ಕಾರ್ಯಕ್ರಮಗಳು
Puttur-ಪುತ್ತೂರು : ಇತಿಹಾಸ ಪ್ರಸಿದ್ದ ಕಿಲ್ಲೆ ಮೈದಾನ ಗಣೇಶೋತ್ಸವಕ್ಕೆ ಡಿಜಿಟಲ್ ಟಚ್ : ಸೆ.7ರಂದು ವೆಬ್ ಸೈಟ್ ಲೋಕಾರ್ಪಣೆ
ಕಿಲ್ಲೆ ಮೈದಾನದ ಗಣೇಶೋತ್ಸವದ ಮಾಹಿತಿಯನ್ನು ನೀಡುವ ಸಲುವಾಗಿ ಆಡಳಿತ ಮಂಡಳಿಯು ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಲು ಉದ್ದೇಶಿಸಿದೆ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರು ಸೆ.7 ರಂದು ಮಧ್ಯಾಹ್ನ ಲೋಕಾರ್ಪಣಾ ಕಾರ್ಯಕ್ರಮ ನೆರವೇರಿಸಲಿದ್ದಾರೆ.
ಪುತ್ತೂರು : ದೇವತಾ ಸಮಿತಿ ಪುತ್ತೂರು ಇದರ ವತಿಯಿಂದ ಆಚರಿಸಲ್ಪಡುವ ಕಿಲ್ಲೆ ಮೈದಾನದ ಗಣೇಶೋತ್ಸವದ ಮಾಹಿತಿಯನ್ನು ನೀಡುವ ಸಲುವಾಗಿ ಆಡಳಿತ ಮಂಡಳಿಯು ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಲು ಉದ್ದೇಶಿಸಿದೆ.
ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರು ಸೆ.7 ರಂದು ಮಧ್ಯಾಹ್ನ ಲೋಕಾರ್ಪಣಾ ಕಾರ್ಯಕ್ರಮ ನೆರವೇರಿಸಲಿದ್ದಾರೆ.
ದೇವತಾ ಸಮಿತಿಯ ಅಧ್ಯಕ್ಷರಾದ ಅಭಿಜಿತ್ ಶೆಟ್ಟಿ ನೆಲ್ಲಿಕಟ್ಟೆ ಯವರು ಈ ವೆಬ್ಸೈಟ್ ನಲ್ಲಿ ಗಣೇಶೋತ್ಸವದ ಇತಿಹಾಸ, ಪೂಜಾ ಕಾರ್ಯಕ್ರಮಗಳು, ಲೇಖನಗಳು, ಸಂಸ್ಕೃತಿಕ ಕಾರ್ಯಕ್ರಮ, ಹಿಂದಿನ ಪೋಟೋಗಳ ಸಂಗ್ರಹಗಳ ಮಾಹಿತಿಗಳನ್ನು ಸಾರ್ವಜನಿಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್ಗಳನ್ನು ಒದಗಿಸಲಾಗಿದೆ.
ಮಂಗಳೂರು
Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.
ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
-
ನಿಧನ ವಾರ್ತೆ22 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
Uncategorized20 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ22 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್22 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು21 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ರಾಜಕೀಯ20 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ21 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು




















