ಅಂತರ ರಾಜ್ಯ
Anant Ambani-ಗಣಪತಿಗೆ ಭರ್ಜರಿ ಗಿಫ್ಟ್ ನೀಡಿದ ಅನಂತ್ ಅಂಬಾನಿ;! 20 ಕೋಟಿಯ ಬಂಗಾರದ ಕಿರೀಟದ ಜೊತೆಗೆ ಅಂಬಾನಿ ಖರ್ಚು ಮಾಡಿದ್ದು ಎಷ್ಟು ಕೋಟಿ ಗೊತ್ತಾ?
ಗಣೇಶನ ಉತ್ಸವಕ್ಕೆ ಮುಂಬೈ ಭಾರೀ ಫೇಮಸ್. ಅದರಲ್ಲಿ ಮುಂಬೈನಲ್ಲಿ ತುಂಬಾ ಪಾಪುಲರ್ ಗಣೇಶ ಉತ್ಸವ ಎಂದರೆ ಲಾಲ್‌ಬಾಗ್ಚಾ ರಾಜಾ ಗಣಪತಿ. ಮೊದಲಿನಿಂದಲೂ ಅಂಬಾನಿ ಫ್ಯಾಮಿಲಿ ಕೂಡ ಇದೇ ಗಣೇಶನ ಉತ್ಸವದಲ್ಲಿ ಭಾಗಿಯಾಗುತ್ತಿದೆ. ಚತುರ್ಥಿ ಪ್ರಯುಕ್ತ ಜಗತ್ತಿನ ಶ್ರೀಮಂತ ವ್ಯಕ್ತಿ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಬರೋಬ್ಬರಿ 20 ಕೆ.ಜಿ ತೂಕದ ಬಂಗಾರದ ಕಿರೀಟವನ್ನು ಗಣಪತಿಗೆ ನೀಡಿದ್ದು, ಈ ಸುದ್ದಿ ಕಾಡ್ಗಿಚ್ಚಿನಂತೆ ದೇಶದಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಬಗೆಗಿನ ಡೀಟಿಯಲ್ಸ್ ಇಲ್ಲಿದೆ ನೋಡಿ.
ನಿಖರ ನ್ಯೂಸ್ :- ದೇಶದಾದ್ಯಂತ ಗಣೇಶ ಹಬ್ಬ ಕಳೆಗಟ್ಟಿದೆ. ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ ಈ ದಿನ ಭಕ್ತರೆಲ್ಲ ಸಂಭ್ರಮದಿಂದ ಹಬ್ಬ ಆಚರಿಸುತ್ತಾರೆ. ಕಲ್ಲು, ಮಣ್ಣು ಹಾಗೆಯೇ ಬೆಳ್ಳಿಯ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೋದಕ, ಕಡುಬು, ಸಿಹಿ ತಿಂಡಿಗಳನ್ನ ಮಾಡಿ ನೈವೇದ್ಯ ಮಾಡಿ ಪೂಜೆ, ಪುನಸ್ಕಾರ ನೆರವೇರಿಸುತ್ತಾರೆ. ಈ ನಡುವೆ ಚತುರ್ಥಿ ಪ್ರಯುಕ್ತ ಜಗತ್ತಿನ ಶ್ರೀಮಂತ ವ್ಯಕ್ತಿ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಬರೋಬ್ಬರಿ 20 ಕೆ.ಜಿ ತೂಕದ ಬಂಗಾರದ ಕಿರೀಟವನ್ನು ಗಣಪತಿಗೆ ನೀಡಿದ್ದು, ಈ ಸುದ್ದಿ ಕಾಡ್ಗಿಚ್ಚಿನಂತೆ ದೇಶದಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಬಗೆಗಿನ ಡೀಟಿಯಲ್ಸ್ ಇಲ್ಲಿದೆ ನೋಡಿ.
ಮುಂಬೈ ಗಣಪತಿಗೆ ಅಂಬಾನಿ ಗಿಪ್ಟ್!
ಗಣೇಶನ ಉತ್ಸವಕ್ಕೆ ಮುಂಬೈ ಭಾರೀ ಫೇಮಸ್. ಅದರಲ್ಲಿ ಮುಂಬೈನಲ್ಲಿ ತುಂಬಾ ಪಾಪುಲರ್ ಗಣೇಶ ಉತ್ಸವ ಎಂದರೆ ಲಾಲ್‌ಬಾಗ್ಚಾ ರಾಜಾ ಗಣಪತಿ. 10 ದಿನಗಳ ಕಾಲ ಇಲ್ಲಿ ಗಣಪತಿ ಉತ್ಸವವನ್ನು ಭರ್ಜರಿಯಾಗಿ ನಡೆಸಲಾಗುತ್ತದೆ. ಇಡೀ ಮುಂಬೈ ನಗರದ ಜನರೇ ಇಲ್ಲಿ ಸೇರಿರುತ್ತಾರೆ. ಇಲ್ಲಿಗೆ ದಿನನಿತ್ಯ ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಸಾಕಷ್ಟು ಗಣ್ಯರು ಬಂದು ಗಣೇಶ ದರ್ಶನ ಮಾಡುತ್ತಾರೆ. ಅಂತೆಯೇ ಮೊದಲಿನಿಂದಲೂ ಅಂಬಾನಿ ಫ್ಯಾಮಿಲಿ ಕೂಡ ಇದೇ ಗಣೇಶನ ಉತ್ಸವದಲ್ಲಿ ಭಾಗಿಯಾಗುತ್ತಿದೆ. ಈ ಸಲ ನವ ಜೋಡಿ, ಇತ್ತೀಚೆಗಷ್ಟೇ ಮದುವೆಯಾದ ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್ ಮುಂಬೈ ಗಣಪತಿಗೆ ಕೋಟಿ ಬೆಲೆಯ ಭರ್ಜರಿ ಗಿಫ್ಟ್ ನೀಡಿದ್ದಾರೆ.

20 ಕೆ.ಜಿ ತೂಕದ ಬಂಗಾರದ ಕಿರೀಟ
ಅಂಬಾನಿ ಕುಟುಂಬ ಪ್ರತೀ ವರ್ಷದಂತೆ ಈ ಬಾರಿಯೂ ಲಾಲ್‌ಬಾಗ್ಚಾ ರಾಜಾ ಗಣಪತಿ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ನವ ಜೋಡಿಗಳಾದ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಈ ಬಾರಿ ವಿಶೇಷವಾಗು ಉತ್ಸವದಲ್ಲಿ ಪಾಲು ಪಡೆದಿದ್ದು, ಒಂದಲ್ಲ ಎರಡಲ್ಲ ಬರೋಬ್ಬರಿ 20 ಕೆ.ಜಿ ತೂಕದ ಬಂಗಾರದ ಕಿರೀಟವನ್ನು ದಾನವಾಗಿ ನೀಡಿದ್ದಾರೆ. ಈ ವಿಚಾರ ದೇಶದಾದ್ಯಂತ ಸಾಕಷ್ಟು ಸಂಚಲ ಸೃಷ್ಟಿಸುತ್ತಿದೆ.
ಗಣೇಶ ಸಮಿತಿ ಅಧ್ಯಕ್ಷ ಹೇಳಿದ್ದಿಷ್ಟು!
ಲಾಲ್‌ಬಾಗ್ಚಾ ರಾಜಾ ಗಣಪತಿಗೆ ಈಗಾಗಲೇ ಅಂಬಾನಿ ಪುತ್ರ ನೀಡಿದ ಐಶಾರಾಮಿ ಬಂಗಾರದ ಕಿರೀಟ ತೊಡಿಸಿದ್ದು ಇದು ಸಾಕಷ್ಟು ಗಮನ ಸೆಳೆಯಿತ್ತಿದೆ. ಈ ಬಗ್ಗೆ ಗಣೇಶ ಸಮಿತಿ ಅಧ್ಯಕ್ಷ ಮಾತನಾಡಿದ್ದು, ‘ಅಂಬಾನಿ ಕುಟುಂಬ ಬಹಳ ವರ್ಷದಿಂದ ಈ ಗಣಪತಿ ಮಂಡಲದೊಂದಿಗೆ ಸಂಬಂಧ ಹೊಂದಿದೆ. ಈ ಬಾರಿ 20 ಕೆ.ಜಿ ಬಂಗಾರದ ಕಿರೀಟ ದಾನ ಮಾಡಿದ್ದಾರೆ. ಅದನ್ನು ಗಣಪತಿಗೆ ತೊಡಿಸಲಾಗಿದೆ. ಇದು ಅಂಬಾನಿ ಕುಟುಂಬದ ದೊಡ್ಡ ತನಕ್ಕೆ ಸಾಕ್ಷಿ’ ಎಂದಿದ್ದಾರೆ
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
ಅಂತರ ರಾಜ್ಯ
Sreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
ತ್ರಿಶೂರ್: ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ಶ್ರೀಜಿತ್ ರವಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತ್ರಿಶೂರ್ ನ್ಯಾಯಾಲಯ ತೀರ್ಪು ನೀಡಿದೆ.
