ಮಂಗಳೂರು
Vedavyas Kamath-ಗಣೇಶ ಹಬ್ಬ ನಿಲ್ಲಿಸಲು ರಾಜ್ಯ ಸರಕಾರದಿಂದ ವ್ಯವಸ್ಥಿತ ಹುನ್ನಾರ – ವೇದವ್ಯಾಸ ಕಾಮತ್
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ರವರು ರಾಜ್ಯ ಸರಕಾರವು ಗಣೇಶ ಹಬ್ಬ ಆಚರಣೆ ನಿಲ್ಲಿಸಬೇಕು ಎನ್ನುವ ವ್ಯವಸ್ಥಿತ ಹುನ್ನಾರವನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಲು ಹೋಗುವ ಆಯೋಜಕರಿಗೆ- ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ ನೀಡಬೇಕು. ಭಾಗವಹಿಸುವ ಟ್ಯಾಕ್ಸ್‌ಗಳ ತಂಡ ಯಾವುದು, ಯಾವ ವಾಹನದಲ್ಲಿ ಬರುತ್ತಾರೆ. ಅದರ ದಾಖಲೆ ನೀಡಬೇಕು. ಲೈಸೆನ್ಸ್ ನೀಡಬೇಕು ಎಂಬತ್ಯಾದಿ ಅರ್ಥವಿಲ್ಲದ ನಿಯಮಗಳನ್ನು ಹೇರುವ ಮೂಲಕ ಗೊಂದಲ ಸೃಷ್ಟಿಸಲಾಗುತ್ತಿದೆ.
ಮಂಗಳೂರು: ರಾಜ್ಯದಲ್ಲಿ ಹಿಂದೂಗಳ ಅತ್ಯಂತ ದೊಡ್ಡ ಹಬ್ಬ ಗಣೇಶ ಚತುರ್ಥಿಗೆ ವಿಘ್ನ ಎದುರಾಗಿದೆ. ಗಣೇಶ ಹಬ್ಬ ಆಚರಣೆ ನಿಲ್ಲಿಸಬೇಕು ಎನ್ನುವ ವ್ಯವಸ್ಥಿತ ಹುನ್ನಾರವನ್ನು ರಾಜ್ಯ ಸರಕಾರ ನಡೆಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ಮಂಗಳೂರು ನಗರದ ಅನೇಕ ಕಡೆ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಲು ಹೋಗುವ ಆಯೋಜಕರಿಗೆ- ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ ನೀಡಬೇಕು. ಭಾಗವಹಿಸುವ ಟ್ಯಾಕ್ಸ್‌ಗಳ ತಂಡ ಯಾವುದು, ಯಾವ ವಾಹನದಲ್ಲಿ ಬರುತ್ತಾರೆ. ಅದರ ದಾಖಲೆ ನೀಡಬೇಕು. ಲೈಸೆನ್ಸ್ ನೀಡಬೇಕು ಎಂಬತ್ಯಾದಿ ಅರ್ಥವಿಲ್ಲದ ನಿಯಮಗಳನ್ನು ಹೇರುವ ಮೂಲಕ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ದೂರಿದ್ದಾರೆ.
ವೈಯಕ್ತಿಕ, ಸಾರ್ವಜನಿಕ ಸರ್ಕಾರ ಯಾವುದೇ ಶುಭ ಕಾರ್ಯಗಳಲ್ಲೂ ಮೊದಲು ಪೂಜಿಸಲ್ಪಡುವ ಗಣೇಶನ ಪೂಜೆಗೆ ಇನ್ನಿಲ್ಲದ ಅಡೆತಡೆಗಳನ್ನು ಒಡ್ಡುವ ಪ್ರಯತ್ನವೇಕೆ?ಹಿಂದೂ ಧಾರ್ಮಿಕ ಭಾವನೆಗಳಿಗೆ ಸರ್ಕಾರ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ವನ್‌ವೇಯಿಂದಾಗಿ ಪ್ರಯಾಣಿಕರ ಪರದಾಟ:
ನಗರದಲ್ಲಿ ಯಾವುದೇ ಮಾಹಿತಿ ನೀಡದೆ ದಿಡೀರ್‌ಸಂಚಾರ ಬದಲಾವಣೆ ಮಾಡಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಬಸ್ಸುಗಳು ಸ್ಟೇಟ್ ಬ್ಯಾಂಕ್‌ನಿಂದ ಹಂಪನಕಟ್ಟೆಯವರೆಗೆ ಎಲ್ಲೂ ನಿಲ್ಲಿಸದೆ ಬಲ ಬದಿಯಲ್ಲಿಯೇ ಹೋಗಬೇಕು ಎಂದು ಸೂಚನೆ ನೀಡಿ ಉದ್ದಕ್ಕೂ ಬ್ಯಾರಿಕೇಡ್ ಅಳವಡಿಸಲಾಗಿದೆ. ಪ್ರಯಾಣಿಕರು ಅಪಾಯಕಾರಿಯಾಗಿ ಓಡಿಬಂದು ರಸ್ತೆ ದಾಟಿ ಬ್ಯಾರಿಕೇಡ್ ಸರಿಸಿ ಬಸ್ ಹತ್ತುತ್ತಿರುವ ದೃಶ್ಯ ಕಾಣುತ್ತಿದೆ. ಇಲ್ಲಿ ಜೀವಹಾನಿಯುದರೆ ನೇರ ಹೊಣೆಯನ್ನು ಅವೈಜ್ಞಾನಿಕ ನಿಯಮ ರೂಪಿಸಿದವರೇ ಹೊರಬೇಕು ಎಂದರು.
ಬಸ್ ನಿಲ್ದಾಣ ತೆರವು-ಮರುನಿರ್ಮಾಣಕ್ಕೆ ಆಗ್ರಹ:
ಹಂಪನಕಟ್ಟೆಯ ವಿವಿ ನಿಲ್ದಾಣವನ್ನು ಕೇವಲ ಒಂದು ಅಂಗಡಿಯ ವ್ಯಾಪಾರದ ಉದ್ದೇಶಕ್ಕಾಗಿ ಯಾರಿಗೂ ಮಾಹಿತಿ ನೀಡದೆ ರಾತೋರಾತ್ರಿ ತೆರವು ಮಾಡಿದ ಪರಿಣಾಮ ಕಾಲೇಜು ವಿದ್ಯಾರ್ಥಿಗಳು, ವೆನ್ನಾಕ್ ಆಸ್ಪತ್ರೆಗೆ ಬರುವವರು ಬಿಸಿಲು, ಮಳೆಯಲ್ಲಿ ನಿಲ್ಲುವಂತಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೆ ಜನಾಭಿಪ್ರಾಯದಂತೆ ಅದೇ ಜಾಗದಲ್ಲಿ ಮತ್ತೆ ಬಸ್ ನಿಲ್ದಾಣ ಮರು ನಿರ್ಮಾಣವಾಗಬೇಕು ಎಂದು ಆಗ್ರಹಿಸಿದರು.
ಬಾಡಿಗೆ, ಲೀಸ್ ದರ ಏರಿಕೆ:
ರಾಜ್ಯದ ಬಂದರು ಇಲಾಖೆಯಲ್ಲಿನ ಜಾಗವನ್ನು ಹಲವಾರು ವರ್ಷಗಳಿಂದ ನಿಗದಿತ ದರದಲ್ಲಿ ಬಾಡಿಗೆಗೆ ಹಾಗೂ ಲೀಸ್ಗೆ ನೀಡಲಾಗಿದೆ. ಇದೀಗ ದರ ಏರಿಕೆಯಾಗಿದ್ದು, ಕೂಡಲೇ ಕಡಿಮೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಡಲದ ಬಿಜೆಪಿ ಅಧ್ಯಕ್ಷ ರಮೇಶ್ ಕಂಡಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್, ಬಿಜೆಪಿ ಜಿಲ್ಲಾ ಕೋಡಾಧಿಕಾರಿ ಪ್ರಮುಖರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
Uncategorized9 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized8 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized6 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized10 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized8 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized7 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















