ನಿಧನ ವಾರ್ತೆ
Malpe-ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿಗೆ ಉಗುಳುವ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿ ಸಾವು – ಮಲ್ಪೆ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ದುರ್ಘಟನೆ
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿಗೆ ಉಗುಳುವ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮಲ್ಪೆಯ ಮೀನುಗಾರ ಸತೀಶ (39) ಎಂಬವರು ಮೃತಪಟ್ಟವರು.
ಮಲ್ಪೆ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿಗೆ ಉಗುಳುವ ಪ್ರದರ್ಶನ ನೀಡುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ.
ಮಲ್ಪೆಯ ಮೀನುಗಾರ ಸತೀಶ (39) ಎಂಬವರು ಮೃತಪಟ್ಟವರು. ಸೆ.9ರಂದು ರಾತ್ರಿ ಅವರು ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿಗೆ ಉಗುಳುತ್ತಿದ್ದರು. ಆಕಸ್ಮಿಕವಾಗಿ ಈ ವೇಳೆ ಅವರು ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದರು.
ಸತೀಶ್ ಅವರನ್ನು ಸೆ.10ರಂದು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸೆ.12ರಂದು ನಸುಕಿನ ವೇಳೆ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಧನ ವಾರ್ತೆ
Babu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ ಬಾಲು ಅವರು ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಶಾರದಾ, ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ವಿಠಲ ಗೌಡ ಹಾಗೂ ಪುರಂದರ ಗೌಡ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.
ನಿಧನ ವಾರ್ತೆ
One-sided love-ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಮೇಲಿನ ಒನ್‌ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್‌ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್‌ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್‌ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಅಪರಾಧ13 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್11 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ11 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು12 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಅಂತರ ರಾಜ್ಯ12 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್‌ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ನಿಧನ ವಾರ್ತೆ7 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಸ್ಥಳೀಯ12 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು13 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















