Connect with us

ರಾಜಕೀಯ

Puttur-ಪುತ್ತೂರು: ಬಿಜೆಪಿಯ 6 ಮಹಾಶಕ್ತಿ ಕೇಂದ್ರಗಳ ಶಕ್ತಿಕೇಂದ್ರ ಪ್ರಮುಖರ ನೇಮಕ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ, ಉಪ್ಪಿನಂಗಡಿ, ಆರ್ಯಾಪು, ನರಿಮೊಗ್ರು, ನೆಟ್ಟಣಿಗೆ ಮುಡ್ನೂರು ಮತ್ತು ಪುಣಚ ಮಹಾಶಕ್ತಿ ಕೇಂದ್ರಗಳ ವ್ಯಾಪ್ತಿಯ ಶಕ್ತಿ ಕೇಂದ್ರಗಳ ಪ್ರಮುಖರ ಆಯ್ಕೆ ಮಾಡಲಾಗಿದೆ.

Ad Widget

Ad Widget alt="Ad Widget"/>

Ad Widget

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಾಧ್ಯಮ ಪ್ರಕೋಷ್ಟದ ಸಂಚಾಲಕರಾಗಿ ಮಹೇಶ್ ರೈ ಕೇರಿ ಹಾಗೂ ಸಹ ಸಂಚಾಲಕರಾಗಿ ಸುಶಾಂತ್ ಚಂದಳಿಕೆರನ್ನು ಆಯ್ಕೆ ಮಾಡಲಾಗಿದೆ.

Ad Widget

Ad Widget <> Ad Widget

ಪತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರು ಸೆ.6ರಂದು ಪದಾಧಿಕಾರಿಗಳ ಘೋಷಣೆ ಮಾಡಿದರು.

ವಿಟ್ಲ ಮಹಾಶಕ್ತಿ ಕೇಂದ್ರದ ಮಾಮೇಶ್ವರ ಶಕ್ತಿಕೇಂದ್ರಕ್ಕೆ ಲಕ್ಷ್ಮಣ್ ಮಾಡ, ರಥಬೀದಿ ಶಕ್ತಿಕೇಂದ್ರ ಕ್ಕೆ ಶಿಶಿರ ರವರನ್ನು ನೇಮಕ ಮಾಡಲಾಗಿದೆ.

Ad Widget

Ad Widget

ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಕೋಡಿಂಬಾಡಿಗೆ ದೀಪಕ್ ಮಣಿಯಾಣಿ, ಬೆಳ್ಳಿಪ್ಪಾಡಿಗೆ ಪ್ರವೀಣ್‌ಕೋಡಿ, 34 ನೆಕ್ಕಿಲಾಡಿಗೆ ರಾಜೇಶ್ ಮುಖಾರಿ, ಉಪ್ಪಿನಂಗಡಿಗೆ ಪ್ರಸಾದ್ ಭಂಡಾರಿ, ಬಜತ್ತೂರಿಗೆ ಆನಂದ್ ಮೇಲೂರು, ಹೀರೆಬಂಡಾಡಿಗೆ ನಿತಿನ್ ಗೌಡ ನೇಮಕಗೊಂಡಿದ್ದಾರೆ.

ಆರ್ಯಾಪು ಮಹಾಶಕ್ತಿ ಕೇಂದ್ರದ ಕಬಕಕ್ಕೆ ಧನ್‌ರಾಜ್ ಭಟ್, ಕೊಡಿಪ್ಪಾಡಿಗೆ ಸೂರಜ್ ಗೌಡ, ಬನ್ನೂರಿಗೆ ನವೀನ್ ಪಡೂರು, ಚಿಕ್ಕಮುಡ್ನೂರಿಗೆ ಕಾರ್ತಿಕ್ ಅಂದ್ರಟ್ಟ, ಬಲ್ನಾಡಿಗೆ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಆರ್ಯಾಪುವಿಗೆ ಪ್ರಜ್ವಲ್ ಘಾಟಿ, ಬೆಟ್ಟಂಪಾಡಿಗೆ ಸುದೀಪ್ ರೈ, ಇರ್ದೆಗೆ ಪುರಂದರ ನಾಯ್ಕ, ಪಾಣಾಜೆಗೆ ಪ್ರೇಮ್ ರಾಜ್ ಆರ್ಲಪದವು ನೇಮಕಗೊಂಡಿದ್ದಾರೆ.

ನರಿಮೊಗರು ಮಹಾಶಕ್ತಿಕೇಂದ್ರದ ನರಿಮೊಗರಿಗೆ ಲಕ್ಷ್ಮೀಪ್ರಸಾದ್ ಗೌಡ, ಶಾಂತಿಗೋಡುವಿಗೆ ವಿಶ್ವನಾಥ್ ಬಲ್ಯಾಯ, ಸರ್ವೆಗೆ ಗೌತಮ್ ರೈ, ಮುಂಡೂರಿಗೆ ಅನಿಲ್ ಕಣ್ಣರ್ನೊಡಿ, ಕೆಮ್ಮಿಂಜೆಗೆ ಶಂಕರ್ ನಾರಾಯಣ ಭಟ್, ಕೆದಂಬಾಡಿಗೆ ಶರತ್ ಗೌಡ, ಕೆಯ್ಯೂರಿಗೆ ಶರತ್ ಕುಮಾರ್ ರೈ, ಕೊಳ್ತಿಗೆಗೆ ಸತ್ಯಪ್ರಕಾಶ್ ಗೌಡರನ್ನು ನೇಮಕ ಮಾಡಲಾಗಿದೆ.

ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಒಳಮೊಗ್ರುವಿಗೆ ಮಾಧವ ರೈ ಕುಂಬ್ರ, ನಿಡಳ್ಳಿಗೆ ಸಂತೋಷ್ ಕುಮಾರ್ ಬಿ., ಅರಿಯಡ್ಕಕ್ಕೆ ರಾಜೇಶ್ ಮಯೂರ, ಮಾಡೂರಿಗೆ ನಾರಾಯಣ ಆಚಾರ್ಯ, ಬಡಗನ್ನೂರಿಗೆ ಲಿಂಗಪ್ಪ ಗೌಡ, ಪಡುವನ್ನೂರಿಗೆ ಉದಯ್ ಗೌಡ, ನೆಟ್ಟಣಿಗೆ ಮುಡ್ನರಿಗೆ ಪ್ರಜ್ವಲ್ ಗೌಡ ಮತ್ತು ಪೂರ್ಣಚಂದ್ರ ರೈ ನೇಮಕಗೊಂಡಿದ್ದಾರೆ.

ಪುಣಚ ಮಹಾಶಕ್ತಿ ಕೇಂದ್ರದ ಕೇಪುವಿಗೆ ರಾಜೇಶ್ ಕರವೀರ, ಪುಣಚಕ್ಕೆ ಹರೀಶ್ ಎಮ್ ಪುಣಚ ಮತ್ತು ವಸಂತ ನಾಯಕ್, ಪೆರುವಾಯಿಗೆ ಬಾಲಕೃಷ್ಣ ಪೂಜಾರಿ, ಅಳಿಕೆಗೆ ಸದಾಶಿವ ಅಳಿಕೆ, ವಿಟ್ಟಪುತ್ತೂರಿಗೆ ಯಶೋಧರ ಪಟ್ಟ, ಇಡ್ಕಿದುಗೆ ನಾಗೇಶ್, ಕುಳಕ್ಕೆ ಪ್ರಶಾಂತ್ ಶೆಟ್ಟಿಬರೆ, ಕೆದಿಲಕ್ಕೆ ಚಂದ್ರಶೇಖರ್, ಪೆರ್ನೆಗೆ ಗಂಗಾಧರ ರೈ, ಬಿಳಿಯೂರು ರಮೇಶ್ ತೋಟ ಅವರನ್ನು ಶಕ್ತಿ ಕೇಂದ್ರದ ಪ್ರಮುಖರನ್ನಾಗಿ ನೇಮಕ ಮಾಡಲಾಗಿದೆ.

Ad Widget
Click to comment

Leave a Reply

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ರಾಜಕೀಯ

Rural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕ್ಷೇತ್ರವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Ad Widget

Ad Widget alt="Ad Widget"/>

Ad Widget

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಪ್ರಕ್ರಿಯೆಗೆ ಇದರಿಂದ ಮತ್ತಷ್ಟು ವೇಗ ಸಿಕ್ಕಿದೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಸರ್ಕಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ 2,900ಕ್ಕೂ ಅಧಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಇತ್ಯರ್ಥಪಡಿಸಿದ ಬಳಿಕ ಇದೀಗ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಮುಂದಿನ ಹಂತದಲ್ಲಿ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಬಳಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಅಗತ್ಯವಾದ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಡಿಸೆಂಬರ್ ಮಧ್ಯಭಾಗದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ. 2027ರ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಇನ್ನೊಂದೆಡೆ, ಈ ಬಾರಿಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ರಾಜ್ಯ ಸಚಿವ ಸಂಪುಟ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮುಂಬರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತಪತ್ರಗಳ ಮೂಲಕ ನಡೆಯುವ ಸಾಧ್ಯತೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!