Connect with us

ಅಪರಾಧ

Mangalore-ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಹತ್ಯೆ – ಮಹಿಳಾ ಉದ್ಯಮಿಯ ಕೊಂದು, 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಬಿಸಾಡಿದ ಪ್ರಕರಣ : ಮೂವರ ಅಪರಾಧ ಸಾಬೀತು

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಂಗಳೂರು: ಐದು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಚಲನ ಸೃಷ್ಟಿಸಿದ ಮಹಿಳಾ ಉದ್ಯಮಿಯೊಬ್ಬರ ಕೊಲೆ ಪ್ರಕರಣದ ತೀರ್ಪು ಸೆ 14 ರಂದು ಹೊರ ಬಿದ್ದಿದೆ. ಮಹಿಳೆಯನ್ನು ಕೊಂದು ಆಕೆಯ ಶವವನ್ನು 29 ತುಂಡುಗಳಾಗಿ ಕತ್ತರಿಸಿ, ಅದನ್ನು ಪ್ಲ್ಯಾಸ್ಟಿಕ್‌ ಕವರ್‌ ಗಳಲ್ಲಿ ತುಂಬಿಸಿ ನಗರದ ವಿವಿದೆಡೆ ಬಿಸಾಡಲಾಗಿತ್ತು. ಈ ಹತ್ಯಾ ಪ್ರಕರಣ ನಗರದಲ್ಲಿ ಭೀತಿಗೆ ಕಾರಣವಾಗಿತ್ತು. ಇದೀಗ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಈ ಹತ್ಯಾ ಪ್ರಕರಣದ ಮೂವರು ಆರೋಪಿಗಳು ದೋಷಿಗಳೆಂದು ಇಲ್ಲಿಯ ನ್ಯಾಯಾಲಯ ಘೋಷಿಸಿದೆ. ಇವರಿಗೆ ಶಿಕ್ಷೆ ಪ್ರಮಾಣವನ್ನು ಇದೇ 17ರಂದು ನ್ಯಾಯಲಯ ಪ್ರಕಟಿಸಲಿದೆ.

Ad Widget

Ad Widget

Ad Widget alt="Ad Widget"/>

Ad Widget

ನಗರದ ಅತ್ತಾವರದಲ್ಲಿ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್‌ ಅಂಗಡಿ ಇಟ್ಟುಕೊಂಡು, ಕುರಿಚಿಟ್‌ ಫಂಡ್‌ ವ್ಯವಹಾರ ನಡೆಸುತ್ತಿದ್ದ ಶ್ರೀಮತಿ ಶೆಟ್ಟಿ (37) ಅವರನ್ನು ಮೇ 11 2019ರಂದು ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆ ನಡೆಸಿದ ಬಳಿಕ ಅಕೆಯ ಶವವನ್ನು 29 ತುಂಡುಗಳಾಗಿ ಕತ್ತರಿಸಿದ ಹಂತಕ ಅದನ್ನು ಪ್ಲ್ಯಾಸ್ಟಿಕ್‌ ಹಾಗೂ ಗೋಣಿ ಚೀಲದಲ್ಲಿ ತುಂಬಿಸಿದ್ದ.

Ad Widget

Ad Widget <> Ad Widget

ಬಳಿಕ ಮೃತದೇಹದ ಭಾಗಗಳನ್ನು ನಂದಿಗುಡ್ಡದಲ್ಲಿ , ರುಂಡವನ್ನು ಹೆಲ್ಮೇಟ್‌ ನ ಒಳಗಡೆಯಿಟ್ಟು ಕದ್ರಿ ಪೆಟ್ರೋಲ್‌ ಪಂಪ್‌ ಎದುರಿನ ಜಾಗದಲ್ಲಿ ಹಾಗೂ ಕಾಲನ್ನು ಕದ್ರಿ ಪಾರ್ಕ್‌ ಜಾಗದಲ್ಲಿ ಬೀಸಾಡಿದ್ದ. ಕೃತ್ಯ ನಡೆದ ದಿನ ಶ್ರೀಮತಿ ಶೆಟ್ಟಿ ಬಳಸಿದ ಸ್ಕೂಟಿಯನ್ನು ನಾಗುರಿಯಲ್ಲಿ ತಂದಿರಿಸಲಾಗಿತ್ತು



