ಕ್ರೈಂ
Bengaluru-ದೃಶ್ಯ ಸಿನಿಮಾ ಮಾದರಿ ಪತ್ನಿಯನ್ನು ಕೊಂದು ಶವ ಹೂತಿಟ್ಟಿದ್ದ ಪತಿ 5 ವರ್ಷಗಳ ಬಳಿಕ ಸಿಕ್ಕಿ ಹಾಕಿಕೊಂಡ – ಆತ ಸಿಕ್ಕಿಬಿದ್ದಿದ್ದೇ ರಣ ರೋಚಕ
ಸ್ನೇಹಿತನ ಪತ್ನಿಯ ಕೊಲೆ ಕೇಸ್ನಲ್ಲಿ ಪೊಲೀಸರ ಅತಿಥಿಯಾಗಿದ್ದ ಆರೋಪಿಯೊಬ್ಬ ಐದು ವರ್ಷಗಳ ಬಳಿಕ ತನ್ನ ಪತ್ನಿಯ ಕೊಲೆ ಕೇಸ್ನಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು : ಆ 29 : ತನ್ನ ಪತ್ನಿ ಓಡಿ ಹೋಗಿದ್ದಾಳೆ ಎನ್ನುತ್ತಲೇ ಪೊಲೀಸರಿಗೆ ಮಾತ್ರವಲ್ಲ ಅಕ್ಕಪಕ್ಕದವರಿಗೂ ಚಳ್ಳೆಹಣ್ಣು ತಿನ್ನಿಸಿದ್ದ ಖತರ್ನಾಕ್ 5 ವರ್ಷದ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಮಾಗಡಿ ತಾಲೂಕಿನ ಜುಗಲ್ ಗ್ರಾಮದ ನಿವಾಸಿ ಕಿರಣ್ (37) ಬಂಧಿತ ಕೊಲೆ ಆರೋಪಿ.
10 ವರ್ಷಗಳ ಹಿಂದೆ ತಾವರೆಕೆರೆಯ ಪೂಜಾ ಎಂಬಾಕೆಯನ್ನು ಆರೋಪಿ ಮದುವೆ ಆಗಿದ್ದ. 2019 ರಲ್ಲಿ ಹೆಂಡತಿಯ ನಡತೆ ಶಂಕಿಸಿ ಕೊಲೆಗೈದು ಗ್ರಾಮದ ಪಕ್ಕದ ಚೀಲೂರು ಫಾರೆಸ್ಟ್ನಲ್ಲಿ ಸ್ನೇಹಿತರಿಬ್ಬರ ಜೊತೆಗೂಡಿ ಹೂತುಹಾಕಿದ್ದ.
ಸಂಬಂಧಿಕರಿಗೆ ಅಕ್ಕಪಕ್ಕದವರಿಗೆ ತನ್ನ ಹೆಂಡತಿ ಬೇರೊಬ್ಬನ ಜೊತೆ ಓಡಿಹೋಗಿ ಮದುವೆಯಾಗಿದ್ದಾಳೆಂದು ನಂಬಿಸಿದ್ದ. 2021 ರಲ್ಲಿ ಚೀಲೂರು ಫಾರೆಸ್ಟ್ನಲ್ಲಿ ಟ್ರಂಚ್ ತೋಡುವ ಕೆಲಸವನ್ನು ಅರಣ್ಯ ಇಲಾಖೆಯವರು ಆರಂಭಿಸಿದರು.ಇದೆ ವೇಳೆ ಬಿಡುಗಡೆಯಾದ ದೃಶ್ಯ ಸಿನಿಮಾ ನೋಡಿ ಹೆಣವನ್ನು ಮಣ್ಣಿನಲ್ಲಿ ಹೊತ್ತಿಟ್ಟರೆ ಯಾವತ್ತಿದ್ದರೂ ಸಿಕ್ಕಿಹಾಕಿಕೊಳ್ಳುತ್ತೇನೆ ಎಂದು ಹೆದರಿದ್ದಾನೆ.
ಬಳಿಕ ಸಿನಿಮಾ ರೀತಿಯಲ್ಲಿ ಮತ್ತೆ ತನ್ನ ಪತ್ನಿಯ ಹೆಣವನ್ನು ಭೂಮಿಯಿಂದ ಹೊರತೆಗೆದು, ಸುಟ್ಟು ಮಣ್ಣು ಮುಚ್ಚಿದ್ದ.
