ಶಿಕ್ಷಣ
Ambika-ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ; ಸೈನ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳಿವೆ – ಅರವಿಂದ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳನ್ನು ಉದ್ಘಾಟಿಸಿ ಭಾನುವಾರ ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಮಾತನಾಡಿದರು.
ಪುತ್ತೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ನಡೆಸುವ ಪರೀಕ್ಷೆಯು ಸೈನ್ಯ ಸೇರುವವರಿಗೆ ಒಳ್ಳೆಯ ಅವಕಾಶ. ಇದನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬೇಕು. ಸೈನ್ಯದಲ್ಲಿ ಹುಡುಗರು ಮತ್ತು ಹುಡುಗಿಯರು ಇಬ್ಬರಿಗೂ ಸಮಾನ ಅವಕಾಶವಿದೆ.
ಆದರೆ ಪ್ರಸ್ತುತ ನಮ್ಮ ಪ್ರದೇಶಗಳಿಂದ ಯುವಸಮೂಹ ದೊಡ್ಡ ಉತ್ಸಾಹ ತೋರದಿರುವುದು ಹಾಗೂ ಉತ್ತಮ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರದಿರುವುದು ವಿಷಾದಕರ ಎಂದು ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳನ್ನು ಉದ್ಘಾಟಿಸಿ ಭಾನುವಾರ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ದೇಶದಲ್ಲಿ ಎಂತಹದ್ದೇ ಕಷ್ಟ ಬಂದರೂ ಒದಗಿಬರುವವರು ಸೈನಿಕರು. ಆದರೆ ಕಷ್ಟದ ಸಮಯದಲ್ಲಿ ಮಾತ್ರ ಸೈನಿಕರನ್ನು ನೆನೆಸಿಕೊಳ್ಳುವ ಸ್ವಾರ್ಥಿ ಜನರಿದ್ದಾರೆ.
ಇದು ನಮ್ಮ ದುರ್ದೈವ. ಸೈನ್ಯದ ಶಿಕ್ಷಣ ನೀಡುವಲ್ಲಿ ಇಸ್ರೇಲ್ ಮುಂಚೂಣಿಯಲ್ಲಿದೆ, ಅದೇ ಮಾದರಿಯಲ್ಲಿ ನಮ್ಮ ದೇಶದಲ್ಲಿಯೂ ಕಾನೂನು ಜಾರಿಗೆ ಬರಬೇಕು. ಪ್ರತಿಯೊಬ್ಬರೂ ದೇಶಭಕ್ತಿಯ ಪಂಜುಗಳಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲೆ ಸುಚಿತ್ರ ಪ್ರಭು ಮತ್ತು ಎನ್‌ಡಿಎ ತರಬೇತುದಾರೆ ಮಲ್ಲಿಕಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಶ್ರೀವತ್ಸ.ಪಿ ಪ್ರಸ್ತುತಪಡಿಸಿದರು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
-
Uncategorized17 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized19 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು22 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ21 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ23 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್22 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ22 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized5 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















