Connect with us

ಅಂತರ ರಾಜ್ಯ

Viral Video| ಗಂಡನಿಗೆ ತಾನೇ ಮುಂದೆ ನಿಂತು ಮದುವೆ ಮಾಡಿಸಿದ ಪತ್ನಿ!; ಈ ವಿಚಿತ್ರ ಮದುವೆಗೆ ಕಾರಣ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ!

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ನಿಖರ ನ್ಯೂಸ್ :- ಹೆಣ್ಣು ಯಾವುದನ್ನಾದರೂ ಸಹಿಸಿಕೊಳ್ಳುತ್ತಾಳೆ ಆದರೆ ತನ್ನ‌ ಗಂಡನನ್ನು ಇನ್ನೊಬ್ಬ ಹೆಣ್ಣಿನೊಂದಿಗೆ ಹಂಚಿಕೊಳ್ಳುವುದನ್ನು ಎಂದಿಗೂ ಸಹಿಸಿಕೊಳ್ಳುವುದಿಲ್ಲ. ಆದರೆ ಈ ಮಾತೇ ಸುಳ್ಳು ಎನ್ನುವಂತೆ ಇಲ್ಲೊಬ್ಬ ಮಹಿಳೆ ತನ್ನ ಗಂಡನಿಗೆ ತಾನೇ ಮುಂದೆ ನಿಂತು ಇನ್ನೊಬ್ಬ‌ ಮಹಿಳೆಯೊಂದಿಗೆ ಅದ್ದೂರಿಯಾಗಿ ಮದುವೆ ಮಾಡಿಸಿದ್ದಾಳೆ. ಸದ್ಯ, ಈ ಮದುವೆಯ ವಿಡಿಯೋ ವೈರಲ್ ಆಗುತ್ತಿದ್ದು, ಈ ವಿಚಿತ್ರ ಮದುವೆಗೆ‌ ಕಾರಣ ಕೇಳಿದ್ರೆ ನೀವು ಶಾಕ್‌ ಆಗೋದು ಗ್ಯಾರಂಟಿ!.

Ad Widget

Ad Widget alt="Ad Widget"/>

Ad Widget

ಘಟನೆ ನಡೆದಿದ್ದೆಲ್ಲಿ?

Ad Widget

Ad Widget <> Ad Widget

100ರಲ್ಲಿ 99% ಶೇಕಡಾ ಮಹಿಳೆಯರು ಗಂಡನ ವಿಚಾರದಲ್ಲಿ ತುಂಬಾ ಪೊಸೆಸೀವ್ ಆಗಿರ್ತಾರೆ. ಆತ ಇನ್ನೊಬ್ಬ ಮಹಿಳೆಯೊಂದಿಗೆ ಸಲಿಗೆಯಿಂದ ಇರುವುದನ್ನು ಯಾವತ್ತಿಗೂ ಪತ್ನಿ ಸಹಿಸಿಕೊಳ್ಳುವುದಿಲ್ಲ. ಆದರೆ ಇದೀಗ ಪತ್ನಿಯೊಬ್ಬಳು ತಾನೇ ಮುಂದೆ ನಿಂತು‌ ತನ್ನ ಗಂಡನಿಗೆ ಇನ್ನೊಂದು ಮದುವೆ ಮಾಡಿಸಿ ಬಾರೀ ಸುದ್ದಿಯಾಗಿದ್ದಾಳೆ.‌ಇಂತಹದ್ದೊಂದು ವಿಚಿತ್ರ ಮದುವೆ ನಡೆದಿರುವುದು ತೆಲಂಗಾಣದ ಮಹಬೂಬಾಬಾದ್‌ ಜಿಲ್ಲೆಯ ಚಿನ್ನಗುಡೂರಿನ ಉಗ್ಗಂಪಲ್ಲಿ ಗ್ರಾಮದಲ್ಲಿ.ಈ ಮದುವೆಯ ಕಾರಣ ಕೇಳಿದ್ರೆ ನಿಮಗೆ ಶಾಕ್ ಆಗೋದು ಗ್ಯಾರಂಟಿ.

ಮದುವೆಗೆ ಕಾರಣ ಏನು?

