Uncategorized
Gold Rate Today-ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ-ಇಲ್ಲಿದೆ ವಿವರ
ಕಳೆದೆರಡು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಸಂತಸವನ್ನು ನೀಡಿದೆ. ಚಿನ್ನದ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಒಂದು ರೂನಷ್ಟು ಇಳಿಕೆ ಕಂಡಿದೆ. ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಕಳೆದೆರಡು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಸಂತಸವನ್ನು ನೀಡಿದೆ. ಚಿನ್ನದ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಒಂದು ರೂನಷ್ಟು ಇಳಿಕೆ ಕಂಡಿದೆ. ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,690 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,690 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 66,690 ರೂ
ಚೆನ್ನೈ: 66,690 ರೂ
ಮುಂಬೈ: 66,690 ರೂ
ದೆಹಲಿ: 66,840 ರೂ
ಕೋಲ್ಕತಾ: 66,690 ರೂ
ಕೇರಳ: 66,690 ರೂ
ಅಹ್ಮದಾಬಾದ್: 66,740 ರೂ
ಜೈಪುರ್: 66,840 ರೂ
ಲಕ್ನೋ: 66,840 ರೂ
ಭುವನೇಶ್ವರ್: 66,690 ರೂ
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಸ್ಥಳೀಯ5 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್4 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ6 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ6 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಬಿಗ್ ನ್ಯೂಸ್9 minutes agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

