ಸಿಕ್ಕಿಬಿದ್ದಿದ್ದೇ ರೋಚಕ:
ಹದಿನೈದು ದಿನಗಳ ಹಿಂದೆ ಬೆಂಗಳೂರಿನ ಮಾದನಾಯಕನ ಹಳ್ಳಿಯ ದಿವ್ಯಾ ಎಂಬ ಗೃಹಿಣಿಯ ಕೊಲೆಯಾಗಿತ್ತು. ಆಕೆಯನ್ನು ತಾಲೂಕಿನ ಕುದೂರು ಬಳಿಯ ಚೀಲೂರು ಆರಣ್ಯದಲ್ಲಿ ಕೊಲೆ ಮಾಡಿ ಮೃತದೇಹವನ್ನು ಅಲ್ಲಿಯೇ ಹೂತಿಟ್ಟು ಆರೋಪಿಗಳು ಪರಾರಿಯಾಗಿದ್ದರು. ಕೊಲೆ ಆರೋಪಿಗಳಾದ ಶಶಾಂಕ್, ರೋಹಿತ್, ಭರತ್ ಎಂಬುವರನ್ನು ಮಾಗಡಿ ಪೊಲೀಸರು ಬಂಧಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಮಹಿಳೆಯ ಗಂಡ ಉಮೇಶ್ ಹಾಗೂ ಆತನ ಸ್ನೇಹಿತ ಕಿರಣ್ ತಲೆಮರೆಸಿಕೊಂಡಿದ್ದರು. 15 ದಿನಗಳ ಹಿಂದೆ ಆರೋಪಿ ಕಿರಣ್ ನ್ನು ಮಾಗಡಿ ಪೊಲೀಸರು ವಶ ಪಡಿಸಿಕೊಂಡು ಆತನ ಕೌಟುಂಬಿಕ ಹಿನ್ನೆಲೆ ವಿಚಾರಿಸಿದ್ದಾರೆ.
ಕಿರಣ್ ಪೊಲೀಸರ ವಿಚಾರಣೆ ವೇಳೆ ತನ್ನ ಹೆಂಡತಿ 10 ವರ್ಷಗಳ ಹಿಂದೆಯೆ ಕಾಣೆಯಾಗಿದ್ದಾಳೆ. ಮಿಸ್ಸಿಂಗ್ ಪ್ರಕರಣ ಕೂಡಾ ದಾಖಲಿಸಿದ್ದಾಗಿ ಹೇಳಿದ್ದ. ಇದರಿಂದ ಅನುಮಾನಗೊಂಡ ಪೊಲೀಸರು ಮೃತ ಪೂಜಾಳ ತಾಯಿ ಗೌರಮ್ಮಳನ್ನು ಸಂಪರ್ಕಿಸಿದ 5 ವರ್ಷದ ಹಿಂದೆ ಮಗಳು ಬೇರೊಬ್ಬನ ಜೊತೆ ಓಡಿಹೋಗಿದ್ದಾಳೆಂದು ತನ್ನ ಅಳಿಯ ಹೇಳಿದ್ದಾನೆ ಎಂದಿದ್ದಳು.
ಇದರಿಂದ ಪೊಲೀಸರಿಗೆ ಮತ್ತಷ್ಟು ಅನುಮಾನ ಹೆಚ್ಚಾಗಿ, ಬಳಿಕ ಮಿಸ್ಸಿಂಗ್ ಕಂಪ್ಲೆಂಟ್ ಹುಡುಕಿದ ಪೊಲೀಸರಿಗೆ ಆ ಕಂಪ್ಲೆಂಟ್ ಸಿಕ್ಕದಿದ್ದಾಗ ಆತನ ಸ್ನೇಹಿತರಾದ ಭರತ್ ಹಾಗೂ ಕುಮಾರ್ನನ್ನು ವಿಚಾರಿಸಿದ್ದಾರೆ. ಆಗ ಸತ್ಯ ಬಯಲಾಗಿದೆ.
ಬಳಿಕ ಪೊಲೀಸರು ಕಿರಣನನ್ನು ಪತ್ನಿಯನ್ನು ಹೂತು ಹಾಕಿದ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಿದಾಗ ಹೂತಿಟ್ಟ ಶವದ ಮೂಳೆಗಳು ಪತ್ತೆಯಾಗಿವೆ. ಬಳಿಕ ಕಿರಣ್ ಹಾಗೂ ಆತನ ಸ್ನೇಹಿತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ನಿಧನ ವಾರ್ತೆ17 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು16 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು13 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ17 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ17 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ17 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ17 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಪರಾಧ13 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!


















