ಆರೋಗ್ಯ
Heart attack-ಹೆಚ್ಚುತ್ತಿರುವ ಹೃದಯಘಾತ –ಯುವಕರನ್ನು ಕಾಡುತ್ತಿರುವ ಹೃದಯ ಸಮಸ್ಯೆ : ಇಲ್ಲಿದೆ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ
ಹೃದಯಿ ಸಂಬಂಧಿ ಸಮಸ್ಯೆಗಳನ್ನು ನಿಭಾಯಿಸಲು ವ್ಯಾಯಾಮ ಮತ್ತು ಆರೋಗ್ಯಕರ ಆಹಾರ ಪದ್ಧತಿಗಳಷ್ಟೇ ಪರಿಹಾರವಲ್ಲ. ಉತ್ತಮ ದೇಹ ಕಾಯವನ್ನು ಹೊಂದಲು ಅನುಸರಿಸುವ ಕ್ರಮಗಳು ವ್ಯತಿರಿಕ್ತವಾಗಿ ಪರಿಣಮಿಸಿ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ. ಹೀಗಾಗಿ ನಿಯಮಿತವಾಗಿ ಕೊಲೆಸ್ಟ್ರಾಲ್ ತಪಾಸಣೆ ಮಾಡಿಸುವುದು ಇಂದಿನ ಜರೂರು.
ದೇಹದಾರ್ಡ್ಯಕ್ಕಾಗಿ ವ್ಯಾಯಾಮ ಮಾಡುವವರಲ್ಲಿ ಹೃದಯದ ಕಾಯಿಲೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಉತ್ತಮ ದೇಹ ಕಾಯವನ್ನು ಹೊಂದಿರುವ ಆರೋಗ್ಯವಂತರೂ ಹೃದಯದ ಕಾಯಿಲೆಗೆ ತುತ್ತಾಗುತ್ತಿರುವುದನ್ನು ನಾವು ಗಮನಿಸಬಹುದಾಗಿದೆ. ಅತ್ಯುತ್ತಮ ಫಿಟ್ನೆಸ್ ಹೊಂದಿರುವ, ಪುನೀತ್ ರಾಜ ಕುಮಾರ್ ಮೃತಪಟ್ಟದ್ದು ಹೃದಯದ ಖಾಯಿಲೆಯಿಂದ.
ಹೀಗಾಗಿ ಹೃದಯಿ ಸಂಬಂಧಿ ಸಮಸ್ಯೆಗಳನ್ನು ನಿಭಾಯಿಸಲು ವ್ಯಾಯಾಮ ಮತ್ತು ಆರೋಗ್ಯಕರ ಆಹಾರ ಪದ್ಧತಿಗಳಷ್ಟೇ ಪರಿಹಾರವಲ್ಲ. ಉತ್ತಮ ದೇಹ ಕಾಯವನ್ನು ಹೊಂದಲು ಅನುಸರಿಸುವ ಕ್ರಮಗಳು ವ್ಯತಿರಿಕ್ತವಾಗಿ ಪರಿಣಮಿಸಿ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ.
ಹೀಗಾಗಿ ನಿಯಮಿತವಾಗಿ ಕೊಲೆಸ್ಟ್ರಾಲ್ ತಪಾಸಣೆ ಮಾಡಿಸುವುದು ಇಂದಿನ ಜರೂರು.
18ನೇ ವಯಸ್ಸಿನಿಂದ ಕೊಲೆಸ್ಟ್ರಾಲ್ ತಪಾಸಣೆ ಕಡ್ಡಾಯಗೊಳಿಸಬೇಕು ಎಂಬ ಅಭಿಪ್ರಾಯವನ್ನು ಭಾರತದ ಹೃದ್ರೋಗ ತಜ್ಞರ ಸಂಘವು ಇತ್ತೀಚೆಗೆ ತಿಳಿಸಿದ್ದು ಪ್ರಸ್ತುತ ಇರುವ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡುವಂತೆ ಕೋರಿದೆ. 30-35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, ಹೆಚ್ಚಿನ ಕೊಲೆಸ್ಟ್ರಾಲ್ಗೆ ಸಂಬಂಧಿಸಿದ ಹೃದಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ಸದ್ಯಕ್ಕೆ ವೈದಕೀಯ ಲೋಕವನ್ನು ಚಿಂತೆಗೀಡು ಮಾಡಿದೆ.
ಆರೋಗ್ಯಕರ ತೂಕ
ಒಟ್ಟಾರೆ ಹೃದಯರಕ್ತನಾಳದ ಆರೋಗ್ಯಕ್ಕೆ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಹೆಚ್ಚುವರಿ ದೇಹದ ತೂಕ, ಇದು ಕೆಲವು ಹೆಚ್ಚುವರಿ ಪೌಂಡ್ಗಳಾಗಿದ್ದರೂ ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಮೂಲಕ ಕೊಲೆಸ್ಟ್ರಾಲ್ ಮಟ್ಟದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ.
ಧ್ಯಾನ, ಯೋಗದ ನೆರವು
ದೀರ್ಘಕಾಲದ ಒತ್ತಡವು ಹೆಚ್ಚಿನ LDL ಕೊಲೆಸ್ಟ್ರಾಲ್ ಮಟ್ಟಗಳಿಗೆ ಮತ್ತು ಕಡಿಮೆ ಎಚ್ಡಿಎಲ್ಗೆ ಕಾರಣವಾಗಬಹುದು. ಧ್ಯಾನ, ಯೋಗ ಮತ್ತು ಆಳವಾದ ಉಸಿರಾಟದಂಥ ತಂತ್ರಗಳು ಒತ್ತಡವನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಆರೋಗ್ಯಕರ ಆಹಾರ ಪದ್ಧತಿ:
ಸಮತೋಲಿತ ಆಹಾರ ಪದ್ಧತಿಯನ್ನು ಅನುಸರಿಸುವುದು ಬಹಳ ಮುಖ್ಯ. ಆಹಾರದ ಆಯ್ಕೆಯಲ್ಲಿ ಎಚ್ಚರಿಕೆಯಿಂದ ಇರಬೇಕು. ಇದರಿಂದ ದೀರ್ಘಾವಧಿಯವರೆಗೆ ಹೃದಯರಕ್ತನಾಳ ಕ್ಷೇಮದಿಂದ ಕೂಡಿರುತ್ತದೆ ಜೀವನಶೈಲಿಯಲ್ಲಿ ಅಗತ್ಯ ಬದಲಾವಣೆ ಮಾಡಿಕೊಳ್ಳಬೇಕು.
ನಿಯಮಿತ ಕೊಲೆಸ್ಟ್ರಾಲ್ ತಪಾಸಣೆ:
ಹೃದಯದ ಆರೋಗ್ಯದಲ್ಲಿ ಕೊಲೆಸ್ಟ್ರಾಲ್ ಮಹತ್ವದ ಪಾತ್ರ ವಹಿಸುತ್ತದೆ. ಹೆಚ್ಚಿನ ಮಟ್ಟದ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್, ಎಲ್ಡಿಎಲ್-ಸಿ, ಇದನ್ನು ಸಾಮಾನ್ಯವಾಗಿ ಕೆಟ್ಟ ಕೊಲೆಸ್ಟ್ರಾಲ್ ಎಂದೂ ಕರೆಯಲಾಗುತ್ತದೆ. ಇದು ಅಪಧಮನಿಗಳಲ್ಲಿ ಸಂಗ್ರಹಕ್ಕೆ ಕಾರಣವಾಗಬಹುದು. ಇದರಿಂದ ಅಪಧಮನಿ ನಾಳಗಳು ಕಿರಿದಾಗಿ, ಗಟ್ಟಿಯಾಗಲು ಆರಂಭಗೊಳ್ಳುತ್ತವೆ. ಇದಕ್ಕೆ ಅಪಧಮನಿ ಗಡಸಾಗುವಿಕೆ ಎನ್ನಲಾಗುತ್ತದೆ. ಇದು ಅಪಾಯದ ಸೂಚನೆಯಾಗಿದ್ದು, ಇದರ ಪತ್ತೆಗೆ ನಿಯಮಿತ ಕೊಲೆಸ್ಟ್ರಾಲ್ ತಪಾಸಣೆ ಅಗತ್ಯ.
ಕೊಲೆಸ್ಟ್ರಾಲ್ ಮಟ್ಟ ಸೂಕ್ತ ನಿರ್ವಹಣೆ:
ಕೊಲೆಸ್ಟ್ರಾಲ್ ಮಟ್ಟವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದು ಅಗತ್ಯವಾಗಿರುತ್ತದೆ.
ಔಷಧಿ:
ಚುಚ್ಚುಮದ್ದಿನ ರೂಪದಲ್ಲಿ ಸುಧಾರಿತ ಚಿಕಿತ್ಸೆಯು ಶೇ 50ರಷ್ಟು ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು. ಆದರೆ ವೈದ್ಯರ ಮಾರ್ಗದರ್ಶನ ಅಗತ್ಯ.
ಎಲ್ಡಿಎಲ್-ಸಿ ಮಟ್ಟ ತಪಾಸಣೆ:
ಎಲ್ಡಿಎಲ್-ಸಿಯು ಹೃದೋಗ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿ ವ್ಯಕ್ತಿಯ ಒಟ್ಟಾರೆ ಆರೋಗ್ಯವು ಕೌಟುಂಬಿಕ ಹಾಗೂ ಅನುವಂಶೀಯವನ್ನು ಆಧರಿಸಿರುತ್ತದೆ. ನಿಯಮಿತ ತಪಾಸಣೆಯಿಂದ ಎಲ್ಡಿಎಲ್-ಸಿ ಮಟ್ಟವನ್ನು ತಿಳಿದುಕೊಂಡರೆ ಚಿಕಿತ್ಸೆ ಪಡೆಯುವುದು ಸುಲಭ ಎನ್ನುತ್ತಾರೆ ಹಿರಿಯ ಕಾರ್ಡಿಯಾಲಜಿಸ್ಟ್, ಡಾ. ರಾಜ್ಪಾಲ್ ಸಿಂಗ್
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ನಿಧನ ವಾರ್ತೆ13 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು12 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು9 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ13 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ13 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ13 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ13 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ14 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















