Uncategorized
Subhadra Murder case ಸುಭದ್ರಾ ಕೊಲೆ ಪ್ರಕರಣ: ಕೇರಳದಿಂದ ಪರಾರಿಯಾಗಿ ಮಣಿಪಾಲದಲ್ಲಿ ಅಡಗಿದ್ದ ದಂಪತಿ ಸೆರೆ

ಕಾಟ್ಟೂರ್ ಪಳ್ಳಿಪರಂಬ್ ನಿದಿನ್ ಮ್ಯಾಥ್ಯೂ(33)ಮತ್ತು ಆತನ ಪತ್ನಿ ಉಡುಪಿ ಮೂಲದ ಶರ್ಮಿಳಾ(30)ರನ್ನು ಬಂಧಿತರು. ಸುಭದ್ರಾ ಹಾಗೂ ಶರ್ಮಿಳಾ ಮಧ್ಯೆ ಹಲವು ಕಾಲದಿಂದ ಸ್ನೇಹವಿತ್ತು. ಶರ್ಮಿಳಾ ಆಕೆಯ ಬಳಿ ಹಣ ಸಾಲವಾಗಿ ಪಡೆದಿದ್ದಳು . ಅದನ್ನು ಹಿಂತಿರುಗಿಸುವಂತೆ ಒತ್ತಾಯಿಸಿದರಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಚ್ಚಿ : ಸೆ 13: ಆಲಪ್ಪುಯ ಕಲವೂರು ಕಾಟ್ಟೂರ್ ಕೊರ್ತಶ್ಶೇರಿಯಲ್ಲಿ ಮಹಿಳೆಯನ್ನು ಕೊಲೆಗೈದು ಹೂತು ಹಾಕಿ ಪರಾರಿಯಾಗಿದ್ದ ಆರೋಪಿ ದಂಪತಿಗಳನ್ನು ಕೇರಳ ಪೊಲೀಸರು ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಬಂಧಿಸಿದ್ದಾರೆ. ಎರ್ನಾಕುಳಂ ಸೌತ್ ರೈಲು ನಿಲ್ದಾಣ ಬಳಿ ಕರಿಂತಲ ರಸ್ತೆ “ಶಿವಕೃಪ” ಮನೆಯ ಸುಭದ್ರಾ (73) ಕೊಲೆಯಾದ ಮಹಿಳೆ.
ಕಾಟ್ಟೂರ್ ಪಳ್ಳಿಪರಂಬ್ ನಿದಿನ್ ಮ್ಯಾಥ್ಯೂ(33)ಮತ್ತು ಆತನ ಪತ್ನಿ ಉಡುಪಿ ಮೂಲದ ಶರ್ಮಿಳಾ(30)ರನ್ನು ಬಂಧಿತರು. ಸುಭದ್ರಾ ಹಾಗೂ ಶರ್ಮಿಳಾ ಮಧ್ಯೆ ಹಲವು ಕಾಲದಿಂದ ಸ್ನೇಹವಿತ್ತು. ಶರ್ಮಿಳಾ ಆಕೆಯ ಬಳಿ ಹಣ ಸಾಲವಾಗಿ ಪಡೆದಿದ್ದಳು . ಅದನ್ನು ಹಿಂತಿರುಗಿಸುವಂತೆ ಒತ್ತಾಯಿಸಿದರಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಭದ್ರಾರ ಚಿನ್ನಾಭರಣ ಹಾಗೂ ನಗದು ದೋಚಲು ಯೋಜನೆ ರೂಪಿಸಿದ್ದ ಶರ್ಮಿಳಾ ಮತ್ತು ಮ್ಯಾಥ್ಯೂ ಆಕೆಯನ್ನು ಆಲಪ್ಪುಯ ಕಲವೂರಿನ ತಮ್ಮ ಬಾಡಿಗೆ ಮನೆಗೆ ಕರೆಸಿದ್ದಾರೆ. ಕೊಲೆಗೂ ಮುನ್ನ ಮನೆಯ ಹಿಂಬದಿ ಹೊಂಡ ತೆಗೆಸಲಾಗಿದೆ. ಕೊಲೆ ನಡೆಸಿದ ಬಳಿಕ ಮೃತದೇಹವನ್ನು ಹೂತು ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ.
ಇನ್ನಷ್ಟೂ ಮಂದಿ ಭಾಗಿ ?
ಆ.7ರಿಂದ 10ರ ನಡುವೆ ಸುಭದ್ರಾಳ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಮೃತದೇಹದ ಎರಡೂ ಬದಿಯ ಪಕ್ಕೆಲುಬುಗಳು, ಕುತ್ತಿಗೆ ಮತ್ತು ಎಡಗೈ ಸಂಪೂರ್ಣವಾಗಿ ಮುರಿದು ಹೋಗಿರುವುದು, ಮೂಳೆ ಮುರಿತ, ಗಾಯಗಳು ಪತ್ತೆಯಾಗಿದೆ. ಮ್ಯಾಥ್ಯೂವಿನ ಸ್ನೇಹಿತರು ಕೊಲೆಯಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಬಂಧಿತರನ್ನು ಕೇರಳಕ್ಕೆ ಕರೆ ತಂದು ವಿಚಾರಿಸಿದ ಬಳಿಕ ಸತ್ಯಾಂಶ ಹೊರ ಬೀಳಲಿದೆ
ಮಹಿಳೆಯ ಚಿನ್ನಾಭರಣ ಮಾರಾಟ
ಚಿನ್ನ ಹಾಗೂ ನಗದು ದೋಚುವ ಉದ್ದೇಶದಿಂದ ಕೊಲೆ ಮಾಡಲಾಗಿದ್ದು, ಇದೊಂದು ಪೂರ್ವಯೋಜಿತ ಕೃತ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಸುಭದ್ರಾರ ಚಿನ್ನಾಭರಣಗಳನ್ನು ಅಲಪ್ಪುಯದಲ್ಲಿ ಮಾರಾಟ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಆಲಪ್ಪುಯದ ಆಭರಣ ಮಳಿಗೆಯಿಂದ ಮ್ಯಾಥ್ಯೂ ನ ಗೂಗಲ್ ಪೇಗೆ 27 ಸಾವಿರ ರೂ.ಕಳುಹಿಸಲಾಗಿದೆ. ಉಳಿದ ಚಿನ್ನಾಭರಣವನ್ನು ಮಂಗಳೂರು ಅಥವಾ ಉಡುಪಿಯ ಆಭರಣ ಮಳಿಗೆಗೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೂಲಿ ಕಾರ್ಮಿಕ ಪ್ರಮುಖ ಸಾಕ್ಷಿ
ಮ್ಯಾಥ್ಯೂ ಹಾಗೂ ಶರ್ಮಿಳಾ ದಂಪತಿ ತಮ್ಮ ಬಾಡಿಗೆ ಮನೆಯ ಹಿಂಬದಿ ತ್ಯಾಜ್ಯ ಹಾಕಲು ಹೊಂಡ ತೋಡುವಂತೆ ತಿಳಿಸಿ ತನ್ನನ್ನು ಕರೆದಿದ್ದು, ಹೊಂಡ ತೋಡಲು ಹೋದಂದು ಮನೆಯಲ್ಲಿ ವೃದ್ಧೆಯೊಬ್ಬರು ಕಾಣಿಸಿದ್ದರು. ಆ.7ರಂದು ಹೊಂಡ ತೋಡಲಾಗಿದೆ. ಆದರೆ ಕೂಲಿಯ ಪೂರ್ಣ ಹಣ ನೀಡಿರಲಿಲ್ಲ. ಎರಡು ದಿನಗಳ ಬಳಿಕ ಬಾಕಿ ಹಣವನ್ನು ಕೇಳಲು ಹೋದಾಗ ಗುಂಡಿ ಮುಚ್ಚಿರುವುದು ಕಂಡು ಬಂದಿದೆ. ಆ ವೇಳೆ ಮನೆಯಲ್ಲಿ ವೃದ್ಧ ಮಹಿಳೆ ಕಾಣಿಸಿಲ್ಲ ಎಂದು ಕೂಲಿ ಕಾರ್ಮಿಕ ಅಜಯನ್ ಪೊಲೀಸರ ಮುಂದೆ ಹೇಳಿಕೆ ನೀಡಿರುವುದು ಪ್ರಕರಣದ ಅತೀ ಪ್ರಮುಖ ಸಾಕ್ಷಿಯಾಗಿದೆ.
Uncategorized
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.
ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.
ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.
ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Uncategorized
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ

ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ.
ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ ಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಮಗಾರಿಯ ಗುಣಮಟ್ಟವನ್ನು ಟ್ರೋಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಹರಿದಾಡುತ್ತಿವೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆ ಕುಸಿಯಲು ಕಾರಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ ನ್ಯಾಯಾಲಯದ ಕ್ಯಾಂಟೀನ್‌ನ ಗೋಡೆಯಲ್ಲೂ ಬಿರುಕುಗಳು ಕಾಣಿಸಿಕೊಂಡಿವೆ ಎಂಬ ಆರೋಪ ಕೇಳಿಬಂದಿದೆ. ಹೊಸದಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈ ಘಟನೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Uncategorized
Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಗರ್ಭಿಣಿಯ ವೇಷದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶೋಭಾ ನಾದಿನಿ ಗರ್ಭಿಣಿಯ ಸಂಬಂಧಿಯಂತೆ ಹಾಗೂ ಡಿಎಚ್‌ಒ ಡಾ. ಸುವರ್ಣ ಕುಲಕರ್ಣಿ ಗರ್ಭಿಣಿಯ ತಾಯಿಯ ವೇಷದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಲಿಂಗ ಪತ್ತೆ, ಕರ್ನಾಟಕದಲ್ಲಿ ಹತ್ಯೆ ಆರೋಪ
ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಭ್ರೂಣದ ಲಿಂಗ ಪತ್ತೆ ಮಾಡಿ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಜಾಲದ ಕುರಿತು ತನಿಖೆ ನಡೆಸಿದಾಗ ಮಹಾಲಿಂಗಪುರದಲ್ಲಿ ಈ ಹಿಂದೆ ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕವಿತಾ ಬಾಡನವರ ಅವರ ಹೆಸರು ಕೂಡ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಗಳ ತಂಡ ಗರ್ಭಿಣಿಯರಂತೆ ವೇಷ ಧರಿಸಿ ಕಾರ್ಯಾಚರಣೆಗೆ ಇಳಿದಿತ್ತು.
