Connect with us

ಮಂಗಳೂರು

Kapikad-ಕಾಪಿಕಾಡ್ ಬಿಜೆಪಿ ಸೇರ್ಪಡೆ ವಿಚಾರ : ಸೌದಿಯಲ್ಲಿ ʻದಿ ಕಾಪಿಕಾಡ್ ಶೋʼಗೆ ಬಹಿಷ್ಕಾರ? ಪೋಸ್ಟ್ಗಳು ವೈರಲ್ –ಬಿಜೆಪಿ ಜಿಲ್ಲಾಧ್ಯಕ್ಷರು ನೀಡಿದ ಸ್ಪಷ್ಟನೆಯೇನು ?

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಂಗಳೂರು: ತುಳುಚಿತ್ರ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎನ್ನಲಾದ ಚಿತ್ರಗಳು ವಿವಾದ ಸೃಷ್ಟಿಸಿದ್ದು, ಸೌದಿ ಅರೇಬಿಯಾದಲ್ಲಿ ನಡೆಯಲಿರುವ ಅವರ ‘ದಿ ಕಾಪಿಕಾಡ್ ಶೋ’ಗೆ ಬಹಿಷ್ಕಾರ ಹಾಕುವ ಬೆದರಿಕೆಯ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.ಇದರ ಬೆನ್ನಲ್ಲೇ ದೇವದಾಸ್ ಕಾಪಿಕಾಡ್ ಅವರು ತಾವು ಬಿಜೆಪಿ ಸದಸ್ಯತ್ವ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸೆ. 4ರಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ದೇವದಾಸ್ ಕಾಪಿಕಾಡ್ ಅವರ ಸ್ಥಳೀಯ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ದೇವದಾಸ್ ಸದಸ್ಯತ್ವ ಪಡೆದಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕವು ತನ್ನ ಫೇಸ್ಬುಕ್ ಪುಟದಲ್ಲಿ ಮಾಹಿತಿ ಹಂಚಿಕೊಂಡಿತ್ತು. ಸದಾನಂದ ಗೌಡರು ಸಹ ತಮ್ಮ ಫೇಸ್ಬುಕ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದ್ದರು. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

Ad Widget

Ad Widget <> Ad Widget

ನಂತರದ ಬೆಳವಣಿಗೆಯಲ್ಲಿ, ಸೆ. 13 ಮತ್ತು 14ರಂದು ಸೌದಿ ಅರೇಬಿಯಾದಲ್ಲಿ ಆಯೋಜಿಸಿದ್ದ ದಿ ಕಾಪಿಕಾಡ್ ಶೋಗೆ ಬಹಿಷ್ಕಾರ ಹಾಕುವ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡಿವೆ. ಈ ಬಗ್ಗೆ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿರುವ ಧ್ವನಿ ಮುದ್ರಣ ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ ಹಂಚಿಕೆಯಾಗುತ್ತಿದೆ.



Ad Widget

‘ಬಿಜೆಪಿ ನಾಯಕರನ್ನು ಸೌಹಾರ್ದವಾಗಿ ಭೇಟಿಯಾಗಿದ್ದು, ನಾನು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ, ಎಲ್ಲ ಪಕ್ಷಗಳ ಮುಖಂಡರ ಜೊತೆ ನನಗೆ ಸೌಹಾರ್ದ ಸಂಬಂಧ ಇದೆ’ ಎಂದು ಅವರು ಹೇಳಿಕೊಂಡಿದ್ದಾರೆ.
ಸದಸ್ಯತ್ವ ಅಭಿಯಾನದ ಭಾಗವಾಗಿ ಸಮಾಜದ ಗಣ್ಯ ವ್ಯಕ್ತಿಗಳು, ಕಲಾವಿದರ ಮನೆಗೆ ಭೇಟಿ ನೀಡುವುದು ಸಹಜ ಪ್ರಕ್ರಿಯೆ. ದೇವದಾಸ್ ಮನೆಗೆ ಭೇಟಿ ನೀಡಿದ್ದು ನಿಜ, ಹಾಗೆಂದ ಮಾತ್ರಕ್ಕೆ ಅವರು ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಾರೆ ಎಂದರ್ಥವಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯಿಸಿದ್ದಾರೆ.

