Connect with us

ಶಿಕ್ಷಣ

Philomena-ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ದ.ಕ ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು : ರಾಜ್ಯಶಾಸ್ತ್ರದ ವಿಷಯವು ಬಹಳ ಆಸಕ್ತಿಯ ವಿಷಯವಾಗಿದೆ. ಪ್ರಸ್ತುತ ದೇಶಕ್ಕೆ ರಾಜಕೀಯ ಶಾಸ್ತ್ರ ಬಹು ಮುಖ್ಯವಾದ ವಿಷಯ. ದೇಶಕ್ಕೆ ಉತ್ತಮ ರಾಜಕಾರಣಿಯ ಅವಶ್ಯಕತೆ ಇದೆ. ಪ್ರತಿಯೊಬ್ಬರಿಗೂ ರಾಜ್ಯಶಾಸ್ತ್ರದ ತಿಳುವಳಿಕೆ ಅಗತ್ಯ. ನಮ್ಮ ದೇಶದಲ್ಲಿ ಕಾನೂನಿಗಿಂತ ಸಂಪ್ರದಾಯ ಬಲಿಷ್ಠವಾಗಿದೆ. ಸಂವಿಧಾನವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಧ್ಯಕ್ಷರಾದ  ಯು.ಟಿ. ಖಾದರ್ ಹೇಳಿದರು.

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ  ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ, ದಕ್ಷಿಣ ಕನ್ನಡ ಪ ಪೂ ಪ್ರಾಂಶುಪಾಲರ ಸಂಘ ಮತ್ತು ಸಂತ ಫಿಲೋಮಿನಾ ಪ.ಪೂ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ  ಆ29 ರಂದು ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ  ಒಂದು ದಿನದ ರಾಜ್ಯಶಾಸ್ತ್ರದ ಕಾರ್ಯಾಗಾರದಲ್ಲಿ  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪರಿಷ್ಕೃತ ನೂತನ ಪ್ರಶ್ನೆ ಪತ್ರಿಕೆ  ‘ರಾಜ್ಯಶಾಸ್ತ್ರ ಮಾರ್ಗದರ್ಶಿ’ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿ ನಮ್ಮ ಪ್ರತಿ ಕೆಲಸ ಉತ್ತಮವಾಗಿದ್ದರೆ ನಮ್ಮ ದೇಶ ಸಮರ್ಪಕವಾಗಿ ಬೆಳೆಯುತ್ತದೆ.

Ad Widget

Ad Widget <> Ad Widget

ವಾಣಿಜ್ಯ ಮತ್ತು  ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೂ ಕೂಡ ರಾಜ್ಯಶಾಸ್ತ್ರದ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳಿಗೆ ರಾಜಕೀಯ ವಿಚಾರದೊಂದಿಗೆ ವರ್ತಮಾನದ ರಾಜಕೀಯ ವ್ಯವಸ್ಥೆಯನ್ನು ತಿಳಿಸುವ ಮೂಲಕ  ರಾಜಕೀಯ ವ್ಯವಸ್ಥೆಯಲ್ಲಿ ಆಸಕ್ತಿಯನ್ನು ಮೂಡಿಸುವ ಕೆಲಸ ನಡೆಯಬೇಕು. ರಾಜ್ಯಶಾಸ್ತ್ರ ರಾಜಕೀಯಕ್ಕೆ ಮಾತ್ರ ಸೀಮಿತವಾಗದೆ, ದೇಶದ ಇತಿಹಾಸ ಮತ್ತು ಪರಂಪರೆಯನ್ನು ಒಳಗೊಂಡಿದೆ. ವಿದ್ಯಾರ್ಥಿಗಳಲ್ಲಿ ಕಾಲೇಜು ಮಟ್ಟದಲ್ಲಿ ಹೆಚ್ಚು ಹೆಚ್ಚು ರಾಜಕೀಯ ಮತ್ತು ಸಾಮಾಜಿಕ ಚಿಂತನೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಣೆಯನ್ನು ನೀಡಬೇಕು ಎಂದು ಹೇಳಿದರು

