Uncategorized
I Stand with puttila ಅಭಿಯಾನ ಆರಂಭಿಸಿದ ಪುತ್ತಿಲ ಪರಿವಾರದ ಮಾಜಿ ಮುಖಂಡ ಶಿವಾನಂದ ವಿಟ್ಲ – ಬಿಜೆಪಿ ಹಾಗೂ ಪುತ್ತಿಲ ಪರಿವಾರದ ಮುಖಂಡರ ಮೌನವನ್ನು ತರಾಟೆಗೆತ್ತಿದ ನ್ಯಾಯವಾದಿ

ಅರುಣ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ ಮೊದಲ ಬಾರಿಗೆ ಅವರ ಪರವಾಗಿ ಪುತ್ತಿಲ ಪರಿವಾರದ ಮಾಜಿ ಮುಖಂಡರೊಬ್ಬರು ಸಾರ್ವಜನಿಕವಾಗಿ ಧ್ವನಿ ಎತ್ತಿದ್ದಾರೆ.
ನ್ಯಾಯವಾದಿಯಾಗಿರುವ ವಿಟ್ಲದ ಶಿವಾನಂದರವರು ಸಾಮಾಜಿಕ ಜಾಲತಾಣದಲ್ಲಿ I stand with puttila ಎನ್ನುವ ಪೋಸ್ಟ್ ಹಾಕಿದ್ದು ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪುತ್ತಿಲ ಪರ ಜನಾಭಿಪ್ರಾಯ ರೂಪಿಸುವ ಅಭಿಯಾನಯೊಂದಕ್ಕೆ ಚಾಲನೆ ನೀಡಿದ್ದಾರೆ.
ಪುತ್ತಿಲರ ಸಂಕಷ್ಟದ ಸಮಯದಲ್ಲಿ ಅವರ ಪರವಾಗಿ, ಯಾರೂ ಯಾಕೇ ಧ್ವನಿ ಎತ್ತುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. “ಇವತ್ತು ಪುತ್ತಿಲರ ಪರವಾಗಿ ಮಾತಾಡುವ ಯಾವ ಬಿಜೆಪಿ ನಾಯಕನು ಇಲ್ಲ ಯಾಕೆ ? ಬಿಜೆಪಿ ರಾಜ್ಯಾದ್ಯಕ್ಷನಿಗೆ ಪುತ್ತಿಲರ ಮೇಲೆ ನಂಬಿಕೆ ಇಲ್ಲವೇ ಅಥವಾ ಶಾಸಕ, ಸಂಸದರಿಗೆ, ಬಿಜೆಪಿ ಜಿಲ್ಲಾದ್ಯಕ್ಷರಿಗೆ ಮೊನ್ನೆ ಚುನಾವಣೆಗೆ ಪುತ್ತಿಲ ದುಡಿದ ವಿಚಾರ ಮರೆತು ಹೊಯಿತೆ? ಹಿಂದೆ ಪುತ್ತಿಲ ಪರಿವಾರದಲ್ಲಿ ಇದ್ದು ಈಗ ಬಿಜೆಪಿಯಲ್ಲಿ ಜವಾಬ್ದಾರಿ ತೆಗೆದುಕೊಂಡ ಈಗಿನ ಹಾಲಿ ನಾಯಕರಿಗೆ ನಮ್ಮ ಪುತ್ತಿಲ ನ ಬಗ್ಗೆ ಒಂದು ಪ್ರೆಸ್ ಮೀಟ್ ಕೊಡಲು ಗುಂಡಿಗೆ ಇಲ್ಲವೇ ? ಎಂದು ಅವರು ಕಟಕಿಯಾಡಿದ್ದಾರೆ.
ಪುತ್ತೂರಿನ ಪ್ರಭಾವಿ ರಾಜಕಾರಣಿ, ಹಿಂದೂತ್ವ ಕಾರ್ಯಕರ್ತರ ಮುಂಚೂಣಿ ನಾಯಕ ಅರುಣ್ ಪುತ್ತಿಲರ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ ಅವರ ಸಾಮಜಿಕ ಜಾಲತಾಣಗಳಲ್ಲಿ ಕಸರೆರಚಾಟ ನಡೆಯುತ್ತಿದ್ದರೂ ಅವರ ಬೆಂಬಲಿಗರು ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು . ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭ 63 ಸಾವಿರ ಮತಗಳನ್ನು ಪಡೆಯುವ ಮೂಲಕ ರಾಜ್ಯದ ಗಮನ ಸೆಳೆದಿದ್ದ ಪುತ್ತಿಲರ ಮೇಲೆ ಆರೋಪಗಳು ಬಂದಾಗ ಅವರ ಪರ ಯಾರೂ ಧ್ವನಿ ಎತ್ತದಿರುವುದು ಅದರಲ್ಲೂ ಅವರೇ ಸ್ಥಾಪಿಸಿದ ಪುತ್ತಿಲ ಪರಿವಾರ ಧ್ವನಿ ಎತ್ತದಿರುವುದು ಪುತ್ತಿಲರ ಬೆಂಬಲಿಗರಲ್ಲಿ ಹಾಗೂ ಅಭಿಮಾನಿಗಳಲ್ಲಿ ಆಕ್ರೋಶ ಮಡುಗಟ್ಟುವಂತೆ ಮಾಡಿತ್ತು.
ಏತನ್ಮಧ್ಯೆ ಪುತ್ತಿಲರ ಪರವಾಗಿ ಯಾರೋ ಬ್ಯಾಟ್ ಬೀಸದಿದ್ದ ಸಮಯದಲ್ಲಿ ಶಿವಾನಂದರು ಅವರನ್ನು ಸಮರ್ಥಿಸಿ ಪೋಸ್ಟ್ ಹಾಕಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾನಂದರವರು ವಿಟ್ಲ ಭಾಗದಲ್ಲಿ ಪುತ್ತಿಲರ ಪರವಾಗಿ ವ್ಯಾಪಕ ಪ್ರಚಾರ ನಡೆಸಿದ್ದರು. ಹಲವು ವೇದಿಕೆಯಲ್ಲಿ ಭಾಷಣವನ್ನು ಮಾಡಿದ್ದರು. ಕಳೆದ ಡಿಸೆಂಬರ್ ಜನವರಿ ತಿಂಗಳಿನ ಬಳಿಕ ಅವರು ಪುತ್ತಿಲ ಪರಿವಾರದಿಂದ ಅಂತರ ಕಾಯ್ದುಕೊಂಡಿದ್ದರು . ಆದರೇ ಇದೀಗ ತಮ್ಮ ನಾಯಕ ಸಂಕಷ್ಟಕ್ಕೆ ಬಿದ್ದಾಗ ಮತ್ತೆ ನಾಯಕನ ಪರ ಬ್ಯಾಟ್ ಬೀಸಿದ್ದಾರೆ.
ಶಿವಾನಂದರ ಪೋಸ್ಟ್ ಯಥಾವತ್ ಇಲ್ಲಿದೆ :-
