Connect with us

ಶಿಕ್ಷಣ

Philo Pratibha-2024-ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ‘ಫಿಲೋ ಪ್ರತಿಭಾ- 2024’ ಪ್ರೌಢ ಶಾಲಾ ಮಟ್ಟದ ಸ್ಪರ್ಧೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಪ್ರಯತ್ನಶೀಲತೆ ಇದ್ದರೆ ಏನನ್ನು ಸಾಧಿಸಬಹುದು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾದಂತಹ  ಕಾರ್ಯಕ್ರಮಗಳು ಸಹಕಾರಿಯಾಗಿವೆ. ಕಲಾ ಚಟುವಟಿಕೆಗಳು ಮಕ್ಕಳಿಗೆ ಎಷ್ಟು ಖುಷಿ ನೀಡುತ್ತದೆಯೋ ಅಷ್ಟೇ ಪಾಲಕರಿಗೂ ಹಾಗೂ ಶಿಕ್ಷಕರಿಗೂ ಸಂತಸದ ವಿಷಯವಾಗಿರುತ್ತದೆ ಎಂದು  ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ  ಸೆಪ್ಟೆಂಬರ್ 13ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಫಿಲೋ ಪ್ರತಿಭಾ – 2024’ ಕಾರ್ಯಕ್ರಮವನ್ನು ಉದ್ಘಾಟಸಿ  ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯ ಜೊತೆಗೆ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತವಾದ ವೇದಿಕೆ ಇದಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಹಮ್ಮಿಕೊಂಡಿರುವ ‘ಫಿಲೋ ಪ್ರತಿಭಾ -2024’  ಪ್ರೌಢ ಶಾಲಾ ಮಕ್ಕಳಿಗೆ ಹೆಚ್ಚು ಒತ್ತು ನೀಡುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.

Ad Widget

Ad Widget <> Ad Widget

ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ಏರ್ಪಡಿಸಿರುವ ಈ ‘ಫಿಲೋ ಪ್ರತಿಭಾ 2024’ ಕಾರ್ಯಕ್ರಮ ಮಕ್ಕಳ ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಿದೆ.



Ad Widget

ಇದು ಇಷ್ಟಕ್ಕೆ ನಿಲ್ಲದೆ, ಶಿಕ್ಷಕರು ಹಾಗೂ ಪೋಷಕರು ಇದನ್ನು ಬೆಳೆಸುವತ್ತ ಗಮನ ನೀಡಬೇಕು. ಮಕ್ಕಳನ್ನು ವಿವಿಧ ಕಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹವನ್ನು ನೀಡಬೇಕು. ಅವಿರತ ಪ್ರಯತ್ನ ನಿಮ್ಮಲ್ಲಿರಲಿ ಎಂದು ಹೇಳಿದರು.

Ad Widget

Ad Widget

ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ , ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ 28 ಪ್ರೌಢಶಾಲೆಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ರಸಪ್ರಶ್ನೆ, ಕನ್ನಡ ಹಾಗೂ ಇಂಗ್ಲಿಷ್ ವಿಚಾರ ಸಂಕಿರಣ, ಪೆನ್ಸಿಲ್ ಸ್ಕೆಚ್, ಮಣ್ಣಿನ ಮಾದರಿ ತಯಾರಿ, ವಿಜ್ಞಾನ ಮಾದರಿ ತಯಾರಿ,  ಜಾನಪದ ಗಾಯನ  ಸ್ಪರ್ಧೆ, ಕೊಲಾಜ್ ತಯಾರಿಕೆ, ಸ್ಟ್ಯಾಂಡ್  ಅಪ್ ಕಾಮಿಡಿ, ಜಾಹೀರಾತು ಸ್ಪರ್ಧೆ, ತ್ಯಾಜ್ಯದಿಂದ ಉಪಯುಕ್ತ ವಸ್ತು ತಯಾರಿ , ಫೇಸ್  ಪೈಂಟಿಂಗ್  ಹಾಗೂ ನೃತ್ಯ ಸ್ಪರ್ಧೆ ಹೀಗೆ 13 ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ‘ಫಿಲೋ ಪ್ರತಿಭಾ 2024’ ಇದರ ನಿರ್ದೇಶಕರಾದ ಡಾ.ಆಶಾ ಸಾವಿತ್ರಿ ವಂದಿಸಿ, ಉಪನ್ಯಾಸಕರಾದ ವಿನೋಲಾ ಅಮಿತಾ ಲೋಬೊ  ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.



Ad Widget

ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

Ad Widget

Ad Widget

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.

ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.

‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Ad Widget
Continue Reading

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ -ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯು ಪದವಿಪೂರ್ವ ಕಾಲೇಜು, ತುಂಬೆ ಇಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲಕಿಯರ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಖುಷಿ ೪೪ ಕೆ.ಜಿ, ದ್ರಿಶ್ಯ 68 ಕೆ .ಜಿ ವಿಭಾಗ ಬೆಳ್ಳಿ ಪದಕ, ಪ್ರಥಮ ವಾಣಿಜ್ಯ ವಿಭಾಗದ ಸಾನ್ವಿ 64 ಕೆ. ಜಿ ವಿಭಾಗ ಕಂಚಿನ ಪದಕ. ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಘನಶ್ಯಾಮ್ ೫೦ ಕೆ.ಜಿ ವಿಭಾಗ ಬೆಳ್ಳಿ ಪದಕ ಪಡೆದಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Vivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 14 ವರ್ಷಗಳ ಬೋಧನಾನುಭವ ಹೊಂದಿರುವ ಸಹಾಯಕ ಪ್ರಾಧ್ಯಾಪಕ ಪ್ರಮೋದ್ ಕುಮಾರ್.ಪಿ.ಎಮ್ ಅರೇಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಎಂಡ್ ಕ್ಲಾಸಿಫಿಕೇಶನ್ ಯೂಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್(Areca Plant Disease identification and classification using deep learning techniques) ಎನ್ನುವ ವಿಷಯದ ಬಗ್ಗೆ ತಿಪಟೂರಿನ ಕಲ್ಪತರು ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಡಾ.ರವಿಪ್ರಕಾಶ್.ಎಮ್.ಎಲ್ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ಶ್ರೀಮತಿ ಅಕ್ಷಯ.ಡಿ.ಶೆಟ್ಟಿ ಇವರು ಡಿಸೈನ್ ಎಂಡ್ ವ್ಯಾಲಿಡೇಶನ್ ಆಫ್ ಗ್ಯಾಲ್ವೇನಿಕ್ ಸ್ಕಿನ್ ರೆಸ್ಪೊನ್ಸ್ ಡಿವೈಸ್ ಫಾರ್ ಟ್ರೀಟ್‌ಮೆಂಟ್ ಆಫ್ ನ್ಯೂರೋಲಾಜಿಕಲ್ ಎಂಡ್ ಸೈಕಿಯಾಟ್ರಿಕ್ ಡಿಸಾರ್ಡರ್ಸ್ (Design and Validation of galvanic skin response (GSR) device for treatment of neurological and psychiatric disorders) ಎನ್ನುವ ವಿಷಯದ ಬಗ್ಗೆ ಎಸ್.ಇ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರೊಫೆಸರ್ ಹಾಗೂ ಡೀನ್(ಆರ್&ಡಿ) ಆಗಿರುವ ಡಾ.ಉಷಾ ದೇಸಾಯಿ ಮತ್ತು ಸೆಂಟ್ರಲ್ ಯುನಿವರ್ಸಿಟಿ ಹರ್ಯಾಣದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಡಾ.‌ ಆಕಾಶ್ ಸಕ್ಸೇನ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.



Ad Widget

ಇವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದಲ್ಲಿ 9 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರ ಸಾಧನೆಗೆ ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್.ಎಸ್.ಕೆ ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading