ರಾಜಕೀಯ
B Y Vijayendra-RSS ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಕಾರ್ಯ ವೈಖರಿ ವಿರುದ್ದ ಅತೃಪ್ತಿ ವ್ಯಕ್ತಪಡಿಸಿದ ಪಕ್ಷದ ಭಿನ್ನಮತೀಯ ನಾಯಕರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸದಿಂದ ಕರೆದೊಯ್ಯುತ್ತಿಲ್ಲ ಎಂದು ಹಲವು ನಾಯಕರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರ ಎದುರು ಅಸಮಾಧಾನ ಹೊರಹಾಕಿದ್ದಾರೆ. ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಬಸವನ ಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಪ್ರತಾಪ್ ಸಿಂಹ ಸೇರಿದಂತೆ ತಟಸ್ಥ ನಿಲುವು ತಳೆದ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಲ್ಲರನ್ನೂ ವಿಶ್ವಾಸದಿಂದ ಕರೆದೊಯ್ಯುತ್ತಿಲ್ಲ ಎಂದು ಹಲವು ನಾಯಕರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರ ಎದುರು ಅಸಮಾಧಾನ ಹೊರಹಾಕಿದ್ದಾರೆ.
ಗುರುವಾರ ನಡೆದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಲವು ನಾಯಕರ ಪೈಕಿ ಕೆಲವರು ನೇರವಾಗಿ, ಇನ್ನು ಹಲವರು ಪರೋ ಕ್ಷವಾಗಿ ವಿಜಯೇಂದ್ರ ಅವರ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಬಸವನ ಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಪ್ರತಾಪ್ ಸಿಂಹ ಸೇರಿದಂತೆ ತಟಸ್ಥ ನಿಲುವು ತಳೆದ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಜಯೇಂದ್ರ ಅವರಿಗೆ ಅನುಭವ ಸಾಲದು. ಅವರು ಪಕ್ಷದ ಅನುಭವಿ ನಾಯಕರ ಮಾರ್ಗದರ್ಶನ ಪಡೆಯಬೇಕು. ಆದರೆ, ಅದು ಆಗುತ್ತಿಲ್ಲ, ಕೆಲವೇ ಕೆಲವು ಮುಖಂಡರನ್ನು ತಮ್ಮೊಂದಿಗೆ ಇಟ್ಟುಕೊಂಡು ಸಾಗುತ್ತಿದ್ದಾರೆ. ಪಕ್ಷದ ಪ್ರಮುಖ ತೀರ್ಮಾನಗಳನ್ನು ಆ ಕೆಲವು ಮುಖಂಡರೊಂದಿಗೆ ಕೈಗೊಳ್ಳುತ್ತಾರೆ. ಪರಿಣಾಮ ಹಿರಿಯನಾಯಕರಿದ್ದರೂ ಜವಾಬ್ದಾರಿಯಿಲ್ಲದಂತೆ ಇರಬೇಕಾಗಿದೆ ಎಂದು ಅಳಲು ತೋಡಿಕೊಂಡರು ಎನ್ನಲಾಗಿದೆ.
ಆರಂಭದಲ್ಲೇ ಮಾತನಾಡಿದ ಸಂಘದ ಪ್ರಮುಖರು, ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುತ್ತದೆ. ಪಕ್ಷ ಬಲಪಡಿಸುವ ಸಂಬಂಧ ನಿಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ಹೇಳಿ. ಆದರೆ, ಒಬ್ಬರು ಹೇಳಿದ್ದನ್ನು ಮತ್ತೊಬ್ಬರು ಪುನರಾವರ್ತಿಸುವುದು ಬೇಡ. ಜತೆಗೆ ಯಾರಿಗೂ ಮುಜುಗರ ಆಗದಂತೆ ಹೇಳಿ ಎಂದು ಸೂಚ್ಯವಾಗಿ ತಿಳಿಸಿದ್ದರಿಂದ ಎಲ್ಲರೂ ತುಸು ಮೃದುವಾಗಿಯೇ ತಮ್ಮ ಅನಿಸಿಕೆಗಳನ್ನು ಹೊರಹಾಕಿದರು ಎಂದು ಮೂಲಗಳು ತಿಳಿಸಿವೆ.
ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳ ಕಾರ್ಯವೈಖರಿ ಸರಿಯಿಲ್ಲ. ಹಲವೆಡೆ ಪದಾಧಿಕಾರಿಗಳನ್ನು ಬದಲಿಸಬೇಕಾದ ಅಗತ್ಯವಿದೆ. ಅಂಥವರಿಂದ ಪಕ್ಷಸಂಘಟನೆಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆದು ಪದಾಧಿಕಾರಿಗಳನ್ನು ನೇಮಿಸಬೇಕಾಗಿತ್ತು. ಈಗಲಾದರೂ ಬದಲಾವಣೆ ಮಾಡಬೇಕು ಎಂಬ ಒತ್ತಾಯವನ್ನೂ ಮುಂದಿಟ್ಟರು ಎಂದು ತಿಳಿದು ಬಂದಿದೆ.
ಪಕ್ಷದ ಪ್ರಮುಖ ತೀರ್ಮಾನಗಳನ್ನು ಕೋರ್ ಕಮಿಟಿ ಸಭೆ ನಡೆಸಿ ಕೈಗೊಳ್ಳಬೇಕು. ಆದರೆ, ಹಾಗಾಗುತ್ತಿಲ್ಲ. ಕೋರ್ ಕಮಿಟಿ ಸಭೆ ನಡೆಸದೇ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಅವರ ತಂದೆಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಂದೆ ಬಿಟ್ಟು ಆಡಳಿತ ನಡೆಸುತ್ತಿದ್ದಾರೆ. ಪಕ್ಷದ ನಾಯಕರಿಗೆ ತಾವು ಮಾತನಾಡದೆ ಯಡಿಯೂರಪ್ಪ ಅವರಿಂದ ಮಾತನಾಡಿಸುತ್ತಾರೆ. ಇದು ಸರಿಯಲ್ಲ ಎಂದೂ ಹಲವರು ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ನಮ್ಮ ನಡುವೆ ಹೊಂದಾಣಿಕೆ ಕೊರತೆಯಿಂದ ಮೂರ್ನಾಲ್ಕು ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ಇದು ಮುಂದಿನ ಚುನಾವಣೆಗಳಲ್ಲಿ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದೂ ಸಲಹೆ ನೀಡಿದರು.
ಇದಕ್ಕೆ ಸಭೆಯಲ್ಲೇ ಪ್ರತಿಕ್ರಿಯಿಸಿದ ವಿಜಯೇಂದ್ರ, ಪಕ್ಷಕ್ಕೆ ಸಂಬಂಧಿಸಿದ ನಿರ್ಣಯಗಳನ್ನು ನಾನೊಬ್ಬನೆ ಕೈಗೊಳ್ಳುವುದಿಲ್ಲ. ಪಕ್ಷದ ವರಿಷ್ಠರು, ಸಂಘವನ್ನು ಸಂಪರ್ಕಿಸಿಯೇ ತೆಗೆದುಕೊಳ್ಳುತ್ತೇನೆ ಸಮಜಾಯಿಷಿ ನೀಡಿದರು ಎನ್ನಲಾಗಿದೆ.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್20 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized21 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized20 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ24 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು
-
ಸ್ಥಳೀಯ24 hours agoUT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ


