” I STAND WITH PUTTHILA, ಯಾಕಂದ್ರೆ ಅರುಣ್ ಪುತ್ತಿಲ ಮೇಲೆ ಯಾರೋ ಒಂದು ಹೆಣ್ಣು ಹೆಂಗ್ಸು ಮಾಡಿದ ಅತ್ಯಾಚಾರದಂತ ಸುಳ್ಳು ಆರೋಪಕ್ಕೆ ನನ್ನ ವಿರೋಧವಿದೆ. ಒಬ್ಬ ನಾಯಕನನ್ನು ಯಾವ ರೀತಿ ಸೋಲಿಸಲು ದಾರಿ ಹುಡುಕಬಹುದು ಎಂಬುದಕ್ಕೆ ಪ್ರತ್ಯಕ್ಷ ಉದಾಹರಣೆ ನಮ್ಮ ಪುತ್ತಿಲ. ಚುನಾವಣೆ ಸಮಯದಲ್ಲಿ ಪುತ್ತಿಲ ಎಂಬ ಹಿಂದೂ ಸಾಮ್ರಾಟನ ಕುದುರೆಯನ್ನು ಕಟ್ಟಿ ಹಾಕುವ ಇನ್ನೊಬ್ಬ ನಾಯಕ ಬಿಜೆಪಿ ಯಲ್ಲಿ ಯಾರೂ ಇರಲಿಲ್ಲ. ಕೊನೆಗೆ ಸ್ವತಃ ಯೋಗಿ ಆದಿತ್ಯನಾಥರೆ ಇದು ಧರ್ಮ ಯುದ್ದದ ಕುದುರೆ ಅಂತ ತಿಳಿದು ಪುತ್ತೂರಿಗೆ ಬಂದು ಸುಮ್ಮನಾದರು. ಆದರೆ ಒಬ್ಬ ಸಂಘಟನೆ ನಾಯಕನಿಗೆ ಡಬ್ಬಿ ಕಳ್ಳ ಹಣ ಮಾಡಿದ , ಕೊಲೆ ಆರೋಪಿ ಎಂಬ ಪಟ್ಟ ಕೊಟ್ಟರೂ ಪುತ್ತಿಲ ಪಡೆದ ಮತ ಬರೋಬ್ಬರಿ 63000 . ಚುನಾವಣೆ ನಂತರ ಪುತ್ತಿಲ ಮಾಡಿದ ಒಂದು ಸಣ್ಣ ತಪ್ಪು ಪುತ್ತಿಲ ಪರಿವಾರ ಎಂಬ ಸಂಘಟನೆ ನನ್ನ ವಿರೋದ ಇರಲಿಲ್ಲ ಆದರೆ ಎಲ್ಲಿಯ ತನಕ ಈ ಪರಿವಾರ ಎಂಬ ಸಣ್ಣ ಪ್ರಶ್ನೆ. ಇಲ್ಲಿ ಪುತ್ತಿಲರು ಒಂದು ವ್ಯಕ್ತಿ ಸೂಚಕ ಪದ ಬಿಟ್ಟು ಪಕ್ಷ ಅಥವ ಧರ್ಮ ಸೂಚಕ ಹೆಸರಿನ ಹೆಸರು ಇಟ್ಟು ಅದೇ ಸಂಘಟನೆಯಿಂದ ಹಿಂದೂ ಸಮಾಜದ ಸೇವೆ ಮಾಡಿಕೊಂಡು ಬರಬಹುದಿತ್ತು . ಇಲ್ಲಿ ಕೆಲವೇ ಕೆಲ ಜನರ ಅಭಿಪ್ರಾಯಕ್ಕೆ ಕಟಿ ಬಿದ್ದು ಈ ಪರಿವಾರ ಅಸ್ತಿತ್ವಕ್ಕೆ ಬಂತು ತಪ್ಪಲ್ಲ ಬಿಡಿ.
ಆದರೆ ಇದೇ ಪರಿವಾರವನ್ನು ಮುಂದುವರಿಸಿಕೊಂಡು ಹೋಗಿರುತ್ತಿದ್ದರೆ ಇಂದು ಪುತ್ತಿಲರಿಗೆ ಯಾವುದೇ ತೊಂದರೆ ಬರುತ್ತಿರಲಿಲ್ಲ. ಎಲ್ಲಿ ತಜ್ಞರ ಅಭಿಪ್ರಾಯ ಕೇಳದೆ ನಾವು ಬಿಜೆಪಿಯ ವ್ಯವಸ್ಥೆಯ ಒಳಗೆ ಸೇರಿಕೊಳ್ಳುವ ಎಂದು ಹೇಳಿದಾಗ ಶೇಕಡಾ 80 ರ ಪಾಲು ಕಾರ್ಯಕರ್ತರು ವಿರೋದ ಮಾಡಿದವರೆ ಆದರೆ ಎಲ್ಲಿ ಕೆಲವೊಂದು ಬೆರಳೆಣಿಕೆಯಷ್ಟು ಜನ ಪುತ್ತಿಲ ಪರಿವಾರದಲ್ಲಿ ಜವಾಭ್ದಾರಿ ತೆಗೆದುಕೊಂಡ ಪಾ***ಗಳ ಅಭಿಪ್ರಾಯದಿಂದ ಪುತ್ತಿಲರಿಗೆ ಈ ಒಂದು ಆಪಾದನೆ ಬರಲು ಕಾರಣ ಎಂಬ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು.
