ಶಿಕ್ಷಣ
Bala Vikasa-ಬಾಲವಿಕಾಸದ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ತಂಡಗಳು ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಮಾಣಿ ಇದರ ಆಶ್ರಯದಲ್ಲಿ ಕರ್ನಾಟಕ ಪ್ರೌಢ ಶಾಲೆ, ಮಾಣಿಯಲ್ಲಿ ನಡೆದ ಗೀತಗಾಯನ ಸ್ಪರ್ಧೆಯಲ್ಲಿ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ತಂಡಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಗೆ ಆಯ್ಕೆಗೊಂಡಿರುತ್ತವೆ ಹಾಗು ಬುಲ್ ಬುಲ್ಸ್ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ.
ವಿಟ್ಲ : ಆಗಸ್ಟ್ 30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಮಾಣಿ ಇದರ ಆಶ್ರಯದಲ್ಲಿ ಕರ್ನಾಟಕ ಪ್ರೌಢ ಶಾಲೆ, ಮಾಣಿಯಲ್ಲಿ ನಡೆದ ಗೀತಗಾಯನ ಸ್ಪರ್ಧೆಯಲ್ಲಿ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ತಂಡಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಗೆ ಆಯ್ಕೆಗೊಂಡಿರುತ್ತವೆ ಹಾಗು ಬುಲ್ ಬುಲ್ಸ್ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ.
ಸ್ಕೌಟ್ಸ್ ವಿಭಾಗದಿಂದ 9ನೇ ತರಗತಿಯ ಪ್ರೇಮ್ ಮತ್ತು ಕೆ ದಿವಿತ್ ಶೆಟ್ಟಿ, 8ನೇ ತರಗತಿಯ ದೀಪಿತ್ ಶೆಟ್ಟಿ, 7ನೇ ತರಗತಿಯ ನಮನ್ ಮತ್ತು ಅನಾಸ್ ಇಬ್ರಾಹಿಂ, ಹಾಗೂ 6ನೇ ತರಗತಿಯ ಸಾತ್ವಿಕ್ ಕೆ, ಸೂರ್ಯ ಎಸ್ ಆರ್ ಪಂಡಿತ್ ಮತ್ತು ಶ್ರೇಯಸ್ ಎಸ್ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಗೈಡ್ಸ್ ವಿಭಾಗದಿಂದ 9ನೇ ತರಗತಿಯ ದೇವಿಕಾ ಕೆ, ಕೃತಿಕಾ ಮತ್ತು ಸಮೃದ್ಧಿ ಎಸ್, 8ನೇ ತರಗತಿಯ ವರ್ಣಮಯೂರಿ, 7ನೇ ತರಗತಿಯ ಹಸ್ತ ಜಿ, 6ನೇ ತರಗತಿಯ ಸಾನ್ವಿ ಎಸ್ ಮತ್ತು ನತಾಷ ಜಿ ಹಾಗೂ 5ನೇ ತರಗತಿಯ ಆದ್ಯ ಎಸ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಕಬ್ಸ್ ವಿಭಾಗದಿಂದ 4 ನೇ ತರಗತಿಯ ಅನಿಕೇತ್ ಪಿ ವೈ, ಹರ್ಷಲ್ ಹೆಚ್, ದಿಶಾನ್, ಮೊಹಮ್ಮದ್ ರಾಹಿಲ್, ಅದ್ವಿತ್ ಆರ್, ಹಾಗೂ ಎಂ ಪ್ರಣಮ್ ಗೌಡ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಬುಲ್ ಬುಲ್ಸ್ ವಿಭಾಗದಿಂದ 4ನೇ ತರಗತಿಯ ಧನ್ವಿ ಡಿ, ಅಪರ್ಣ ರಾವ್, ಧನ್ವಿ ಎಸ್, 3ನೇ ತರಗತಿಯ ಲಾಸ್ಯ, ಸ್ಟೇಸಿ ಕ್ಯಾಥಲೀನ್ ಪಿಂಟೋ ಹಾಗೂ ಅನ್ವಿತಾ ಶೆಟ್ಟಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ವಿಜೇತರಾದ ಈ ಎಲ್ಲಾ ಸ್ಕೌಟ್ಸ್, ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ಸ್ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯಸ್ಥರು, ಶಾಲಾ ವ್ಯವಸ್ಥಾಪಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ಸ್ಥಳೀಯ10 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಮಂಗಳೂರು5 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ8 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್10 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಸಿನೆಮಾ9 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ10 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಬಿಗ್ ನ್ಯೂಸ್9 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ5 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















