ಅಪರಾಧ
Surathkal-ಸುರತ್ಕಲ್ ಮಸೀದಿಗೆ ಕಲ್ಲು ತೂರಾಟ – ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
ಕೃಷ್ಣಾಪುರ ಮುಸ್ಲಿಂ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು.
ಸುರತ್ಕಲ್, ಸೆ.16: ಕೃಷ್ಣಾಪುರ ಮುಸ್ಲಿಂ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ(26), ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ ಶಿವಾನಂದ ಛಲವಾದಿ(19), ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್ ಹಡಪ(22), ಮುಂಚೂರು ನಿವಾಸಿ ಸುಜಿತ್ ಶೆಟ್ಟಿ(23), ಈಶ್ವರ ನಗರ ನಿವಾಸಿ ಮನು ಯಾನೆ ಅಣ್ಣಪ್ಪ(24) ಮತ್ತು ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಪ್ರೀತಂ ಶೆಟ್ಟಿ(34) ಎಂದು ಗುರುತಿಸಲಾಗಿದೆ.

ಆರೋಪಿಗಳ ಪೈಕಿ ಭರತ್ ಎಂಬಾತನ ವಿರುದ್ಧ ತಿಂಗಳುಗಳ ಹಿಂದಷ್ಟೇ ಹೊಡೆದಾಟದ ಪ್ರಕರಣವೊಂದರಲ್ಲಿ 307 ಪ್ರಕರಣ ದಾಖಲಾಗಿದ್ದು, ಆತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು.

ಕಳೆದ ರಾತ್ರಿ ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ ಹಿಂಭಾಗದ ಕಿಟಕಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು. ಬಳಿಕ ಒಂದು ಬೈಕ್ ನಲ್ಲಿದ್ದ ಮೂವರು ಗಣೇಶ ಕಟ್ಟೆಯ ಕಡೆ ತೆರಳಿದ್ದರೆ, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರು ಬೈಕ್ ತಿರುಗಿಸಿಕೊಂಡು ವಾಪಾಸ್ ಸ್ಮಶಾನದ ಕಡೆಗೆ ಪರಾರಿಯಾಗಿದ್ದರು.
ಅಂತರ ರಾಜ್ಯ
Honeytrap-ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಹಸ್ಯ ಮಾಹಿತಿ ಸೋರಿಕೆ ಮಾಡಿದ ನೌಕಾಪಡೆ ಸಿಬ್ಬಂದಿ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ ಎಂದು ಗುರುತಿಸಲಾಗಿದೆ.
ಕೊಯಮತ್ತೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪಾಕಿಸ್ತಾನದ ಮಹಿಳೆಯೊಬ್ಬರು ನಡೆಸಿದ ‘ಹನಿಟ್ರ್ಯಾಪ್’ಗೆ ಸಿಲುಕಿ ಆರೋಪಿ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರದೀಪ್ ಮುಖರ್ಜಿ (31) ಎಂದು ಗುರುತಿಸಲಾಗಿದೆ. 2014ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದ್ದ ಮುಖರ್ಜಿ, ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ನೇವಲ್ ಕಮಾಂಡ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್ನಲಾಗಿದೆ.
ಕೆಲವು ತಿಂಗಳ ಹಿಂದೆ ಪಾಕಿಸ್ತಾನದ ಗುಪ್ತಚರ ಏಜೆಂಟ್ ಎಂದು ಶಂಕಿಸಲಾಗಿರುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಮುಖರ್ಜಿಯನ್ನು ಸಂಪರ್ಕಿಸಿದ್ದಳು. ಬಳಿಕ ಆಕೆಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ ಆತ, ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಆಕೆಗೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಳ್ಳಲಾಗಿತ್ತೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಆರೋಪ: ಅಸ್ಸಾಂನಲ್ಲಿ ಇಬ್ಬರ ಬಂಧನ
ಗುವಾಹಟಿ: ಪಾಕಿಸ್ತಾನಕ್ಕೆ ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ನಿವೃತ್ತ ಯೋಧ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, ಬಂಧಿತರನ್ನು ಶೀಘ್ರದಲ್ಲೇ ಕೇಂದ್ರ ತನಿಖಾ ಸಂಸ್ಥೆಗಳ ವಶಕ್ಕೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಅಪರಾಧ
Puttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಶ್ಯದ ಮಯ್ಯ ಫಾರ್ಮ್ಸ್ನಿಂದ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
-
ನಿಧನ ವಾರ್ತೆ17 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್23 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಂತರ ರಾಜ್ಯ22 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಅಪರಾಧ23 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಸ್ಥಳೀಯ23 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
Uncategorized11 hours ago
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ
-
ನಿಧನ ವಾರ್ತೆ21 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ರಾಜಕೀಯ17 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















