ಸ್ಥಳೀಯ
Manipal-ಮಣಿಪಾಲ: ವೈದ್ಯಕೀಯ ಹಿಂದೂ ವಿದ್ಯಾರ್ಥಿನಿಯ ಮತಾಂತರಕ್ಕೆ ಒತ್ತಾಯ-ಎನ್‌ಐಎ ತನಿಖೆಗೆ ವಿಹಿಂಪ ಆಗ್ರಹ
ವಿಶ್ವ ಹಿಂದೂ ಪರಿಷತ್ ನ ದುರ್ಗಾವಾಹಿನಿ – ಮಾತೃಶಕ್ತಿ ಸಂಘಟನೆಗಳು ಮಣಿಪಾಲದ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ.)ಕ್ಕೆ ವಹಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರಿಗೆ ಮನವಿ ಸಲ್ಲಿಸಿದವು.
ಮಣಿಪಾಲ: ಇಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಹೊರ ರಾಜ್ಯದ ಹಿಂದೂ ವಿದ್ಯಾರ್ಥಿಯೊಬ್ಬರನ್ನು, ಅದೇ ಕಾಲೇಜಿನಲ್ಲಿ ಉನ್ನತ ವ್ಯಾಸಂಗಮಾಡುತ್ತಿರುವ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಶ್ ಖಾನ್ ಎಂಬಾತ ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡಿದ್ದು ಹಲ್ಲೆ, ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ.)ಕ್ಕೆ ವಹಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನ ದುರ್ಗಾವಾಹಿನಿ – ಮಾತೃಶಕ್ತಿ ಸಂಘಟನೆಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಅವರಿಗೆ ಮನವಿ ಸಲ್ಲಿಸಿದವು.
ಉನ್ನತ ವ್ಯಾಸಂಗ ಮಾಡುತ್ತಿರುವ ಮಹಮ್ಮದ್ ಡ್ಯಾನಿಶ್ ಖಾನ್ ಎಂಬಾತ ಅದೇ ಕಾಲೇಜಿನ ಹೊರರಾಜ್ಯದ ಹಿಂದೂ ವಿದ್ಯಾರ್ಥಿನಿಗೆ ಪ್ರೀತಿ, ಮದುವೆಯ ನೆಪದಲ್ಲಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದು, ಮಾತ್ರವಲ್ಲದೇ ದೈಹಿಕ ಹಿಂಸೆ, ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದಾಖಲಾದ ದೂರಿನಂತೆ, ಪೊಲೀಸರು ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ.
ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿಕೊಂಡು ಪ್ರೀತಿಯ ಹೆಸರಿನಲ್ಲಿ ಮತಾಂತರ ಮಾಡುವ ವ್ಯವಸ್ಥಿತ ಸಂಚು ದೇಶದಾದ್ಯಂತ ನಡೆಯುತ್ತಿದೆ. ಈ ರೀತಿ ಮತಾಂತರಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ರಾಷ್ಟ್ರ ವಿರೋಧಿ ಚಟುವಟಿಕೆಗೆ ಬಳಸಿರುವುದು ಅನೇಕ ಪ್ರಕರಣಗಳಲ್ಲಿ ಬೆಳಕಿಗೆ ಬಂದಿದೆ.
ಹೀಗಾಗಿ ಈ ಪ್ರಕರಣದಲ್ಲಿಯೂ ಇದೇ ರೀತಿಯ ಸಂಚು, ರಾಷ್ಟ್ರ ವಿರೋಧಿ ಸಂಘಟನೆಯ ಕೈವಾಡ ಇರುವ ಬಗ್ಗೆ ಅನುಮಾನವಿದೆ. ಆದ್ದರಿಂದ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್.ಐ.ಎ) ಗೆ ವಹಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ನಗರ ಮಾತೃಶಕ್ತಿ ಪ್ರಮುಖ್ ಗೀತಾ ರವಿ ಶೇಟ್ ಮತ್ತಿತರರು ಇದ್ದರು.
ಲವ್ ಜಿಹಾದ್-ಕಾಣದ ಕೈಗಳ ಷಡ್ಯಂತ್ರ
ಪ್ರತಿಷ್ಠಿತ ಕಾಲೇಜಿನಲ್ಲಿ ಎಷ್ಟೇ ಶಿಕ್ಷಣ ಪಡೆದರೂ ಜಿಹಾದಿಗಳ ಮಾನಸಿಕತೆ ಬದಲಾಗುವುದಿಲ್ಲ ಎಂಬುದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣದ ಹಿಂದೆ ಕಾಣದ ಕೈಗಳ ಬಹು ದೊಡ್ಡ ಷಡ್ಯಂತ್ರ ಇದೆ ಎಂಬ ಅನುಮಾನವಿದೆ. ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಅದನ್ನು ಮಟ್ಟ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಾತೃಶಕ್ತಿ ಪ್ರಮುಖ್ ಪೂರ್ಣಿಮಾ ಸುರೇಶ್ ಆಗ್ರಹಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
-
Uncategorized20 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ24 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ಮಂಗಳೂರು6 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ


















