Connect with us

ಶಿಕ್ಷಣ

Vidyamatha Academy-ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉದ್ಯೋಗದಾತ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ಗೆ 6 ವರ್ಷದ ಸಂಭ್ರಮ : 140 ಅಭ್ಯರ್ಥಿಗಳು ಸರ್ಕಾರಿ ಸೇವೆಯಲ್ಲಿ – ಸೇನೆಯಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ 18 ಜನ : ಒಟ್ಟಾರೆ 6 ಸಾವಿರಕ್ಕೂ ಮೀರಿ ಅಭ್ಯರ್ಥಿಗಳಿಗೆ ಉದ್ಯೋಗ : ಹತ್ತೂರಿಗೂ ಹರಡಿದ ಪುತ್ತೂರಿನ ಸಂಸ್ಥೆಯ ಹೆಸರು

Published

on



Ad Widget

Ad Widget

Ad Widget

Ad Widget

ಪುತ್ತೂರು : ಗ್ರಾಮೀಣ ಪ್ರದೇಶದ ಶಿಕ್ಷಣ ವ್ಯವಸ್ಥೆಯೊಂದಿಗೆ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಹತ್ತಾರು ಉದ್ಯೋಗ ಮೇಳಗಳನ್ನು , ವಿವಿಧ ಕ್ಷೇತ್ರದಲ್ಲಿ ಲಭ್ಯವಿರುವ ಖಾಸಗಿ ಉದ್ಯೋಗ ಅವಕಾಶಗಳಿಗೆ ಸಾವಿರಾರು ನೇರ ಸಂದರ್ಶನಗಳ ಮೂಲಕ ಯುವ ಜನತೆಗೆ ಉದ್ಯೋಗ ಕೊಡಿಸುವಲ್ಲಿ ವಿದ್ಯಾಮಾತಾ ಅಕಾಡೆಮಿ ತುಂಬಾನೇ ಮಹತ್ತರ ಕಾರ್ಯನಿರ್ವಹಿಸೋ ಮೂಲಕ ಜಿಲ್ಲೆಯಲ್ಲೇ ಪ್ರಸಿದ್ಧಿ ಪಡೆದಿರುವ ಸಂಸ್ಥೆಯಾಗಿ ಹೊರಹೊಮ್ಮುತಿದೆ.

Ad Widget

Ad Widget

Ad Widget

Ad Widget

ರಾಜ್ಯಮಟ್ಟದಲ್ಲೇ ಮೂರು ಉದ್ಯೋಗ ಮೇಳವನ್ನು ಆಯೋಜಿಸಿ , ಹತ್ತಕ್ಕೂ ಮಿಕ್ಕಿದ ಗ್ರಾಮೀಣ ಉದ್ಯೋಗ ಮೇಳದ ಜೊತೆಗೆ ಸಾವಿರಾರು ಸಂದರ್ಶನದೊಡನೆ ನೂರಾರು ಕಾರ್ಯಗಾರ ಮೂಲಕ ಕಳೆದ ಆರು ವರ್ಷಗಳಲ್ಲಿ ಅತೀ ಕಡಿಮೆಯೆಂದರೂ ಆರು ಸಾವಿರ ಮೀರಿ ಉದ್ಯೋಗಾಕಾಂಕ್ಷಿಗಳಿಗೆ ವಿದ್ಯಾಮಾತಾ ಮೂಲಕ ಉದ್ಯೋಗ ಲಭಿಸಿದ್ದು , ಇವೆಲ್ಲವೂ ಅಕಾಡೆಮಿಯ ಪರಿಶ್ರಮಕ್ಕೆ ಸಿಕ್ಕ ಅಮೂಲ್ಯ ಉಡುಗೊರೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಗ್ರಾಮೀಣ ಭಾಗದ ಬಹುತೇಕ ವಿದ್ಯಾರ್ಥಿಗಳು ಸರಕಾರಿ ಹುದ್ದೆಯನ್ನೇರುವ ಅವರ ಪುಟ್ಟ ಕನಸುಗಳು , ನನಸಾಗಿಸಲು ವಿಫಲರಾಗುತ್ತಿರುವುದನ್ನು ಮನಗಂಡು , ವಿದ್ಯಾಮಾತಾ ಫೌಂಡೇಶನ್ ಇದರ ಆಶ್ರಯದಲ್ಲಿ ವಿದ್ಯಾ ಮಾತಾ ಅಕಾಡೆಮಿ ಪ್ರಾರಂಬಿಸಲಾಗಿತ್ತು .