Ad Widget

Ad Widget

ಉಗ್ಗಂಪಲ್ಲಿ ಗ್ರಾಮದ ಸುರೇಶ್‌ ಮತ್ತು ಸರಿತಾ ಎಂಬವರು ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದು, ಇವರು ಮಗ ಮತ್ತು ಮಗಳೊಂದಿಗೆ ಸುಂದರವಾದ ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ಮಹಬೂಬಾಬಾದ್‌ ಪಟ್ಟಣದಲ್ಲಿರುವ ಸುರೇಶ್‌ ಸಂಬಂಧಿ ಮಗಳಾದ ಸಂಧ್ಯಾ ಎಂಬವಳು ತನ್ನ ಸೋದರ ಮಾವನಾದ ಸುರೇಶ್‌ ಅವರನ್ನು ಪ್ರೀತಿಸಲು ಶುರು ಮಾಡಿದ್ದಾಳೆ. ಇದನ್ನರಿತ ಸರಿತಾ ಒಂದಿಷ್ಟೂ ಬೇಸರ ಪಟ್ಟುಕೊಳ್ಳದೆ, ಬುದ್ಧಿಮಾಂದ್ಯ ಯುವತಿಯ ಬದುಕು ಹಸನಾಗಿಸಲು ತನ್ನ ಗಂಡನನ್ನೇ ತ್ಯಾಗ ಮಾಡಿದ್ದಾಳೆ. ತಾನೇ ಮುಂದೆ ನಿಂತು ತನ್ನ‌ ಗಂಡನ ಮದುವೆ ಮಾಡಿಸಿದ್ದಾಳೆ.‌

ಎಲ್ಲೆಡೆಯಿಂದ ಭಾರೀ ಮೆಚ್ಚುಗೆ!

ಸ್ವಾರ್ಥಿಗಳೇ ತುಂಬಿರುವ ಜಗತ್ತಿನಲ್ಲಿ ಎರಡು ಮಕ್ಕಳ ತಾಯಿಯಾಗಿದ್ದರೂ ಕೂಡ ಮಾನವೀಯ ದೃಷ್ಟಿಯಿಂದ ಬುದ್ಧಿಮಾಂದ್ಯ ಯುವತಿಗೆ ತನ್ನ ಗಂಡನನ್ನು ಕೊಟ್ಟು ಮದುವೆ ಮಾಡಿಸಿದ ಸರಿತಾ ಅವರ ತ್ಯಾಗ ಸದ್ಯ ಎಲ್ಲೆಡೆ ಸುದ್ದಿಯಾಗಿದೆ.‌ಇದಿಷ್ಟೇ ಅಲ್ಲದೇ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮದುವೆಯ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರೂ ಕೂಡ ಸರಿತಾ ಅವರ ತ್ಯಾಗವನ್ನು ಕೊಂಡಾಡಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

Published

on

Ad Widget

Ad Widget

Ad Widget

Ad Widget

ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.

Ad Widget

Ad Widget alt="Ad Widget"/>

Ad Widget

ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.

Ad Widget

Ad Widget <> Ad Widget

ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Ad Widget
Continue Reading

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ಸಿನೆಮಾ

Arjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು

Published

on

Ad Widget

Ad Widget

Ad Widget

Ad Widget

ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಚೆನ್ನೈ: ಹಿರಿಯ ಪುತ್ರಿ ಐಶ್ವರ್ಯಾ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳ ವಿರುದ್ಧ ಬಹುಭಾಷಾ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಅರ್ಜುನ್ ಸರ್ಜಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಇತ್ತೀಚೆಗೆ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿಯ ವಿವಾಹ ಸಮಾರಂಭದಲ್ಲಿ ಅಳಿಯ ಉಮಾಪತಿ ರಾಮಯ್ಯ ಅವರು ಹೆಚ್ಚಾಗಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ, ಐಶ್ವರ್ಯಾ ಮತ್ತು ಉಮಾಪತಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಕೆಲವು ಆನ್‌ಲೈನ್ ಪೋರ್ಟಲ್‌ಗಳಲ್ಲಿ ಪ್ರಕಟವಾಗಿದ್ದವು. ಇದರ ಬೆನ್ನಲ್ಲೇ ಕೆಲವು ಮಾಧ್ಯಮಗಳು ಐಶ್ವರ್ಯಾ ಅವರನ್ನು ಮದ್ಯವ್ಯಸನಿ ಎಂದು ಬಿಂಬಿಸುವ ವರದಿಗಳನ್ನೂ ಪ್ರಸಾರ ಮಾಡಿದ್ದವು.

Ad Widget

Ad Widget <> Ad Widget

ಈ ವರದಿಗಳ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅರ್ಜುನ್ ಸರ್ಜಾ, ವ್ಯಕ್ತಿಯ ಗೌರವ ಮತ್ತು ಘನತೆಯ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.

