ಅಪರಾಧ
Puttur-ಕೃಷಿಕರ ಸದಸ್ಯತನ ಚೀಟಿ ದುರುಪಯೋಗ ಪಡಿಸಿ ಪುತ್ತೂರು ಕ್ಯಾಂಪ್ಕೊದಲ್ಲಿ ಮ್ಯಾನ್ಮಾರ್ ಅಡಕೆ ಮಾರಾಟ ಯತ್ನ : ಎಚ್ಚರಿಸಿದ ಕ್ಯಾಂಪ್ಕೊ ಅಧ್ಯಕ್ಷ ಕೊಡ್ಗಿ
ರೈತರೊಂದಿಗೆ ಒಳ್ಳೆಯ ಸಂಪರ್ಕವಿರುವ ಕೆಲವು ವ್ಯಾಪಾರಿಗಳು ಅವರ ಕ್ಯಾಂಪ್ಕೊ ಸದಸ್ಯತ್ವದ ಚೀಟಿ ಉಪಯೋಗಿಸಿಕೊಂಡು ರೈತರ ಸೋಗಿನಲ್ಲಿ ನಮ್ಮ ಶಾಖೆಗಳಿಗೆ ಬಂದು ಅಡಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ರೈತರೊಂದಿಗೆ ಒಳ್ಳೆಯ ಸಂಪರ್ಕವಿರುವ ಕೆಲವು ವ್ಯಾಪಾರಿಗಳು ಅವರ ಕ್ಯಾಂಪ್ಕೊ ಸದಸ್ಯತ್ವದ ಚೀಟಿ ಉಪಯೋಗಿಸಿಕೊಂಡು ರೈತರ ಸೋಗಿನಲ್ಲಿ ನಮ್ಮ ಶಾಖೆಗಳಿಗೆ ಬಂದು ಅಡಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಇಂತಹ ಮೋಸದ ವ್ಯಾಪಾರದಲ್ಲಿ ಯಾರೂ ಭಾಗಿಯಾಗಬಾರದು. ಅದಕ್ಕಾಗಿ ತಮ್ಮ ಕಾರ್ಡ್ ಯಾರೂ ದುರುಪಯೋಗಪಡಿಸಲು ಅನುವು ಮಾಡಿಕೊಡಬಾರದು. ತಾವು ಜಾಗರೂಕರಾಗದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯ ಅಡಕೆಯ ದರ ಸ್ಥಿರತೆ ಮೇಲೆ ಮಾರಣಾಂತಿಕ ಹೊಡೆತ ನೀಡುವುದರಲ್ಲಿ ಸಂಶಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಮಂಗಳೂರು: ರೈತರೊಂದಿಗೆ ಒಳ್ಳೆಯ ಸಂಪರ್ಕವಿರುವ ಕೆಲವು ವ್ಯಾಪಾರಿಗಳು ಅವರ ಕ್ಯಾಂಪ್ಕೊ ಸದಸ್ಯತ್ವದ ಚೀಟಿ ಉಪಯೋಗಿಸಿಕೊಂಡು ರೈತರ ಸೋಗಿನಲ್ಲಿ ನಮ್ಮ ಶಾಖೆಗಳಿಗೆ ಬಂದು ಅಡಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಇತ್ತೀಚೆಗೆ ವ್ಯಾಪಾರಿಯೊಬ್ಬ ರೈತರ ಕಾರ್ಡ್ ದುರುಪಯೋಗ ಮಾಡಿಕೊಂಡು ಬರ್ಮಾ(ಮ್ಯಾನ್ಮಾರ್) ಮೂಲದ ಕಳಪೆ ಗುಣ ಮಟ್ಟದ ಅಡಕೆ ಸ್ಥಳೀಯ ಅಡಕೆ ಜತೆ ಬೆರೆಸಿ ಕ್ಯಾಂಪ್ಕೊ ಪುತ್ತೂರು ಶಾಖೆಯಲ್ಲಿ ಮಾರಾಟ ಮಾಡಲು ಪ್ರಯತ್ನಪಟ್ಟಿದ್ದು, ನಮ್ಮ ಅಧಿಕಾರಿಯ ದಕ್ಷತೆ ಮತ್ತು ಚಾಕಚಕ್ಯತೆ ಯಿಂದಾಗಿ ಆತನ ಕಪಟತನ ಬಯಲಾಗಿದೆ.
ಅಪರಾಧ
Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ
ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.
ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಅಪರಾಧ
Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.
ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.
ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಅಪರಾಧ
Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್‌ಲೈನ್ ಆಫರ್‌ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್‌ನಲ್ಲಿ ‘INDIA STORES FOR YOU’ ಎಂಬ ಆನ್‌ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್‌ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.
ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್‌ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.
ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.
ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.
ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
-
ಸ್ಥಳೀಯ22 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ23 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಅಂತರ ರಾಜ್ಯ23 hours agoSabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
-
ಅಪರಾಧ22 hours agoCyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
-
ಮಂಗಳೂರು21 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್23 hours agoChetan Prakash-ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್ ಕಜೆ ಯವರಿಗೆ ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್23 hours agoHeavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!
-
ಬಿಗ್ ನ್ಯೂಸ್5 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?















