ನಿಧನ ವಾರ್ತೆ
Patna-ಪಾಟ್ನಾ: ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ನಕಲಿ ವೈದ್ಯ – ಬಾಲಕ ಮೃತ್ಯು
ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಬಾಲಕನ ಪಿತ್ತಕೋಶದಲ್ಲಿ ಕಲ್ಲುಗಳಿದ್ದು, ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಕಲಿ ವೈದ್ಯ ಅಜಿತ್ ಕುಮಾರ್ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ. ಕುಟುಂಬ ಸದಸ್ಯರ ಒಪ್ಪಿಗೆ ಪಡೆಯದೇ ಮೊಬೈಲ್ನಲ್ಲಿ ಯೂಟ್ಯೂಬ್ ವಿಡಿಯೋಗಳನ್ನು ನೋಡಿಕೊಂಡು ಅಲ್ಲಿನ ಸಲಹೆಯ ಮೇರೆಗೆ ವೈದ್ಯನು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದ ಎಂದು ಮೃತ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.
ಪಾಟ್ನಾ: ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
15 ವರ್ಷದ ಬಾಲಕನಿಗೆ ಕಳೆದ ಶುಕ್ರವಾರ ರಾತ್ರಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡು ವಾಂತಿಯಾಗಿದೆ. ಆತನ ಮನೆಯವರು ಮಧುರಾದಲ್ಲಿರುವ ಅಜಿತ್ ಕುಮಾರ್ ಪುರಿ ಎಂಬ ನಕಲಿ ವೈದ್ಯ ನಡೆಸುತ್ತಿದ್ದ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.
ಬಾಲಕನ ಪಿತ್ತಕೋಶದಲ್ಲಿ ಕಲ್ಲುಗಳಿದ್ದು, ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಕುಟುಂಬ ಸದಸ್ಯರ ಒಪ್ಪಿಗೆ ಪಡೆಯದೇ ನಕಲಿ ವೈದ್ಯ ಶಸ್ತ್ರ ಚಿಕಿತ್ಸೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಮೊಬೈಲ್ನಲ್ಲಿ ಯೂಟ್ಯೂಬ್ ವಿಡಿಯೋಗಳನ್ನು ನೋಡಿಕೊಂಡು, ಅಲ್ಲಿನ ಸಲಹೆಯ ಮೇರೆಗೆ ವೈದ್ಯನು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದ ಎಂದು ಮೃತ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.
ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಬಾಲಕನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಕುಟುಂಬಸ್ಥರು ಪ್ರಶ್ನಿಸಿದಾಗ ಅವರ ಮೇಲೆಯೇ ನಕಲಿ ವೈದ್ಯ “ನಾನು ವೈದ್ಯನೋ ಅಥವಾ ನೀವೋ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ ಎಂದು ತಿಳಿದು ಬಂದಿದೆ.
ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ನಕಲಿ ವೈದ್ಯನು ಬಾಲಕನನ್ನು ಪಾಟ್ನಾ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾನೆ. ಆದರೆ ಮಾರ್ಗ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎಂದುತಿಳಿದು ಬಂದಿದೆ.
ನಕಲಿ ವೈದ್ಯನ ನಿರ್ಲಕ್ಷ್ಯ ವನ್ನು ಉಲ್ಲೇಖಿಸಿ ಬಾಲಕನ ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ನಕಲಿ ವೈದ್ಯ ಅಜಿತ್ ಕುಮಾರ್ ಪುರಿ ವಿರುದ್ಧ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ6 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ5 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ4 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















