Connect with us

Uncategorized

“ಎರಿ ದೊರೆ ಆಕತಲೆ ದೈವ ದರ್ಬಾರ್ ಆಕತಲೆ ಪರಾಕ್” – ಅಯುಧ ಪೂಜೆಯ ಪವಿತ್ರ ದಿನದಂದು ವರ್ಷದ ಕಾರ್ಣೀಕ ನುಡಿದ ದೇವರಗುಡ್ಡ ಕ್ಷೇತ್ರದ ಗೊರವಯ್ಯ – ಏನೀದರ ಮರ್ಮ ?

Published

on



Ad Widget

Ad Widget

Ad Widget

Ad Widget

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪ್ರಸಿದ್ಧ ದೇವರಗುಡ್ಡ ಕ್ಷೇತ್ರದ ಗೊರವಯ್ಯ ನವರಾತ್ರಿಯ ಅಯುಧ ಪೂಜೆ ಸಂದರ್ಭ ನುಡಿಯುವ ಭವಿಷ್ಯ ಸುಳ್ಳಾಗುವುದಿಲ್ಲ ಎಂಬ ಪ್ರತಿತಿಯಿದೆ . ವರ್ಷದ ಭವಿಷ್ಯ ವಾಣಿ ಎಂದೆ ಖ್ಯಾತಿ ಪಡೆದಿರುವ ಕಾರ್ಣಿಕ ನುಡಿಯನ್ನು ಗೊರವಯ್ಯ ನಾಗಪ್ಪಜ್ಜ ಬಿಲ್ಲನ್ನೇರಿ ಇಂದು ನುಡಿದಿದ್ದಾರೆ.

Ad Widget

Ad Widget

Ad Widget

Ad Widget

“ಎರಿ ದೊರೆ ಆಕತಲೆ ದೈವ ದರ್ಬಾರ್ ಆಕತಲೆ ಪರಾಕ್” ಎಂಬ ಭವಿಷ್ಯ ನುಡಿಯನ್ನು ದೇವರಗುಡ್ಡ ಕ್ಷೇತ್ರದ ಮಾಲತೇಶ ಸ್ವಾಮೀಜಿ ನುಡಿದಿದ್ದು ಇದೀಗ ಈ ಒಗಟಿನ ಒಳಹು ಬಿಡಿಸುವ ಕಾಯಕ ನಡೆಯುತ್ತಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷ ಭಟ್ ಗೂರೂಜಿ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಿದ್ದು ಅವರ ಪ್ರಕಾರ ಎರೆ ಎಂದರೆ ಮಣ್ಣು. ದೊರೆ ಎಂದರೆ ರಾಜ. ಹೀಗಾಗಿ ಇದು ರೈತರ ಮೇಲೆ ಪ್ರಭಾವ ಬೀರುವ ಭವಿಷ್ಯವಾಣಿ ಆಗಿದೆ.

Ad Widget

Ad Widget

Ad Widget alt="Ad Widget"/>

Ad Widget

 ರೈತ ಬೆಳೆದ ಬೆಳೆ ದೊರೆಯಾಗುತ್ತದೆ. ಸಮೃದ್ಧಿಯಾಗಿ ಫಲವನ್ನು ನೀಡುತ್ತದೆ ಎಂದು ವಿಶ್ಲೇಷಣೆ ಮಾಡಬಹುದು. ದೈವ ದೊರೆಯಾದಿತಲೆ ಎಂದರೆ ದೇವರ ಆಶೀರ್ವಾದ ಅಂತಾ, ಕೊರೊನಾ ಮೂರನೇ ಅಲೆ ಬರುವುದಿಲ್ಲ ಎಂದು ಭವಿಷ್ಯವಾಣಿಯ ತಿಳಿದುಕೊಳ್ಳಬಹುದು. ರಾಜಕೀಯವಾಗಿ ಹೇಳುವುದಾದರೆ ಎರೆ ಎಂದರೆ ಕಟ್ಟಕಡೆಯದು ಎಂದು ಅರ್ಥ. ಜನತೆ ಮತ್ತು ದೈವ ಮೆಚ್ಚಿದ ಆಡಳಿತವನ್ನು ಈ ಸರ್ಕಾರ ನೀಡುತ್ತದೆ ಎಂದು ಅವರು ವಿವರಿಸಿದ್ದಾರೆ.

