ಅಂತರ ರಾಜ್ಯ
Resign-ತೂಕದ ಸಮಸ್ಯೆಯಿಂದ ಒಲಿಂಪಿಕ್ಸ್ ನ ರೋಚಕ ಕ್ಷಣದಲ್ಲಿ ಸೋತ ಫೋಗಟ್ ಮತ್ತು ಭಜರಂಗ್ ಕಾಂಗ್ರೇಸ್ ಸೇರ್ಪಡೆ : ರೈಲ್ವೆ ಹುದ್ದೆಗೆ ರಾಜೀನಾಮೆ
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆನ್ನಲ್ಲೇ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ರೈಲ್ವೆ ಹುದ್ದೆಗೆ ಇಂದು (ಶುಕ್ರವಾರ) ರಾಜೀನಾಮೆ ನೀಡಿದ್ದಾರೆ. ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಎಂದೆಂದಿಗೂ ಚಿರಋಣಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆನ್ನಲ್ಲೇ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ರೈಲ್ವೆ ಹುದ್ದೆಗೆ ಇಂದು (ಶುಕ್ರವಾರ) ರಾಜೀನಾಮೆ ನೀಡಿದ್ದಾರೆ.
ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಗುಳಿಯಲು ನಿರ್ಧರಿಸಿದ್ದು, ಅಧಿಕಾರಿಗಳಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಎಂದೆಂದಿಗೂ ಚಿರಋಣಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಪುನಿಯಾ ಮತ್ತು ವಿನೇಶ್ ಇಬ್ಬರೂ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ. ಆದರೆ, ಅವರಲ್ಲಿ ಒಬ್ಬರು ಸ್ಪರ್ಧಿಸುತ್ತಾರೆಯೇ ಅಥವಾ ಇಬ್ಬರೂ ಸ್ಪರ್ಧಿಸುತ್ತಾರೆಯೇ ಎಂಬುದು ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನಿಧನ ವಾರ್ತೆ
Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಅಂತರ ರಾಜ್ಯ
Dhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.
ಗುರುಗ್ರಾಮ, ಅ. 10: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಆಯೋಜಿಸಲು ಉದ್ದೇಶಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಧ್ರುವ್ ರಾಠಿ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.
ವರದಿಯ ಪ್ರಕಾರ, ಗುರುಗ್ರಾಮದ ಸೆಕ್ಟರ್ 56ರ ಸೆಂಟ್ರಲ್ ಪಾರ್ಕ್ ವಿಹಾರ್‌ನಲ್ಲಿರುವ ರಾಠಿ ಅವರ ಕುಟುಂಬದ ನಿವಾಸಕ್ಕೆ ಶುಕ್ರವಾರ ತಡರಾತ್ರಿಯಿಂದಲೇ ಸುಮಾರು 50 ಪೊಲೀಸ್ ಸಿಬ್ಬಂದಿ ಜಮಾಯಿಸಿದ್ದರು. ಶನಿವಾರ ಬೆಳಗ್ಗೆ 7.48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆದ ಬಳಿಕ ಪೊಲೀಸರು ಮನೆಯೊಳಗೆ ಪ್ರವೇಶಿಸಿ ರಾಠಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಅಧಿಕೃತವಾಗಿ ನೀಡಿರುವ ಹೇಳಿಕೆ ಅಥವಾ ವಶಕ್ಕೆ ಪಡೆಯಲು ಕಾರಣವೇನು ಎಂಬ ಕುರಿತು ಹೆಚ್ಚಿನ ಮಾಹಿತಿ ವರದಿಯಲ್ಲಿ ಲಭ್ಯವಾಗಿಲ್ಲ
-
ಮಂಗಳೂರು20 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಬಿಗ್ ನ್ಯೂಸ್18 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ18 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು19 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ23 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಅಪರಾಧ20 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸಿನೆಮಾ24 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್24 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















