ಅಂತರ ರಾಜ್ಯ
Airtel Finance-ಏರ್ಟೆಲ್ ಫೈನಾನ್ಸ್-ನಿಶ್ಚಿತ ಠೇವಣಿ ಮೇಲೆ ಶೇ. 9.1ರಷ್ಟು ಬಡ್ಡಿ
ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾದ ಭಾರ್ತಿ ಏರ್ಟೆಲ್ ಸ್ಥಿರ ಠೇವಣಿ ಸೇವೆಗಳನ್ನು ಪ್ರಾರಂಭಿಸಿದೆ. ಇದಕ್ಕೆ ವಾರ್ಷಿಕವಾಗಿ ಶೇ.9.1ರಷ್ಟು ಬಡ್ಡಿ ನೀಡಲಾಗುತ್ತದೆ ಎಂದು ಘೋಷಿಸಿದೆ. ಏರ್ಟೆಲ್ ಫೈನಾನ್ಸ್ ವೈಯಕ್ತಿಕ ಸಾಲ, ಏರ್ಟೆಲ್ ಆಕ್ಸಿಸ್ ಬ್ಯಾಂಕ್ ಬ್ರ್ಯಾಂಡ್ ಕ್ರೆಡಿಟ್ ಕಾರ್ಡ್, ಇಎಂಐ ಕಾರ್ಡ್ ಮತ್ತು ಚಿನ್ನದ ಸಾಲವನ್ನು ಒದಗಿಸುತ್ತದೆ.
ಹೊಸದಿಲ್ಲಿ: ದೂರಸಂಪರ್ಕ ಸೇವಾ ಪೂರೈಕೆಯಲ್ಲಿ ಮುಂಚೂಣಿಯಲ್ಲಿರುವ ಭಾರ್ತಿ ಏರ್ಟೆಲ್ ಸೋಮವಾರ ಏರ್ಟೆಲ್ ಫೈನಾನ್ಸ್ ಅಡಿಯಲ್ಲಿ ನಿಶ್ಚಿತ ಠೇವಣಿಗಳನ್ನು ಪರಿಚಯಿಸಿದೆ. ಇದಕ್ಕೆ ವಾರ್ಷಿಕವಾಗಿ ಶೇ.9.1ರಷ್ಟು ಬಡ್ಡಿ ನೀಡಲಾಗುತ್ತದೆ ಎಂದು ಘೋಷಿಸಿದೆ. ಏರ್ಟೆಲ್ ಫೈನಾನ್ಸ್ ವೈಯಕ್ತಿಕ ಸಾಲ, ಏರ್ಟೆಲ್ ಆಕ್ಸಿಸ್ ಬ್ಯಾಂಕ್ ಬ್ರ್ಯಾಂಡ್ ಕ್ರೆಡಿಟ್ ಕಾರ್ಡ್, ಇಎಂಐ ಕಾರ್ಡ್ ಮತ್ತು ಚಿನ್ನದ ಸಾಲವನ್ನು ಒದಗಿಸುತ್ತದೆ.
ಏರ್ಟೆಲ್ ಫೈನಾನ್ಸ್ನ ವ್ಯವಹಾರ ವಿಭಾಗದ ಅಧಿಕಾರಿಯಾದ ಅಂಶುಲ್ ಖೇತರ್ಪಾಲ್ ರವರು ”ನಾವು ಗ್ರಾಹಕ ಕೇಂದ್ರಿತ ಉತ್ಪನ್ನಗಳನ್ನು ಒದಗಿಸುತ್ತಿದ್ದೇವೆ. ಈಗ ನಿಶ್ಚಿತ ಠೇವಣಿ ಯೋಜನೆಯನ್ನು ಆರಂಭಿಸುತ್ತಿದ್ದೇವೆ,” ಎಂದು ಹೇಳಿದ್ದಾರೆ.
ಏರ್ಟೆಲ್ ಥ್ಯಾಂಕ್ಸ್ ಆ್ಯಪ್ನಲ್ಲಿ ಗ್ರಾಹಕರು ಒಂದು ಸಾವಿರ ರೂ. ಕನಿಷ್ಠ ಹೂಡಿಕೆಯೊಂದಿಗೆ ಹೊಸ ಬ್ಯಾಂಕ್ ಖಾತೆಯನ್ನು ತೆರೆಯದೆ ನಿಶ್ಚಿತ ಠೇವಣಿಗಳನ್ನು ನಿರ್ವಹಿಸಬಹುದು.
ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾಗಿರುವ ಭಾರ್ತಿ ಏರ್ಟೆಲ್ ನಿಶ್ಚಿತ ಠೇವಣಿ ಸೇವೆಗಳನ್ನು ಪ್ರಾರಂಭಿಸಿದೆ. ಈ ಸೌಲಭ್ಯವನ್ನು ದೇಶದ ಪ್ರಮುಖ ಎನ್ಬಿಎಫ್ಸಿಗಳು ಮತ್ತು ಸಣ್ಣ ಹಣಕಾಸು ಬ್ಯಾಂಕ್ಗಳ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ.
ಈ ನಿಶ್ಚಿತ ಠೇವಣಿಗಳನ್ನು ಈಗ ಏರ್ಟೆಲ್ ಥ್ಯಾಂಕ್ಸ್ ಆ್ಯಪ್ ಮೂಲಕ ಮಾಡಬಹುದಾಗಿದೆ ಎಂದು ಏರ್ಟೆಲ್ ಹೇಳಿಕೆಯಲ್ಲಿ ತಿಳಿಸಿದೆ. ಮತ್ತು ಈ ಸ್ಥಿರ ಠೇವಣಿ ಸೇವೆಗಳಿಗಾಗಿ, ಏರ್ಟೆಲ್ ಫೈನಾನ್ಸ್, ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಶ್ರೀರಾಮ್ ಫೈನಾನ್ಸ್ ಮತ್ತು ಶಿವಾಲಿಕ್ ಬ್ಯಾಂಕ್ನಂತಹ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಿದೆ.
ನೀವು ಯಾವುದೇ ಬ್ಯಾಂಕ್ ಖಾತೆಯನ್ನು ತೆರೆಯದೆಯೇ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ಎಫ್ಡಿ (FD) ಬುಕ್ ಮಾಡಬಹುದು. ಇತರರಲ್ಲಿ, ನಿಶ್ಚಿತ ಠೇವಣಿಗಳನ್ನು ಮುಂಚಿತವಾಗಿ ಹಿಂತೆಗೆದುಕೊಳ್ಳುವ ಪ್ರಕ್ರಿಯೆಯು ಅಷ್ಟು ಸುಲಭವಲ್ಲ. ಬಡ್ಡಿದರಗಳನ್ನು ಕಡಿತಗೊಳಿಸಲಾಗುವುದು. ಆದರೆ, ವಾರದ ನಂತರ ಯಾವಾಗ ಬೇಕಾದರೂ ಹಣ ತೆಗೆಯುವ ಸೌಲಭ್ಯವಿದೆ ಎಂದು ಏರ್ ಟೆಲ್ ಹೇಳಿದೆ. ಇಲ್ಲಿ ಲಿಕ್ವಿಡಿಟಿಗೆ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.
ಏರ್ಟೆಲ್ ಫೈನಾನ್ಸ್ ಪ್ರಸ್ತುತ ಫ್ಲೆಕ್ಸಿ ಪರ್ಸನಲ್ ಲೋನ್ಸ್, ಕೋ ಬ್ರ್ಯಾಂಡ್ ಇನ್ಸ್ಟಾ ಇಎಂಐ ಕಾರ್ಡ್, ಗೋಲ್ಡ್ ಲೋನ್ಸ್, ಕೋ ಬ್ರಾಂಡ್ ಕ್ರೆಡಿಟ್ ಕಾರ್ಡ್ಗಳನ್ನು ಏರ್ಟೆಲ್ ಥ್ಯಾಂಕ್ಸ್ ಆಪ್ ಮೂಲಕ ನೀಡುತ್ತಿದೆ. ಶೀಘ್ರದಲ್ಲೇ ಬಿಸಿನೆಸ್ ಲೋನ್ಗಳು ಮತ್ತು ಸೆಕ್ಯೂರ್ಡ್ ಲೋನ್ ಸೌಲಭ್ಯವನ್ನೂ ಆರಂಭಿಸಲಿದೆ. ಪ್ರಸ್ತುತ ಶೇ.9.1ರ ಬಡ್ಡಿದರ ಪ್ರಕಾರ 5 ಲಕ್ಷ ಠೇವಣಿ ಇಟ್ಟರೆ, ಒಂದು ವರ್ಷದಲ್ಲಿ ಏರ್ ಟೆಲ್ ಫೈನಾನ್ಸ್ ನಲ್ಲಿ ರೂ. 44,463 ಬಡ್ಡಿ ಸಿಗುತ್ತದೆ.
ಅಂತರ ರಾಜ್ಯ
Sabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು, ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 29 ಪ್ರಕರಣ ದಾಖಲಿಸಿ ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಪತ್ತನಂತಿಟ್ಟ (ಕೇರಳ): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು, ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 29 ಪ್ರಕರಣ ದಾಖಲಿಸಿ ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಸ್ಥಳೀಯ ಸ್ವಯಂ ಆಡಳಿತ, ಕಂದಾಯ, ಆರೋಗ್ಯ, ಆಹಾರ ಸುರಕ್ಷತೆ, ಕಾನೂನು ಮಾಪನಶಾಸ್ತ್ರ ಹಾಗೂ ನಾಗರಿಕ ಸರಬರಾಜು ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ನಿರಂತರ ತಪಾಸಣೆ ನಡೆಸುತ್ತಿದೆ. ರಾತ್ರಿ ವೇಳೆಯೂ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ.
ಹೋಟೆಲ್ಗಳು ಹಾಗೂ ಆಹಾರ ಮಳಿಗೆಗಳಲ್ಲಿ ಕಂಡುಬಂದ ಅಶುಚಿತ್ವ, ಸಿಬ್ಬಂದಿ ಕೈಗವಸು ಮತ್ತು ತಲೆಯ ಕವಚ ಧರಿಸದಿರುವುದು, ಅಡುಗೆಮನೆಗಳ ಸ್ವಚ್ಛತೆ ಕಾಪಾಡದಿರುವುದು ಸೇರಿದಂತೆ ಹಲವು ಉಲ್ಲಂಘನೆಗಳು ಪತ್ತೆಯಾಗಿವೆ. ಅಲ್ಲದೆ, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುವುದು ಹಾಗೂ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡುವ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.
ಭಾನುವಾರ ಸನ್ನಿಧಾನದಲ್ಲಿರುವ ಹೋಟೆಲ್ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಹಳಸಿದ ಆಹಾರವನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ಈ ಸಂಬಂಧ ಹೋಟೆಲ್ಗೆ ದಂಡವನ್ನೂ ವಿಧಿಸಲಾಗಿದೆ.
ಇದಲ್ಲದೆ, ಕೊಳೆತ ಹಣ್ಣುಗಳ ಕೆಟ್ಟ ಭಾಗವನ್ನು ಮಾತ್ರ ತೆಗೆದು ಉಳಿದ ಭಾಗದಿಂದ ಜ್ಯೂಸ್ ತಯಾರಿಸುವಂತಿಲ್ಲ. ಹಣ್ಣು ಕೊಳೆತಿದ್ದರೆ ಸಂಪೂರ್ಣ ಹಣ್ಣನ್ನೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಒಟ್ಟು ಮೂರು ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಆಹಾರ ಮಳಿಗೆಗಳ ತಪಾಸಣೆಯ ಜತೆಗೆ ಅಯ್ಯಪ್ಪ ಭಕ್ತರನ್ನು ನೇರವಾಗಿ ಭೇಟಿಯಾಗಿ ಅವರ ಅಭಿಪ್ರಾಯ ಹಾಗೂ ದೂರುಗಳನ್ನು ಆಲಿಸುತ್ತಿವೆ. ದೂರುಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಡಲ ಮತ್ತು ಮಕರವಿಳಕ್ಕು ಯಾತ್ರೆಯ ವೇಳಾಪಟ್ಟಿ
ವಾರ್ಷಿಕ ಮಂಡಲ ತೀರ್ಥಯಾತ್ರೆ ಹಿನ್ನೆಲೆಯಲ್ಲಿ ನವೆಂಬರ್ 17ರಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಡಿಸೆಂಬರ್ 27ರಂದು ಮಂಡಲ ಪೂಜೆ ನಡೆಯಲಿದ್ದು, ಬಳಿಕ ಒಂದು ದಿನದ ಮಟ್ಟಿಗೆ ದೇವಸ್ಥಾನ ಮುಚ್ಚಲಿದೆ.
