ಬಿಗ್ ನ್ಯೂಸ್
BPL cardholders-ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ – ಇನ್ನು ಮುಂದೆ ಸಿಗಲಿದೆ ರಾಜ್ಯದಲ್ಲಿ ಈ ದಿನಸಿ ಕಿಟ್
ರಾಜ್ಯ ಸರಕಾರವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ನೀಡುತ್ತಿದ್ದ 5 ಕೆ.ಜಿ ಅಕ್ಕಿಯ ಹಣವನ್ನು ನಿಲ್ಲಿಸಲು ಚಿಂತನೆ ನಡೆಸಿದೆ. ಇದರ ಬದಲು ತೊಗರಿಬೇಳೆ, ತಾಳೆಎಣ್ಣೆ, ಸಕ್ಕರೆ ಹಾಗೂ ಅಯೋಡೈಸ್ಡ್ ಉಪ್ಪು ನೀಡಲು ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಯೋಚಿಸುತ್ತಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯ ಸರಕಾರವು ಪಂಚ ಗ್ಯಾರಂಟಿಗಳಲ್ಲಿ ಒಂದಾದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ನೀಡುತ್ತಿದ್ದ 5 ಕೆ.ಜಿ ಅಕ್ಕಿಯ ಹಣವನ್ನು ನಿಲ್ಲಿಸಲು ಚಿಂತನೆ ನಡೆಸಿದೆ. ಇದರ ಬದಲು ತೊಗರಿಬೇಳೆ, ತಾಳೆಎಣ್ಣೆ, ಸಕ್ಕರೆ ಹಾಗೂ ಅಯೋಡೈಸ್ಡ್ ಉಪ್ಪು ನೀಡಲು ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಯೋಚಿಸುತ್ತಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಈ ಹಿಂದೆ ಬಿಪಿಎಲ್ ಪಡಿತರದಾರರಿಗೆ 5 ಕೆಜಿ ಅಕ್ಕಿ ಸಿಗುತಿತ್ತು. ಆದರೇ ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಘೋಷಿಸಿದ್ದು, ಅದರಲ್ಲಿ ಒಂದು ಬಿಪಿಎಲ್ ಕಾರ್ಡ್ದಾರರಿಗೆ 5 ಕೆಜಿಯ ಬದಲು ಹೆಚ್ಚುವರಿಯಾಗಿ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಆಗಿತ್ತು. ಆದರೆ, ಸರಕಾರ ಅಕ್ಕಿ ಕೊರತೆಯಿಂದಾಗಿ 5 ಕೆ.ಜಿ. ಅಕ್ಕಿ ಕೊಟ್ಟು, ಉಳಿದ ಐದು ಕೆ.ಜಿ.ಗೆ ಅಕ್ಕಿಗೆ ನಗದು ಪಾವತಿಸುತ್ತಿತ್ತು. ಇದಕ್ಕೆ ಸರಕಾರ ಪ್ರತಿ ತಿಂಗಳು ಬರೋಬ್ಬರಿ 700 ಕೋಟಿಗೂ ಅಧಿಕ ಹಣ ಭರಿಸುತ್ತಿದೆ
ಇದರ ಬದಲು ಪರ್ಯಾಯ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದರೆ ಪ್ರತಿ ಕುಟುಂಬದಿಂದ ಸರಕಾರಕ್ಕೆ 130-180 ರೂ. ಹಣ ಉಳಿತಾಯವಾಗುತ್ತದೆ. ಒಂದು ಪಡಿತರ ಕುಟುಂಬದಲ್ಲಿ ನಾಲ್ವರು ಸದಸ್ಯರಿದ್ದರೆ 5 ಕೆಜಿ ಅಕ್ಕಿಯ ಬದಲು (ಕೆ.ಜಿ.ಗೆ 34 ರೂ.ನಂತೆ ಪ್ರತಿ ಸದಸ್ಯರಿಗೆ 170 ರೂ.) 680 ರೂ.ಗಳನ್ನು ಖಾತೆಗೆ ಜಮೆ ಮಾಡಬೇಕಾಗಿತ್ತು. ಈಗ 2 ಕೆ.ಜಿ. ತೊಗರಿ ಬೇಳೆ, 1 ಸಕ್ಕರೆ, ತಾಳೆಎಣ್ಣೆ ಒಂದು ಲೀಟರ್, ಒಂದು ಕೆ.ಜಿ. ಅಯೋಡೈಸ್ಡ್ ಉಪ್ಪು ನೀಡಲು ನಿರ್ಧರಿಸಲಾಗಿದ್ದು, ಇದಕ್ಕೆ ಸುಮಾರು 500-550 ರೂ. ವೆಚ್ಚ ಮಾತ್ರ ತಗಲುತ್ತದೆ.
