ರಾಜಕೀಯ
Perne-ಪೆರ್ನೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಶಾಸಕರಿಂದ ಪರಿಶೀಲನೆ-6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.
ಹೆದ್ದಾರಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಕಾಮಗಾರಿ ವೇಗ ಪಡೆದುಕೊಳ್ಳದೇ ಇದ್ದರೆ ನಾವು ನಿತ್ಯ ನರಕಯಾತನೆ ಅನುಭವಿಸಬೇಕಾಗುತ್ತದೆ, ಸಂಪರ್ಕ ರಸ್ತೆಗಳನ್ನು ಕಡಿತಮಾಡಿದ್ದಾರೆ, ಬಸ್ಸು ತಂಗುದಾನವನ್ನು ನಿರ್ಮಾಣ ಮಾಡಿಲ್ಲ , ಬಂಡೆಗಳನ್ನು ಸ್ಪೋಟ ಮಾಡಿದ್ದರಿಂದ ನಮ್ಮ ಮನೆಗಳು ಬಿರುಕುಬಿಟ್ಟಿದೆ.

ತಡ ರಾತ್ರಿ ಬಂಡೆಗಳನ್ನು ಬ್ಲಾಸ್ಟ್ ಮಾಡುತ್ತಿದ್ದಾರೆ, ರಾತ್ರಿ ನಮಗೆ ನಿದ್ದೆಯಿಲ್ಲ ಇವರನ್ನು ಹೇಳುವವರು ಕೇಳುವವರೇ ಇಲ್ಲದಂತಾಗಿದೆ ಎಂದು ಶಾಸಕರಲ್ಲಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಗ್ರಾಮಸ್ಥರ ಆರೋಪಗಳ ಬಗ್ಗೆ ಶಾಸಕರು ಇಂಜನಿಯರ್ ಮತ್ತು ಗುತ್ತಿಗೆದಾರರ ಜೊತೆ ಚರ್ಚೆ ನಡೆಸಿದರು.
6 ತಿಂಗಳ ಗಡುವು ನೀಡಿದ ಶಾಸಕರು
ಮಂಗಳೂರು- ಬೆಂಗಳೂರು ರಾ. ಹೆದ್ದಾರಿ ಕಾಮಗಾರಿ 8 ರಿಂದ 10 ವರ್ಷಗಳಿಂದ ನಡೆಯುತ್ತಿದೆ. ಎಲ್ಲೂ ಕಾಮಗಾರಿ ಪೂರ್ಣ ಎಂಬುದು ಆಗಿಲ್ಲ, ಕಲ್ಲಡ್ಕದಲ್ಲಿ ಫ್ಲೈ ಓವರ್ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆ ಬಂದಾಗ ಹಳ್ಳದಂತಾಗಿ ರಸ್ತೆಯಲ್ಲಿ ಕೆಸರು ತುಂಬಿಕೊಂಡಿದೆ. ಕಳೆದ ಏಳೆಂಟು ವರ್ಷದಲ್ಲಿ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.
ಕಾಮಗಾರಿ ವೇಳೆ ಪೆರ್ನೆಯಲ್ಲಿ ಜನರಿಗೆ ತೊಂದರೆಯಾಗಿದೆ ಎಂಬ ದೂರುಗಳು ಬಂದಿದೆ. ಸ್ಥಳೀಯರನ್ನು ಕರೆಸಿ ಜೊತೆಗೆ ಇಂಜಿನಿಯರ್ಗಳನ್ನು ಕರೆಸಿ ಚರ್ಚೆ ಮಾಡಿದ್ದೇನೆ. ಸಂಪರ್ಕ ರಸ್ತೆಗಳನ್ನು ವ್ಯವಸ್ಥಿತವಾಗಿ ಮಡುವಂತೆ ಸೂಚನೆಯನ್ನು ನೀಡಿದ್ದೇನೆ. ಕೆಲವು ಕಡೆಗಳಲ್ಲಿ ಬಸ್ಸು ತಂಗುದಾನವನ್ನು ಒಡೆದು ಹಾಕಿದ್ದು ಅದು ಎಲ್ಲಿ ಬೇಕೋ ಅಲ್ಲಿ ನಿರ್ಮಾಣ ಮಾಡುವಂತೆ ತಿಳಿಸಿದ್ದೇನೆ.