ನಂತರ ಮಕರವಿಳಕ್ಕು ತೀರ್ಥಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಮತ್ತೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಜನವರಿ 14ರಂದು ಮಕರವಿಳಕ್ಕು ಉತ್ಸವ ನಡೆಯಲಿದ್ದು, ಜನವರಿ 19ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಜನವರಿ 20ರಂದು ದೇವಸ್ಥಾನದ ಬಾಗಿಲು ಮುಚ್ಚಲಿದೆ.
ಅಂತರ ರಾಜ್ಯ
RBI-ಡಿಜಿಟಲ್ ವಂಚನೆಗೆ ಆರ್ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!
ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.
ಮುಂಬೈ: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.
ಈ ಪ್ರಸ್ತಾವನೆಯ ಪ್ರಮುಖ ಅಂಶವೆಂದರೆ, ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ ನಡೆಯುವ ಎಲ್ಲಾ ಡೆಬಿಟ್ ವಹಿವಾಟುಗಳು ಹಾಗೂ ಹೊಸ ಪಾವತಿ ಆದೇಶಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಅನುಕೂಲವಾಗುವ ‘ಸ್ಟಾಪ್ ಸ್ವಿಚ್’ ವ್ಯವಸ್ಥೆ. ಇದರಿಂದ ಅನುಮಾನಾಸ್ಪದ ವಹಿವಾಟುಗಳು ಅಥವಾ ವಂಚನೆಯ ಪ್ರಯತ್ನಗಳು ಕಂಡುಬಂದಾಗ ಗ್ರಾಹಕರು ತಕ್ಷಣವೇ ಹಣ ವರ್ಗಾವಣೆಯನ್ನು ತಡೆಯಲು ಸಾಧ್ಯವಾಗಲಿದೆ.
ಇದಲ್ಲದೆ, ಹೊಸದಾಗಿ ತೆರೆಯುವ ಬ್ಯಾಂಕ್ ಖಾತೆಗಳಲ್ಲಿ ಡಿಜಿಟಲ್ ಪಾವತಿ ಸೌಲಭ್ಯಗಳು ಆರಂಭದಲ್ಲಿ ನಿಷ್ಕ್ರಿಯವಾಗಿರಲಿವೆ. ಗ್ರಾಹಕರ ಸ್ಪಷ್ಟ ಒಪ್ಪಿಗೆ ಪಡೆದ ಬಳಿಕವಷ್ಟೇ ಈ ಸೌಲಭ್ಯಗಳನ್ನು ಸಕ್ರಿಯಗೊಳಿಸುವ ವ್ಯವಸ್ಥೆಯನ್ನು ಆರ್ಬಿಐ ಪ್ರಸ್ತಾಪಿಸಿದೆ.
ಗ್ರಾಹಕರು ತಮ್ಮ ವೈಯಕ್ತಿಕ ವಹಿವಾಟುಗಳಿಗೆ ಮಿತಿಯನ್ನು ತಾವೇ ನಿಗದಿಪಡಿಸಿಕೊಳ್ಳುವ ಅವಕಾಶವನ್ನೂ ಕಲ್ಪಿಸಲು ಉದ್ದೇಶಿಸಲಾಗಿದೆ. ಜತೆಗೆ, ಹೆಚ್ಚಿನ ಮೊತ್ತದ ಹಣ ವರ್ಗಾವಣೆಗಳಿಗೆ 18 ವರ್ಷ ಮೇಲ್ಪಟ್ಟ ವಿಶ್ವಾಸಾರ್ಹ ವ್ಯಕ್ತಿಯೊಬ್ಬರನ್ನು ಅನುಮೋದಕರನ್ನಾಗಿ ನೋಂದಾಯಿಸಿಕೊಳ್ಳುವ ವ್ಯವಸ್ಥೆಯನ್ನೂ ಪ್ರಸ್ತಾಪಿಸಲಾಗಿದೆ.
ಈ ವ್ಯವಸ್ಥೆಯಡಿ, ಗ್ರಾಹಕರು ನಿಗದಿಪಡಿಸಿದ ಹೆಚ್ಚಿನ ಮೊತ್ತದ ವಹಿವಾಟಿಗೆ ವಿಶ್ವಾಸಾರ್ಹ ವ್ಯಕ್ತಿ ಒಂದು ಗಂಟೆಯೊಳಗೆ ಅನುಮೋದನೆ ನೀಡಿದರೆ ಮಾತ್ರ ಹಣ ವರ್ಗಾವಣೆ ಪೂರ್ಣಗೊಳ್ಳಲಿದೆ.
ಈ ಕರಡು ನಿಯಮಾವಳಿಗಳ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟ ವಲಯಗಳಿಂದ ಡಿಸೆಂಬರ್ 14ರವರೆಗೆ ಆರ್ಬಿಐ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಪ್ರಸ್ತಾವಿತ ಸುರಕ್ಷತಾ ಕ್ರಮಗಳು ಅಂತಿಮವಾಗಿ ಅನುಮೋದನೆ ಪಡೆದು ಜಾರಿಗೆ ಬಂದಲ್ಲಿ, 2027ರ ಜುಲೈ 1ರಿಂದ ಅನುಷ್ಠಾನಗೊಳ್ಳುವ ಸಾಧ್ಯತೆಯಿದೆ.
ಅಂತರ ರಾಜ್ಯ
Dalai Lama-ದೆಹಲಿಯಲ್ಲಿ ದಲೈಲಾಮಗೆ ಪ್ರತಿಷ್ಠಿತ ಪ್ರದೇಶದಲ್ಲಿ ಸರ್ಕಾರಿ ಬಂಗಲೆ ಮಂಜೂರು ಮಾಡಿದ ಕೇಂದ್ರ
ಟಿಬೆಟ್ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ಟಿಬೆಟ್ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ಪಂಡಿತ್ ರವಿಶಂಕರ್ ಶುಕ್ಲಾ ಲೇನ್ನಲ್ಲಿರುವ ಬಂಗಲೆಯನ್ನು ದಲೈ ಲಾಮಾ ಅವರ ವಾಸ್ತವ್ಯಕ್ಕಾಗಿ ಮಂಜೂರು ಮಾಡಲಾಗಿದೆ ಎನ್ನಲಾಗಿದೆ. ಆದರೆ, ಈ ಕುರಿತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಈವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಸಾಮಾನ್ಯವಾಗಿ ಇಂತಹ ಸರ್ಕಾರಿ ವಸತಿ ಸೌಲಭ್ಯಗಳನ್ನು ಮೂರು ವರ್ಷಗಳ ಅವಧಿಗೆ ಮಂಜೂರು ಮಾಡಲಾಗುತ್ತದೆ. ಅಗತ್ಯತೆ ಮತ್ತು ಸಂದರ್ಭಗಳನ್ನು ಆಧರಿಸಿ ಈ ಅವಧಿಯನ್ನು ವಿಸ್ತರಿಸುವ ಅವಕಾಶವೂ ಇದೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ, ದಲೈ ಲಾಮಾ ಅವರ ಗಡೆನ್ ಫೋಡ್ರಂಗ್ ಟ್ರಸ್ಟ್ ಅವರ ಪ್ರಮುಖ ಬದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ.
-
ಕ್ರೈಂ14 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ನಿಧನ ವಾರ್ತೆ14 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು13 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ12 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಸ್ಥಳೀಯ8 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ಬಿಗ್ ನ್ಯೂಸ್14 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ8 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ12 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















