Connect with us

ಮಂಗಳೂರು

B.C.Road-ಬಿ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ; ಮಹಮ್ಮದ್ ಶರೀಫ್ ಸವಾಲಿಗೆ ವಿಹಿಂಪ, ಬಜರಂಗದಳದಿಂದ ‘ಬಿ.ಸಿ.ರೋಡ್ ಚಲೋ’

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಂಗಳೂರು: ಈದ್‌ ಆಚರಣೆಗೆ ಸಂಬಂದಿಸಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ನೀಡಿದ ಹೇಳಿಕೆ ಹಾಗೂ ಅದಕ್ಕೆ ಪ್ರತಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ನೀಡಿದ ಹೇಳಿಕೆಗಳು ಬಿ.ಸಿ.ರೋಡ್ ನಲ್ಲಿ ಆತಂಕದ ವಾತಾವರಣ ಸೃಷ್ಟಿಸಿವೆ.

Ad Widget

Ad Widget

Ad Widget alt="Ad Widget"/>

Ad Widget

ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದ ವಿಎಚ್‌ಪಿ ಬಜರಂಗದಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಶರಣ್ ಪಂಪ್ ವೆಲ್ ಅವರಿಗೆ ಸವಾಲು ಹಾಕಿರುವ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ವಿರುದ್ದ ಬಜರಂಗ ದಳಕಾರ್ಯಕರ್ತರು ಘೋಷಣೆ ಕೂಗಿದರು.

Ad Widget

Ad Widget <> Ad Widget

ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ಖಂಡಿಸಿ ಮಂಗಳೂರಿನಲ್ಲಿ ಈಚೆಗೆ ನಡೆದ ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್,’ ಹಿಂದೂಗಳು ಮನಸು ಮಾಡಿದರೆ ಈದ್ ಮೆರಣಿಗೆ ಅಸಾಧ್ಯ’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿದ್ದ ಮಹಮ್ಮದ್ ಶರೀಫ್ ‘ ತಾಕತ್ತಿದ್ದರೆ ಬಿ.ಸಿ.ರೋಡ್‌ಗೆ ಬನ್ನಿ ಎಂದು ಸವಾಲೆಸೆದಿದ್ದರು.



Ad Widget

ಈ ಕುರಿತು ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿದ್ದ ಬಜರಂಗದಳ ಮುಖಂಡ ಪುನೀತ್ ಅತ್ತಾವರ್, ‘ನಾವು ‘ಚಲೋ ಬಿ.ಸಿ.ರೋಡ್’ ಹಮ್ಮಿಕೊಳ್ಳುತ್ತೇವೆ. ತಡೆಯುವವರು ತಡೆಯಿರಿ ‘ ಎಂದು ಪ್ರತಿ ಸವಾಲು ಹಾಕಿದ್ದರು.

Ad Widget

Ad Widget

ಬಿ.ಸಿ.ರೋಡ್‌ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್‌, ‘ಮಹಮ್ಮದ್ ಶರೀಫ್ ಅವರ ಸವಾಲು ಸ್ವೀಕರಿಸಿ ಬಿಸಿರೋಡಿಗೆ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ. ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ ಜೈಲಿಗೂ ಹೋಗಿದ್ದಾರೆ.

ನಾಗಮಂಗಲದ ಗಣೇಶ ಚತುರ್ಥಿಯ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂಸೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಹೇಳಿಕೆಯನ್ನು ಕೊಟ್ಟಿದ್ದೇವೆ.ಆದರೆ, ಆತ ಅದಕ್ಕೆ ಬಿ.ಸಿ.ರೋಡಿಗೆ ಆಗಮಿಸುವಂತೆ ಸವಾಲು ಹಾಕಿದ್ದ. ಆತನ ಸವಾಲಿಗೆ ಉತ್ತರವಾಗಿ ನಾವು ಇಂದು ಬಿಸಿರೋಡಿನಲ್ಲಿ ಸೇರಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ. ಇದು ಶರಣ್ ಒಬ್ಬನಿಗೆ ಹಾಕಿದ ಸವಾಲು ಅಲ್ಲ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲು’ ಎಂದು ಅವರು ತಿಳಿಸಿದರು.

ವಿಎಚ್‌ಪಿ, ಬಜರಂಗದಳ ಸಂಘಟನೆಗಳ ಪ್ರಮುಖರಾದ ಪುನೀತ್ ಅತ್ತಾವರ, ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕ‌ರ್ ಧರ್ಮಸ್ಥಳ, ನವೀನ್ ನೆರಿಯಾ, ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಕ, ನವೀನ್ ಮೂಡುಶೆಡ್ಡೆ, ಸಚಿನ್ ಮೆಲ್ಕಾರ್, ಆರ್.ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಮೂರು, ಸಂದೇಶ್ ಶೆಟ್ಟಿ ಅರೆಬೆಟ್ಟು, ಎ.ಗೋವಿಂದ ಪ್ರಭು, ಪುರುಷೋತ್ತಮ ಸಾಲಿಯಾನ್, ರಾಮದಾಸ್ ಬಂಟ್ವಾಳ ಮತ್ತಿತರರು ಇದ್ದರು.

ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಸ್ಥಳದಿಂದ ನಿರ್ಗಮಿಸುವಂತೆ ಮನವೊಲಿಸುತ್ತಿದ್ದಾರೆ.

ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ ಎನ್.ಉಪವಿಭಾಗಾಧಿಕಾರಿ ಹರ್ಷವರ್ದನ್‌, ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳಕ್ಕೆ ದಸಾವಿಸಿದ್ದಾರೆ. ಬಿ.ಸಿ.ರೋಡ್ ನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಮಸೀದಿಗಳ ಬಳಿ ಬಿಗು ಪೊಲೀಸ್ ಬಂದೋಬಸ್ತ್‌ ಏರ್ಪಾಟು ಮಾಡಲಾಗಿದೆ.

ಈ ನಡುವೆ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಮ್ಮದ್ ಶರೀಫ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರಣ್ ಪಂಪೈಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಟಿಪಳ್ಳದಲ್ಲಿ ಮಸೀದಿಗೆ ಕಲ್ಲು:

ಭಾನುವಾರ ರಾತ್ರಿ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿಯೊಂದಕ್ಕೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಅನುಪಮ್ ಅಗರ್ವಾಲ್ ಎಚ್ಚರಿಕೆ ನೀಡಿದ್ದಾರೆ.

Ad Widget
Click to comment

Leave a Reply

ಮಂಗಳೂರು

Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು

Published

on



Ad Widget

Ad Widget

Ad Widget

Ad Widget

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಕಾಂಗ್ರೆಸ್‌ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್‌ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್‌ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್‌ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.

Ad Widget

Ad Widget <> Ad Widget

ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್‌ ಆಗಲ್ಲ



Ad Widget

ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.

Ad Widget

Ad Widget

ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.

5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ

ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್‌ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.

ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್‌ ಪ್ರತಾಪ್‌, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್‌ ಕುಮಾರ್‌ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.

Ad Widget
Continue Reading

ನಿಧನ ವಾರ್ತೆ

Dead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ

Published

on



Ad Widget

Ad Widget

Ad Widget

Ad Widget

ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್‌ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್‌ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿ ತಾಲೂಕಿನ ರಂಕದಗುತ್ತು, ಕಸಬಾ ಗ್ರಾಮದ ಮೂಲದ ಶ್ರೇಯಸ್‌ ಅ.4ರಂದು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು. ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರಿಗೆ ಬಂದು ಹುಲಿ ವೇಷದ ತರಬೇತಿಯಲ್ಲಿ ಭಾಗವಹಿಸಿದ್ದರು.

Ad Widget

Ad Widget <> Ad Widget

ತರಬೇತಿ ಮುಗಿದ ಬಳಿಕ ಶ್ರೇಯಸ್‌ ಹಾಗೂ ಸ್ನೇಹಿತರು ಸ್ಟೇಟ್‌ ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದರು. ಸಂಜೆ ಸುಮಾರು 4.30ರಿಂದ 5 ಗಂಟೆಯ ವೇಳೆಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದು, ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್‌ ನೀರಿನಲ್ಲಿ ಮುಳುಗಿದ್ದಾರೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು.



Ad Widget

ಶ್ರೇಯಸ್‌ ನೀರು ಪಾಲಾದ ವಿಚಾರವನ್ನು ಆತನ ಅಪ್ರಾಪ್ತ ಸ್ನೇಹಿತರು ಭಯಗೊಂಡು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಚಾರ ಶ್ರೇಯಸ್‌ ಕುಟುಂಬಸ್ಥರಿಗೆ ತಿಳಿದುಬಂದಿದೆ.

Ad Widget

Ad Widget

ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಆಧಾರದಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಬಾಲಕನ ಪತ್ತೆಗಾಗಿ ಕೋಸ್ಟ್‌ ಗಾರ್ಡ್‌, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿತ್ತು. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

Ad Widget
Continue Reading

ಮಂಗಳೂರು

Satyajit-ಎಂಆರ್‌ಪಿಎಲ್ ಸುರಕ್ಷತೆಯಲ್ಲಿ ರಾಜಿ ಬೇಡ: ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಸತ್ಯಜಿತ್ ಸುರತ್ಕಲ್ ಆಗ್ರಹ

Published

on



Ad Widget

Ad Widget

Ad Widget

Ad Widget

ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್‌ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