ತಡ ರಾತ್ರಿ ವೇಳೆ ಬಂಡೆಗಳನ್ನು ಬ್ಲಾಸ್ಟ್ ಮಾಡುತ್ತಿದ್ದಾರೆ ಎಂಬ ದೂರುಗಳು ಇದೆ, ರಾತ್ರಿ ವೇಳೆ ಯಾವುದೇ ಕಾರಣಕ್ಕೂ ಬಂಡೆ ಒಡೆಯದಂತೆ ತಿಳಿಸಿದ್ದೇನೆ. ಜನರಿಗೆ ಯಾವುದೇ ತೊಂದರೆ ನೀಡದಮತೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಜನರಿಗೆ ಯಾವುದೇ ರೀರಿಯ ತೊಂದರೆ ಆಗದಂತೆ ಕಾಮಗಾರಿಯನ್ನು ನಡೆಸುವಂತೆ ತಿಳಿಸಿದ್ದು ಆ ಪ್ರಕಾರ ಕಾಮಗಾರಿ ನಡೆಸಬೇಕು ಮತ್ತು ಕಾಮಗಾರಿಯಲ್ಲಿ ವೇಗತೆಯನ್ನು ಹೆಚ್ಚಿಸುವಂತೆ ಸೂಚಿಸಿದ್ದೇನೆ ಎಂದು ಶಾಸಕರು ತಿಳಿಸಿದರು.
ಪ್ರತಿಭಟನೆಯ ಎಚ್ಚರಿಕೆ
ಮುಂದಿನ ಮಳೆಗಾಲದೊಳಗೆ ಕಾಮಗಾರಿ ಪೂರ್ಣಗೊಳಿಸದೇ ಇದ್ದಲ್ಲಿ ಭಾರೀ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ. ಜನ ಹತ್ತು ವರ್ಷದಿಮದ ಏನೆಲ್ಲಾ ಕಷ್ಟ ನೋವನ್ನು ಕಾಮಗಾರಿಯಿಂದಾಗಿ ಅನುಭವಿಸಿದ್ದಾರೆ. ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರವನ್ನು ನೀಡಬೇಕಿದೆ. ಆದಷ್ಟು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಲು ಸೂಚನೆಯನ್ನು ನೀಡಿದ್ದೇನೆ ಎಂದು ಶಾಸಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಮೆನೆಜರ್ ರಘುನಾಥ ರೆಡ್ಡಿ, ಇಂಜನಿಯರ್ ನವೀನ್, ಕ್ವಾಲಿಟಿ ಕಂಟ್ರೋಲರ್ ಶಿವಯೋಗಿ, ಸ್ಥಳೀಯರಾದ ಗ್ರಾಪಂ ಸದಸ್ಯರುಗಳಾದ ಫಾರೂಕ್ ಪೆರ್ನೆ, ಸುನಿಲ್ಪಿಂಟೋ, ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ಲ ಶಾಳಿ, ಕಾಮಗ್ರೆಸ್ ಮುಖಂಡ ಫಾರೂಕ್ ಬಾಯಬ್ಬೆ, ಕೋಡಿಂಬಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉಮೇಶ್ ಬಾಕಿಮಾರ್, ಪುಷ್ಕರ ಪುಜಾರಿ, ಚೇತನ್ ಮಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ದಕ್ಷಿಣ ಕನ್ನಡ14 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ12 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು6 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ14 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized12 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್13 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ12 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು12 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ


