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಎಲ್ ಧರ್ಮ ಅವರು ರಾಜ್ಯಶಾಸ್ತ್ರದ ಪರಿಷ್ಕೃತ ಕೈಪಿಡಿಯ ಬಿಡುಗಡೆ ಮಾಡಿ ಮಾತನಾಡಿ  ನಮ್ಮ ದೇಶದ ಇತಿಹಾಸದ ಪ್ರಮುಖ ಲಕ್ಷಣ ವೈವಿಧ್ಯತೆಯಲ್ಲಿ ಏಕತೆ. ಆದರೆ ಅದು ಇದೀಗ ಏಕತೆಯಲ್ಲಿ ವೈವಿಧ್ಯತೆಯ ಕಡೆಗೆ ಹೋಗುತ್ತಿದೆ. ಅಂದರೆ  ಈಗ ನಮ್ಮ ದೇಶದ ಲಕ್ಷಣವನ್ನೇ ತಿರುಚಲು ಹೊರಟಿದ್ದೇವೆ. ಅದು ನಮ್ಮ ದೇಶದ ದೊಡ್ಡ ದುರಂತವೇ ಸರಿ.

Ad Widget

Ad Widget

ಪ್ರಸ್ತುತ  ವೈವಿಧ್ಯತೆಯಲ್ಲಿ ವೈರುಧ್ಯತೆಯನ್ನು ಕಾಣುತ್ತಿದ್ದೇವೆ. ಪ್ರತಿಯೊಂದು ದಿಕ್ಕಲ್ಲಿಯೂ ನಾವು ನೀವಲ್ಲ, ನೀವು ನಾವಲ್ಲ ಎಂಬ ಮೇಲು ಕೀಳು ಭಾವನೆಯನ್ನು ಸೃಷ್ಟಿಸುವ ಮನೋಭಾವನೆ ನಮ್ಮದು. ನಮ್ಮ ದೇಶದಲ್ಲಿ ರಾಜಕೀಯ ಸಂಸ್ಕೃತಿಯ ವೈವಿಧ್ಯತೆಯಲ್ಲಿ ವೈರುಧ್ಯತೆಯನ್ನು ಕಾಣುತ್ತಿದ್ದೇವೆ. ಇವತ್ತಿನ ದಿನಗಳಲ್ಲಿ ನಾವು ಮಕ್ಕಳಿಗೆ ಪ್ರೀತಿಯನ್ನು ಹೇಳಿಕೊಡುತ್ತಿಲ್ಲ. ಎಲ್ಲವನ್ನೂ ಮರೆತು ಹೋಗುವ, ಎಲ್ಲವನ್ನೂ ದೂರೀಕರಣ ಮಾಡುವ ಈ ಕಾಲದಲ್ಲಿ  ನಾವು ಮತ್ತೊಮ್ಮೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಬೋಧಿಸಬೇಕಿದೆ. ಇಂದಿನ ದಿನಗಳಲ್ಲಿ ಮಾನವಿಕ ವಿಭಾಗಗಳು ವಿದ್ಯಾರ್ಥಿಗಳಲ್ಲಿ ಬದುಕಿನ ಪಾಠ, ಬದುಕುವ ಶೈಲಿಯನ್ನು  ಹೆಚ್ಚು ತಿಳಿಸಿಕೊಡುವ ಅಗತ್ಯತೆ ಇದೆ  ಎಂದು ಹೇಳಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು  ವಹಿಸಿದ  ದ.ಕ ಜಿಲ್ಲಾ ಪ. ಪೂ ಕಾಲೇಜುಗಳ  ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಚಂದ್ರನಾಥ ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಪ ಪೂ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ  ಜಯಾನಂದ ಸುವರ್ಣ ಮಾತನಾಡಿ  ಪ್ರತಿ  ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗೂ ಮಾನವೀಯ ಮೌಲ್ಯಗಳ ಕುರಿತು ಅರಿವು ಮೂಡಿಸಬೇಕು. ಕಲಿಕೆ ನಿರಂತರ ಪ್ರತಿಕ್ಷಣವೂ ಅನೇಕ ವಿಚಾರಗಳನ್ನು ನಾವು ತಿಳಿದುಕೊಳ್ಳುತ್ತೇವೆ. ರಾಜ್ಯ ಶಾಸ್ತ್ರದಂತಹ ವಿಷಯವೂ ನಮ್ಮ ಸುತ್ತಮುತ್ತಲಿನ ಜಗತ್ತನ್ನು ತಿಳಿಯಲು, ವೈಚಾರಿಕ ಚಿಂತನೆಯನ್ನು ವೃದ್ಧಿಗೊಳಿಸಲು, ನಾವು ಮಾನವರಾಗಿ ಈ ಸಮಾಜದಲ್ಲಿ ಹೇಗೆ ಬದುಕಬಹುದು ಎಂಬುದನ್ನು  ತಿಳಿಸುತ್ತದೆ ಎಂದರು.

