ಅಂತರ ರಾಜ್ಯ
PM Modi-ಅಬುದಾಬಿ ಯುವರಾಜ ಖಾಲೀದ್ ಜತೆ ಪ್ರಧಾನಿ ಮೋದಿ ಹೈದ್ರಾಬಾದ್ ಹೌಸ್ ನಲ್ಲಿ ದ್ವಿಪಕ್ಷೀಯ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಸೆ.09) ಅಬುಧಾಬಿ ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಅಬುಧಾಬಿ ಯುವರಾಜ ಶೇಖ್ ಖಾಲೀದ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ.
ನವದೆಹಲಿಯಲ್ಲಿನ ಹೈದರಾಬಾದ್ ಹೌಸ್ ನಲ್ಲಿ ಯುವರಾಜ ಶೇಖ್ ಖಾಲೀದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮೀಯವಾಗಿ ಸ್ವಾಗತ ಕೋರಿದ್ದು, ಉಭಯ ದೇಶಗಳ ನಡುವಿನ ಭವಿಷ್ಯದ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ ನಡೆಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಭಾನುವಾರ (ಸೆ.08) ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಯುವರಾಜ ಖಾಲೀದ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯೆಲ್ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ಇದೊಂದು ಐತಿಹಾಸಿಕ ಸಂಬಂಧವಾಗಿದ್ದು, ಶೇಖ್ ಖಾಲೀದ್ ಅವರು ಮೊದಲ ಬಾರಿಗೆ ಅಧಿಕೃತವಾಗಿ ಭಾರತಕ್ಕೆ ಭೇಟಿ ನೀಡಿರುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದರು.
ಅಂತರ ರಾಜ್ಯ
March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ
ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.
ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.
ನಿಧನ ವಾರ್ತೆ
Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ
ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.
ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.
ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.
ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ಅಂತರ ರಾಜ್ಯ
Elon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ನವದೆಹಲಿ: ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಸ್ಕ್, ಸ್ಪರ್ಧೆಯಿಂದಾಗಿ ಭಾರತದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿದ್ದು, ಇದರಿಂದ ಅವರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಉದ್ಯಮಿ ಮುಕೇಶ್ ಅಂಬಾನಿ ಅವರ ಲಾಭ ಕಡಿಮೆಯಾಗಬಹುದಾದರೂ, ಅವರ ಗ್ರಾಹಕರು ಸಂಪೂರ್ಣವಾಗಿ ದೂರವಾಗುವುದಿಲ್ಲ ಎಂದು ಹೇಳಿದ್ದಾರೆ.
ಮುಕೇಶ್ ಅಂಬಾನಿ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಾದಿಸುತ್ತಿರುವವರ ವಿರುದ್ಧವೂ ಮಸ್ಕ್ ಟೀಕೆ ವ್ಯಕ್ತಪಡಿಸಿದ್ದಾರೆ. ‘ಅಂಬಾನಿ ಅವರು ನಿಗದಿಪಡಿಸಿರುವ ಕಡಿಮೆ ಶುಲ್ಕದ ಜೊತೆ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಆಗಲಿಕ್ಕಿಲ್ಲ ಎಂದು ಅವರು (ಬೆಂಬಲಿಗರು) ಒಂದೆಡೆ ವಾದಿಸುತ್ತಾರೆ. ಮತ್ತೊಂದೆಡೆ, ಸ್ಟಾರ್‌ಲಿಂಕ್ ಬಹಳ ಬಲಿಷ್ಠವಾದ ಪ್ರತಿಸ್ಪರ್ಧಿ ಆಗಬಹುದು ಎಂದೂ ಹೇಳುತ್ತಾರೆ’ ಎಂದು ಮಸ್ಕ್ ವಿವರಿಸಿದ್ದಾರೆ. ಅಂಬಾನಿ ಅವರ ಆನ್‌ಲೈನ್ ಬೆಂಬಲಿಗರ ‘ಹಾಸ್ಯಾಸ್ಪದ ವಾದಗಳು’ ತಮಗೆ ಅರ್ಥಪೂರ್ಣವಾಗಿ ಕಾಣುತ್ತಿಲ್ಲ ಎಂದಿದ್ದಾರೆ.
ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಅಗತ್ಯ ಅನುಮತಿಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮಸ್ಕ್ ಕಳೆದ ಕೆಲವು ದಿನಗಳಿಂದ ಮುಕೇಶ್ ಅಂಬಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದರೆ, ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.
-
ನಿಧನ ವಾರ್ತೆ20 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ14 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ19 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು17 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ19 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized12 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಬಿಗ್ ನ್ಯೂಸ್14 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಶಿಕ್ಷಣ14 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ




















