ಅಪರಾಧ
Darshan-10 ಸಾವಿರ ರೂ. ಟೀ ಶರ್ಟ್, 30 ಸಾವಿರದ ಜೀನ್ಸ್ ಪ್ಯಾಂಟ್, ಲಕ್ಷ ರೂಪಾಯಿ ಕೂಲಿಂಗ್ ಗ್ಲಾಸ್ ತೊಟ್ಟು ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇರೆಗೆ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹಕ್ಕೆ ಆ. 29ರ ಬೆಳಗ್ಗೆ ಶಿಫ್ಟ್ ಮಾಡಲಾಗಿದೆ. ವ್ಯಾನ್ ನಿಂದ ಕೆಳಗಿಳಿದ ದರ್ಶನ್, ಬೆಲೆಬಾಳುವ ಟೀ ಶರ್ಟ್, ಪ್ಯಾಂಟ್, ಕೂಲಿಂಗ್ ಗ್ಲಾಸ್ ಧರಿಸಿ ಶೂಟಿಂಗ್ ಗೆ ಬಂದವರಂತೆ ಕಾಣಿಸಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇರೆಗೆ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹಕ್ಕೆ ಆ. 29ರ ಬೆಳಗ್ಗೆ ಶಿಫ್ಟ್ ಮಾಡಲಾಗಿದೆ. ಬೆಳಗಿನ ಜಾವ ಸುಮಾರು 4.30ಗೆ ಬೆಂಗಳೂರಿನಿಂದ ಹೊರಟ ದರ್ಶನ್ ಹಾಗೂ ಪೊಲೀಸರು, ಬಳ್ಳಾರಿ ಕೇಂದ್ರ ಕಾರಾಗೃಹವನ್ನು ಬೆಳಗ್ಗೆ 10ರ ಸುಮಾರಿಗೆ ಮುಟ್ಟಿದ್ದಾರೆ. ವ್ಯಾನ್ ನಿಂದ ಕೆಳಗಿಳಿದ ದರ್ಶನ್, ಬೆಲೆಬಾಳುವ ಟೀ ಶರ್ಟ್, ಪ್ಯಾಂಟ್, ಕೂಲಿಂಗ್ ಗ್ಲಾಸ್ ಧರಿಸಿ ಶೂಟಿಂಗ್ ಗೆ ಬಂದವರಂತೆ ಕಾಣಿಸಿಕೊಂಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್, ಭರ್ಜರಿ ಉಡುಗೆ ತೊಡುಗೆಗಳೊಂದಿಗೆ ಜೈಲಿನೊಳಕ್ಕೆ ಎಂಟ್ರಿಯಾಗಿದ್ದಾರೆ. ಸಿನಿಮಾ ಶೂಟಿಂಗ್ ಗೆ ಸಾಮಾನ್ಯವಾಗಿ ಒಬ್ಬ ಹೀರೋ ಹೇಗೆ ಬರುತ್ತಾರೋ ಹಾಗೆಯೇ ದರ್ಶನ್ ಅವರು ಬಳ್ಳಾರಿ ಜೈಲಿಗೆ ಎಂಟ್ರಿಯಾಗಿದ್ದಾರೆ.
ಅವರು ಧರಿಸಿದ್ದ ದಿರಿಸು, ಹೊಂದಿದ್ದ ಕೂಲಿಂಗ್ ಗ್ಲಾಸ್, ವ್ರಿಸ್ಟ್ ಬ್ಯಾಂಡ್, ಪುಲ್ ಓವರ್ ಇವೆಲ್ಲವೂ ಅರ್ಧ ಲಕ್ಷ ರೂ. ಮೀರಿದ್ದಾಗಿದ್ದು, ಅವರು ಓರ್ವ ಕೈದಿಯಂತೆ ಕಾಣಿಸದೇ ಇದ್ದಿದ್ದು ಒಂದು ರೀತಿ ವಿಚಿತ್ರವಾಗಿತ್ತು. ಅಲ್ಲಿಗೆ ಪರಪ್ಪನ ಅಗ್ರಹಾರದಲ್ಲಿ ಅವರು ಐಷಾರಾಮಿ ಜೀವನ ನಡೆಸುತ್ತಿದ್ದರು ಎಂಬುದಕ್ಕೂ ಅವರು ಧರಿಸಿದ್ದ ವಸ್ತುಗಳ ಮೌಲ್ಯಕ್ಕೂ ಸರಿಹೊಂದುವಂತಿತ್ತು.
ಬೆಲೆಬಾಳುವ ವಸ್ತುಗಳೊಂದಿಗೆ ಜೈಲಿಗೆ ಎಂಟ್ರಿ!