“ಕಲಾವಿದರ ಸಾರ್ವಜನಿಕ ಜೀವನದಲ್ಲಿ ಊಹಾಪೋಹಗಳು ಮತ್ತು ಟೀಕೆಗಳು ಸಹಜ. ಆದರೆ ಊಹಾಪೋಹಗಳಿಗೂ ಉದ್ದೇಶಪೂರ್ವಕವಾಗಿ ಆಧಾರರಹಿತ ಆರೋಪಗಳನ್ನು ಹರಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾರ್ವಜನಿಕ ವಿಮರ್ಶೆಯ ಹೆಸರಿನಲ್ಲಿ ಕಟ್ಟುಕಥೆಗಳನ್ನು ಸೃಷ್ಟಿಸಲು ಅಥವಾ ವ್ಯಕ್ತಿಯ ಚಾರಿತ್ರ್ಯವಧೆ ಮಾಡಲು ಯಾರಿಗೂ ಅಧಿಕಾರವಿಲ್ಲ. ಯಾವುದೇ ಆಧಾರವಿಲ್ಲದೆ ಮಹಿಳೆಯೊಬ್ಬರನ್ನು ಮದ್ಯವ್ಯಸನಿ ಎಂದು ಕರೆಯುವುದು ಅತ್ಯಂತ ಬೇಜವಾಬ್ದಾರಿಯುತ ಮತ್ತು ಸ್ವೀಕಾರಾರ್ಹವಲ್ಲದ ವರ್ತನೆ” ಎಂದು ಅವರು ಕಿಡಿಕಾರಿದ್ದಾರೆ.

Ad Widget

Ad Widget

ಮೌನವನ್ನು ಒಪ್ಪಿಗೆ ಎಂದು ಭಾವಿಸಬೇಡಿ
ತಂದೆಯಾಗಿ ಪುತ್ರಿಯ ವಿರುದ್ಧದ ಇಂತಹ ಆರೋಪಗಳನ್ನು ಸಹಿಸಿಕೊಂಡು ಮೌನವಾಗಿರಲು ಸಾಧ್ಯವಿಲ್ಲ ಎಂದು ಅರ್ಜುನ್ ಸರ್ಜಾ ಸ್ಪಷ್ಟಪಡಿಸಿದ್ದಾರೆ.

“ಮೌನವೇ ಅತ್ಯಂತ ಘನತೆಯ ಪ್ರತಿಕ್ರಿಯೆ ಎಂದು ನಾವು ನಂಬಿದ್ದೇವೆ. ಆದರೆ ನಮ್ಮ ಮೌನವನ್ನು ಒಪ್ಪಿಗೆ ಎಂದು ಭಾವಿಸಬಾರದು. ತಪ್ಪು ಮಾಹಿತಿಯನ್ನು ಪದೇಪದೆ ಹರಡಲು ಅವಕಾಶ ನೀಡಲೂ ಸಾಧ್ಯವಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿ ಸೂಕ್ತ ಕ್ರಮಕ್ಕೆ ಮುಂದಾಗಿದ್ದೇವೆ” ಎಂದು ತಿಳಿಸಿದ್ದಾರೆ.

ಇದು ಕೇವಲ ತಮ್ಮ ಪುತ್ರಿಗೆ ಸಂಬಂಧಿಸಿದ ವಿಚಾರವಲ್ಲ. ಮಹಿಳೆಯರ ಘನತೆಗೆ ಧಕ್ಕೆ ಉಂಟಾದಾಗ ಹಾಗೂ ಅವರ ವೈಯಕ್ತಿಕ ಆಯ್ಕೆಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿದಾಗ ಎದುರಾಗುವ ನೋವಿನ ವಿಚಾರವೂ ಹೌದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕುಟುಂಬದ ಬೆಂಬಲವಿಲ್ಲದ ಮಹಿಳೆಯರಿಗೆ ಇಂತಹ ಆರೋಪಗಳು ಮತ್ತಷ್ಟು ನೋವುಂಟುಮಾಡಬಹುದು. ಯಾವುದೇ ಮಹಿಳೆ ಇಂತಹ ಪರಿಸ್ಥಿತಿಯನ್ನು ಏಕಾಂಗಿಯಾಗಿ ಎದುರಿಸುವಂತಾಗಬಾರದು ಅಥವಾ ತನ್ನ ಜೀವನಶೈಲಿಯನ್ನು ಸಮರ್ಥಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಾರದು ಎಂದು ಅರ್ಜುನ್ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!