Ad Widget

Ad Widget

ಕುಂಪಲ ನೀಡಿದ ಸ್ಪಷ್ಟನೆಯೇನು
ಎಲ್ಲಾ ಪಕ್ಷಾತೀತ ಸೆಲೆಬ್ರಿಟಿಗಳ ಬಳಿಗೆ ನಾವು ಭಾರತೀಯ ಜನತಾ ಪಾರ್ಟಿಯ ಸದಸ್ಯತನದ ಅಭಿಯಾನಕ್ಕೆ ಹೋಗುತ್ತೇವೆ. ಅದೇ ರೀತಿ ದೇವದಾಸ್ ಕಾಪಿಕಾಡ್ ಬಳಿಯೂ ಹೋಗಿದ್ದೇವೆ. ಅವರು ಎಲ್ಲಾ ರಾಜಕೀಯ ಬಾಂಧವರೊಂದಿಗೆ ಒಳ್ಳೆಯ ಸಂಬಂಧಗಳನ್ನು ಇಟ್ಟುಕೊಂಡವರು. ರಾಷ್ಟ್ರ ಮಟ್ಟದಲ್ಲಿ ತುಳುವಿಗೆ ಒಂದು ದೊಡ್ಡ ಸ್ಥಾನಮಾನವನ್ನು ಕೊಟ್ಟವರು. ಅವರನ್ನು ನಾವು ಅತ್ಯಂತ ಗೌರವದಿಂದ ನೋಡುತ್ತೇವೆ.

ಯಾರೋ ಅವರು ಭಾರತೀಯ ಜನತಾ ಪಾರ್ಟಿಗೆ ಸೇರಿದ್ದಾರೆ ಅಂತ ಅಪಪ್ರಚಾರ ಮಾಡಿದ್ದಾರೆ. ಇದರಿಂದ ಕಲಾವಿದರಾದ ಅವರಿಗೆ ಒಂದಷ್ಟು ತೊಂದರೆ ಆಗಿರಬಹುದು. ಅದಕ್ಕೆ ಸರಿಯಾದ ಉತ್ತರವನ್ನು ಅವರು ಕೊಟ್ಟಿದ್ದಾರೆ. ಭಾರತೀಯ ಜನತಾ ಪಾರ್ಟಿ ಅವರನ್ನು ಪಕ್ಷಕ್ಕೆ ಸೇರಿಸಲು ಹೋಗಲಿಲ್ಲ. ಆದರೆ ಅವರ ಮನೆಗೆ ಹೋದದ್ದು ಸತ್ಯ. ಇನ್ನುಮುಂದೆಯೂ ಅವರು ಅವರದ್ದೇ ಆದ ಕೊಡುಗೆಯನ್ನು ದಕ್ಷಿಣ ಕನ್ನಡಕ್ಕೆ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ಸತೀಶ್ ಕುಂಪಲರವರು ಕಾಪಿಕಾಡ್ ಬಿಜೆಪಿ ಸೇರ್ಪಡೆ ಪ್ರಕರಣ ಕುರಿತಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ.

Ad Widget
Click to comment

Leave a Reply

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಮಂಗಳೂರು

CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?

Published

on



Ad Widget

Ad Widget

Ad Widget

Ad Widget

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.

Ad Widget

Ad Widget <> Ad Widget

ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.



Ad Widget

ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.

Ad Widget

Ad Widget

ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.

Ad Widget
Continue Reading

ಮಂಗಳೂರು

Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ

Published

on



Ad Widget

Ad Widget

Ad Widget

Ad Widget

2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.

Ad Widget

Ad Widget <> Ad Widget

ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



Ad Widget

“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

Ad Widget

Ad Widget

“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.

ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್‌ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.

ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading