ಕ್ರೈಂ
Murder-ಶೀಲ ಶಂಕಿಸಿ ಪ್ರೀತಿಸಿ ಮದ್ವೆಯಾದ ಕೊರಿಯೋಗ್ರಾಫರ್ ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಕೊಂದ ಪತಿ
ಬೆಂಗಳೂರಿನ ಕೆಂಗೇರಿಯಲ್ಲಿ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ ಎಂದು ಗುರುತಿಸಲಾಗಿದ್ದು ಪತಿ ಕಿರಣ್ ಕೊಲೆಗೈದ ಆರೋಪಿಯಾಗಿದ್ದಾನೆ.
ಬೆಂಗಳೂರು: ಬೆಂಗಳೂರಿನ ಕೆಂಗೇರಿಯಲ್ಲಿ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ ಬುಧವಾರ ಮಧ್ಯಾಹ್ನ ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೊಲೆಯಾದ ಮಹಿಳೆಯನ್ನು ನವ್ಯಾ (25 ವ) ಎಂದು ಗುರುತಿಸಲಾಗಿದ್ದು ಈಕೆಯ ಪತಿ ಕಿರಣ್ ಕೊಲೆಗೈದ ಆರೋಪಿಯಾಗಿದ್ದಾನೆ. ಭದ್ರಾವತಿ ಮೂಲದ ನವ್ಯಾ, ಚಿಕ್ಕಬಳ್ಳಾಪುರ ಮೂಲದ ಕಿರಣ್ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.

ನವ್ಯಾ ಸಿನಿಮಾ ರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು. ಪತಿ ಕಿರಣ್ ಕ್ಯಾಬ್ ಚಾಲಕನಾಗಿದ್ದ. ಕಳೆದ ಮೂರು ವರ್ಷಗಳ ಹಿಂದೆ ಕಿರಣ್ ಮತ್ತು ನವ್ಯಾ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು.
ಇತ್ತೀಚೆಗೆ ಪತಿ ಕಿರಣ್, ನವ್ಯಾ ಜೊತೆಗೆ ಆಗಾಗ್ಗೆ ಜಗಳ ತೆಗೆಯುತ್ತಿದ್ದ, ಶೀಲ ಶಂಕಿಸಿ ಗಲಾಟೆ ಮಾಡ್ತಿದ್ದ. ಬುಧವಾರ ಮಧ್ಯಾಹ್ನದ ವೇಳೆ ಇದೇ ವಿಚಾರಕ್ಕೆ ಗಲಾಟೆ ಮಾಡಿರುವ ಕಿರಣ್, ನಂತರ ನವ್ಯಾಳನ್ನ ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಕ್ರೈಂ
Murder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಆರೋಪಿತೆಯಾಗಿದ್ದಾರೆ.
ಪುತ್ತೂರು: ಸಹೋದರನ ಮಗಳೇ ಚಿಕ್ಕಪ್ಪನನ್ನು ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದಲ್ಲಿ ನಡೆದಿದೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನ.24ರ ರಾತ್ರಿ ನಡೆದ ಘಟನೆಯಲ್ಲಿ ಚೆನ್ನಯ್ಯ ಪೂಜಾರಿ (52) ಮೃತಪಟ್ಟಿದ್ದಾರೆ. ಅವರ ಸಹೋದರ ಕೋಟಿ ಪೂಜಾರಿಯವರ ಪುತ್ರಿ ಕೃತ್ತಿಕಾ (26) ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ವಿವರ
ಶಿರಂಕಲ್ಲು ನಂದರಬೆಟ್ಟು ದಾಸರಕೋಡಿ ಎಂಬಲ್ಲಿ ಕೋಟಿ ಪೂಜಾರಿ ಹಾಗೂ ಚೆನ್ನಯ್ಯ ಪೂಜಾರಿ ಎಂಬ ಅವಳಿ ಸಹೋದರರು ವಾಸವಾಗಿದ್ದರು. ಕೋಟಿ ಪೂಜಾರಿಯವರ ವಿವಾಹಿತ ಪುತ್ರಿ ಕೃತ್ತಿಕಾ ಇತ್ತೀಚೆಗೆ ತವರು ಮನೆಗೆ ಬಂದಿದ್ದರು.
ನ.24ರಂದು ರಾತ್ರಿ ಸುಮಾರು 7 ಗಂಟೆಯ ವೇಳೆಗೆ ಚೆನ್ನಯ್ಯ ಪೂಜಾರಿ ಅವರು ಕೃತ್ತಿಕಾ ವಾಸವಿದ್ದ ಮನೆಯ ಬಳಿ ಗಲಾಟೆ ನಡೆಸಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಾಗ ಆಕ್ರೋಶಗೊಂಡ ಕೃತ್ತಿಕಾ ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ತನ್ನ ಚಿಕ್ಕಪ್ಪ ಚೆನ್ನಯ್ಯ ಪೂಜಾರಿ ಅವರ ಎದೆಗೆ ಬಲವಾಗಿ ಚುಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಕತ್ತಿಯೇಟಿನಿಂದ ಎದೆಗೆ ಗಂಭೀರ ಗಾಯಗೊಂಡ ಚೆನ್ನಯ್ಯ ಪೂಜಾರಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಪುತ್ತೂರಿಗೆ ಕರೆತರುತ್ತಿದ್ದ ವೇಳೆ ತೀವ್ರ ರಕ್ತಸ್ರಾವದಿಂದ ಚೆನ್ನಯ್ಯ ಪೂಜಾರಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಕೃತ್ತಿಕಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕ್ರೈಂ
Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.
ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್ಶೀಟ್ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಿರಾಡಿಘಾಟ್ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.
ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.
ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.
ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ
Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
-
ಸ್ಥಳೀಯ21 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ21 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ21 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ21 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು19 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್22 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್21 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಅಂತರ ರಾಜ್ಯ21 hours agoRBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!
















