಚುನಾವಣೆಯ ವಿಷಯವಾಗಿ ಬಿಜೆಪಿ ಹಿನ್ನಡೆ ಅನುಭವಿಸಿತ್ತು. 60 ವರ್ಷಗಳ ಬಳಿಕ ಬಿಜೆಪಿ ಮೊದಲ ಬಾರಿ 3ನೇ ಸ್ಥಾನಕ್ಕೆ ಕುಸಿದಿತ್ತು.
ಈ ಬಾರಿ ಇಂತಹ ಸಾದ್ಯತೆಗಳು ಗೋಚರಿಸಿದರೆ, ಮುರಳಿಕೃಷ್ನರನ್ನು ಟ್ರಂಪ್ ಕಾರ್ಡ್ ಆಗಿ ಬಳಸುವ ಯೋಚನೆ ಸಂಘಕ್ಕಿದೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕಾಗಿ ಚುನಾವಣೆಗೆ ಮೊದಲು ಪಕ್ಷದಲ್ಲಿ ಅವರನ್ನು ಸಕ್ರಿಯವಾಗಿಸುವ ಭಾಗವಾಗಿ ಈ ಬೆಳವಣಿಗೆ ನಡೆದಿದೆ ಎನ್ನುವುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತು
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮಂಗಳೂರು
Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಮಂಗಳೂರು, ನ.26: ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಂಗಳೂರಿನ ತಣ್ಣೀರ್ಭವಿಯಲ್ಲಿರುವ ಪ್ರಸ್ತಾವಿತ ಸ್ಥಳವನ್ನು ಪರಿಶೀಲಿಸಿದರು. ಇಲ್ಲಿ ಸುಮಾರು 49 ಎಕರೆ ಭೂಮಿಯನ್ನು ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗಾಗಿ ಗುರುತಿಸಲಾಗಿದೆ.
ಈ ಉಪಕ್ರಮದ ಕುರಿತು ಮಾತನಾಡಿದ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರು, “ನಾವು ಒಪ್ಪಿಕೊಂಡರೂ, ಒಪ್ಪಿಕೊಳ್ಳದಿದ್ದರೂ ಎಐ (AI) ಈಗ ನಮ್ಮ ಬದುಕಿನ ಭಾಗವಾಗಿದೆ. ಎಐ ಯುಗದಲ್ಲಿ ಡೇಟಾ ಸೆಂಟರ್ಗಳು ಅತ್ಯಗತ್ಯ ಮೂಲಸೌಕರ್ಯಗಳಾಗಿವೆ. ಆದರೆ, ನೀರು ಮತ್ತು ವಿದ್ಯುತ್ನ್ನು ಸಮರ್ಥವಾಗಿ ಬಳಸಿಕೊಂಡು, ಪರಿಸರದ ಮೇಲಿನ ನಮ್ಮ ಜವಾಬ್ದಾರಿಗಳಿಗೆ ಯಾವುದೇ ಧಕ್ಕೆಯಾಗದಂತೆ ಈ ಮಹತ್ವದ ಮೂಲಸೌಕರ್ಯವನ್ನು ಸುಸ್ಥಿರ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಹೊಣೆಗಾರಿಕೆಯಾಗಿದೆ. ತಂತ್ರಜ್ಞಾನ ಆಧಾರಿತ ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಎರಡೂ ಪರಸ್ಪರ ಪೂರಕವಾಗಿ ಸಾಗಬಲ್ಲವು ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ” ಎಂದರು.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ ಈ ಉಪಕ್ರಮವನ್ನು ಪರಿಶೀಲಿಸಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಬಳಕೆ, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಪರಿಸರ ಸ್ನೇಹಿ ಡಿಜಿಟಲ್ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ.
ಒಟ್ಟು 49 ಎಕರೆ ಭೂಮಿಯಲ್ಲಿ, ಅನ್ವಯವಾಗುವ ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳ ಪ್ರಕಾರ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ನಿರ್ಮಾಣ ಕೈಗೊಳ್ಳಲು ಅವಕಾಶವಿದೆ ಎಂದು ಅಂದಾಜಿಸಲಾಗಿದೆ. ಮುಂದಿನ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಸ್ಥಳದ ಕಾರ್ಯಸಾಧ್ಯತೆ, ಮೂಲಸೌಕರ್ಯದ ಅಗತ್ಯತೆಗಳು ಹಾಗೂ ಪರಿಸರ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು.
ಸ್ಥಳದ ಸೂಕ್ತತೆ, ಅಗತ್ಯ ಮೂಲಸೌಕರ್ಯಗಳ ಗುರುತಿಸುವಿಕೆ ಮತ್ತು ಸಮಗ್ರ ಶ್ವೇತಪತ್ರ ಸಿದ್ಧಪಡಿಸುವ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಪಾಲುದಾರರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. ಈ ಶ್ವೇತಪತ್ರದಲ್ಲಿ ಸ್ಥಳದ ಅವಕಾಶಗಳು, ಮಿತಿಗಳು ಮತ್ತು ಅಭಿವೃದ್ಧಿಯ ಸಾಧ್ಯತೆಗಳನ್ನು ವಿವರಿಸಲಾಗುವುದು. ಖಾಸಗಿ ವಲಯದ ಕಂಪನಿಗಳು ಹಾಗೂ ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ ನಡೆಸಲು ಇದು ಆಧಾರವಾಗಲಿದೆ.
ಎಐ ಯುಗಕ್ಕೆ ಸುಸ್ಥಿರ ಡಿಜಿಟಲ್ ಮೂಲಸೌಕರ್ಯ
ಕೃತಕ ಬುದ್ಧಿಮತ್ತೆ ಮತ್ತು ಇತರ ಉದಯೋನ್ಮುಖ ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯೊಂದಿಗೆ ಡೇಟಾ ಸೆಂಟರ್ಗಳು ಡಿಜಿಟಲ್ ಆರ್ಥಿಕತೆಯ ಅತ್ಯಗತ್ಯ ಮೂಲಸೌಕರ್ಯಗಳಾಗಿ ಹೊರಹೊಮ್ಮುತ್ತಿವೆ. ಈ ಬೆಳವಣಿಗೆಯ ಜೊತೆಗೆ ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಪರಿಸರ ಸಂರಕ್ಷಣಾ ಕ್ರಮಗಳಿಗೂ ಆದ್ಯತೆ ನೀಡುವುದು ಕರ್ನಾಟಕದ ಉದ್ದೇಶವಾಗಿದೆ.
ಕರ್ನಾಟಕ ಸುಸ್ಥಿರ ಡೇಟಾ ಸೆಂಟರ್ ನೀತಿ 2026–2031ರ ಅಡಿಯಲ್ಲಿ, ಪರಿಸರದ ಜವಾಬ್ದಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿಯ ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲಿ 1 GW ಸಾಮರ್ಥ್ಯದ ಡೇಟಾ ಸೆಂಟರ್ ಮೂಲಸೌಕರ್ಯವನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ.
ತಣ್ಣೀರ್ಭವಿಯಲ್ಲಿ ಪ್ರಸ್ತಾವಿತವಾಗಿರುವ ಡೇಟಾ ಸೆಂಟರ್ನಲ್ಲಿ ನವೀಕರಿಸಬಹುದಾದ ಇಂಧನ, ಇಂಧನ ದಕ್ಷತೆಯ ಕಾರ್ಯಾಚರಣೆಗಳು, ಸುಧಾರಿತ ಶೀತಲೀಕರಣ ತಂತ್ರಜ್ಞಾನಗಳು ಮತ್ತು ಜವಾಬ್ದಾರಿಯುತ ನೀರಿನ ನಿರ್ವಹಣೆಗೆ ಒತ್ತು ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಮೂಲಕ ಕರಾವಳಿ ಪರಿಸರಕ್ಕೆ ಪೂರಕವಾಗಿ ಬೃಹತ್ ಡಿಜಿಟಲ್ ಮೂಲಸೌಕರ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸುವುದು ಉದ್ದೇಶವಾಗಿದೆ.
ಮಂಗಳೂರು, ಮಣಿಪಾಲ ಮತ್ತು ಉಡುಪಿ: ಉದಯೋನ್ಮುಖ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರಗಳು
ಪ್ರಸ್ತಾವಿತ ಡೇಟಾ ಸೆಂಟರ್ ಕರ್ನಾಟಕದ ಕರಾವಳಿ ಭಾಗವನ್ನು ಸಮೃದ್ಧ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ರೂಪಿಸುವ ರಾಜ್ಯದ ವಿಶಾಲ ದೂರದೃಷ್ಟಿಯ ಭಾಗವಾಗಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs), ಸ್ಟಾರ್ಟ್ಅಪ್ಗಳು, ಡೀಪ್ಟೆಕ್, ಸಾಗರ ಜೈವಿಕ ತಂತ್ರಜ್ಞಾನ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ಮೂಲಕ ಮಂಗಳೂರು, ಮಣಿಪಾಲ ಮತ್ತು ಉಡುಪಿಯನ್ನು ಪರಸ್ಪರ ಪೂರಕವಾದ ತಂತ್ರಜ್ಞಾನ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಪೂರಕವಾಗಿ ಉದ್ಯಮಗಳ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಪ್ರತಿಭಾ ವಿಕಸನಕ್ಕೂ ಒತ್ತು ನೀಡಲಾಗುತ್ತಿದೆ.
ಈ ಪ್ರದೇಶವು ಈಗಾಗಲೇ ಸುಮಾರು ₹5,000 ಕೋಟಿ ಮೌಲ್ಯದ ಐಟಿ ರಫ್ತುಗಳನ್ನು ದಾಖಲಿಸಿದ್ದು, ಕರ್ನಾಟಕದ ತಂತ್ರಜ್ಞಾನ ಆರ್ಥಿಕತೆಗೆ ತನ್ನ ಕೊಡುಗೆಯನ್ನು ಹೆಚ್ಚಿಸುತ್ತಿದೆ. ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಪ್ರತಿಭೆಗಳಿಗೆ ಉನ್ನತ ಮೌಲ್ಯದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಬೆಳವಣಿಗೆಯನ್ನು ಮತ್ತಷ್ಟು ವಿಸ್ತರಿಸಲು ಸರ್ಕಾರ ಹೆಚ್ಚಿನ ಅವಕಾಶಗಳನ್ನು ಕಾಣುತ್ತಿದೆ.
ಬಿಯಾಂಡ್ ಬೆಂಗಳೂರು ಎಂಬ ದೂರದೃಷ್ಟಿಯ ಮೂಲಕ ರಾಜ್ಯದಾದ್ಯಂತ ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕ ತಂತ್ರಜ್ಞಾನ ಕ್ಲಸ್ಟರ್ಗಳನ್ನು ನಿರ್ಮಿಸಲು ಕರ್ನಾಟಕ ಬದ್ಧವಾಗಿದೆ. ಈ ಮೂಲಕ ನಾವೀನ್ಯತೆ, ಹೂಡಿಕೆ ಮತ್ತು ಉದ್ಯೋಗಾವಕಾಶಗಳು ಬೆಂಗಳೂರು ಮಹಾನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.
ಪ್ರಸ್ತಾವಿತ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಮುಂದಿನ ತಲೆಮಾರಿನ ಡಿಜಿಟಲ್ ಮೂಲಸೌಕರ್ಯ, ಖಾಸಗಿ ವಲಯದ ಸಹಭಾಗಿತ್ವ ಮತ್ತು ಪರಿಸರ ಜವಾಬ್ದಾರಿಯನ್ನು ಒಂದೆಡೆ ತರುವ ಮಹತ್ವದ ಅವಕಾಶವಾಗಿದೆ. ಆರ್ಥಿಕ ಬೆಳವಣಿಗೆ ಮತ್ತು ಪರಿಸರ ಸುಸ್ಥಿರತೆ ಒಟ್ಟೊಟ್ಟಿಗೆ ಸಾಗಬಲ್ಲವು ಎಂಬುದನ್ನು ತೋರಿಸುವ ಮೂಲಕ ಸದೃಢ ಹಾಗೂ ಭವಿಷ್ಯದ ಅಗತ್ಯಗಳಿಗೆ ಸನ್ನದ್ಧವಾಗಿರುವ ತಂತ್ರಜ್ಞಾನ ಆರ್ಥಿಕತೆಯನ್ನು ನಿರ್ಮಿಸುವುದು ಕರ್ನಾಟಕದ ವಿಶಾಲ ಉದ್ದೇಶವಾಗಿದೆ.
ಅಂತರ ರಾಜ್ಯ
CM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಲಕ್ನೋ: ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಗಳು ಪಕ್ಷದೊಳಗಿನ ನಾಯಕತ್ವದ ವಿಚಾರವನ್ನು ಮುನ್ನೆಲೆಗೆ ತಂದಿವೆ.
ಪತ್ರಕರ್ತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮುಂದಿನ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಅಥವಾ ಬೇರೊಬ್ಬರು ಆ ಸ್ಥಾನಕ್ಕೇರುತ್ತಾರೆಯೇ ಎಂಬುದನ್ನು ತಾನು ನಿರ್ಧರಿಸುವುದಿಲ್ಲ ಎಂದು ಹೇಳಿದ್ದಾರೆ.
“ಬಿಜೆಪಿ ಅಭ್ಯರ್ಥಿಗಳು ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಶಾಸಕರ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕೇಂದ್ರದ ವೀಕ್ಷಕರು ಆಗಮಿಸಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
“ಪ್ರತಿಯೊಬ್ಬರೂ ಕಮಲದ ಚಿಹ್ನೆಯಡಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ. ನಾನೂ ಕಮಲದ ಚಿಹ್ನೆಯ ಮೇಲೆಯೇ ಸ್ಪರ್ಧಿಸುತ್ತೇನೆ. ಕಮಲದ ಹೂವೇ ನಮಗೆ ಎಲ್ಲವೂ” ಎಂದು ಯೋಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯಲ್ಲೂ ತಮ್ಮ ನಾಯಕತ್ವ ಮುಂದುವರಿಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್–ಎಸ್ಪಿ ಮೈತ್ರಿಯಲ್ಲೂ ಬಿಕ್ಕಟ್ಟು
ಇನ್ನೊಂದೆಡೆ, 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ವಿಚಾರವೂ ಬಿಕ್ಕಟ್ಟಿಗೆ ಕಾರಣವಾಗಿದೆ. ಕಾಂಗ್ರೆಸ್ಗೆ ಕೇವಲ 26 ಕ್ಷೇತ್ರಗಳನ್ನು ಬಿಟ್ಟುಕೊಡುವ ಎಸ್ಪಿ ಪ್ರಸ್ತಾವನೆಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಹಾಗೂ ಕಾರ್ಯಾಧ್ಯಕ್ಷ ಇಮ್ರಾನ್ ಮಸೂದ್, “ನಾವೇನು ಭಿಕ್ಷುಕರೇ? ನಮಗೂ ಸ್ವಾಭಿಮಾನವಿದೆ. ಮಾತುಕತೆ ಇದೇ ರೀತಿ ಮುಂದುವರಿದರೆ ಮೈತ್ರಿ ಎಲ್ಲಿದೆ?” ಎಂದು ಎಸ್ಪಿ ವಿರುದ್ಧ ಕಿಡಿಕಾರಿದ್ದಾರೆ.
ಒಟ್ಟಿನಲ್ಲಿ, ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನವೇ ಬಿಜೆಪಿ ನಾಯಕತ್ವದ ವಿಚಾರ ಹಾಗೂ ಕಾಂಗ್ರೆಸ್–ಎಸ್ಪಿ ಸೀಟು ಹಂಚಿಕೆ ವಿವಾದಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
-
ಸುಳ್ಯ21 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ24 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಸ್ಥಳೀಯ21 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ18 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಮಂಗಳೂರು18 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ನಿಧನ ವಾರ್ತೆ2 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಂತರ ರಾಜ್ಯ2 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಶಿಕ್ಷಣ18 hours agoPhilomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ















