Uncategorized
ಕಾಲೇಜ್ ವಿದ್ಯಾರ್ಥಿನಿ ನಾಪತ್ತೆ – ಪತ್ತೆಯಾದಲ್ಲಿ ತಿಳಿಸಲು ಮನವಿ

ಬಿಳಿ ಮೈ ಬಣ್ಣ, ಕೋಲು ಮುಖ, 5ಅಡಿ ಎತ್ತರವನ್ನು ಹೊಂದಿರುವ ಬೃಂದಾ ಇಂಗ್ಲಿಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವಳಾಗಿದ್ದಾಳೆ. ಕಾಣೆಯಾಗುವ ಸಂದರ್ಭ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜಾಕೆಟ್ ಧರಿಸಿದ್ದಳು.
ಮೂಡುಬಿದಿರೆ: ಸೆ 3: ಇಲ್ಲಿನ ಪ್ರತಿಷ್ಟಿತ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಾರದ ಹಿಂದೆ ನಾಪತ್ತೆಯಾಗಿದ್ದಾಳೆ. ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಾಗಿದೆ.
ಬೆಂಗಳೂರು ಮೂಲದ ಬೃಂದಾ ಜೈನ್ (17) ಕಾಣೆಯಾದ ವಿದ್ಯಾರ್ಥಿನಿ. ಈಕೆ ಕಾಲೇಜಿನ ಹಾಸ್ಟೇಲ್ ನಿಂದ ಕಾಣೆಯಾಗಿದ್ದಾಳೆ. ಈ ವಿದ್ಯಾರ್ಥಿ ಬಗ್ಗೆ ಮಾಹಿತಿ ದೊರೆತಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08258-236333 ಸಂಪರ್ಕಿಸಬೇಕೆಂದು ಪೊಲೀಸ್ ಪ್ರಕಟಣೆ ತಿಳಿಸಿದೆ
ಬಿಳಿ ಮೈ ಬಣ್ಣ, ಕೋಲು ಮುಖ, 5ಅಡಿ ಎತ್ತರವನ್ನು ಹೊಂದಿರುವ ಬೃಂದಾ ಇಂಗ್ಲಿಷ್ ಮತ್ತು ಕನ್ನಡ ಭಾಷೆಯನ್ನು ಬಲ್ಲವಳಾಗಿದ್ದಾಳೆ. ಕಾಣೆಯಾಗುವ ಸಂದರ್ಭ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜಾಕೆಟ್ ಧರಿಸಿದ್ದಳು. ಒಂದು ವಾರದ ಹಿಂದೆ ಹಾಸ್ಟೆಲ್ ನಿಂದ ಕಾಣೆಯಾಗಿದ್ದಾಳೆ.
Uncategorized
Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.
ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.
ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.
ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.
ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಸ್ಥಳೀಯ6 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್5 hours agoRailway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ7 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ6 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಬಿಗ್ ನ್ಯೂಸ್32 minutes agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ















