ಮಂಗಳೂರು
Mangaluru-ಮಂಗಳೂರು : ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್, ಸ್ಕ್ರೀನ್ ಬ್ಲ್ಯಾಂಕ್ – ನಾಳೆ ಮ್ಯಾಪಲ್ ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ
ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಉಂಟಾಗಿದೆ.
ಮಂಗಳೂರು : “ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಉಂಟಾಗಿದೆ.
ಹೀಗಾಗಿ ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ನಮ್ಮ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು ಕ್ಲಾಕ್ ಟವರ್ ನಲ್ಲಿ ನಾವು ನಮ್ಮ ಬೇಡಿಕೆಗಳನ್ನು ಆಪಲ್ ಕಂಪೆನಿಯ ಮುಂದೆ ಇಡಲಿದ್ದೇವೆ“ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
”ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಳ್ಳುತ್ತಿದ್ದಾರೆ ಹಾಗೂ ಮತ್ತು ಹಲವು ಸಮಸ್ಯೆಗೊಳಗಾದ ಗ್ರಾಹಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ಬೆಂಬಲ ನೀಡಬೇಕಾಗಿ ಕೇಳಿ ಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಬಂದರೆ ಫ್ಲಿಪ್ಕಾರ್ಟ್ ಅಥವಾ ಅಮೆಜಾನ್ ನಂತಹ ವಿದೇಶೀ ಕಂಪನಿಗಳು ಗ್ರಾಹಕರ ಹಿತರಕ್ಷಣೆಗೆ ನಿಲ್ಲುವುದಿಲ್ಲ. ಕೇವಲ ಸ್ಥಳೀಯ ಅಂಗಡಿಗಳು ಮಾತ್ರ ಗ್ರಾಹಕರ ಹಿತರಕ್ಷಣೆಗೆ ಹಾಗೂ ಅವರ ಅನುಕೂಲಕ್ಕೆ ನಿಲ್ಲುತ್ತೇವೆ ಮತ್ತು ಹಾಗೆ ಮುಂದಿನ ಹಬ್ಬದ ಖರೀದಿಯನ್ನು ಗ್ರಾಹಕರು ಆದಷ್ಟು ಸ್ಥಳೀಯ ಅಂಗಡಿಗಳಲ್ಲಿ ವ್ಯಾಪಾರ ನಡೆಸಿ ಸ್ಥಳೀಯರನ್ನು ಬೆಂಬಲಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಚೇರ್ ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಮಂಗಳೂರು
Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ
2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.
ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.
ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.
ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.
-
ನಿಧನ ವಾರ್ತೆ17 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್22 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ22 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ21 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ22 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ20 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ16 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