ರಹಸ್ಯ ಕಾರ್ಯಾಚರಣೆ ನಡೆದದ್ದು ಹೇಗೆ?
ಅ.5ರ ರಾತ್ರಿ ಜಾಡರ ಬಬಲಾದ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು, ಭ್ರೂಣದ ಲಿಂಗ ಪತ್ತೆಗಾಗಿ ಮಧ್ಯವರ್ತಿ ನಿಖಿಲ್ ತೇಲಿ ಅವರನ್ನು ಸಂಪರ್ಕಿಸಿದರು. ಆತ ಅಧಿಕಾರಿಗಳನ್ನು ತೋಟದ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಬಳಿಕ ನಿಖಿಲ್‌ನ ತಾಯಿ ದಾನಕ್ಕ ತೇಲಿ ಅವರು ಸ್ಕ್ಯಾನಿಂಗ್ ಯಂತ್ರವು ಕರ್ಜಗಿ ಗ್ರಾಮದ ಕವಿತಾ ಗೋಡೆಕರ ಅವರ ಮನೆಯಲ್ಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಗಳು ಕವಿತಾ ಅವರ ಮನೆಗೆ ತೆರಳಿದಾಗ ಸ್ಕ್ಯಾನಿಂಗ್‌ಗೆ ಯಂತ್ರ ಸಿದ್ಧಪಡಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಹಾಗೂ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಈ ಜಾಲದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ಅವರನ್ನು ಬಂಧಿಸಲು ಅಧಿಕಾರಿಗಳು ಮುಂದಾದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ ಹಾಗೂ ಆರೋಗ್ಯ ಇಲಾಖೆಯ ಮನು ಕೂಡ ಭಾಗವಹಿಸಿದ್ದರು.
ಇಬ್ಬರ ಬಂಧನ; ಸ್ಕ್ಯಾನಿಂಗ್ ಯಂತ್ರ ಜಪ್ತಿ
ಭ್ರೂಣ ಲಿಂಗ ಪತ್ತೆ ಆರೋಪದಡಿ ನಿಖಿಲ್ ತೇಲಿ, ದಾನಕ್ಕ ತೇಲಿ, ಕವಿತಾ ಗೋಡೆಕರ ಹಾಗೂ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ವಿರುದ್ಧ ಮಹಾರಾಷ್ಟ್ರದ ಉಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಪೈಕಿ ನಿಖಿಲ್ ತೇಲಿ ಹಾಗೂ ದಾನಕ್ಕ ತೇಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯ್ ವಾಘ್ಮೋಡೆ ಪರಾರಿಯಾಗಿದ್ದಾನೆ. ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ವಶಪಡಿಸಿಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಹಿಂದಿನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆರೋಪ
ಮಹಾಲಿಂಗಪುರದಲ್ಲಿ 2020 ಹಾಗೂ 2024ರಲ್ಲಿ ಕವಿತಾ ಬಾಡನವರ ವಿರುದ್ಧ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಆರೋಪ ಕೇಳಿಬಂದಿತ್ತು. ಈ ಪೈಕಿ ಗರ್ಭಪಾತದ ವೇಳೆ ಮಹಾರಾಷ್ಟ್ರ ಮೂಲದ ಗರ್ಭಿಣಿಯೊಬ್ಬರು ಮೃತಪಟ್ಟ ಪ್ರಕರಣದಲ್ಲೂ ಕವಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರ ವಿರುದ್ಧ ಮತ್ತೆ ಇದೇ ರೀತಿಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.
ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಆರೋಗ್ಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕವಿತಾ ಅವರಿಗೆ ಪೊಲೀಸರು ನೋಟಿಸ್ ಕೂಡ ಜಾರಿ ಮಾಡಿದ್ದರು.
ಮಹಿಳಾ ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ವಿಜಯಪುರ ಹಾಗೂ ಸಾಂಗ್ಲಿ ಪೊಲೀಸರಿಗೆ ಕಾರ್ಯಾಚರಣೆಯ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