Ad Widget

Ad Widget

Ad Widget

Ad Widget

ಮಂಗಳೂರು, ಅ.6: ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್‌ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಆರ್‌ಪಿಎಲ್‌ನಂತಹ ಬೃಹತ್ ಕೈಗಾರಿಕಾ ಘಟಕಗಳಲ್ಲಿ ಕಾರ್ಮಿಕರು ಮಾತ್ರವಲ್ಲದೆ ಸುತ್ತಮುತ್ತಲಿನ ಜನರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಈ ಹಿನ್ನೆಲೆಯಲ್ಲಿ ಸಂಸ್ಥೆಯಲ್ಲಿ ಈ ಹಿಂದೆ ನಡೆದಿರುವ ಅವಘಡಗಳನ್ನೂ ಪರಿಗಣಿಸಿ ಸಮಗ್ರ ತನಿಖೆ ನಡೆಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Ad Widget

Ad Widget <> Ad Widget

ಅವಘಡದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ನೀಡಿರುವುದನ್ನು ಸ್ವಾಗತಿಸಿದ ಅವರು, ಕುಟುಂಬಕ್ಕೆ ಅಗತ್ಯ ನೆರವು ಮುಂದುವರಿಸುವುದರ ಜತೆಗೆ ಉದ್ಯೋಗ ಕಲ್ಪಿಸುವ ಕ್ರಮ ಕೈಗೊಳ್ಳಬೇಕು ಎಂದರು.



Ad Widget

ಗುತ್ತಿಗೆ ಕಾರ್ಮಿಕರಿಗೆ ವಿಮೆ

Ad Widget

Ad Widget

ಎಂಆರ್‌ಪಿಎಲ್‌ನ ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಹಿತದೃಷ್ಟಿಯಿಂದ ಕನಿಷ್ಠ ₹10 ಲಕ್ಷದ ಆರೋಗ್ಯ ವಿಮೆ ಒದಗಿಸಬೇಕು. ಅಪಘಾತದಲ್ಲಿ ಕಾರ್ಮಿಕ ಮೃತಪಟ್ಟ ಸಂದರ್ಭದಲ್ಲಿ ₹25 ಲಕ್ಷದ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಸತ್ಯಜಿತ್ ಸುರತ್ಕಲ್ ಆಗ್ರಹಿಸಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವ ಕಾರ್ಮಿಕರನ್ನು ಉದ್ಯೋಗದಿಂದ ವಜಾಗೊಳಿಸಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಅನಿಲ ಸೋರಿಕೆ ಪತ್ತೆಗೆ ಪರಿಣಾಮಕಾರಿ ವ್ಯವಸ್ಥೆ ಅಗತ್ಯ

ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆ ಸೇರಿದಂತೆ ಅಪಾಯಕಾರಿ ಪರಿಸ್ಥಿತಿಗಳನ್ನು ಮುಂಚಿತವಾಗಿಯೇ ಪತ್ತೆಹಚ್ಚುವ ಡಿಟೆಕ್ಷನ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಬೇಕು. ಅಪಾಯದ ಸಂದರ್ಭದಲ್ಲಿ ಕಾರ್ಮಿಕರು ಹಾಗೂ ಸುತ್ತಮುತ್ತಲಿನ ಜನರಿಗೆ ತಕ್ಷಣ ಎಚ್ಚರಿಕೆ ನೀಡಲು ಸೈರನ್ ವ್ಯವಸ್ಥೆ ಮತ್ತು ತುರ್ತು ಸ್ಥಳಾಂತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದರು.

ಸುರಕ್ಷತಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಕೈಗಾರಿಕಾ ಸುರಕ್ಷತೆಯ ವಿಚಾರದಲ್ಲಿ ಲೋಪ ಕಂಡುಬಂದರೆ ಅದರ ಮೂಲ ಕಾರಣ ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯ ಹಿತಾಸಕ್ತಿಯ ವಿಚಾರ

ಎಂಆರ್‌ಪಿಎಲ್ ಅವಘಡವನ್ನು ಕೇವಲ ಕಾರ್ಮಿಕರ ಸಮಸ್ಯೆಯಾಗಿ ಪರಿಗಣಿಸದೆ, ಜಿಲ್ಲೆಯ ಜನರ ಸುರಕ್ಷತೆ ಹಾಗೂ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರವಾಗಿ ನೋಡಬೇಕು. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎತ್ತಿನಹೊಳೆ ಹೋರಾಟ ಸಮಿತಿ ಸಂಚಾಲಕ ಶಶಿರಾಜ್ ಶೆಟ್ಟಿ ಕೊಳಂಬೆ, ಕೆಪಿಟಿಎಂಎಸ್ ಜಿಲ್ಲಾಧ್ಯಕ್ಷ ಯಶ್‌ಪಾಲ್ ಸುವರ್ಣ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ತುಷಾರ್ ಕದ್ರಿ, ತುಳುನಾಡು ರಕ್ಷಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಹಾಗೂ ಪ್ರಮುಖರಾದ ಅಮರ್ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading