ಉಡುಪಿ
Udupi-ಉಡುಪಿಯಿಂದ ನಾಪತ್ತೆಯಾಗಿದ್ದ ಹೈಸ್ಕೂಲ್ ವಿದ್ಯಾರ್ಥಿ ಕೇರಳದಲ್ಲಿ ಪತ್ತೆ
ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂದಿದ್ದು ಉಡುಪಿ ಪೊಲೀಸರು ಪಾಲ್ಘಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ.
ಉಡುಪಿ, ಸೆ.9: ರವಿವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ರವಿವಾರ ಬೆಳಗ್ಗೆ ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ಘಾಟ್ ಗೆ ತೆರಳಿದ್ದಾರೆಂದು ತಿಳಿದುಬಂದಿದೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ಬಿಗ್ ನ್ಯೂಸ್11 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized10 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್11 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು11 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ8 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ9 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್9 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಬಿಗ್ ನ್ಯೂಸ್3 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ















