Uncategorized
ಪುತ್ತೂರು ಕೋರ್ಟುನಲ್ಲಿ ದೊರೆತ ಜಾಮೀನು ಹೈಕೋರ್ಟುನಲ್ಲಿ ರದ್ದಾದ ರೇಪ್ ಮತ್ತು ಬ್ಲ್ಯಾಕ್ಮೆಲ್ ಪ್ರಕರಣದ ಆರೋಪಿ ಸುಬ್ರಹ್ಮಣ್ಯದ ಶಿಕ್ಷಕ ನ್ಯಾಯಾಲಯಕ್ಕೆ ಶರಣು | ಪೊಲೀಸರ ಕಣ್ಣಾಮುಚ್ಚಾಲೆ ಆಟದ ಬಳಿಕವೂ ಜೈಲು ತಪ್ಪಲಿಲ್ಲ
ಸುಬ್ರಹ್ಮಣ್ಯ: ಅ 9 : ತಾನು ಪಾಠ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಿರಂತರ ಆತ್ಯಾಚಾರಗೈದ ಹಾಗೂ ಆ ಕೃತ್ಯವನ್ನೂ ಮೊಬೈಲ್ ನಲ್ಲಿ ಚಿತ್ರಿಕರಿಸಿ ಬ್ಲ್ಯಾಕ್ಮೆಲ್ ಮಾಡಿ ಹಣ ವಸೂಲಿ ಮಾಡಿದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ಜಾಮೀನನ್ನು ರಾಜ್ಯ ಹೈ ಕೋರ್ಟು ರದ್ದು ಮಾಡಿದ ಹಿನ್ನಲೆಯಲ್ಲಿ ತಿಂಗಳ ಬಳಿಕ ಆತ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾನೆ .
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ಶಿಕ್ಷಕ ರಾಯಚೂರಿನ ಗುರುರಾಜ್ ಪ್ರಕರಣದ ಆರೋಪಿಯಾಗಿದ್ದು ಆತ ಫೆ 21ರಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ
ಆರೋಪಿ ಗುರುರಾಜ್ ತಾನು ಉದ್ಯೋಗ ಮಾಡುತ್ತಿದ್ದ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದರು. ಪೊಲೀಸರು ಆರೋಪಿಯನ್ನು ಬಂಧಿಸಲು ತಡ ಮಾಡಿದಾಗ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದು ಬಳಿಕ 2021ರ ಅ. 8 ರಂದು ಈತನನ್ನು ಬಂಧಿಸಲಾಗಿತ್ತು. ಈತನ ವಿರುದ್ದ ಪೋಕ್ಸೋ ಹಾಗೂ ಐಟಿ ಆಕ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿಯೂ ಈತನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಸತ್ರ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಬಂಧನವಾದ 48 ಗಂಟೆಯೊಳಗಡೆ ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಇದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕಿಯ ತಾಯಿ ಹಾಗೂ ಪ್ರಕರಣದ ದೂರುದಾರೆ ಹೈಕೋರ್ಟು ಮೆಟ್ಟೀಲೆರಿದ್ದರು. ಜಾಮೀನು ರದ್ದತಿ ಕೋರಿ ಆಕೆ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾದೀಶ ಎಚ್. ಕೆ . ಸಂದೇಶ್ ಆರೋಪಿಗೆ ಕೆಳ ಕೋರ್ಟು ನೀಡಿದ ಜಾಮೀನನ್ನು ರದ್ದುಗೊಳಿಸಿದ್ದರು. ಜ .14 ರಂದು ನ್ಯಾಯಾಲಯ ಈ ತೀರ್ಪು ಪ್ರಕಟಿಸಿದ್ದು ಹೈಕೋರ್ಟು ವಕೀಲರಾದ ಸಚಿನ್ ಸಂತ್ರಸ್ತೆಯ ತಾಯಿ ಪರ ನ್ಯಾಯಾಲಯದಲ್ಲಿ ವಾದಿಸಿದರು.
ಹೈ ಕೋರ್ಟು ಜಾಮೀನು ರದ್ದು ಮಾಡಿ ತಿಂಗಳು ಕಳೆದರೂ ಆರೋಪಿಯನ್ನು ಪೊಲೀಸರು ಬಂಧಿಸಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳಿಗೆ ಆರೋಪಿ ತಲೆಮರೆಸಿಕೊಂಡಿದ್ದಾನೆ, ಹುಡುಕುತ್ತಿದ್ದೇವೆ ಎಂಬ ಸಿದ್ದ ಉತ್ತರವನ್ನು ಪೊಲೀಸ್ ಇಲಾಖೆ ನೀಡುತಿತ್ತು. ಆದರೇ ಈ ನಡುವೆಯೂ ಆರೋಪಿ ಅಗಾಗೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಿದ್ದನ್ನು ಸಾರ್ವಜನಿಕರು ನೋಡಿದ್ದರು ಎನ್ನಲಾಗಿದೆ. ಹೀಗಾಗಿ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಸಾರ್ವಜನಿಕರಿಂದ ಸುಬ್ರಹ್ಮಣ್ಯ ಠಾಣೆ ಮುಂದೆ ಪ್ರತಿಭಟನೆಗೆ ಸಿದ್ದತೆ ನಡೆಯುತಿತ್ತು. ಇದೇ ವೇಳೆ ಆರೋಪಿಯು ಗತ್ಯಂತರವಿಲ್ಲದೇ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ಏನಿದು ಪ್ರಕರಣ ?
ಪ್ರಕರಣ ದಾಖಲಾದ ಸಂದರ್ಭ ಆರೋಪಿ ಗುರುರಾಜ್ ಸುಬ್ರಹ್ಮಣ್ಯದ ಎಸ್ಎಸ್ ಪಿಯು ಪ್ರೌಢಶಾಲೆ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕನಾಗಿ ಉದ್ಯೋಗದಲ್ಲಿದ್ದ. ಸದ್ಯ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ. ಕೃತ್ಯವೂ ನಾಲ್ಕು ವರ್ಷದ ಹಿಂದೆ ಮೊದಲ ಬಾರಿ ನಡೆದಿದ್ದೂ ಆಗ ವಿದ್ಯಾರ್ಥಿನಿಯೂ ಗುರುರಾಜ್ ಉದ್ಯೋಗಿಯಾಗಿರುವ ಶಿಕ್ಷಣ ಸಂಸ್ಥೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಬಾಲಕಿಯನ್ನು ಪುಸಲಾಯಿಸಿ ವಿವಸ್ತೃಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಅದನ್ನು ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಕೆ ಹಾಕುತ್ತಿದ್ದ. ಆತನಿಗೆ ಪತ್ನಿಯೂ ಸಾಥ್ ನೀಡುತ್ತಿದ್ದಳು ಎಂದು ವಿದ್ಯಾರ್ಥಿನಿಯ ತಾಯಿ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.
ದೂರಿನಲ್ಲಿ ಎನೀದೆ ?
ಪ್ರಸ್ತುತ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ನನ್ನ ಮಗಳು ಸುಮಾರು ನಾಲ್ಕೈದು ದಿನಗಳಿಂದ ಮೌನವಾಗಿದ್ದಳು. ಆಕೆಯ ಈ ವರ್ತನೆಯ ಬಗ್ಗೆ ಅನುಮಾನಗೊಂಡು ಜು.28 ರಂದು ಆಕೆಯನ್ನು ಪುತ್ತೂರಿನ ವೈದ್ಯರಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಆಕೆಯನ್ನು ವಿಚಾರಿಸಿದಾಗ ಅವಳು ಗುರುರಾಜ್ ಹಾಗೂ ಅವರ ಪತ್ನಿ ಮಾಡಿದ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾಳೆ ಎಂದು ಸುಬ್ರಹ್ಮಣ್ಯ ಠಾಣೆಗೆ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. 2018ನೇ ಇಸವಿಯ ಅಕ್ಟೋಬರ್ ತಿಂಗಳಲ್ಲಿ ಸಂತ್ರಸ್ತ ವಿದ್ಯಾರ್ಥಿನಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಒಂದು ದಿನ ಅಧ್ಯಾಪಕ ಗುರುರಾಜ್ ಎಂಬವರು ಪ್ರಾಜೆಕ್ಟು ಮಾಡಲೆಂದು ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದದಲ್ಲಿರುವ ಅವರ ಮನೆಗೆ ಬರ ಹೇಳಿ ಕೃತ್ಯ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಪುಸಲಾಯಿಸಿ ಕೃತ್ಯ :