Ad Widget

ಅಪರಾಧಿಗಳು
ಸೆಮಿನರಿ ಕಂಪೌಂಡ್‌, ಅತ್ತಾವರ ನ್ಯೂರೋಡ್‌ ಕಂಕನಾಡಿಯ ಮೂಲ ನಿವಾಸಿಯಾಗಿರುವ ಜೋನಸ್‌ ಸ್ಯಾಮ್ಸನ್‌ ಅಲಿಯಾಸ್‌ ಜೋನಸ್‌ ಜೌಲಿನ್‌ ಸ್ಯಾಮ್ಸನ್ (40), ಅವರ ಪತ್ನಿ ವೆಲೆನ್ಸಿಯಾದ ವಿಕ್ಟೋರಿಯಾ ಮಥಾಯಿಸ್(47) ಹಾಗೂ ಕುಂಜತ್‌ಬೈಲ್‌ ಮರಕಡ ಗ್ರಾಮ ತಾರಿಪಾಡಿ ಗುಡ್ಡೆಯ ರಾಜು (34) ಈ ಪ್ರಕರಣದ ಅಪರಾಧಿಗಳು. ಈ ಪೈಕಿ ರಾಜು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ. ಉಳಿದ ಇಬ್ಬರು ಜೈಲಿನಲ್ಲಿಯೇ ಇದ್ದರು. ಇದೀಗ ರಾಜುವನ್ನು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

ಕೊಲೆ ಯಾತಕ್ಕಾಗಿ ಹಂತಕ ಜೋನಸ್‌ ಸ್ಯಾಮ್ಸನ್, ಶ್ರೀಮತಿಯವರು ನಡೆಸುತ್ತಿದ್ದ ಕುರಿಚಿಟ್‌ ಫಂಡ್‌ನಲ್ಲಿ ಎರಡು ಸದಸ್ಯತ್ವ ಹೊಂದಿದ್ದ. ಬಿಡ್‌ ಕೂಗಿ ಎರಡೂ ಸದಸ್ಯತ್ವದ ಹಣವನ್ನು ಪಡೆದುಕೊಂಡಿದ್ದ. ಆದರೆ ಆ ಬಳಿಕ ಮಾಸಿಕ ಕಂತುಗಳನ್ನು ಸರಿಯಾಗಿ ಪಾವತಿಸುತ್ತಿರಲಿಲ್ಲ. ಕಂತು ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸಿದ್ದರು. ಸಾಮಾನ್ಯವಾಗಿ ಕಾರಿನಲ್ಲಿ ಓಡಾಡುವ ಶ್ರೀಮತಿಯವರು ಕೊಲೆ ನಡೆದ ದಿನ 11.5.2019ರಂದು ಬೆಳಿಗ್ಗೆ ತಮ್ಮ ದ್ವಿಚಕ್ರವಾಹನದಲ್ಲಿ ಹಣ ಕೇಳಲು ಜೋನಸ್‌ ಸ್ಯಾಮ್ಸನ್‌ನ ಮನೆಗೆ ಹೋಗಿದ್ದರು. ಹಣ ಕೊಡದಿದ್ದುದಕ್ಕೆ ಶ್ರೀಮತಿ ಶೆಟ್ಟಿ ಅವರು ಹಿಗ್ಗಾಮುಗ್ಗಾ ಬೈದಿದ್ದಾರೆ. ಈ ವೇಳೆ ಜೋನಸ್‌ ಸ್ಯಾಮ್ಸನ್‌ ಕೋಪಗೊಂಡು ಮರದ ಪಟ್ಟಿಯ ತುಂಡಿನಿಂದ ಶ್ರೀಮತಿ ಅವರ ಹಣೆಗೆ ಹೊಡೆದಿದ್ದ. ಶ್ರೀಮತಿ ಅವರು ಅಲ್ಲಿಯೇ ನೆಲಕ್ಕೆ ಬಿದ್ದಿದ್ದರು. ಮುಖ, ಗಲ್ಲಕ್ಕೆ ಗುದ್ದಿದ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತನ್ನ ಪತ್ನಿ ವಿಕ್ಟೋರಿಯಾ ಮಥಾಯಿಸ್‌ಳೊಂದಿಗೆ ಮನೆ ಒಳಗೆ ಒಯ್ದು, ಮೈಮೇಲಿದ್ದ ಆಭರಣ ದೋಚಿದ್ದಾರೆ.

ಬಳಿಕ ಜೋನಸ್‌ ಸ್ಯಾಮ್ಸನ್ ಶ್ರೀಮತಿ ಶೆಟ್ಟಿಯವರು ಚಲಾಯಿಸಿಕೊಂಡು ಬಂದಿದ್ದ ಸ್ಕೂಟರ್‌ ಅನ್ನು ನಾಗುರಿಗೆ ಚಲಾಯಿಸಿಕೊಂಡು ಹೋಗಿ ಅಲ್ಲಿ ರಸ್ತೆ ಬದಿ ನಿಲ್ಲಿಸಿ ವಾಪಸ್‌ ಮನೆಗೆ ಬಂದಿದ್ದ. ಆರೋಪಿ ಜೋನಸ್‌ ಸ್ಯಾಮ್ಸನ್‌ ಈ ಹಿಂದೆ ಹಂದಿ ಮಾಂಸ ಮಾಡುವ ಕೆಲಸದಲ್ಲಿದ್ದ. ಹೀಗಾಗಿ ಬೆಳಗ್ಗೆ 11.30ರ ವೇಳೆಗೆ ಬಚ್ಚಲು ಕೋಣೆಗೆ ಎಳೆದುಕೊಂಡು ಹೋಗಿ ಮರದ ಹಲಗೆಯ ಮೇಲಿಟ್ಟು ಹರಿತವಾದ ಕತ್ತಿಯಿಂದ ತುಂಡುಗಳನ್ನಾಗಿ ಮಾಡಿದ್ದ. ಈ ರೀತಿ ತುಂಡು ಮಾಡುವಾಗ ಶ್ರೀಮತಿ ಶೆಟ್ಟಿ ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದೂ ಪ್ರಾಣ ಹೋಗಿರಲಿಲ್ಲ.

ರಾತ್ರಿ ಕತ್ತರಿಸಿದ ದೇಹವನ್ನು ವಿವಿದೆಡೆ ಬಿಸಾಡಿದ ಹಂತಕ, ಶ್ರೀಮತಿ ಶೆಟ್ಟಿ ಅವರ ವ್ಯಾನಿಟಿ ಬ್ಯಾಗ್‌ ಮತ್ತು ಚಪ್ಪಲಿಯನ್ನು ಮನೆಯ ಒಲೆಯಲ್ಲಿ ಸುಟ್ಟು ಹಾಕಿದ್ದ.ಶ್ರೀಮತಿ ಅವರ ಮೈಮೇಲಿದ್ದ ಆಭರಣಗಳನ್ನು ಮರು ದಿನ ಗಂಡ- ಹೆಂಡತಿ ಇಬ್ಬರೂ 3ನೇ ಆರೋಪಿ ರಾಜುಗೆ ನೀಡಿದ್ದರು. ಕೊಲೆ ಮಾಡಿದ ವಿಷಯವನ್ನು ರಾಜುಗೆ ತಿಳಿಸಿದ್ದರೂ ರಾಜು, ಚಿನ್ನಾಭರಣ ಪಡೆದುಕೊಂಡು ಬಚ್ಚಿಟ್ಟಿದ್ದಲ್ಲದೇ ಅವರಿಗೆ ಆಶ್ರಯ ನೀಡಿದ್ದ. ಆರೋಪಿಗಳನ್ನು ಬಂಧಿಸಿದ ಬಳಿಕ ಅವರ ಮನೆಯಲ್ಲಿ ಶ್ರೀಮತಿಯವರ 4 ಉಂಗುರ ಬೆಡ್‌ ಅಡಿ ಪತ್ತೆಯಾಗಿತ್ತು.

ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹೇಶ್‌ ಎಂ. ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವೆನ್ಲಾಕ್‌ ಆಸ್ಪತ್ರೆಯ ಫೊರೆನ್ಸಿಕ್‌ ವಿಭಾಗದ ವೈದ್ಯಾಧಿಕಾರಿ ಡಾ. ಜಗದೀಶ್‌ ರಾವ್‌ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು, ಈ ಮೂವರು ದೋಷಿತರು ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣದ ಮೇಲೆ ವಿಚಾರಣೆಯನ್ನು ಇದೇ 17ಕ್ಕೆ ನಿಗದಿ ಪಡಿಸಲಾಗಿದೆ.
ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ಅವರು ವಾದ ಮಂಡಿಸಿದ್ದರು.

Ad Widget
Click to comment

Leave a Reply

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on



Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.



Ad Widget

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ಅಪರಾಧ

Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!

Published

on



Ad Widget

Ad Widget

Ad Widget

Ad Widget

ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು



Ad Widget

ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

Ad Widget

Ad Widget

ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading