ಸ್ಥಳೀಯ
Nagamangala-ಧರ್ಮ ದಳ್ಳುರಿ ಮೊಳಗಿದ ನಾಗಮಂಗಲಕ್ಕೆ ಬಿಜೆಪಿ ದಂಡು!; ಸ್ಪೋಟಕ ಹೇಳಿಕೆ ನೀಡಿದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್!
ಶಾಂತಿಯುತವಾಗಿ ನಡೆಯುತ್ತಿದ್ದ ನಾಗಮಂಗಲದ ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಬಳಿಕ ಇದು ಕೋಮುಗಲಭೆಯ ರೂಪತಾಳಿದ್ದು ರಾಜ್ಯದೆಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಈ ಬಗ್ಗೆ ಗೃಹಸಚಿವ ಪರಮೇಶ್ವರ್, ‘ಇದೊಂದು ಆಕಸ್ಮಿಕ ಘಟನೆ ಆರಂಭದಲ್ಲೇ ಅಂತ್ಯ ಕಂಡಿದೆ’ ಎಂದರೆ, ಬಿಜೆಪಿ ನಾಯಕರು, ‘ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂ ಯವಕರನ್ನು ಮಾತ್ರ ಬಂಧಿಸಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದೀಗ ಕೋಮುದಳ್ಳುರಿ ಮೊಳಗಿದ ನಾಗಮಂಗಲಕ್ಕೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಸೇರಿ ಬಿಜೆಪಿ ದಂಡು ಆಗಮಿಸಿದ್ದು, ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನಿಖರ ನ್ಯೂಸ್ :- ಶಾಂತಿಯುತವಾಗಿ ನಡೆಯುತ್ತಿದ್ದ ನಾಗಮಂಗಲದ ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದು, ಬಳಿಕ ಇದು ಕೋಮುಗಲಭೆಯ ರೂಪತಾಳಿದ್ದು ರಾಜ್ಯದೆಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಈಗಾಗಲೇ 53 ಜನರನ್ನು ಪೊಲೀಸರು ಬಂದಿಸಿದ್ದು, ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ.ಈ ಬಗ್ಗೆ ಗೃಹಸಚಿವ ಪರಮೇಶ್ವರ್, ‘ಇದೊಂದು ಆಕಸ್ಮಿಕ ಘಟನೆ ಆರಂಭದಲ್ಲೇ ಅಂತ್ಯ ಕಂಡಿದೆ’ ಎಂದರೆ, ಬಿಜೆಪಿ ನಾಯಕರು, ‘ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂ ಯವಕರನ್ನು ಮಾತ್ರ ಬಂಧಿಸಿದ್ದಾರೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದೀಗ ಕೋಮುದಳ್ಳುರಿ ಮೊಳಗಿದ ನಾಗಮಂಗಲಕ್ಕೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿ ಸೇರಿ ಬಿಜೆಪಿ ದಂಡು ಆಗಮಿಸಿದ್ದು, ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನಾಯಕರು ಹೇಳಿದ್ದೇನು?
ಕೋಮು ಗಲಭೆಯಿಂದ ಯುದ್ಧ ಭೂಮಿಯಂತಾಗಿರುವ ನಾಗಮಂಗಲಕ್ಕೆ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಆರ್ ಅಶೋಕ್, ಸಿಟಿ ರವಿ, ಅಶ್ವತ್ಥನಾರಾಯಣ, ನಾರಾಯಣ ಗೌಡ, ಪ್ರತಾಪ್ ಸಿಂಹ ಭೇಟಿ ನೀಡಿದ್ದು, ಗಣೇಶೋತ್ಸವ ಸಮಿತಿ ಹಾಗೂ ಸಾರ್ವಜನಿಕರಿಗೆ ಸಮಾಧಾನ ಹೇಳಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ನಾಯಕರು, ‘ಮೊದಲು ಕಲ್ಲು ತೂರಾಟ ನಡೆಸಿದವರ ಮೇಲೆ ಕೇಸು ದಾಖಲಿಸುವ ಬದಲು ಪೊಲೀಸರು ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಮಾಯಕ ಹಿಂದೂ ಯುವಕರ ಮೇಲೆ ಕೇಸು ದಾಖಲಿಸಿದ್ದಾರೆ. ಓಟ್ ಬ್ಯಾಂಕ್ ಉಳಿಸಿಕೊಳ್ಳಲು ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಾ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ’ ಎಂದಿದ್ದಾರೆ.
ಮುಂದುವರೆದು, ‘ಈ ಹಿಂದೆ ಕೆರಗೋಡಿನಲ್ಲಿ ಹನುಮ ಧ್ವಜ ವಿರೋಧ ಮಾಡಿದರು. ಈಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಪೊಲೀಸರು ಭದ್ರತೆ ನೀಡಬೇಕಿತ್ತು. ಪೊಲೀಸರ ಮುಂದೆಯೇ ಕಲ್ಲು ತೂರಾಟ, ಬೆಂಕಿ ಹಚ್ಚಿದ್ದರೂ ಮುಸ್ಲಿಂ ಮತಗಳ ಓಲೈಕೆಗೆ ಕಾಂಗ್ರೆಸ್ ನಾಯಕರ ಈ ನಡವಳಿಕೆ ಸರಿಯಿಲ್ಲ. ಈ ಘಟನೆಯಲ್ಲಿ ಕಾಂಗ್ರೆಸ್ ಕಳ್ಳಾಟವನ್ನು ಸಹಿಸುವುದಿಲ್ಲ. ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗುವ ತನಕ ವಿರಮಿಸುವುದಿಲ್ಲ’ ಎಂದು ಕಮಲಪಾಳಯದ ಕಲಿಗಳು ಆಕ್ರೋಶ ಹೊರ ಹಾಕಿದ್ದಾರೆ.
53 ಜನ ಅರೆಸ್ಟ್, 150 ಎಪ್.ಐ.ಆರ್!
ಶಿಕ್ಷಣ
Vivekananda-ತಾಲೂಕು ಮಟ್ಟದ ಖೋ ಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಶಶಾಂಕ್, ಚಂದನ್, ದಿಶಾಲ್ ಎ , ಉದಯ್ ಎಸ್ , ಥುಷನ್ ಎ , ತರುಣ್ ಎ ರೈ , ಪ್ರದ್ವಿತ್ ರೈ ಎಮ್ , ಯಶ್ವಿನ್ ಬಿ , ಜೀವಿತ್,ಎಸ್. ಡಿ ಮಸಲಿ , ಪ್ರಿಥ್ವಿರಾಜ್ ಜಿ . ದ್ವಿತೀಯ ಪಿಯುಸಿ ತರುಣ್ ಕುಮಾರ್ ಬಿ . ಆರ್ ,ದೇಶ್ಚಿತ್ ಎಸ್ ,ಘನಶ್ಯಾಮ್ ,ಲಿಖಿತ್ ,ಕೀರ್ತನ್,ಸತ್ವಿಕ್ , ಮಾನ್ವಿತ್ , ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯರಾದ ಸಂಗೀತ ಎಸ್. ಎಮ್ , ವಿನ್ಯಾ ರೈ , ಶ್ವೇತಶ್ರೀ, ಭೂಮಿಕಾ, ವೃಷ್ಟಿ ರೈ , ನಿದೀಕ್ಷ ಎ , ಪ್ರಣಿತಾ ಕೆ , ಹರ್ಷಿಣಿ , ವಿದ್ಯಾ ಎಮ್ , ಎಚ್ . ಡಿ ಹೇಮಾದ್ರಿ , ಸಾನ್ವಿ ಅಂಚನ ವೈ. ವೈ, ದ್ವಿತೀಯ ಪಿಯುಸಿ ವಿಂದ್ಯಾ ಎಮ್ ಆರ್, ನಳಿನ ಎ. ಬಿ , ಅನನ್ಯ ಗೌಡ ಭಾಗವಹಿಸಿರುತ್ತಾರೆ.