ಇದರಿಂದ 4.50 ಕೋಟಿ ಫಲಾನುಭವಿಗಳಿಗೆ ವಿತರಿಸುವ ದಿನಸಿಯಿಂದ ನೂರಾರು ಕೋಟಿ ಹಣ ಉಳಿತಾಯವಾಗುತ್ತದೆ. ಹೀಗಾಗಿ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ, ಅನ್ನಭಾಗ್ಯದ ಹಣದ ಬದಲು ತೊಗರಿಬೇಳೆ, ಸಕ್ಕರೆ, ತಾಳೆ ಎಣ್ಣೆ ಹಾಗೂ ಅಯೋಡೈಸ್ಡ್ ಉಪ್ಪು ನೀಡಲು ನಿರ್ಧರಿಸಿದ್ದು, ಈಗಾಗಲೇ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಸಿದೆ. ಹಣಕಾಸು ಅನುಮೋದನೆಗಾಗಿ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ ಎನ್ನಲಾಗಿದೆ.
ಅಂತರ ರಾಜ್ಯ
Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ
ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.
ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.
ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.
ಏನೇನು ಪ್ರಸ್ತಾವಗಳಿವೆ?
- ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
- ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
- ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
- ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
- ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್‌ಗಳಲ್ಲಿ ಆರಂಭಿಸಲು ಸಲಹೆ.
- ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
ಬಿಗ್ ನ್ಯೂಸ್
Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಅಂತರ ರಾಜ್ಯ
WhatsApp-ವಾಟ್ಸಾಪ್‌ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ಸೌಲಭ್ಯವೊಂದನ್ನು ಪರಿಚಯಿಸುತ್ತಿದೆ. ಇನ್ಮುಂದೆ ಬಳಕೆದಾರರು ತಾವು ಕಳುಹಿಸಬೇಕಾದ ಸಂದೇಶಗಳನ್ನು ಮೊದಲೇ ಟೈಪ್ ಮಾಡಿ, ನಿರ್ದಿಷ್ಟ ದಿನಾಂಕ ಮತ್ತು ಸಮಯಕ್ಕೆ ಸ್ವಯಂಚಾಲಿತವಾಗಿ ತಲುಪುವಂತೆ ಶೆಡ್ಯೂಲ್ ಮಾಡಬಹುದು.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ಸೌಲಭ್ಯವೊಂದನ್ನು ಪರಿಚಯಿಸುತ್ತಿದೆ. ಇನ್ಮುಂದೆ ಬಳಕೆದಾರರು ತಾವು ಕಳುಹಿಸಬೇಕಾದ ಸಂದೇಶಗಳನ್ನು ಮೊದಲೇ ಟೈಪ್ ಮಾಡಿ, ನಿರ್ದಿಷ್ಟ ದಿನಾಂಕ ಮತ್ತು ಸಮಯಕ್ಕೆ ಸ್ವಯಂಚಾಲಿತವಾಗಿ ತಲುಪುವಂತೆ ಶೆಡ್ಯೂಲ್ ಮಾಡಬಹುದು.
ಹುಟ್ಟುಹಬ್ಬದ ಶುಭಾಶಯಗಳು, ವಿಶೇಷ ದಿನಗಳ ಸಂದೇಶಗಳು, ಪ್ರಮುಖ ನೆನಪಿನ ಸೂಚನೆಗಳು ಸೇರಿದಂತೆ ವಿವಿಧ ಸಂದೇಶಗಳನ್ನು ಸಮಯಕ್ಕೆ ಸರಿಯಾಗಿ ಕಳುಹಿಸಲು ಈ ಸೌಲಭ್ಯ ಸಹಕಾರಿಯಾಗಲಿದೆ. ವೈಯಕ್ತಿಕ ಚಾಟ್‌ಗಳು ಹಾಗೂ ಗ್ರೂಪ್ ಚಾಟ್‌ಗಳೆರಡರಲ್ಲೂ ಈ ಆಯ್ಕೆ ಲಭ್ಯವಾಗಲಿದೆ ಎಂದು ಮೆಟಾ ಸಂಸ್ಥೆ ತಿಳಿಸಿದೆ.
