ಮಂಗಳೂರು
Mangalore-ಮಂಗಳೂರು: ಈಜು ಚಾಂಪಿಯನ್ಷಿಪ್- 13 ವರ್ಷ ಹಳೆಯ ದಾಖಲೆ ಮುರಿದ ಹಾಷಿಕಾ
ಕರ್ನಾಟಕ ಹಾಷಿಕಾ ರಾಮಚಂದ್ರ ಅವರು 77ನೇ ರಾಷ್ಟ್ರೀಯ ಸೀನಿಯರ್ ಈಜು ಚಾಂಪಿಯನ್ಷಿಪ್ನ ಮಹಿಳೆಯರ ವಿಭಾಗದ 400 ಮೀ. ಫ್ರೀಸ್ಟೈಲ್ ಸ್ಪರ್ಧೆಯಲ್ಲಿ 4 ನಿಮಿಷ 24.70 ಸೆಕೆಂಡ್ಗಳಲ್ಲಿ ಗುರಿ ತಲುಪುವ ಮೂಲಕ 13 ವರ್ಷ ಹಳೆಯ ದಾಖಲೆಯನ್ನು ಮುರಿದರು.
ಮಂಗಳೂರು: ಕರ್ನಾಟಕ ಹಾಷಿಕಾ ರಾಮಚಂದ್ರ ಅವರು 77ನೇ ರಾಷ್ಟ್ರೀಯ ಸೀನಿಯರ್ ಈಜು ಚಾಂಪಿಯನ್ಷಿಪ್ನ ಮಹಿಳೆಯರ ವಿಭಾಗದ 400 ಮೀ. ಫ್ರೀಸ್ಟೈಲ್ ಸ್ಪರ್ಧೆಯಲ್ಲಿ 4 ನಿಮಿಷ 24.70 ಸೆಕೆಂಡ್ಗಳಲ್ಲಿ ಗುರಿ ತಲುಪುವ ಮೂಲಕ 13 ವರ್ಷ ಹಳೆಯ ದಾಖಲೆಯನ್ನು ಮುರಿದರು.
ಇಲ್ಲಿನ ಎಮ್ಮೆಕೆರೆಯ ಅಂತರರಾಷ್ಟ್ರೀಯ ಈಜುಕೊಳದಲ್ಲಿ ಮಂಗಳವಾರ ಆರಂಭವಾದ ಚಾಂಪಿಯನ್ಷಿಪ್ನ ಮೊದಲ ದಿನದ ಸ್ಪರ್ಧೆಗಳಲ್ಲಿ ರಾಜ್ಯದ ಈಜುಪಟುಗಳು ಪಾರಮ್ಯ ಮೆರೆದರು. ಒಟ್ಟು 6 ಚಿನ್ನ ಹಾಗೂ ಮೂರು ಬೆಳ್ಳಿಯ ಪದಕಗಳನ್ನು ಗೆಲ್ಲುವ ಮೂಲಕ ಕರ್ನಾಟಕವು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಪುರುಷರ 400 ಮೀ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ರಾಜ್ಯದ ಅನೀಶ್ ಎಸ್.ಗೌಡ, 100 ಮೀ ಬ್ಯಾಕ್ಸ್ಟೋಕ್ ಸ್ಪರ್ಧೆಯಲ್ಲಿ ರಾಜ್ಯದ ಆಕಾಶ್ ಮಣಿ, ಮಹಿಳೆಯರ 200 ಮೀ ಬ್ರೆಸ್ಟ್ ಸ್ಟೋಕ್ ಸ್ಪರ್ಧೆಯಲ್ಲಿ ರಾಜ್ಯದ ತಾನ್ಯಾ ಷಡಕ್ಷರಿ ಚಿನ್ನದ ಪದಕ ಗೆದ್ದರು. ಪುರುಷರ 4X200 ಮೀ ಫ್ರೀಸ್ಟೈಲ್ ರಿಲೇ ಹಾಗೂ ಮಹಿಳೆಯರ 4X200 ಫ್ರೀಸ್ಟೈಲ್ ರಿಲೇ ಸ್ಪರ್ಧೆಗಳಲ್ಲೂ ಕರ್ನಾಟಕದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಪುರುಷರ ರಿಲೇ ತಂಡವನ್ನು ಅನೀಶ್ ಎಸ್. ಗೌಡ, ದರ್ಶನ್ ಎಸ್., ಕಾರ್ತಿಕೇಯನ್ ನಾಯರ್, ದಕ್ಷಣ್ ಎಸ್. ಹಾಗೂ ಮಹಿಳೆಯರ ರಿಲೇ ತಂಡವನ್ನು ಶಿರಿನ್, ಶಾಲಿನಿ ಆರ್.ದೀಕ್ಷಿತ್, ನೈಷಾ, ಹಾಷಿಕಾ ರಾಮಚಂದ್ರ ಪ್ರತಿನಿಧಿಸಿದ್ದರು.
ಮೊದಲ ದಿನವೇ ಕೂಟ ದಾಖಲೆ: 400 ಮೀ. ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ರಾಜ್ಯದ ಹಾಷಿಕಾ ರಾಮಚಂದ್ರ ಅವರು 2011ರಲ್ಲಿ ರಾಂಚಿಯಲ್ಲಿ ರಿಚಾ ಮಿಶ್ರಾ ಸ್ಥಾಪಿಸಿದ್ದ ಕೂಟ ದಾಖಲೆಯನ್ನು (4 ನಿ. 25.76 ಸೆ) ಅಳಿಸಿ ಹಾಕಿದರು. ಹಾಷಿಕಾ ಅವರಿಗೆ ತೆಲಂಗಾಣದ ವೃತ್ತಿ ಅಗರ್ವಾಲ್ ಅವರು ನಿಕಟ ಪೈಪೋಟಿ (4 ನಿ. 25.09 ಸೆ) ಒಡ್ಡಿದರು. ಎದುರಾಳಿಗಿಂತ 39 ಸೆಕೆಂಡ್ ಮೊದಲೇ ಹಾಶಿಕಾ ಗುರಿ ತಲುಪಿ ದಾಖಲೆ ನಿರ್ಮಿಸಿ ಸಂಭ್ರಮಿಸಿದರು.