ಫಿಲೋಮಿನಾ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.    

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ಉಪ ಸಂಪಾದಕರಾದ  ಆರ್.ಸಿ ಭಟ್, ಮೈಸೂರು ಶ್ರೀ ಡಿ ದೇವರಾಜ್ ಅರಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಆರ್.ಜಿ. ಚಿದಾನಂದ ಹಾಗೂ ಪುತ್ತೂರು  ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಸಹ ಪ್ರಾಧ್ಯಾಪಕರಾದ ಐವನ್ ಲೋಬೊ ಪಾಲ್ಗೊಂಡರು.

ಇದೇ ಸಂದರ್ಭದಲ್ಲಿ 2023-24 ನೇ ಸಾಲಿನ  ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ  ರಾಜ್ಯಶಾಸ್ತ್ರ ವಿಷಯದಲ್ಲಿ ಶೇ100 ಫಲಿತಾಂಶವನ್ನು ಪಡೆದ ಕಾಲೇಜಿನ ಉಪನ್ಯಾಸಕರನ್ನು ಮತ್ತು ಅತಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಪ. ಪೂ ಕಾಲೇಜುಗಳ  ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಉಪಾಧ್ಯಕ್ಷರಾದ ಚಿತ್ರಲೇಖ, ಸೂರಜ್ ಚಾಲ್ಸ್ ನ್ಯೂನ್ಸ್, ಮೀನಾಕ್ಷಿ, ಕಾರ್ಯದರ್ಶಿ ದಿವ್ಯಾ ಕುಮಾರಿ, ಖಜಾಂಜಿ ಸ್ವಪ್ನಾ ಮತ್ತು  ದ.ಕ ಜಿಲ್ಲೆಯ ವಿವಿಧ ಪ. ಪೂ ಕಾಲೇಜುಗಳ ಪ್ರಾಂಶುಪಾಲರು ಹಾಗೂ ರಾಜ್ಯಶಾಸ್ತ್ರ ಉಪನ್ಯಾಸಕರು ಉಪಸ್ಥಿತರಿದ್ದರು.

ಸಂತ ಫಿಲೋಮಿನಾ ಪ.ಪೂ ಕಾಲೇಜಿನ ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ದ.ಕ ಜಿಲ್ಲಾ ಪ. ಪೂ ಕಾಲೇಜುಗಳ  ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಚಂದ್ರನಾಥ ಎಂ ಸ್ವಾಗತಿಸಿದರು. ದ.ಕ ಜಿಲ್ಲಾ ಪ. ಪೂ ಕಾಲೇಜುಗಳ  ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಕಾರ್ಯದರ್ಶಿಗಳಾದ ದಿವ್ಯಾ ಕುಮಾರಿ ವಂದಿಸಿ, ಸ.ಪ.ಪೂ ಕಾಲೇಜು ಮೂಡ ಇಲ್ಲಿನ ಉಪನ್ಯಾಸಕರಾದ ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!