ಬಿಗ್ ನ್ಯೂಸ್
Holiday-ಸಪ್ಟೆಂಬರ್ ನಲ್ಲಿ ರಜೆ ಧಮಾಕ…! ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಉದ್ಯೋಗಿಗಳಿಗೂ ಗುಡ್ ನ್ಯೂಸ್…!!
ಸಪ್ಟೆಂಬರ್ ತಿಂಗಳಿನಲ್ಲಂತೂ ಭರ್ಜರಿ ರಜೆಯ ರಸದೌತಣ ಸಿಗಲಿದೆ. ಹೊಸ ತಿಂಗಳಲ್ಲಿ, ಶಾಲೆಗಳಿಗೆ ಯಾವ ದಿನಗಳಲ್ಲಿ ರಜೆ ಇದೆ ಎಂದು ತಿಳಿಯಲು ಮಕ್ಕಳು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಸಖತ್ ಖುಷಿ ಸುದ್ದಿಯೊಂದು ಸಿಕ್ಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ರಜಾದಿನಗಳಿವೆ.
ನಿಖರ ನ್ಯೂಸ್:- ಭಾರತ ಸಂಸ್ಕೃತಿಯ ತವರು, ಹಬ್ಬ- ಹರಿದಿನಗಳನ್ನು ಅರ್ಥಪೂರ್ಣವಾಗಿ ಆಚರಿಸುವ ಏಕೈಕ ದೇಶವೆಂದರೆ ಅದು ಭಾರತ. ನಾಗರಪಂಚಮಿಯ ಬಳಿಕ ಸಾಲು ಸಾಲು ಹಬ್ಬಗಳನ್ನು ಆಹ್ವಾನಿಸಲು ಹಿಂದೂಗಳು ಸಜ್ಜಾಗಿ ನಿಂತಿದ್ದಾರೆ. ಕೃಷ್ಣ ಜನ್ಮಾಷ್ಟಮಿಯ ಆಚರಣೆಯೇನೋ ನಡೆಯಿತು. ಇನ್ನು ಸಪ್ಟೆಂಬರ್ ತಿಂಗಳಿನಲ್ಲಿ ಕೇವಲ ಹಿಂದೂಗಳಿಗೆ ಮಾತ್ರವಲ್ಲ. ಎಲ್ಲಾ ಧರ್ಮದವರೂ ಕೂಡಾ ತಮ್ಮ ಹಬ್ಬಗಳನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ. ಈ ಬಾರಿ ಸಪ್ಟೆಂಬರ್ ತಿಂಗಳಿನಲ್ಲಂತೂ ಭರ್ಜರಿ ರಜೆಯ ರಸದೌತಣ ಸಿಗಲಿದೆ. ಹೊಸ ತಿಂಗಳಲ್ಲಿ, ಶಾಲೆಗಳಿಗೆ ಯಾವ ದಿನಗಳಲ್ಲಿ ರಜೆ ಇದೆ ಎಂದು ತಿಳಿಯಲು ಅವರು ಕುತೂಹಲದಿಂದ ಕಾಯುತ್ತಿದ್ದಾರೆ. ಇದನ್ನು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಸಖತ್ ಖುಷಿ ಸುದ್ದಿಯೊಂದು ಸಿಕ್ಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ರಜಾದಿನಗಳಿವೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.

ಸಪ್ಟೆಂಬರ್ ನಲ್ಲಿ ರಜೆಯ ಸುರಿಮಳೆ…!