2022ರಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್‌ನ ಫಾಸ್ಟ್‌ಟ್ರ್ಯಾಕ್ ವಿಶೇಷ ನ್ಯಾಯಾಲಯ-11ರ ನ್ಯಾಯಾಧೀಶೆ ರಮ್ಯಾ ಮೆನನ್ ಅವರು, ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಹಾಗೂ ಭಾರತೀಯ ದಂಡ ಸಂಹಿತೆ (IPC) 1860ರ ಸೆಕ್ಷನ್ 509ರ ಅಡಿಯಲ್ಲಿ ಶ್ರೀಜಿತ್ ರವಿ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
2022ರ ಜುಲೈ 4ರಂದು ಇಬ್ಬರು ಅಪ್ರಾಪ್ತ ಬಾಲಕಿಯರು ಶಾಲೆಯಿಂದ ತ್ರಿಶೂರ್‌ನ ಅರನಟ್ಟುಕರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಶ್ರೀಜಿತ್ ರವಿ ಕಾರಿನಲ್ಲಿ ಬಾಲಕಿಯರನ್ನು ಹಿಂಬಾಲಿಸಿ, ಅಪಾರ್ಟ್‌ಮೆಂಟ್‌ನ ಕಾರು ನಿಲುಗಡೆ ಪ್ರದೇಶದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು.
ವಿಚಾರಣೆ ವೇಳೆ ಬಾಲಕಿಯರು ನ್ಯಾಯಾಲಯದಲ್ಲಿ ಶ್ರೀಜಿತ್ ರವಿಯನ್ನು ಗುರುತಿಸಿದ್ದರು. ಆದರೆ, ಚಲನಚಿತ್ರ ನಟನಾಗಿದ್ದರೂ ಬಾಲಕಿಯರು ಆತನ ಹೆಸರನ್ನು ಗುರುತಿಸಲು ವಿಫಲರಾಗಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಟನ ಪರ ವಕೀಲರು ಗುರುತಿಸುವಿಕೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.
ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಬಾಲಕಿಯರು ಆರೋಪಿಯನ್ನು ಗುರುತಿಸಿದ್ದು, ಅವರ ದೈಹಿಕ ಚಹರೆಯ ಬಗ್ಗೆಯೂ ಸ್ಪಷ್ಟವಾಗಿ ವಿವರಿಸಿದ್ದಾರೆ ಎಂದು ತಿಳಿಸಿದೆ.
ಪೊಲೀಸ್ ತನಿಖೆಯಲ್ಲಿನ ಕೆಲವು ಲೋಪಗಳ ಬಗ್ಗೆಯೂ ನ್ಯಾಯಾಲಯ ಗಮನ ಸೆಳೆದಿದೆ. ವಿಶೇಷವಾಗಿ, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸದಿರುವುದನ್ನು ಉಲ್ಲೇಖಿಸಿದೆ. ಆದರೆ, ತನಿಖೆಯಲ್ಲಿನ ಇಂತಹ ಲೋಪಗಳು ಬಾಲಕಿಯರು ನೀಡಿದ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಕುಗ್ಗಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
-
Uncategorized14 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ಬಿಗ್ ನ್ಯೂಸ್23 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ23 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ನಿಧನ ವಾರ್ತೆ20 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ19 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಅಂತರ ರಾಜ್ಯ23 hours agoTrisha-ವಿಜಯ್ ಸಿಎಂ ಬೆನ್ನಲ್ಲೇ ತ್ರಿಷಾ ರಾಜಕೀಯ ಎಂಟ್ರಿಗೆ ಸಿದ್ಧತೆ? ‘ಜಯಲಲಿತಾ ಉತ್ತರಾಧಿಕಾರಿ’ ಎಂದ ಅಭಿಮಾನಿಗಳು..!
-
ರಾಜಕೀಯ19 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ19 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು















