ಬಿಗ್ ನ್ಯೂಸ್
WhatsApp-ಹೊಸ ಫೀಚರ್ ಪರಿಚಯಿಸಲು ಸಜ್ಜಾದ ವಾಟ್ಸ್ಆ್ಯಪ್! ಇನ್ನು ಈ ಕೆಲಸ ಬಲು ಸುಲಭ!
ಜಗತ್ತಿನಾದ್ಯಂತ ಕೋಟ್ಯಾಂತರ ಬಳಕೆದಾರರ ನೆಚ್ಚಿನ ಚಾಟಿಂಗ್ ಅಪ್ಲಿಕೇಶನ್ ಎನಿಸಿಕೊಂಡಿರುವ ವಾಟ್ಸಾಪ್ ಹೊಸದೊಂದು ಫೀಚರ್ ಪರಿಚಯಿಸಲು ಸಿದ್ಧವಾಗಿದೆ. ಬಳಕೆದಾರರು ಬಹು ಖಾತೆಗಳಲ್ಲಿ ತಮ್ಮ ಸಂಪರ್ಕ ಸಿಂಕ್ ಮಾಡುವ ಫೀಚರ್ ಇದಾಗಿದೆ. ಇದರ ಮೂಲಕ ಗ್ರಾಹಕರಿಗೆ ಸಂಪರ್ಕ ಸಾಧಿಸಲು ಇನ್ನಷ್ಟು ಸುಲಭವಾಗಲಿದೆ. ಇದರೊಂದಿಗೆ ಗೌಪ್ಯತೆ ಮತ್ತು ಅನುಕೂಲತೆಗೆ ತಕ್ಕಂತೆ ಕಾರ್ಯನಿರ್ವಹಿಸಲಿದೆ .
ನಿಖರ ನ್ಯೂಸ್ :- ಜಗತ್ತಿನಾದ್ಯಂತ ಕೋಟ್ಯಾಂತರ ಬಳಕೆದಾರರ ನೆಚ್ಚಿನ ಚಾಟಿಂಗ್ ಅಪ್ಲಿಕೇಶನ್ ಎನಿಸಿಕೊಂಡಿರುವ ವಾಟ್ಸಾಪ್ ಆಗಾಗೇ ಹೊಸ ಫೀಚರ್ ಗಳನ್ನು ಪರಿಚಯಿಸುವ ಮೂಲಕ ಬಳಕೆದಾರರನ್ನು ಉಳಿಸಿಕೊಳ್ಳುವ ಮತ್ತು ಗ್ರಾಹಕ ಸ್ನೇಹಿ ಸೇವೆಗಳನ್ನು ನೀಡಲು ಸದಾ ಪ್ರಯತ್ನಿಸುತ್ತದೆ. ಈಗಾಗಲೇ ವಾಟ್ಸಾಪ್ ನಲ್ಲಿ ಹತ್ತಾರು ಫೀಚರ್ ಗಳು ಬಂದಿದ್ದು, ಇದೀಗ ಹೊಸದೊಂದು ಫೀಚರ್ ಪರಿಚಯವಾಗಲು ಸಿದ್ಧವಾಗಿದೆ. ಈ ಫೀಚರ್ ಮೂಲಕ ಇನ್ಮುಂದೆ ವಾಟ್ಸಾಪ್ ನಲ್ಲಿ ಈ ಕೆಲಸವನ್ನು ಸುಲಭವಾಗಿ ಮಾಡಬಹುದು.ಈ ಬಗೆಗಿನ ಡೀಟಿಯಲ್ಸ್ ಇಲ್ಲಿದೆ ನೋಡಿ.

ಏನಿದು ವಾಟ್ಸಾಪ್ ಹೊಸ ಫಿಚರ್!
ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಫೀಚರ್ ಪರಿಚಯಿಸಲು ಮುಂದಾಗಿದೆ. ಬಳಕೆದಾರರು ಬಹು ಖಾತೆಗಳಲ್ಲಿ ತಮ್ಮ ಸಂಪರ್ಕ ಸಿಂಕ್ ಮಾಡುವ ಫೀಚರ್ ಇದಾಗಿದೆ. ಇದರ ಮೂಲಕ ಗ್ರಾಹಕರಿಗೆ ಸಂಪರ್ಕ ಸಾಧಿಸಲು ಇನ್ನಷ್ಟು ಸುಲಭವಾಗಲಿದೆ. ಇದರೊಂದಿಗೆ ಗೌಪ್ಯತೆ ಮತ್ತು ಅನುಕೂಲತೆಗೆ ತಕ್ಕಂತೆ ಕಾರ್ಯನಿರ್ವಹಿಸಲಿದೆ .
ವಾಟ್ಸಾಪ್ ಸಿಂಕ್ ಎಂದರೇನು?
ಸ್ಮಾರ್ಟ್ಫೋನ್ನಲ್ಲಿರುವ ಕ್ವಾಂಟ್ಯಾಕ್ಟನ್ನು ಸ್ವಯಂಚಾಲಿತವಾಗಿ ಸಿಂಕ್ ಮಾಡುವ ಪ್ರಕ್ರಿಯೆ ಇದಾಗಿದೆ. ಇದು ಸಂಪರ್ಕ ಪಟ್ಟಿಯನ್ನು ಪ್ರವೇಶಿಸಲು ಮತ್ತು ನವೀಕರಿಸಲು ಸಹಾಯ ಮಾಡುತ್ತದೆ. ವಾಟ್ಸ್ಆ್ಯಪ್ ಹೊಸ ಬಹು ಖಾತೆಯ ಬೆಂಬಲದೊಂದಿಗೆ ವಿವಿಧ ಖಾತೆಯನ್ನು ಏಕಕಾಲಕ್ಕೆ ಸಂಪರ್ಕಿಸಬಹುದಾಗಿದೆ.

ಸಿಂಕ್ ಹೇಗೆ ಕೆಲಸ ಮಾಡುತ್ತೆ?
ವಾಟ್ಸಾಪ್ ನಲ್ಲಿ ಜಾರಿಗೆ ಸಜ್ಜಾಗಿರುವ ಈ ಹೊಸ ಫೀಚರ್ ಮೂಲಕ ಒಬ್ಬ ಬಳಕೆದಾರ ಏಕಕಾಲದಲ್ಲಿ ಎರಡು ಖಾತೆಯನ್ನು ಹೊಂದಬಹುದು. ಒಂದನ್ನು ಕೆಲಸಕ್ಕಾಗಿ ಬಳಸಿದರೆ ಮತ್ತೊಂದನ್ನು ವೈಯಕ್ತಿಕವಾಗಿ ಬಳಸಬಹುದು. ಇದರಿಂದಾಗಿ ಬಳಕೆದಾರರಿಗೆ ಬಹಳಷ್ಟು ಉಪಯುಕ್ತವಾಗಲಿದೆ.ಈ ಹೊಸ ಫೀಚರ್ ಸಧ್ಯದಲ್ಲೇ ಎಲ್ಲಾ ಬಳಕೆದಾರರಿಗೂ ಲಭ್ಯವಾಗಲಿದೆ ಎಂದು ಮೂಲಗಳು ತಿಳಿಸಿದೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
ಬಿಗ್ ನ್ಯೂಸ್
ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.
ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.
ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್ ಹಾಲು
46- 54 ರೂ.
ಹೋಮೋಜಿನೈಸ್ಡ್ ಟೋನ್ಡ್ ಹಾಲು
47- 55 ರೂ.
-
ದಕ್ಷಿಣ ಕನ್ನಡ19 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ19 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ18 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್13 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಅಪರಾಧ24 hours agoArrested-ಸುಪ್ರೀಂ ಕೋರ್ಟ್ ಆದೇಶ ನಕಲು ಮಾಡಿ ಕೈದಿ ಬಿಡುಗಡೆ; ಜೈಲು ಡಿಐಜಿ ಸೋಮಶೇಖರ್ ಬಂಧನ
-
ನಿಧನ ವಾರ್ತೆ18 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ಶಿಕ್ಷಣ17 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ಬಿಗ್ ನ್ಯೂಸ್18 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ


