ವೈಯಕ್ತಿಕ ಪ್ರಶಸ್ತಿಗಳು ದ್ವಿತೀಯ ವಾಣಿಜ್ಯ ವಿಭಾಗದ ದೇಶ್ಚಿತ್ ಎಸ್( ಬೆಸ್ಟ್ ಡಿಫೆಂಡರ್) ,ಲಿಖಿತ್ (ಬೆಸ್ಟ್ ಆಲ್ ರೌಂಡರ್), ಪ್ರಥಮ ವಿಜ್ಞಾನ ವಿಭಾಗದ ವೃಷ್ಟಿ ರೈ ( ಬೆಸ್ಟ್ ಡಿಫೆಂಡರ್).
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಂತ್ರಜ್ಞಾನದ ಮಹಾಸಂಗಮ; IEEE ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಜ್ಜು; ಡಿಸ್ಕವರ್–2026: 1,071 ಪ್ರಬಂಧಗಳ ಪೈಕಿ 94ಕ್ಕೆ ಮಂಡನೆ ಅವಕಾಶ
ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.
ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.
ದೇಶ-ವಿದೇಶಗಳಿಂದ 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ಬಳಿಕ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅ.9ರಂದು ಬೆಳಿಗ್ಗೆ 9.30ಕ್ಕೆ ಸಾವರ್ಕರ್ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್ ಮುಖ್ಯ ಅತಿಥಿಯಾಗಿ, ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಿಂದ ವಿಚಾರ ಮಂಡನೆ
ಸಮ್ಮೇಳನದಲ್ಲಿ ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ ಎಐ ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಚಾರ ಮಂಡನೆ ನಡೆಯಲಿದೆ. ಡಾ. ನವಕಾಂತ ಭಟ್, ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
‘ಸಂಶೋಧನೆ ಮತ್ತು ನಾವೀನ್ಯತೆ: ಗುಣಮಟ್ಟ, ಪ್ರಮಾಣ ಮತ್ತು ನೈತಿಕ ಆಯಾಮಗಳು’ ಕುರಿತು ವಿಶೇಷ ಚರ್ಚೆಯೂ ನಡೆಯಲಿದೆ. ಡಾ. ಪ್ರಶಾಂತ್ ಮಿಶ್ರ, ಡಾ. ನವಕಾಂತ ಭಟ್, ಡೆಲ್ ಟೆಕ್ನಾಲಜೀಸ್‌ನ ಡೇಟಾ ಸೈನ್ಸ್ ನಿರ್ದೇಶಕ ಪಂಡಿತ್ ಕುಲದೀಪ್ ಡೋಂಗ್ರೆ ಹಾಗೂ ಡಾ. ಅಂಬರ್ ಬಾಜ್‌ಪಾಯ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಾ. ಅಜಿತ್ ಹೆಬ್ಬಾರ್ ಹೊಸಮಠ ಸಮನ್ವಯಕಾರರಾಗಿರುತ್ತಾರೆ.

ಅ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ್ ಶೆನ್ವಿ ಮುಖ್ಯ ಅತಿಥಿಯಾಗಿ, IEEE ಬೆಂಗಳೂರು ವಿಭಾಗದ ಡಾ. ವಾಸುದೇವ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಸನ್ನ ದರ್ಬೆ ಅಧ್ಯಕ್ಷತೆ ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡಾ. ಜೀವಿತಾ ಬಿ.ಕೆ., ಡಾ. ರಜನಿ ರೈ ಬಿ. ಹಾಗೂ ಡಾ. ಆಶ್ಲೆ ಡಿ. ಸೋಜ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್20 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized21 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized20 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ23 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು
-
ಸ್ಥಳೀಯ24 hours agoUT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ


