“ ಪ್ರಾಜೆಕ್ಟ್ ನಿಮಿತ್ತ ನನ್ನ ಮಗಳು ಶಿಕ್ಷಕ ಗುರುರಾಜ್ ಮನೆಗೆ ಹೋಗಿದ್ದು, ಆಗ ಗುರುರಾಜ್ ಮತ್ತು ಅವರ ಪತ್ನಿ ರಾಜೇಶ್ವರಿ ಎಂಬವರು ಮಗಳನ್ನು ಪುಸಲಾಯಿಸಿ ಅವರ ಮಲಗುವ ಕೋಣೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಗುರುರಾಜ್ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೇ, ಈ ಕೃತ್ಯವನ್ನು ರಾಜೇಶ್ವರಿಯವರು ಮೊಬೈಲ್ ಫೋನ್ ನ ಮೂಲಕ ಚಿತ್ರೀಕರಿಸಿಕೊಂಡಿದ್ದಾರೆ. ಹಾಗೂ ಈ ವಿಷಯವನ್ನು ಯಾರಲ್ಲಿಯೂ ಹೇಳಬಾರದಾಗಿ ಬೆದರಿಕೆ ಕೂಡ ಒಡ್ಡಿದ್ದಾರೆ. ಆನಂತರವೂ ಹಲವು ಬಾರಿ ಮನೆಗೆ ಬರ ಹೇಳಿ ಅತ್ಯಾಚಾರ ಮಾಡಿರುವುದಾಗಿ ಮಗಳು ನಮ್ಮಲ್ಲಿ ತಿಳಿಸಿದ್ದಾಳೆ”ಎಂದು ದೂರಿನಲ್ಲಿ ಆರೋಪಿಸಲಾಗಿತ್ತು
ಹಣಕ್ಕಾಗಿ ಬ್ಲ್ಯಾಕ್ ಮೇಲ್ …!
ಗುರುರಾಜ್ ಮತ್ತು ಅವರ ಪತ್ನಿ ಮನೆಯಿಂದ ಹಣವನ್ನು ತರುವಂತೆ ಕೂಡ ಮಗಳಲ್ಲಿ ಒತ್ತಾಯಿಸಿದ್ದೂ, ಹಣ ತರದಿದ್ದರೇ ಫೋಟೋಗಳನ್ನು ಬೇರೆಯವರಿಗೆ ತೋರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಮನೆಯಿಂದ ಹತ್ತು ಸಾವಿರ ರೂಪಾಯಿಯನ್ನು ಕದ್ದು ಗುರುರಾಜ್’ಗೆ ನೀಡಿರುವುದಾಗಿ ಮಗಳು ನನಗೆ ಮಾಹಿತಿ ನೀಡಿದ್ದಾಳೆ. ಆರೋಪಿಗಳಿಗೆ ಆಕೆ ಅಪ್ರಾಪ್ತ ಎಂದು ತಿಳಿದಿದ್ದರೂ, ಆಕೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ನಡೆಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಹಣಕ್ಕಾಗಿಯೂ ಬೇಡಿಕೆ ಇಟ್ಟಿರುದ್ದೂ, ಈ ಅಪರಾಧಗಳಿಗಾಗಿ, ಶಿಕ್ಷಕ ಗುರುರಾಜ್ ಮತ್ತವರ ಪತ್ನಿ ರಾಜೇಶ್ವರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಕೋರಿದ್ದರು.
video ನೋಡಿ : ಒಂದೇ ವೇದಿಕೆಯಲ್ಲಿ ಪ್ರಭಾಕರ್ ಭಟ್ vs ರಮಾನಾಥ ರೈ ವಾಕ್ಸಮರ
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
ಕ್ರೈಂ16 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ16 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು15 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ15 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ10 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಅಪರಾಧ11 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್16 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ15 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