ಇತರ ಫಲಿತಾಂಶಗಳು:
ಪುರುಷರ ವಿಭಾಗ:
50 ಮೀ. ಬಟರ್ಫೈ: ಬಿ.ಬೆನೆಡಿಕ್ಟನ್ ರೋಹಿತ್ (ತಮಿಳುನಾಡು)- 1; ಮಿಹಿರ್ ಆದ್ರೆ (ಮಹಾರಾಷ್ಟ್ರ)-2; ಆದಿತ್ಯಾ ದಿನೇಶ್ (ತ.ನಾ)-3, : 24.22 ಸೆ.
100 ಮೀ ಬ್ಯಾಕ್ಸ್ಟೋಕ್: ಆಕಾಶ್ ಮಣಿ (ಕರ್ನಾಟಕ)-1; ರಿಷಬ್ ಅನುಪಮ್ ದಾಸ್ (ಮಹಾರಾಷ್ಟ್ರ)-2; ವಿನಾಯಕ ವಿಜಯ್ (ಎಸ್ಎಸ್ಸಿಬಿ)-3, ಕಾಲ: 56.15ಸೆ.
200 ಮೀ ಬ್ರೆಸ್ಟ್ ಸ್ಟೋಕ್: ಧನುಷ್ ಸುರೇಶ್ (ತಮಿಳುನಾಡು)-1; ಮಣಿಕಂಠ ಎಲ್ (ಕರ್ನಾಟಕ)-2; ಅನೂಪ್ ಆಗಸ್ಟಿನ್ (ರೈಲ್ವೇಸ್)- 3, : 22.18.85 ಸೆ.
400 ಮೀ ಫ್ರೀಸ್ಟೈಲ್: ಅನೀಶ್ ಎಸ್ ಗೌಡ (ಕರ್ನಾಟಕ)-1; ದರ್ಶನ್ ಎಸ್. (ಕರ್ನಾಟಕ)-2; ದೇವಾಂಶ್ ಮಹೇಶ್ಕುಮಾರ್ ಪಿ. (ರೈಲ್ವೇಸ್)-3, : 32. 56.59 ಸೆ.
4X200 ಮೀ ಫ್ರೀಸ್ಟೈಲ್ ರಿಲೇ: ಕರ್ನಾಟಕ (ಅನೀಶ್ ಗೌಡ, ದರ್ಶನ್ ಎಸ್., ಕಾರ್ತಿಕೇಯನ್ ನಾಯರ್, ದಕ್ಷಣ್ ಎಸ್.)-1, ಕಾಲ: 72.42.902.; 2-2, : 72.47.64 2.-2; 22-3, : 7 2.50.45ಸೆ.
ಮಹಿಳೆಯರ ವಿಭಾಗ:
50 ಮೀ. ಬಟರ್ಫೈ: ಮಹಿ ಶ್ವೇತರಾಜ್ (ಬಿಹಾರ)-1; ಮಾನ್ವಿ ವರ್ಮಾ (ಕರ್ನಾಟಕ)-2; ರುಜುತಾ ಪ್ರಸಾದ್ ರಾಜಾಡ್ಯಾ (ಮಹಾರಾಷ್ಟ್ರ)-3, : ಕಾಲ : 28.33 ಸೆ.;
100 ಮೀ ಬ್ಯಾಕ್ಸ್ಟೋಕ್: ಸೌಬ್ರಿತಿ ಮೊಂಡಲ್ (ಪ.ಬಂಗಾಳ)-1, ಪ್ರತ್ಯಸಾ ರೇ (ಒಡಿಶಾ)-2; ರುಜುತಾ ಪ್ರಸಾದ್ ರಾಜಾಡ್ಯಾ (2)-3, 5: 1 2.05.51 ಸೆ.;
200 ಮೀ ಬ್ರೆಸ್ಟ್ ಸ್ಟೋಕ್: ತಾನ್ಯಾ ಷಡಕ್ಷರಿ (ಕರ್ನಾಟಕ)-1; ಜ್ಯೋತಿ ಬಾಜಿರಾವ್ ಪಾಟೀಲ (ಮಹಾರಾಷ್ಟ್ರ)-2, ಹರ್ಷಿತಾ ಜಯರಾಮ್ (2)-3, 5: 2 2.40.54;
400 ಮೀ ಫ್ರೀಸ್ಟೈಲ್: ಹಾಷಿಕಾ ರಾಮಚಂದ್ರ (ಕರ್ನಾಟಕ)-1, ವೃತ್ತಿ ಅಗರ್ವಾಲ್ (ತೆಲಂಗಾಣ)-2, ಭವ್ಯಾ ಸಚ್ದೇವ್ (ದೆಹಲಿ)-3, ಕಾಲ: 4 ನಿ.24.70 ಸೆ., ಕೂಟ ದಾಖಲೆ;
4X200 ಮೀ ಫ್ರೀಸ್ಟೈಲ್ ರಿಲೇ: ಕರ್ನಾಟಕ -1; ಮಹಾರಾಷ್ಟ್ರ-2; ಒಡಿಶಾ-3,ಕಾಲ 8 ನಿ. 54.85 ಸೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.