ಕರ್ನಾಟಕದ ಬಿಜೆಪಿಯಲ್ಲಿ ಎಷ್ಟೊಂದು ಜಾತಿ ರಾಜಕಾರಣ ತುಂಬಿಕೊಂಡಿದೆ ಎಂದರೆ ಈ ದಿನ ಪುತ್ತಿಲರಿಗೆ ಆದ ಅನ್ಯಾಯವೇ ಸಾಕ್ಷಿ. ಇವತ್ತು ಪುತ್ತಿಲರ ಪರವಾಗಿ ಮಾತಾಡುವ ಯಾವ ಬಿಜೆಪಿ ನಾಯಕನು ಇಲ್ಲ ಯಾಕೆ ? ಬಿಜೆಪಿ ರಾಜ್ಯಾದ್ಯಕ್ಷನಿಗೆ ಪುತ್ತಿಲರ ಮೇಲೆ ನಂಬಿಕೆ ಇಲ್ಲವೇ ಅಥವ ಶಾಸಕ ಸಂಸದರಿಗೆ ಬಿಜೆಪಿ ಜಿಲ್ಲಾದ್ಯಕ್ಷರಿಗೆ ಮೊನ್ನೆ ಚುನಾವಣೆಗೆ ಪುತ್ತಿಲ ದುಡಿದ ವಿಚಾರ ಮರೆತು ಹೊಯಿತೆ? ಹಿಂದೆ ಪುತ್ತಿಲ ಪರಿವಾರದಲ್ಲಿ ಇದ್ದು ಈಗ ಬಿಜೆಪಿ ಯಲ್ಲಿ ಜವಾಬ್ದಾರಿ ತೆಗೆದುಕೊಂಡ ಈಗಿನ ಹಾಲಿ ನಾಯಕರಿಗೆ ನಮ್ಮ ಪುತ್ತಿಲ ನ ಬಗ್ಗೆ ಒಂದು ಪ್ರೆಸ್ ಮೀಟ್ ಕೊಡಲು ಗುಂಡಿಗೆ ಇಲ್ಲವೇ?
ನಾನು ಹೇಳುತ್ತೇನೆ ಪುತ್ತಿಲ ಒಬ್ಬ ಅಮಾಯಕ ಅಂತ. ನೀವು ಏನೇ ಅಪವಾದ ಇವನ ಮೇಲೆ ಹಾಕಿದರು ಕಾರ್ಯಕರ್ತರು ಇವನ ಬೆನ್ನ ಹಿಂದೆ ಇದ್ದಾರೆ ನೆನಪಿಡಿ ನಾಯಕರೆ. ಮುಂದಿನ ಚುನಾವಣೆಯಲ್ಲಿ ಇದೇ ಪುತ್ತಿಲನನ್ನು ಪಕ್ಷೇತರ ಸ್ಪರ್ದೆ ಮಾಡಿಸಿ ಗೆಲ್ಲಿಸುತ್ತೇವೆ . ಪುತ್ತಿಲ ಪರಿವಾರದ ಅದ್ಯಕ್ಷ ಕಾರ್ಯದರ್ಶಿಗಳು ನಾಳೆ ಪ್ರೆಸ್ ಮೀಟ್ ಕರಿಸಿ ಪುತ್ತಿಲರ ಪರ ಧೈರ್ಯದಲ್ಲಿ ಮಾತಾಡಿ ಇಲ್ಲದಿದ್ದರೆ ನಿಮ್ಮಲ್ಲಿ ಇರೋದು ಬಕೆಟ್ ಹಿಡಿಯುವವರು ಎಂದು ಅಂದುಕೊಳ್ಳುವೆ .ನಾಯಕರೆ ನೀವು ಒಬ್ಬ ಸೂಚಿಸಿದ ತಕ್ಷಣ ನಾಯಕ ಆಗಬಹುದು ಆದರೆ ನಿಮ್ಮನ್ನು ನಾಯಕ ಎಂದು ಒಪ್ಪಲು ನನ್ನಂತಹ ಅಸಂಖ್ಯಾತ ಕಾರ್ಯಕರ್ತರು ಸೂಚಿಸಬೇಕು ನೆನಪಿಡಿ. ಪುತ್ತಿಲರ ರಾಜಕೀಯ ಜೀವನದಲ್ಲಿ ಈ ರೀತಿ ಆಟ ಆಡಿ ಒಮ್ಮೆಗೆ ನೀವು ಗೆದ್ದಿರಬಹುದು ನಾಳೆ ಸಮಯ ನಮ್ಮದೆ . ಕಾದು ನೋಡಿ ಇನ್ನೊಮ್ಮೆ ಹಿಂದು ಸಮಾಜ ಪುತ್ತಿಲನನ್ನು ಗುರುತಿಸುತ್ತೆ. ಜೈ ಶ್ರೀ ರಾಮ್” ಎಂದು ಶಿವಾನಂದರವರು ಬರೆದುಕೊಂಡಿದ್ದಾರೆ.
ಈಗ ರಾಜರಾಮರು ಇರುತ್ತಿದ್ದರೇ…!
ಇನ್ನು ಈ ಪೊಸ್ಟ್ ಅನ್ನು ಅವರು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು,ಇದಕ್ಕೆ ಮತ್ತೆ ಅವರು ಕಾಮೇಂಟ್ ಹಾಕಿದ್ದು, ”ಇಂದು ರಾಜರಾಮರು ಪರಿವಾರದಲ್ಲಿ ಇರುತ್ತಿದ್ದರೇ, ಪುತ್ತಿಲರ ಪರವಾಗಿ ಎಷ್ಟು ಪ್ರತಿಭಟನೆ, ಹೋರಾಟ, ಪ್ರೆಸ್ ಮೀಟ್ ಆಗುತಿತ್ತು? ಇದನ್ನು ಅರುಣರು ಅರ್ಥ ಮಾಡಿಕೊಳ್ಳಬೇಕು” ಎಂದು ಕಾಮೇಂಟ್ ಹಾಕಿದ್ದಾರೆ.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
Uncategorized
YouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ, ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಪ್ರಕಾಶ್ ರಾಜ್ ಮತ್ತು ಕಿಶೋರ್, ಸಿಜೆಪಿ ಪ್ರಮುಖರಾದ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಆಯಿಷಾ ಘೋಷ್ ಹಾಗೂ ಸೌರವ್ ದಾಸ್, ಹಿರಿಯ ಸಾಹಿತಿ ದೇವನೂರ ಮಹಾದೇವ, ನೂರ್ ಶ್ರೀಧರ್, ಕೆ. ಮಹಾಂತೇಶ್, ತಾಹೇರ್ ಹುಸೇನ್, ಅಬ್ದುಲ್ ಮಜೀದ್, ಮುಹಮ್ಮದ್ ಯೂಸುಫ್ ಕನ್ನಿ, ಫಾ. ಅರುಣ್ ಲೂಯಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ, ನಮೂನೆ-7ರ ದುರುಪಯೋಗ, ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಮತದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.
ರಾಜ್ಯದ ವಿವಿಧ ಭಾಗಗಳಿಂದ ಎಸ್‌ಐಆರ್‌ನಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾದ ಮತದಾರರು, ನಾಗರಿಕ ಹಕ್ಕುಗಳ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಾರ್ವಜನಿಕ ವಿಚಾರಣೆ ನಡೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಸಾಹಿತಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ‘ಜನತಾ ನ್ಯಾಯಾಲಯ’ದ ವಿಚಾರಣೆಯಲ್ಲಿ ಭಾಗವಹಿಸಲಿದ್ದಾರೆ. ವಿಚಾರಣೆಯ ಬಳಿಕ ಸಿದ್ಧಪಡಿಸುವ ವರದಿಯನ್ನು ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳ ಗಮನಕ್ಕೆ ತರಲು ಆಯೋಜಕರು ಉದ್ದೇಶಿಸಿದ್ದಾರೆ.
ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಧ್ವನಿ ದಾಖಲಿಸುವಂತೆ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳು ಕರೆ ನೀಡಿವೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ24 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
Uncategorized6 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಅಂತರ ರಾಜ್ಯ23 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ


