ಪೊಲೀಸ್ ವ್ಯಾನಿನಿಂದ ಇಳಿದು ಜೈಲಿಗೆ ಎಂಟ್ರಿಯಾದ ಅವರನ್ನು ಗಮನಿಸಿದಾಗ, ಅವರು ಬ್ರಾಂಡೆಡ್ ಟೀಶರ್ಟ್ ಹಾಗೂ ಪ್ಯಾಂಟ್ ಧರಿಸಿದ್ದರು. ಅವರು ಧರಿಸಿದ್ದ ಪ್ಯೂಮಾ ಟೀಶರ್ಟ್ ಬೆಲೆ 10 ಸಾವಿರ ರೂ., ಅವರು ಧರಿಸಿದ್ದ ಕೂಲಿಂಗ್ ಗ್ಲಾಸ್ ನ ಬೆಲೆ ಏನಿಲ್ಲವೆಂದರೂ 1 ಲಕ್ಷ ರೂ. ಮೌಲ್ಯದ್ದಾಗಿದೆ. 25 ಸಾವಿರ ಮೌಲ್ಯದ ಪುಲ್ ಓವರ್ ಧರಿಸಿದ್ದರು. ಅವರು ಧರಿಸಿದ್ದ ಬ್ರಾಂಡೆಡ್ ಜೀನ್ಸ್ ಏನಿಲ್ಲವೆಂದರೂ 30 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಅವರು ತಮ್ಮ ಎಡಗೈಗೆ ತೊಟ್ಟಿದ್ದ ವ್ರಾಚ್ ಬ್ಯಾಂಡ್ ನ ಬೆಲೆ ಕನಿಷ್ಟವೆಂದರೂ 5 ಸಾವಿರ ರೂ.ಗಳದ್ದೆಂದು ಹೇಳಲಾಗಿದೆ. ಅಲ್ಲಿಗೆ, ದರ್ಶನ್ ಅವರು ಜೈಲು ಪ್ರವೇಶಿಸುವಾಗ 1 ಲಕ್ಷದ 70 ಸಾವಿರ ರೂ.ಗಳಷ್ಟು ಮೌಲ್ಯದ ಬಟ್ಟೆ ಬರೆ ಹಾಗೂ ಗ್ಯಾಜೆಟ್ ಧರಿಸಿದ್ದರೆಂದು ಹೇಳಲಾಗಿದೆ.
ಚರ್ಚೆ ಆರಂಭ :
ನಟ ದರ್ಶನ್ ಹೀಗೆ ಐಷಾರಾಮಿ ಉಡುಪು ತೊಟ್ಟು ಜೈಲಿಗೆ ಎಂಟ್ರಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಜೈಲಿಗೆ ಬಂದವರಂತೆ ದರ್ಶನ್ ಬಂದೇ ಇಲ್ಲ. ಅವರು ಸಿನಿಮಾ ಶೂಟಿಂಗ್ ಗೆ ಬಂದಂತೆ ಬಂದಿದ್ದಾರೆ. ಮೊದಲೇ ರಾಜಾತಿಥ್ಯದ ಆರೋಪಕ್ಕೆ ಗುರಿಯಾಗಿರುವ ದರ್ಶನ್ ಅವರು ಇನ್ನು ಬಳ್ಳಾರಿಯಲ್ಲೂ ಭಾರೀ ಸೊಗಸಾದ ಜೀವನ ನಡೆಸಬಹುದು ಎಂಬಿತ್ಯಾದಿ ಊಹಾಪೋಹಗಳು ಹರಿದಾಡಿವೆ.
ಆದರೆ, ದರ್ಶನ್ ಪರವಾಗಿ ವಾದ ಮಂಡಿಸುವವರೂ ಇದ್ದಾರೆ. ಅವರು ಒಬ್ಬ ಸೂಪರ್ ಸ್ಟಾರ್. ಕೈತುಂಬಾ ದುಡಿದವರು. ಅವರು ಹೀಗೆ ತಮ್ಮ ಬಟ್ಟೆಬರೆಗಳು, ಗ್ಯಾಜೆಟ್ ಗಳಿಗೆ ಲಕ್ಷಾಂತರ ರೂ. ಖರ್ಚು ಮಾಡುವುದು ದೊಡ್ಡ ವಿಚಾರವೇನಲ್ಲ ಬಿಡಿ ಎಂದು ಹಲವಾರು ಮಂದಿ ಹೇಳಿದ್ದಾರೆ. ಆದರೆ, ಅವರ ಬಾಯಿ ಮುಚ್ಚಿಸಲು ಪ್ರಯತ್ನಿಸಿರುವ ವಿಚಾರವಾದಿಗಳು, ದರ್ಶನ್ ಯಾರೇ ಆಗಿರಲಿ, ಅವರು ಇವತ್ತು ಅರೆಸ್ಟ್ ಆಗಿ ಜೈಲಿಗೆ ಹೋದವರು. ಒಂದು ಜೈಲಿನಿಂದ ಮತ್ತೊಂದು ಜೈಲಿಗೆ ವರ್ಗಾವಣೆಯಾದ ಕೈದಿ. ಹಾಗಿರುವಾಗ ಅವರು ಹೀಗೆ ಐಷಾರಾಮಿ ಬಟ್ಟೆ ತೊಡುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
ಆದರೆ, ಇದೆಲ್ಲದಕ್ಕೂ ಸಮಜಾಯಿಷಿ ನೀಡಿರುವ ಕೆಲವರು, ಪರಪ್ಪನ ಅಗ್ರಹಾರಕ್ಕೆ ಬಂದಾಗ ಅವರಿನ್ನೂ ವಿಚಾರಣಾಧೀನ ಕೈದಿಯಾಗಿದ್ದಾರೆ. ಹಾಗಾಗಿ, ಅವರು ಕಲರ್ ಬಟ್ಟೆಯಲ್ಲೇ ಇರಲು ಅವಕಾಶವಿದೆ ಎಂದು ಹೇಳಿದ್ದಾರೆ.
ಬದಲಾದ ಕೈದಿ ನಂಬರ್:
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರಿಗೆ 6106 ಎಂಬ ನಂಬರ್ ನೀಡಲಾಗಿತ್ತು. ಬಳ್ಳಾರಿಗೆ ಶಿಫ್ಟ್ ಆದಾಗಲೂ ಅದೇ ನಂಬರ್ ಅನ್ನು ಅಲ್ಲೂ ಮುಂದುವರಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಬಳ್ಳಾರಿ ಕಾರಾಗೃಹಕ್ಕೆ ತೆರಳಿದ ನಂತರ ದರ್ಶನ್ ಅವರ ಕೈದಿ ನಂಬರ್ ಬದಲಾಗಿದ್ದು, 511 ಎಂಬ ನಂಬರ್ ನೀಡಲಾಗಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಅಪರಾಧ
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.
ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


