ಮುಂದಿನ ಮೂರು ದಿನಗಳಲ್ಲಿ ಸೆಪ್ಟೆಂಬರ್ ತಿಂಗಳು ಆರಂಭವಾಗಲಿದೆ. ಈ ತಿಂಗಳನಲ್ಲಿ ಸತತ ಐದು ದಿನ ರಜೆಗಳು ಬರಲಿವೆ. ಸೆಪ್ಟೆಂಬರ್ 7 ಮತ್ತು 16 ರಂದು ಸಾರ್ವಜನಿಕ ರಜೆ ಎಂದು ಸರ್ಕಾರ ಘೋಷಿಸಿದೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್ಗಳು ಆ ಎರಡು ದಿನಗಳಲ್ಲಿ ಮುಚ್ಚಲ್ಪಡುತ್ತವೆ. ಸೆಪ್ಟೆಂಬರ್ 7ರಂದು ವಿನಾಯಕ ಚತುರ್ಥಿ ಹಬ್ಬ ಇದೆ. ಈ 7ನೇ ತಾರೀಕು ಶನಿವಾರ ಬಂದಿದ್ದು, ಇದಾದ ನಂತರ ಭಾನುವಾರ ಸೇರಿ ಸತತ ಎರಡು ದಿನ ರಜೆ ಸಿಗಲಿದೆ. ಭಾರತದ ಅನೇಕ ರಾಜ್ಯಗಳಲ್ಲಿ ವಿನಾಯಕ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಬ್ಬದ ವಿಜೃಂಭಣೆ ರಾಜ್ಯಗಳಿವೆ.
ಇದೇ ವೇಳೆ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೊಮ್ಮೆ ಸಾರ್ವಜನಿಕ ರಜೆ ಸಿಗಲಿದೆ. ಮಿಲಾದ್-ಉನ್-ನಬಿ ಅಥವಾ ಈದ್-ಎ-ಮಿಲಾದ್ ಅನ್ನು ಸೆಪ್ಟೆಂಬರ್ 16 ರಂದು ಆಚರಿಸಲಾಗುತ್ತದೆ. ಈ ಹಬ್ಬವು ಸೋಮವಾರ ಬರುತ್ತದೆ. ಅದರ ಹಿಂದಿನ ದಿನ ಸೆಪ್ಟಂಬರ್ 15ರ ಭಾನುವಾರ ರಜೆ ಇರಲಿದೆ. ಅದೇ ಸೆ.14ರಂದು ಎರಡನೇ ಶನಿವಾರ ಬಂದಿದ್ದು, ಹೀಗಾಗಿ ಸೆ.14ರಿಂದ 16ರವರೆಗೆ ಸತತ ಮೂರು ದಿನ ರಜೆ ಸಿಗಲಿದೆ.
ಉದ್ಯೋಗಿಗಳಿಗೂ ಶುಭಸುದ್ದಿ..!
ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೆಪ್ಟೆಂಬರ್ 16 ರಂದು ರಜೆ ಇರುತ್ತೆ. ಸೆಪ್ಟೆಂಬರ್ ತಿಂಗಳಲ್ಲಿ 14 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ವಿವಿಧ ಹಬ್ಬಗಳು ಮತ್ತು ಇತರ ಕಾರ್ಯಕ್ರಮಗಳ ಕಾರಣ ಆಯಾ ಪ್ರದೇಶಗಳಲ್ಲಿ ಬ್ಯಾಂಕ್ ರಜೆಗಳು ಲಭ್ಯವಾಗಲಿದೆ.
ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಲ್ಲಿ ಬರೋಬ್ಬರಿ ಐದು ದಿನ ರಜೆ ಸಿಕ್ಕಿದೆ. ಇತ್ತೀಚಿನ ರಜಾದಿನಗಳ ಪಟ್ಟಿ ತಿಳಿದ ನಂತರ ಕೆಲವು ವಿದ್ಯಾರ್ಥಿಗಳು ಸಖತ್ ಖುಷಿಯಲ್ಲಿದ್ದಾರೆ. ಈ ರಜಾದಿನಗಳಲ್ಲಿ ಜನರು ಎಲ್ಲಿಯಾದರೂ ಪ್ರವಾಸವನ್ನು ಯೋಜಿಸಲು ತಯಾರಿ ನಡೆಸುತ್ತಿದ್ದಾರೆ. ಮುಂದಿನ ತಿಂಗಳು ಕೆಲವೇ ದಿನಗಳಲ್ಲಿ ಒಟ್ಟು ಐದು ರಜೆಗಳು ಬರಲಿವೆ. ಶಿಕ್ಷಣ ಸಂಸ್ಥೆಗಳು ಮತ್ತು ಕಚೇರಿಗಳಿಗೆ ರಜೆ ಗಳಿಸುವುದು ಸಾಮಾನ್ಯ ಸಂಗತಿ. ಅದರಲ್ಲೂ ಸರ್ಕಾರಿ ಸಂಸ್ಥೆಗಳಿಗೆ ರಜೆ ಸ್ವಲ್ಪ ಹೆಚ್ಚು ಅಂತಲೇ ಹೇಳಬಹುದು.
