ಸ್ಥಳೀಯ
Exclusive photos-ರೇಣುಕಾಸ್ವಾಮಿ ಪ್ರಕರಣ: ಎಕ್ಸ್ಕ್ಲೂಸಿವ್ ಫೊಟೋಗಳು ವೈರಲ್-ಜೀವಕ್ಕಾಗಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ
ರೇಣುಕಾಸ್ವಾಮಿ ಪ್ರಕರಣದಲ್ಲಿ ಎಕ್ಸ್ಕ್ಲೂಸಿವ್ ಫೊಟೋಗಳು ವೈರಲ್ ಆಗಿದ್ದು ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಅವರು ಜೀವಕ್ಕಾಗಿ ಬೇಡುತ್ತಿರುವ ದೃಶ್ಯ ಕಂಡು ಬಂದಿದೆ. ರೇಣುಕಾಸ್ವಾಮಿ ಲಾರಿಗಳ ಮುಂದೆ ಕೂತಿದ್ದು ಜೀವಕ್ಕಾಗಿ ಬೇಡುತ್ತಿರುವ ದೃಶ್ಯ ಶಾಕಿಂಗ್ ಆಗಿದೆ.
ಚಿತ್ರದುರ್ಗ: ರೇಣುಕಾಸ್ವಾಮಿ ಪ್ರಕರಣದಲ್ಲಿ ಎಕ್ಸ್ಕ್ಲೂಸಿವ್ ಫೊಟೋಗಳು ವೈರಲ್ ಆಗಿದ್ದು ಜನರಲ್ಲಿ ಶಾಕ್ ಮೂಡಿಸಿದೆ. ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಅವರು ಜೀವಕ್ಕಾಗಿ ಬೇಡುತ್ತಿರುವ ದೃಶ್ಯ ಕಂಡು ಬಂದಿದೆ. ರೇಣುಕಾಸ್ವಾಮಿ ಲಾರಿಗಳ ಮುಂದೆ ಕೂತಿದ್ದು ಜೀವಕ್ಕಾಗಿ ಬೇಡುತ್ತಿರುವ ದೃಶ್ಯ ಶಾಕಿಂಗ್ ಆಗಿದೆ. ಇನ್ನೊಂದು ಫೋಟೋದಲ್ಲಿ ರೇಣುಕಾಸ್ವಾಮಿ ಬಿದ್ದಿರುವ ಫೋಟೋ ಕಾಣಬಹುದು. ರೇಣುಕಾಸ್ವಾಮಿ ಎದೆ ಮೇಲೆ ಕೈಯಿಟ್ಟು ಅನ್ ಕಾನ್ಶಿಯಸ್ ಆಗಿ ಮಲಗಿರುವಂತ ಫೋಟೋ ಕೂಡಾ ಆರೋಪಿಗಳ ಮೊಬೈಲ್ನಿಂದ ರಿಟ್ರೀವ್ ಮಾಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಡಿ ಗ್ಯಾಂಗ್ ಸದ್ಯ ಜೈಲಿನಲ್ಲಿದೆ. ಇದೇ ವೇಳೆ ಆರೋಪಿಗಳ ಮೊಬೈಲ್ ಡೇಟಾ ರಿಟ್ರೀವ್ ಮಾಡಲಾಗಿತ್ತು. ಆ ವೇಳೆ ನಾಲ್ಕು ಫೋಟೋಗಳು ಸಿಕ್ಕಿವೆ ಎನ್ನಲಾಗಿತ್ತು. ಆದರೆ ಇದು ಅದೇ ಫೋಟೋಗಳಾ ಎನ್ನುವುದು ಇನ್ನೂ ಗೊತ್ತಾಗಿಲ್ಲ.
ಆದರೆ ರೇಣುಕಾಸ್ವಾಮಿಗೆ ಥಳಿಸಿರುವ, ಹೊಡೆದು ಮಲಗಿಸಿರುವ ಫೋಟೋಗಳು ಸದ್ಯ ವೈರಲ್ ಆಗಿದ್ದು ನೆಟ್ಟಿಗರಲ್ಲಿ ಶಾಕ್ ಮೂಡಿಸಿದೆ. ದರ್ಶನ್ ಹಾಗೂ ತಂಡ ಹಲ್ಲೆ ಮಾಡಲಾಗಿದೆ ಎನ್ನಲಾಗಿರುವ ದೃಶ್ಯ ಇದಾಗಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ಚಾರ್ಜ್ಶೀಟ್ ಅನ್ನು ಸಲ್ಲಿಸಲಾಗಿದ್ದು ಈ ವೇಳೆ ಆರೋಪಿಗಳು ದಾಖಲಿಸಿದ್ದಂತಹ ಹೇಳಿಕೆಗಳು ಕೂಡಾ ಸದ್ಯ ವೈರಲ್ ಆಗಿದ್ದು ಈ ಕೇಸ್ ಕುರಿತ ಚಿಕ್ಕ ಚಿಕ್ಕ ಮಾಹಿತಿ ಕೂಡಾ ರಿವೀಲ್ ಆಗುತ್ತಿದೆ ಎನ್ನಲಾಗಿದೆ.
ರೇಣುಕಾಸ್ವಾಮಿಯನ್ನು ಪ್ಲಾನಿಂಗ್ ಮಾಡಿ ಕಿಡ್ನಾಪ್ ಮಾಡಲಾಗಿದೆ ಎಂದು ಹೇಳಲಾಗಿದೆ. ಪವಿತ್ರಾ ಗೌಡ ಅವರಿಗೆ ಕೆಟ್ಟದಾಗಿ ಮಸೇಜ್ ಮಾಡಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಹೇಳಲಾಗಿದ್ದು ಆ ನಂತರ ಪಟ್ಟಣಗೆರೆ ಶೆಡ್ನಲ್ಲಿ ಡಿಗ್ಯಾಂಗ್ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದೆ ಎನ್ನಲಾಗಿದೆ.
ಚಿತ್ರದುರ್ಗದಿಂದ ಜೂನ್8 ರಂದು ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಆರೋಪಿಗಳು ಕರೆತಂದಿದ್ದರು ಎನ್ನಲಾಗಿದೆ. ಜೂನ್ 8 ರಂದು ಬೆಳಿಗ್ಗೆ ಚಿತ್ರದುರ್ಗದಲ್ಲಿ ಸ್ವಿಚ್ ಆಫ್ ಆಗಿದ್ದ ರೇಣುಕಾಸ್ವಾಮಿ ಮೊಬೈಲ್, ಮಧ್ಯಾಹ್ನದ ವೇಳೆ ಆರ್ ಆರ್ ನಗರದಲ್ಲಿ ಸ್ವಿಚ್ ಆನ್ ಆಗಿತ್ತು. ಜೂನ್ 8 ರ ಸಂಜೆ ವೇಳೆ ಆರ್ ಆರ್ ನಗರದ ಪಟ್ಟಣಗೆರೆಯಲ್ಲಿ ಮತ್ತೆ ಸ್ವಿಚ್ ಆಫ್ ಆಗಿತ್ತು ಎಂದು ಹೇಳಲಾಗಿದೆ.
ಇಬ್ಬರು ಆರೋಪಿಗಳ ಮೊಬೈಲ್ನಲ್ಲಿ ನಾಲ್ಕು ಫೋಟೋಗಳು ಸಿಕ್ಕಿವೆ ಎಂದು ಹೇಳಲಾಗಿತ್ತು. ಈ ಫೋಟೋಗಳನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ ಎನ್ನಲಾಗಿತ್ತು. ಹಲ್ಲೆಯ ನಂತರ ರೇಣುಕಾಸ್ವಾಮಿಯನ್ನು ಮಲಗಿಸಿರುವ ಫೋಟೋ, ರಕ್ತದ ಮಡುವಿನಲ್ಲಿ ಸ್ವಾಮಿ ಮಲಗಿರುವ ಫೋಟೋ, ಹಲ್ಲೆ ಮಾಡುವಾಗ ಸ್ವಾಮಿ ಕೈ ಮುಗಿಯುತ್ತಿರುವ ಫೋಟೋ, ದರ್ಶನ್ ಮುಂದೆ ಕೈಮುಗಿದ ಫೋಟೋಗಳು ಇದ್ದವು ಎನ್ನಲಾಗಿದೆ. ಸದ್ಯ ಎರಡು ಫೋಟೋ ವೈರಲ್ ಆಗಿವೆ.
ಪೊಲೀಸರು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿದ್ದ ವರದಿಗಳು ಬಂದಿದ್ದು ಅವುಗಳನ್ನು ಚಾರ್ಜ್ಶೀಟ್ನಲ್ಲಿ ದಾಖಲಿಸಲಾಗಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಉಡುಪಿನಲ್ಲಿ ಮೃತ ರೇಣುಕಾಸ್ವಾಮಿ ರಕ್ತ ಇರುವುದು ಕನ್ಫರ್ಮ್ ಆಗಿದೆ ಎನ್ನಲಾಗಿತ್ತು. ಇಲ್ಲಿಗೆ ಈ ಕೇಸ್ನಲ್ಲಿ ನಟ ದರ್ಶನ್ ವಿರುದ್ಧವಾಗಿ ಒಂದು ಸ್ಟ್ರಾಂಗ್ ಸಾಕ್ಷಿ ಸಿಕ್ಕಿದಂತಾಗಿದೆ ಎಂದು ಹೇಳಲಾಗಿತ್ತು.
ಸದ್ಯ ಫೊಟೋ ವೈರಲ್ ಆಗುತ್ತಿದ್ದು ಇದು ದರ್ಶನ್ ಪಾಲಿಗೆ ಇನ್ನಷ್ಟು ಕಂಟಕವಾಗಲಿದೆ ಎಂದು ಹೇಳಲಾಗುತ್ತಿದೆ. ದರ್ಶನ್ ಸೇರಿದಂತೆ ಈ ಪ್ರಕರಣದಲ್ಲಿರುವ ಆರೋಪಿಗಳಿಗೆ ಇನ್ನಷ್ಟು ಸಂಕಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಫೋಟೋ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.
-
Uncategorized22 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized10 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು8 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized9 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ9 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ9 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ನಿಧನ ವಾರ್ತೆ8 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
Uncategorized10 hours agoYouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!


