ಒಮ್ಮೆ ಸಂದೇಶವನ್ನು ಶೆಡ್ಯೂಲ್ ಮಾಡಿದರೆ ಸಾಕು, ನಿಗದಿತ ಸಮಯದಲ್ಲಿ ಬಳಕೆದಾರರು ವಾಟ್ಸಾಪ್ ತೆರೆಯದಿದ್ದರೂ ಸಂದೇಶ ಸ್ವಯಂಚಾಲಿತವಾಗಿ ರವಾನೆಯಾಗಲಿದೆ. ಫೋನ್‌ನಲ್ಲಿ ಇಂಟರ್ನೆಟ್ ಸಂಪರ್ಕ ಇಲ್ಲದಿದ್ದರೂ ಸಂದೇಶ ತಲುಪಲಿದೆ ಎಂದು ವರದಿಯಾಗಿದೆ.
ವಾಟ್ಸಾಪ್‌ನಲ್ಲಿ ಮೆಸೇಜ್ ಶೆಡ್ಯೂಲ್ ಮಾಡುವುದು ಹೇಗೆ?
ಬಳಕೆದಾರರು ಕನಿಷ್ಠ 10 ನಿಮಿಷಗಳಿಂದ ಗರಿಷ್ಠ ಎರಡು ವಾರಗಳ ಮುಂಚಿತವಾಗಿ ಸಂದೇಶಗಳನ್ನು ಶೆಡ್ಯೂಲ್ ಮಾಡಬಹುದು. ಇದಕ್ಕಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.
- ವಾಟ್ಸಾಪ್ ತೆರೆಯಿರಿ ಮತ್ತು ಸಂದೇಶ ಕಳುಹಿಸಬೇಕಾದ ವ್ಯಕ್ತಿಯ ಚಾಟ್ ಅಥವಾ ಗ್ರೂಪ್ ಆಯ್ಕೆಮಾಡಿ.
- ಕಳುಹಿಸಬೇಕಾದ ಸಂದೇಶವನ್ನು ಟೈಪ್ ಮಾಡಿ ಅಥವಾ ಫೋಟೋ, ವಿಡಿಯೋ ಆಯ್ಕೆಮಾಡಿ.
- ‘Send’ ಬಟನ್ ಅನ್ನು ಸ್ವಲ್ಪ ಹೊತ್ತು ಒತ್ತಿ ಹಿಡಿಯಿರಿ.
- ಕಾಣಿಸಿಕೊಳ್ಳುವ ಆಯ್ಕೆಯಲ್ಲಿ ಸಂದೇಶ ತಲುಪಬೇಕಾದ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
- ಕೊನೆಯಲ್ಲಿ ‘Confirm’ ಆಯ್ಕೆಯನ್ನು ಒತ್ತಿ ಖಚಿತಪಡಿಸಿ.
ಇಷ್ಟಾದರೆ ಸಾಕು, ನಿಗದಿಪಡಿಸಿದ ಸಮಯಕ್ಕೆ ಸಂದೇಶ ಸ್ವಯಂಚಾಲಿತವಾಗಿ ರವಾನೆಯಾಗಲಿದೆ.
ಯಾವೆಲ್ಲ ಸಂದೇಶಗಳನ್ನು ಶೆಡ್ಯೂಲ್ ಮಾಡಬಹುದು?
ಸದ್ಯಕ್ಕೆ ಪಠ್ಯ ಸಂದೇಶಗಳು, ಲಿಂಕ್‌ಗಳು, ಫೋಟೋಗಳು ಹಾಗೂ ವಿಡಿಯೋಗಳನ್ನು ಮೊದಲೇ ನಿಗದಿಪಡಿಸಿ ಕಳುಹಿಸಬಹುದು. ಇವು ವಾಟ್ಸಾಪ್‌ನ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಸುರಕ್ಷತಾ ವ್ಯವಸ್ಥೆಯಡಿ ರವಾನೆಯಾಗಲಿವೆ. ಆದರೆ ಪಿಡಿಎಫ್ ಸೇರಿದಂತೆ ಇತರ ದಾಖಲೆಗಳನ್ನು ಶೆಡ್ಯೂಲ್ ಮಾಡುವ ಆಯ್ಕೆ ಸದ್ಯಕ್ಕೆ ಲಭ್ಯವಿಲ್ಲ.
ಶೆಡ್ಯೂಲ್ ಮಾಡಿದ ಮೆಸೇಜ್ ಅಳಿಸಲು ಅವಕಾಶವಿದೆಯೇ?
ಹೌದು. ನಿಗದಿಪಡಿಸಿದ ಸಂದೇಶ ರವಾನೆಯಾಗುವ ಮೊದಲು ಅದನ್ನು ಪರಿಶೀಲಿಸುವುದರ ಜೊತೆಗೆ ಅಗತ್ಯವಿದ್ದರೆ ಅಳಿಸಬಹುದು. ಚಾಟ್ ಮಾಹಿತಿ (Chat Info) ವಿಭಾಗದಲ್ಲಿ ಕಳುಹಿಸಲು ಬಾಕಿ ಇರುವ ಸಂದೇಶಗಳ ಪಟ್ಟಿ ಕಾಣಿಸಿಕೊಳ್ಳುತ್ತದೆ. ಅಲ್ಲಿಂದಲೇ ಸಂದೇಶವನ್ನು ರದ್ದುಗೊಳಿಸಬಹುದು ಅಥವಾ ಅಳಿಸಬಹುದು. ಸಂದೇಶ ಇನ್ನೂ ರವಾನೆಯಾಗದಿರುವುದರಿಂದ ಅದನ್ನು ಅಳಿಸಿದರೆ ಎದುರಿನವರಿಗೆ ಯಾವುದೇ ಮಾಹಿತಿ ಹೋಗುವುದಿಲ್ಲ.
ಗ್ರೂಪ್ ಚಾಟ್‌ಗಳಿಗೆ ಏನು ನಿಯಮ?
ಗ್ರೂಪ್‌ಗಳಲ್ಲಿ ಸಂದೇಶ ಶೆಡ್ಯೂಲ್ ಮಾಡುವಾಗಲೂ ಕೆಲವು ನಿಯಮಗಳಿವೆ. ಸಂದೇಶವನ್ನು ನಿಗದಿಪಡಿಸಿದ ಸಮಯದಲ್ಲಿ ಗ್ರೂಪ್‌ನಲ್ಲಿರುವ ಸದಸ್ಯರಿಗೆ ಮಾತ್ರ ಅದು ತಲುಪಲಿದೆ. ಆನಂತರ ಗ್ರೂಪ್‌ಗೆ ಸೇರುವ ಹೊಸ ಸದಸ್ಯರಿಗೆ ಮೊದಲೇ ಶೆಡ್ಯೂಲ್ ಮಾಡಿರುವ ಸಂದೇಶ ಕಾಣಿಸುವುದಿಲ್ಲ.
ಎಲ್ಲರಿಗೂ ಯಾವಾಗ ಲಭ್ಯ?
ವಾಟ್ಸಾಪ್ ಈಗಾಗಲೇ ಆಂಡ್ರಾಯ್ಡ್ ಮತ್ತು ಐಫೋನ್‌ನ ಆಯ್ದ ಬಳಕೆದಾರರಿಗೆ ಈ ಸೌಲಭ್ಯವನ್ನು ಪ್ರಾಯೋಗಿಕವಾಗಿ ಪರಿಚಯಿಸಿದೆ. ನವೆಂಬರ್ 25ರಂದು ತನ್ನ ಅಧಿಕೃತ ‘X’ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಹೊಸ ಫೀಚರ್ ಬಗ್ಗೆ ಮಾಹಿತಿ ನೀಡಿದೆ. ಸದ್ಯ ಹಂತ ಹಂತವಾಗಿ ಬಳಕೆದಾರರಿಗೆ ಈ ಆಯ್ಕೆಯನ್ನು ಒದಗಿಸಲಾಗುತ್ತಿದ್ದು, ಶೀಘ್ರದಲ್ಲೇ ಹೆಚ್ಚಿನ ಬಳಕೆದಾರರಿಗೂ ಲಭ್ಯವಾಗುವ ನಿರೀಕ್ಷೆಯಿದೆ.
-
ಸ್ಥಳೀಯ20 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ21 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ21 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ21 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು19 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್22 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್21 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಅಂತರ ರಾಜ್ಯ21 hours agoRBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!