Ad Widget

Ad Widget <> Ad Widget

ಅಲ್ಲದೆ, ಪಕ್ಷೇತರರ ಸಹಕಾರದಿಂದ ರಾಜ್ಯದ ಸರಕಾರದ ಮುಂದಿನ ರಾಜಕೀಯ ಭವಿಷ್ಯ ಇರಲಿದೆ ಎಂದು ಹೇಳಿರುವುದಾಗಿಯೂ ಅವರು ವಿಶ್ಲೇಸಿಸಿದ್ದಾರೆ. ಕಳೆದ ವರ್ಷ “ವ್ಯಾದಿ ಬೂದಿಯಾದಿತಲೆ ಸೃಷ್ಟಿ ಸಿರಿ ಆಯಿತಲೆ ಪರಾಕ್” ಎಂಬುದು ಕಾರ್ಣಿಕದ ನುಡಿಯಲಾಗಿತ್ತು. ಬಹಳ ದಿನಗಳಿಂದ ಕರೊನಾ ರೋಗ ಕಡಿಮೆ ಆಗುತ್ತಿದೆ. ಮುಂದೆಯೂ ಇನ್ನೂ ಕಡಿಮೆ ಆಗುತ್ತೆ ಎಂದು ಅದರ ಒಗಟು ಬಿಡಿಸಲಾಗಿತ್ತು. ಅದರಂತೆ ಕೊರೊನಾ ರೋಗ ಈ ಬಾರಿ ಬಹುತೇಕ ಕಡಿಮೆಯಾಗಿದೆ



Ad Widget
Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.



Ad Widget

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.

Ad Widget

Ad Widget

ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:

ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.

ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.

Ad Widget
Continue Reading

Uncategorized

Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.

Ad Widget

Ad Widget <> Ad Widget

ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.



Ad Widget

ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.

Ad Widget

Ad Widget

ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು

ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ

ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ

Ad Widget
Continue Reading

Uncategorized

YouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ, ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಪ್ರಕಾಶ್ ರಾಜ್ ಮತ್ತು ಕಿಶೋರ್, ಸಿಜೆಪಿ ಪ್ರಮುಖರಾದ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಆಯಿಷಾ ಘೋಷ್ ಹಾಗೂ ಸೌರವ್ ದಾಸ್, ಹಿರಿಯ ಸಾಹಿತಿ ದೇವನೂರ ಮಹಾದೇವ, ನೂರ್ ಶ್ರೀಧರ್, ಕೆ. ಮಹಾಂತೇಶ್, ತಾಹೇರ್ ಹುಸೇನ್, ಅಬ್ದುಲ್ ಮಜೀದ್, ಮುಹಮ್ಮದ್ ಯೂಸುಫ್ ಕನ್ನಿ, ಫಾ. ಅರುಣ್ ಲೂಯಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ, ನಮೂನೆ-7ರ ದುರುಪಯೋಗ, ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಮತದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.



Ad Widget

ರಾಜ್ಯದ ವಿವಿಧ ಭಾಗಗಳಿಂದ ಎಸ್‌ಐಆರ್‌ನಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾದ ಮತದಾರರು, ನಾಗರಿಕ ಹಕ್ಕುಗಳ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಾರ್ವಜನಿಕ ವಿಚಾರಣೆ ನಡೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

Ad Widget

Ad Widget

ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಸಾಹಿತಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ‘ಜನತಾ ನ್ಯಾಯಾಲಯ’ದ ವಿಚಾರಣೆಯಲ್ಲಿ ಭಾಗವಹಿಸಲಿದ್ದಾರೆ. ವಿಚಾರಣೆಯ ಬಳಿಕ ಸಿದ್ಧಪಡಿಸುವ ವರದಿಯನ್ನು ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳ ಗಮನಕ್ಕೆ ತರಲು ಆಯೋಜಕರು ಉದ್ದೇಶಿಸಿದ್ದಾರೆ.

ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಧ್ವನಿ ದಾಖಲಿಸುವಂತೆ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳು ಕರೆ ನೀಡಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading