ರಾಜಕೀಯ
Puttur-ಪುತ್ತೂರು: ಮಂಡಲಗಳ ನೂತನ ಅಧ್ಯಕ್ಷರುಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ
ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಅಧ್ಯಕ್ಷರುಗಳಾದ ದಯಾನಂದ ಶೆಟ್ಟಿ ಉಜೈಮಾರ್ ಮತ್ತು ಶಿವಕುಮಾರ್ ಕಲಿಮಾರ್ ರವರಿಗೆ ಮಂಡಲದ ಅಧ್ಯಕ್ಷರುಗಳಾದದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ರವರು ಬಿಜೆಪಿ ಶಲ್ಯ ಹಾಕಿ ಕಛೇರಿಯ ದಾಖಲಾತಿ ಪುಸ್ತಕ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.
ಪುತ್ತೂರು: ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೂತನ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರುಗಳಾದ ದಯಾನಂದ ಶೆಟ್ಟಿ ಉಜೈಮಾರ್ ಮತ್ತು ಶಿವಕುಮಾರ್ ಕಲಿಮಾರ್ ರವರಿಗೆ ಮಂಡಲದ ಅಧ್ಯಕ್ಷರುಗಳಾದದ ಸಾಜ ರಾಧಕೃಷ್ಣ ಆಳ್ವ ಮತ್ತು ಪಿ.ಜಿ ಜಗನ್ನಿವಾಸ ರಾವ್ ರವರು ಬಿಜೆಪಿ ಶಲ್ಯ ಹಾಕಿ ಕಛೇರಿಯ ದಾಖಲಾತಿ ಪುಸ್ತಕ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು.
ಗ್ರಾಮಾಂತರ ಮಂಡಲದ ನೂತನ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ತೆಂಕಿಲ, ನಾಗೇಶ್ ಪ್ರಭು ಜಂಟಿಯಾಗಿ ನೂತನ ಸಮಿತಿಯ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಕಾರ್ಯದರ್ಶಿ ವಿದ್ಯಾ ಗೌರಿ, ನೂತನ ಉಪಾಧ್ಯಕ್ಷರುಗಳಾದ ಹರಿಪ್ರಸಾದ್ ಯಾದವ್, ಸುನೀಲ್ ದಡ್ಡು, ಯತೀಂದ್ರ ಕೊಚ್ಚಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, ರಾಧಕೃಷ್ಣ ಬೂಡಿಯಾರ್, ಅರುಣ್ ಪುತ್ತಿಲ, ಒಬಿಸಿ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್, ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ಅಪ್ಪಯ ಮಣಿಯಾಣಿ, ಸಂತೋಷ್ ರೈ ಕೈಕಾರ, ರಾಜೇಶ್ ಬನ್ನೂರು, ಹರೀಶ್ ಮರುವಾಳ, ಪುಜ್ವಲ್ ಘಾಟೆ, ರವಿಕುಮಾರ್ ರೈ ಮಠ, ಸುಜಿತ್ ಬೆಟ್ಟಂಪಾಡಿ, ಮಣಿಕಂಠ, ವಿಶ್ವನಾಥ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
ರಾಜಕೀಯ
Kumaraswamy-ಹಾಸನ ಡಿಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಹಾಸನದಿಂದ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ನೋಟಿಸ್ ನೀಡಲು ಮುಂದಾಗಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ತಮ್ಮ ಆರೋಪಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸಾಪ್ ಚಾಟ್ಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ್ದರು.
ಆರೋಪ ನಿರಾಕರಿಸಿದ್ದ ಜಿಲ್ಲಾಧಿಕಾರಿ
ಕುಮಾರಸ್ವಾಮಿ ಅವರ ಆರೋಪವನ್ನು ಜಿಲ್ಲಾಧಿಕಾರಿ ಲತಾ ಕುಮಾರಿ ಸಂಪೂರ್ಣವಾಗಿ ತಳ್ಳಿಹಾಕಿದ್ದರು. ತಮ್ಮ ವಿರುದ್ಧ ಮಾಡಿರುವ ಲಂಚದ ಆರೋಪಗಳು ಸುಳ್ಳು. ವಾಟ್ಸಾಪ್ ಚಾಟ್ಗಳನ್ನು ಎಡಿಟ್ ಮಾಡಲಾಗಿದೆ ಎಂದು ತಮ್ಮ ಆಪ್ತ ಸಹಾಯಕರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ. ತಾವು ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡುವುದಾಗಿ ಹೇಳಿದ್ದರು.
ಇನ್ನೊಂದೆಡೆ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವಾಟ್ಸಾಪ್ ಚಾಟ್ಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಆರೋಪಿಸಿದ್ದರು.
ಎಫ್ಐಆರ್ ದಾಖಲು, ಕುಮಾರಸ್ವಾಮಿಗೆ ನೋಟಿಸ್
ಶಶಿಕಿರಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 335 ಮತ್ತು 336(4) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹಾಸನ ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳು ನಕಲಿ ವಾಟ್ಸಾಪ್ ಚಾಟ್ಗಳ ಮೂಲ ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಸಂಬಂಧ ಮಾಹಿತಿ ಪಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
Uncategorized15 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಸ್ಥಳೀಯ24 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಬಿಗ್ ನ್ಯೂಸ್24 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ20 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ರಾಜಕೀಯ20 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ20 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಕ್ರೈಂ2 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್