ಪ್ರತಿ ತಿಂಗಳು ಹಲವು ರಜಾದಿನಗಳು ಸಿಗುತ್ತೆ. ಅದಕ್ಕಾಗಿಯೇ ವಿದ್ಯಾರ್ಥಿಗಳು ಮುಂಬರುವ ತಿಂಗಳಲ್ಲಿ ಎಷ್ಟು ರಜೆ ಸಿಗುತ್ತೆ ಅಂತ ಆಸಕ್ತಿಯಿಂದ ಎದುರು ನೋಡುತ್ತಾರೆ. ಒಟ್ಟಾರೆಯಾಗಿ ಈ ಬಾರಿ ಸಪ್ಟೆಂಬರ್ ನಲ್ಲಿ ಉದ್ಯೋಗಿಗಳಿಗೆ ಮತ್ತು ಶಾಲಾ ಮಕ್ಕಳಿಗೆ ಭರ್ಜರಿ ರಜೆ ಸಿಗಲಿದೆ.
ಅಂತರ ರಾಜ್ಯ
Chennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ತಿರುಪತಿ: ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಾಣಿಕೆಯಾಗಿ ಅರ್ಪಿಸುವ ಮೂಲಕ ಅಪಾರ ಭಕ್ತಿ ಮೆರೆದಿದ್ದಾರೆ.
ಚೆನ್ನೈನ ವರ್ಧಮಾನ್ ಜೈನ್ ಮತ್ತು ರಾಧಿಕಾ ಜೈನ್ ದಂಪತಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅರ್ಚಕರು ಹಾಗೂ ಪ್ರತಿನಿಧಿಗಳಿಗೆ ಈ ಅಮೂಲ್ಯ ಆಭರಣಗಳನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು. ವಜ್ರಖಚಿತ ಚಿನ್ನಾಭರಣಗಳನ್ನು ಒಳಗೊಂಡ ಈ ಕಾಣಿಕೆ ದೇವಾಲಯದ ಇತಿಹಾಸದಲ್ಲಿನ ಗಮನಾರ್ಹ ದಾನಗಳಲ್ಲಿ ಒಂದಾಗಿದೆ.
ಸಮಾರಂಭದಲ್ಲಿ ದಂಪತಿಯ ಭಕ್ತಿಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, 206 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಶ್ರೀ ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿರುವುದು ಅಪರೂಪದ ಹಾಗೂ ಅಸಾಧಾರಣ ಭಕ್ತಿಯ ಪ್ರತೀಕವಾಗಿದೆ. ದೇವರ ಮೇಲಿನ ಅಪಾರ ಭಕ್ತಿ ಮತ್ತು ದೈವಿಕ ಪ್ರೇರಣೆಯಿಂದ ಈ ದಂಪತಿ ಇಂತಹ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವುದು ತಮ್ಮ ಸೌಭಾಗ್ಯ ಎಂದು ಹೇಳಿದರು.
ತಿರುಮಲವು ನಂಬಿಕೆ, ಭಕ್ತಿ ಹಾಗೂ ಆಧ್ಯಾತ್ಮಿಕ ಸಂತೃಪ್ತಿಯ ಸಂಕೇತವಾಗಿದ್ದು, ಶ್ರೀ ಕೃಷ್ಣದೇವರಾಯರ ಕಾಲದಿಂದ ಇಂದಿನವರೆಗೂ ಭಕ್ತರ ಕಾಣಿಕೆ ಮತ್ತು ಭಕ್ತಿಪರಂಪರೆ ನಿರಂತರವಾಗಿ ಮುಂದುವರಿದಿದೆ ಎಂದು ನಾಯ್ಡು ಹೇಳಿದರು. ಪಲ್ಲವರು, ಚೋಳರು, ಚೇರರು, ಪಾಂಡ್ಯರು ಹಾಗೂ ಮೈಸೂರು ಮತ್ತು ಮರಾಠಾ ಅರಸರು ಹಿಂದಿನ ಕಾಲದಲ್ಲಿ ದೇವಾಲಯಕ್ಕೆ ಬೆಲೆಬಾಳುವ ಆಭರಣಗಳು ಮತ್ತು ಕಾಣಿಕೆಗಳನ್ನು ಅರ್ಪಿಸಿ ಶ್ರೀಮಂತಗೊಳಿಸಿರುವುದನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಅಲಿಪಿರಿ ಬಾಂಬ್ ದಾಳಿಯಿಂದ ತಾವು ಪಾರಾದ ಘಟನೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದವೇ ತಮಗೆ ಮರುಜನ್ಮ ನೀಡಿತು ಎಂದು ಭಾವುಕರಾಗಿ ನುಡಿದರು.
ದೇವಾಲಯದ ಪಾವಿತ್ರ್ಯ ಕಾಪಾಡುವುದರ ಜೊತೆಗೆ ಗೋರಕ್ಷಣೆ, ವೈದಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಟಿಟಿಡಿಗೆ ಸೂಚಿಸಿದ ನಾಯ್ಡು, ‘ವೃಕೋ ಗೋವಿಂದಂ’ ಉಪಕ್ರಮಕ್ಕೆ ಉತ್ತೇಜನ ನೀಡುವುದಾಗಿ ತಿಳಿಸಿದರು. ಅಲ್ಲದೆ, ದೇವಾಲಯದ ಮೂಲಸೌಕರ್ಯ ವಿಸ್ತರಣೆ ಹಾಗೂ ಟಿಟಿಡಿ ಸಹಯೋಗದೊಂದಿಗೆ ಆಂಧ್ರಪ್ರದೇಶದಾದ್ಯಂತ 5,000 ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನೂ ಪ್ರಕಟಿಸಿದರು.
‘ಮಾನವ ಸೇವೆಯೇ ಮಾಧವ ಸೇವೆ’ ಎಂಬ ತತ್ವದಡಿ ಅನ್ನದಾನ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಉಪಕ್ರಮಗಳನ್ನು ಸರ್ಕಾರ ಮತ್ತಷ್ಟು ಬಲಪಡಿಸಲಿದೆ. ಶ್ರೀಮಂತರು ತಮ್ಮ ಸಂಪತ್ತನ್ನು ಸಮಾಜ ಕಲ್ಯಾಣ, ಆಧ್ಯಾತ್ಮಿಕ ಕಾರ್ಯಗಳು ಹಾಗೂ ಬಡವರ ಸೇವೆಗೆ ಬಳಸುವಂತೆ ಜೈನ ದಂಪತಿಯ ದಾನವನ್ನು ಮಾದರಿಯಾಗಿ ಉಲ್ಲೇಖಿಸಿ ಮುಖ್ಯಮಂತ್ರಿ ಕರೆ ನೀಡಿದರು.
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸ್ಥಳೀಯ
Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್ಗಳನ್ನು ವ್ಯವಸ್ಥೆಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.
ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್ಗಳ ಪೈಕಿ ಆರು ಲೇನ್ಗಳನ್ನು (3+3) ಫಾಸ್ಟ್ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.
ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.
ಬಿ.ಸಿ. ರೋಡ್ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.
ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.
ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.
13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.
ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
-
ಸುಳ್ಯ23 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಸ್ಥಳೀಯ23 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಸ್ಥಳೀಯ20 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ನಿಧನ ವಾರ್ತೆ4 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಮಂಗಳೂರು20 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ಅಂತರ ರಾಜ್ಯ4 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ4 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಪರಾಧ4 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!