Ad Widget

Ad Widget <> Ad Widget

ಈ ಅಕಾಡೆಮಿ ಮೂಲಕ ಸರಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಉದ್ಯೋಗ ಪಡೆಯಲು ಎದುರಿಸಬೇಕಾದ ಅಡೆತಡೆಗಳನ್ನು ನೀಗಿಸಲು ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಮಾಹಿತಿ ತರಬೇತಿ ಕೇಂದ್ರವನ್ನು ಪುತ್ತೂರು , ಸುಳ್ಯ , ಮತ್ತು ಕಾರ್ಕಳದಲ್ಲಿ ಪ್ರಾರಂಭಿಸಿದೆ.



Ad Widget

ಹತ್ತಾರು ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಏಕಕಾಲದಲ್ಲಿ ಒಂದೇ ಸೂರಿನಡಿ ತರಬೇತಿಯೊಂದಿಗೆ ಜೊತೆಗೆ ಉಚಿತ ಸ್ಪೋಕನ್ ಇಂಗ್ಲೀಷ್ , ಉಚಿತ ಕಂಪ್ಯೂಟರ್ ತರಬೇತಿ , ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ , ಅರ್ಜಿ ಸಲ್ಲಿಕೆ ಮತ್ತು ಸಶಸ್ತ್ರ ಪಡೆಗಳ ನೇಮಕಾತಿಗೆ ಪ್ರಯತ್ನಿಸುವವರಿಗೆ ದೈಹಿಕ ಸದೃಢತೆಗಾಗಿ ಮೈದಾನ ತರಬೇತಿ ನೀಡಲಾಗುತ್ತಿದೆ.

Ad Widget

Ad Widget

ಯಾವೆಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಿಗಲಿದೆ…?
ಐಎಎಸ್ , ಐಪಿಎಸ್ , ಕೆಎಎಸ್ , ಎಫ್ಡಿಎ , ಎಸ್ಡಿಎ ,
ಎನ್ ಡಿ ಎ , ಸಿಡಿಎಸ್ ,
ಪಿಎಸ್ಐ , ಪಿಸಿ , ವಿ ಎ ಒ , ಪಿಡಿಓ ,ಟಿ ಇ ಟಿ , ಸಿ ಟಿಇಟಿ , ಜಿಪಿಎಸ್ಟಿಆರ್ ,
ಎಚ್ ಎಸ್ ಟಿ ಆರ್ , ಡಿಫೆನ್ಸ್ ಕೆಪಿಟಿಸಿಎಲ್, ಕೋ- ಆಪರೇಟಿವ್ , ರೈಲ್ವೇ ,
ಬ್ಯಾಂಕಿಂಗ್, ಎಸ್ ಎಸ್ ಸಿ , ಫಾರೆಸ್ಟ್, ಕೆಸೆಟ್ ಮತ್ತು ನೆಟ್ ಹಾಗೂ ನವೋದಯ ಅಥವಾ ಸೈನಿಕ್ ಸ್ಕೂಲ್ ಎಂಟ್ರೆನ್ಸ್ ಎಕ್ಸಾಮ್
ತರಬೇತಿ ಸಂಸ್ಥೆಯ ಅಕಾಡೆಮಿಯಿಂದ ಸಿಗಲಿದೆ. ಎಲ್ಲಾ ತರಬೇತಿಗಳಿಗೆ ನೇರ ತರಗತಿಗಳು ವಾರದ ದಿನಗಳಲ್ಲಿ ಲಭ್ಯವಿದ್ದು, ಓದು ಮುಗಿಸಿ ಉದ್ಯೋಗಕ್ಕೆ ಪ್ರಯತ್ನ ಮಾಡುವವರು ಇದರ ಉಪಯೋಗ ಪಡೆದುಕೊಳ್ಳಬಹುದು, ಉದ್ಯೋಗಸ್ಥರು, ಗೃಹಿಣಿಯರು, ಸದ್ಯ ಓದುತ್ತಿರುವವರಿಗಾಗಿ ರಾತ್ರಿ ದಿನನಿತ್ಯ 08ರಿಂದ 09ರವರೆಗೆ ಆನ್ಲೈನ್ ಮೂಲಕ ತರಗತಿಗಳು ನಡೆಯುತ್ತವೆ.

5 ರಿಂದ 15 ವರ್ಷದವರೆಗಿನ ವಿದ್ಯಾರ್ಥಿಗಳಿಗೆ ಅಬಕಾಸ್ , ವೇದಿಕ್ ಗಣಿತ , ಮಾನಸಿಕ ಸಾಮರ್ಥ್ಯ ಆನ್ಲೈನ್ ತರಗತಿಗಳು ಪ್ರತಿ ಶನಿವಾರ, ಭಾನುವಾರ ರಾತ್ರಿ 7.30ರಿಂದ 08.30ವರೆಗೆ ನಡೆಯುತ್ತವೆ.

2022ರ ಅಬಕಾಸ್ ನ್ಯಾಷನಲ್ ಚಾಂಪಿಯನ್, 2023 ರ ಸಾಲಿನಲ್ಲಿ ಇಂಟರ್ ನ್ಯಾಷನಲ್ ಚಾಂಪಿಯನ್ ಗೌರವ ವಿದ್ಯಾಮಾತಾ ಅಕಾಡೆಮಿಗೆ ದೊರಕಿದೆ.

ಎರಡು ವರ್ಷಗಳಲ್ಲಿ ಕರ್ನಾಟಕ ಪೊಲೀಸ್, ಅಗ್ನಿಪಥ್ , ಬ್ಯಾಂಕಿಂಗ್ , ಶಿಕ್ಷಕರ ನೇಮಕಾತಿ , ಕೆ ಎಂ ಎಫ್ ಸಹಿತ ಇತರೆ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ 140 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ಕೆಸೆಟ್, ಕರ್ನಾಟಕ ಶಿಕ್ಷಕರ ಪರೀಕ್ಷೆ, ನವೋದಯ /ಸೈನಿಕ ಶಾಲಾ ಪ್ರವೇಶ ಪರೀಕ್ಷೆಗಳಲ್ಲಿ ನಿರಂತರ ಅತ್ಯುತ್ತಮ ಫಲಿತಾಂಶ ದಾಖಲೆ ಮಾಡಿದ್ದು ವಿದ್ಯಾಮಾತಾ ಅಕಾಡೆಮಿಯ ಅತ್ಯುತ್ತಮ ತರಬೇತಿಗೆ ಹಿಡಿದ ಕೈಗನ್ನಡಿ ಎನ್ನಬಹುದು.

ಮಾತೃ ಸಂಸ್ಥೆ ವಿದ್ಯಾಮಾತಾ ಫೌಂಡೇಶನ್ ಮೂಲಕ ಆರು ವರ್ಷಗಳಿಂದ ರಾಜ್ಯದಲ್ಲಿ 6000 ಮಿಕ್ಕಿದ ವಿದ್ಯಾರ್ಥಿಗಳಿಗೆ , ಸುಮಾರು 225 ವಿವಿಧ ಕಂಪನಿಗಳಲ್ಲಿ ಉದ್ಯೋಗ ದೊರಕಿಸಿಕೊಟ್ಟಿದೆ.

ಇಂಡಿಯನ್ ಆರ್ಮಿ, ಏರ್ಫೋರ್ಸ್ , ನೇವಿ, ಅಗ್ನಿಪತ್ , ಕೋಸ್ಟ್ ಗಾರ್ಡ್ ,
ಬಿಎಸ್ಎಫ್ , ಎಸ್ಎಸ್ಬಿ , ಸಿಆರ್ಪಿಎಫ್ ,
ಐಟಿಬಿಪಿ , ಎಸ್ಎಸ್ಎಫ್ , ಎಆರ್ , ಎನ್ ಎಸ್ ಜಿ , ಎಸ್ ಪಿ ಜಿ ,ಎನ್ಡಿಆರ್ ಎಫ್ ,ಆರ್ ಪಿ ಎಫ್ , ಐಬಿ ಹಾಗೂ ಎಸ್ ಎಫ್ ಎಫ್ ಮತ್ತು ಎಸ್ ಎಸ್ ಸಿ-ಜಿಡಿ ಈ ಸಶಸ್ತ್ರ ಪಡೆ ಹುದ್ದೆಗಳಿಗೆ ದೈಹಿಕ ಸದೃಢತೆಯ ಮತ್ತು ಲಿಖಿತ ತರಬೇತಿ ಪ್ರತಿ ಭಾನುವಾರ ಅಕಾಡೆಮಿ ವತಿಯಿಂದ ನಡೆಯುತ್ತದೆ.

ಭಾರತೀಯ ರಕ್ಷಣಾ ಪಡೆಗಳ ವಿವಿಧ ಪ್ರವೇಶ ಪರೀಕ್ಷೆಗಳಿಗೂ ಪ್ರತಿ ಭಾನುವಾರ ತರಬೇತಿ ಲಭ್ಯವಿದ್ದು ಅರ್ಹತಾ ಮಾನದಂಡಗಳು…

ಐ ಎನ್ ಇ ಟಿ (ಭಾರತೀಯ ನೌಕಾಸೇನಾ ಪ್ರವೇಶ ಪರೀಕ್ಷೆ) ಹುದ್ದೆಗೆ ವಿದ್ಯಾರ್ಹತೆ ಬಿಎಸ್ಸಿ ಪದವಿಯಿಂದ ಎಂ.ಟೆಕ್ .

ಎ ಏಫ್ ಸಿ ಎ ಟಿ (ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆ )
ಅರ್ಹತೆ -ಯಾವುದೇ ವಿಷಯದಲ್ಲೂ ಪದವಿ.

ಆರ್ಮಿ ಟಿ ಇ ಎಸ್ (ಭಾರತೀಯ ಸೇನಾ ತಾಂತ್ರಿಕ ಪ್ರವೇಶ ) ಯಾವುದೇ ಪದವಿ.

ಎನ್‌ಡಿಎ ( ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪ್ರವೇಶ ಪರೀಕ್ಷೆ )
ಅರ್ಹತೆ -ಯಾವುದೇ ವಿಷಯದಲ್ಲಿ ಪಿಯುಸಿ.

ಸಿಡಿಎಸ್ (ಕಂಬೈನ್ಡ್ ಡಿಫೆನ್ಸ್ ಸರ್ವಿಸ್ ) ಅರ್ಹತೆ – ಯಾವುದೇ ವಿಷಯದಲ್ಲಿ ಪದವಿ.
ಇವೆಲ್ಲವೂ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯ ಪುತ್ತೂರು, ಸುಳ್ಯ, ಕಾರ್ಕಳ ತರಬೇತಿ ಕೇಂದ್ರಗಳಲ್ಲಿ ಲಭ್ಯವಿರುವ ತರಬೇತಿಗಳು.

ಸಂಪರ್ಕಿಸಲು : ಭಾಗ್ಯೇಶ್ ರೈ 919620468869

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ

Published

on



Ad Widget

Ad Widget

Ad Widget

Ad Widget

ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



Ad Widget

ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Ad Widget

Ad Widget

ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.

ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.

ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.

ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.

ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.

ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.

ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗಳಿಂದ ಚಾರಣ ಹಾಗೂ ಸ್ವಚ್ಛತಾ ಅಭಿಯಾನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ.3: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಅಕ್ಟೋಬರ್ 3ರಂದು ಪರ್ಲಡ್ಕ ಮಾರ್ಗವಾಗಿ ಬಿರುಮಲೆ ಬೆಟ್ಟಕ್ಕೆ ಒಂದು ದಿನದ ಚಾರಣ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಾಹಸ ಚಟುವಟಿಕೆಯೊಂದಿಗೆ ಪರಿಸರ ಜಾಗೃತಿ ಮತ್ತು ಸಮಾಜ ಸೇವೆಯನ್ನು ಸಂಯೋಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮದ ಅಂಗವಾಗಿ ರೋವರ್ಸ್ ಮತ್ತು ರೇಂಜರ್ಸ್ಗಳು ಚಾರಣದ ಮಾರ್ಗದುದ್ದಕ್ಕೂ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಪ್ರವಾಸಿಗರು ಹಾಗೂ ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು, ಆಹಾರದ ಪ್ಯಾಕೆಟ್‌ಗಳು ಮತ್ತು ಇತರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.



Ad Widget

ಅಲ್ಲದೆ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಹಾಗೂ ನೈಸರ್ಗಿಕ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಿದರು.

Ad Widget

Ad Widget

ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ತಂಡದ ಮನೋಭಾವ, ಶಿಸ್ತು, ನಾಯಕತ್ವ, ಪರಿಸರ ಸಂರಕ್ಷಣೆಯ ಜವಾಬ್ದಾರಿ ಹಾಗೂ ಸಮಾಜ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ರೇಂಜರ್ ಲೀಡರ್‌ಗಳಾದ ದಿವ್ಯಶ್ರೀ ಜಿ. ಮತ್ತು ದೀಪಿಕಾ ಎಸ್. ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading